Homeಮುಖಪುಟಟ್ರ್ಯಾಕ್ಟರ್ ಪರೇಡ್‌ನಲ್ಲಿ ರೈತನ ಸಾವಿನ ಕುರಿತ ಟ್ವೀಟ್: ‘ವೈರ್’ನ ಸಿದ್ದಾರ್ಥ್ ವರದರಾಜನ್ ವಿರುದ್ಧ FIR

ಟ್ರ್ಯಾಕ್ಟರ್ ಪರೇಡ್‌ನಲ್ಲಿ ರೈತನ ಸಾವಿನ ಕುರಿತ ಟ್ವೀಟ್: ‘ವೈರ್’ನ ಸಿದ್ದಾರ್ಥ್ ವರದರಾಜನ್ ವಿರುದ್ಧ FIR

ಪೊಲೀಸರ ಗುಂಡೇಟಿನಿಂದ ತೀರಿಕೊಂಡಿದ್ದಾನೆ ಎಂದು ರೈತನ ಕುಟುಂಬದವರು ಆರೋಪಿಸಿರುವ ವರದಿ ಉಲ್ಲೇಖಿಸಿ ಮಾಡಿದ ಟ್ವೀಟ್ ಅನ್ನು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ.

- Advertisement -
- Advertisement -

ರೈತರ ಗಣರಾಜ್ಯೋತ್ಸವದ ಟ್ರ್ಯಾಕ್ಟರ್ ರ‍್ಯಾಲಿಯಲ್ಲಿ ಸಂಭವಿಸಿದ ನವರೀತ್ ಸಿಂಗ್ ಅವರ ಸಾವಿನ ಕುರಿತ ದಿ ವೈರ್ ವರದಿಯನ್ನು ಟ್ವೀಟ್ ಮಾಡಿದ್ದಕ್ಕಾಗಿ ಉತ್ತರ ಪ್ರದೇಶ ಪೊಲೀಸರು ಭಾನುವಾರ ರಾಂಪುರ್ ಜಿಲ್ಲೆಯಲ್ಲಿ ದಿ ವೈರ್ ಸಂಸ್ಥಾಪಕ ಸಂಪಾದಕ ಸಿದ್ಧಾರ್ಥ್ ವರದರಾಜನ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ವರದರಾಜನ್ ಶನಿವಾರ ದಿ ವೈರ್‌ನ ವರದಿಯೊಂದನ್ನು ಟ್ವೀಟ್ ಮಾಡಿದ್ದು, ಅದರ ಪ್ರಕಾರ, ಸಿಂಗ್ ಕುಟುಂಬವು ತನ್ನ ಟ್ರ್ಯಾಕ್ಟರ್ ಪಲ್ಟಿಯಾಗಿರುವುದರಿಂದ ಪ್ರತಿಭಟನಾಕಾರ ಸಾವನ್ನಪ್ಪಿದ್ದಾನೆ ಎಂಬ ದೆಹಲಿ ಪೊಲೀಸರ ಹೇಳಿಕೆಗೆ ತಕರಾರು ತೆಗೆದಿದೆ.

‘ಗುಂಡು ತಗುಲಿದ ಪರಿಣಾಮ ನಿಯಂತ್ರಣ ಕಳೆದುಕೊಂಡ ನವರೀತ್‌ಸಿಂಗ್ ಚಾಲನೆ ಮಾಡಲಾಗದೇ ಇದ್ದುದರಿಂದ ಟ್ರ್ಯಾಕ್ಟರ್ ಉರುಳಿ ಬಿದ್ದಿದೆ. ಇದರಿಂದ ತಲೆಗೆ ಗಾಯವಾಗಿ ಮೃತನಾಗಿದ್ದಾನೆ’ ಎಂದು ಕುಟುಂಬವು ಆರೋಪಿಸಿದೆ.

ಸಿಂಗ್ ಅವರ ಅಜ್ಜ ಕೊಟ್ಟ ಹೇಳಿಕೆಯನ್ನು ವರದರಾಜನ್ ಉಲ್ಲೇಖಿಸಿದ್ದಾರೆ, “ಶವಪರೀಕ್ಷೆಯ ಭಾಗವಾಗಿದ್ದ ವೈದ್ಯರೊಬ್ಬರು ಗುಂಡಿನ ಗಾಯಗಳಾಗಿವೆ ಎಂದು ಹೇಳಿದರು. ಆದರೆ ನನ್ನ ಕೈಗಳನ್ನು ಕಟ್ಟಲಾಗಿದೆ ಎಂದು ಆ ವೈದ್ಯರು ತಿಳಿಸಿದರು” ಎಂದು ಮೃತನ ಅಜ್ಜ ಹೇಳಿರುವುದಾಗಿ ವೈರ್ ವರದಿ ತಿಳಿಸಿದೆ.

ರಾಂಪುರ್ ನಿವಾಸಿ ಸಂಜು ತುರಾಹಾ ಅವರ ದೂರಿನ ಆಧಾರದ ಮೇಲೆ ವರದರಾಜನ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಬಿ (ಪ್ರಚೋದನೆಗಳು, ರಾಷ್ಟ್ರೀಯ ಏಕೀಕರಣಕ್ಕೆ ಧಕ್ಕೆ) ಮತ್ತು 505 (2) (ವರ್ಗಗಳ ನಡುವೆ ದ್ವೇಷ, ದ್ವೇಷ ಅಥವಾ ಉತ್ತೇಜಿಸುವ ಹೇಳಿಕೆಗಳು) ಅಡಿ ಎಫ್‌ಐಆರ್ ದಾಖಲಿಸಲಾಗಿದೆ.

ಎಫ್‌ಐಆರ್ ಶನಿವಾರದ ವರದರಾಜನ್ ಅವರ ಟ್ವೀಟ್ ಅನ್ನು ಉಲ್ಲೇಖಿಸಿದೆ. ಟ್ವೀಟ್‌ನಲ್ಲಿ ಪ್ರಸ್ತಾಪಿತ ವರದಿಯನ್ನು, ಶವಪರೀಕ್ಷೆ ವೈದ್ಯರಿಂದಲೇ ಹೇಳಲಾಗಿದೆ ಎಂದು ತೋರುವ ರೀತಿಯಲ್ಲಿ ಪ್ರಸ್ತುತಪಡಿಸಲಾಗಿದೆ, ಇದು ಗೊಂದಲಕ್ಕೆ ಕಾರಣವಾಗಿದೆ ಎಂದು ದೂರಲಾಗಿದೆ.

“ಇದರ ಪರಿಣಾಮವಾಗಿ, ರಾಂಪುರದ ಜನರು ಅಸಮಾಧಾನಗೊಂಡಿದ್ದಾರೆ ಮತ್ತು ಉದ್ವಿಗ್ನತೆ ಹೆಚ್ಚಾಗಿದೆ” ಎಂದು ಎಫ್‌ಐಆರ್ ಹೇಳಿದೆ. “ಈ ಪೋಸ್ಟ್ ಖಂಡಿತವಾಗಿಯೂ ಸಾರ್ವಜನಿಕರಿಗೆ ಹಾನಿ ಮಾಡುವ ಮೂಲಕ ಹಿಂಸೆಯನ್ನು ಪ್ರಚೋದಿಸುವ ಪಿತೂರಿಯ ಒಂದು ಭಾಗವೆಂದು ತೋರುತ್ತದೆ’ ಎಂದು ವಿವರಿಸಲಾಗಿದೆ.

ನವರೀತ್ ಸಿಂಗ್ ಅವರ ಮರಣೋತ್ತರ ಪರೀಕ್ಷೆಯನ್ನು ಮೂವರು ಪ್ಯಾನಲ್ ವೈದ್ಯರು ನಡೆಸಿದ್ದಾರೆ ಮತ್ತು ಅದನ್ನು ಸರಿಯಾಗಿ ವಿಡಿಯೋಗ್ರಾಫ್ ಮಾಡಲಾಗಿದೆ ಎಂದು ಎಫ್‌ಐಆರ್ ಪ್ರತಿಪಾದಿಸಿದೆ. ದಿ ವೈರ್‌ನ ವರದಿಯಲ್ಲಿ ಪ್ರತಿಪಾದಿಸಲ್ಪಟ್ಟಂತೆ, ಮೂವರು ವೈದ್ಯರಲ್ಲಿ ಯಾರೂ ಅಂತಹ ಯಾವುದೇ ಹೇಳಿಕೆಯನ್ನು ಯಾರಿಗೂ ನೀಡಿದ್ದನ್ನು ನಿರಾಕರಿಸಿದ್ದಾರೆ ಎಂದು ಎಫ್‌ಐಆರ್ ಹೇಳುತ್ತದೆ.

“ಇದರ ಹೊರತಾಗಿಯೂ, ಟ್ವೀಟ್ ಅನ್ನು ಇನ್ನೂ ತೆಗೆದುಹಾಕಲಾಗಿಲ್ಲ” ಎಂದು ಎಫ್‌ಐಆರ್ ಆಕ್ಷೇಪಿಸಿದೆ. “ಸರಿಯಾದ ಸಂಗತಿಗಳನ್ನು ತಿಳಿಯದೆ ಉದ್ದೇಶಪೂರ್ವಕವಾಗಿ ಸಾಮಾಜಿಕ ಮಾಧ್ಯಮ- ಟ್ವಿಟ್ಟರ್ ಮೂಲಕ ಪ್ರಚೋದನಕಾರಿ ಪೋಸ್ಟ್‌ಗಳನ್ನು ಪೋಸ್ಟ್ ಮಾಡುವ ಮೂಲಕ” ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಭಂಗ ತರುವ ಉದ್ದೇಶವನ್ನು ಟ್ವೀಟ್ ಹೊಂದಿದೆ ಎಂದು ಆರೋಪಿಸಲಾಗಿದೆ.

ಸಾರ್ವಜನಿಕರನ್ನು “ಪ್ರಚೋದಿಸುವ” ಸಲುವಾಗಿ, ಗುಂಡೇಟಿನಿಂದ ಸಿಂಗ್ ಸಾವನ್ನಪ್ಪಿದ್ದಾರೆ ಎಂದು ಹೇಳಲು ಸರ್ಕಾರಿ ವೈದ್ಯಕೀಯ ಅಧಿಕಾರಿಯನ್ನು ಪೋಸ್ಟ್ ತಪ್ಪಾಗಿ ಉಲ್ಲೇಖಿಸಿದೆ ಎಂದು ತಿಳಿಸಲಾಗಿದೆ.

ಈ ವಿಷಯದ ಬಗ್ಗೆ ಉತ್ತರ ಪ್ರದೇಶದಲ್ಲಿ ಕಳೆದ ವಾರದಲ್ಲಿ ಪತ್ರಕರ್ತರು ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಿದ ಎರಡನೆ ಪ್ರಕರಣವಿದು. ಮಂಗಳವಾರ, ಗಣರಾಜ್ಯೋತ್ಸವದ ಸಂದರ್ಭದಲ್ಲಿ ಸಾವಿಗೀಡಾದ ನವರೀತ್ ಸಿಂಗ್ ಪೊಲೀಸರ ಗುಂಡಿಗೆ ಬಲಿಯಾಗಿದ್ದಾರೆ ಎಂದು ಟ್ವೀಟ್ ಮಾಡಿದ್ದ ಆರು ಜನ ಪತ್ರಕರ್ತರು ಮತ್ತು ಕಾಂಗ್ರೆಸ್ ಸಂಸದ ಶಶಿ ತರೂರ್ ಅವರ ಮೇಲೆ ದೇಶದ್ರೋಹ ಆರೋಪ ಹೊರಿಸಿ ಎಫ್‌ಐಆರ್ ದಾಖಲಿಸಲಾಗಿತ್ತು. ಆರರಲ್ಲಿ ಮೃಣಾಲ್ ಪಾಂಡೆ, ರಾಜ್‌ದೀಪ್ ಸರ್ದೇಸಾಯಿ, ವಿನೋದ್ ಜೋಸ್, ಜಾಫರ್ ಆಘಾ, ಪರೇಶ್ ನಾಥ್ ಮತ್ತು ಅನಂತ್ ನಾಥ್ ಸೇರಿದ್ದಾರೆ.

ಎಫ್‌ಐಆರ್‌ಗೂ ಮೊದಲು ಡಿಸಿ ಟ್ವೀಟ್

ವರದರಾಜನ್ ವಿರುದ್ಧದ ಎಫ್‌ಐಆರ್‌ಗೆ ಮೊದಲು ದಿ ವೈರ್‌ನ ಸಂಸ್ಥಾಪಕ ಸಂಪಾದಕ ಮತ್ತು ರಾಂಪುರ್ ಜಿಲ್ಲಾಧಿಕಾರಿಯ ಅಧಿಕೃತ ಟ್ವಿಟರ್ ಖಾತೆಯ ನಡುವೆ ಟ್ವೀಟ್ ಸಂಭಾಷಣೆ ನಡೆದಿದೆ.
ಟ್ವಿಟರ್‌ನಲ್ಲಿ ಇನ್ನೂ ಇರುವ ವರದರಾಜನ್ ಅವರ ಮೂಲ ಟ್ವೀಟ್‌ಗೆ ಪ್ರತಿಕ್ರಿಯೆಯಾಗಿ, ರಾಂಪುರ್ ಜಿಲ್ಲಾಧಿಕಾರಿ ಅವರ ಅಧಿಕೃತ ಖಾತೆಯು ಪ್ರತಿಕ್ರಿಯಿಸಿ, “ದಯವಿಟ್ಟು ನಾವು ನಿಮಗೆ ಸತ್ಯಕ್ಕೆ ಮಾತ್ರ ಅಂಟಿಕೊಳ್ಳಬೇಕೆಂದು ವಿನಂತಿಸುತ್ತೇವೆ. ನಮ್ಮ ವಿನಂತಿಗೆ ತಮ್ಮ ಪ್ರತಿಕ್ರಿಯೆಯನ್ನು ನಿಮ್ಮಿಂದ ಪ್ರಾಮಾಣಿಕವಾಗಿ ನಿರೀಕ್ಷಿಸುತ್ತೇವೆ. ಧನ್ಯವಾದ.” ಈ ಟ್ವೀಟ್ ಜೊತೆಗೆ ಪೋಸ್ಟ್ ಮಾರ್ಟಮ್ ನಡೆಸಿದ ಮೂವರು ಸರ್ಕಾರಿ ವೈದ್ಯಕೀಯ ಅಧಿಕಾರಿಗಳು ಹೇಳಿಕೆ ನೀಡಿದ್ದನ್ನು ನಿರಾಕರಿಸಿದ ಟಿಪ್ಪಣಿ ಲಗತ್ತಿಸಲಾಗಿದೆ. ಅವರಲ್ಲಿ ಯಾರೂ ಮಾಧ್ಯಮದ ಯಾರೊಂದಿಗೂ ಮಾತನಾಡಿಲ್ಲ ಮತ್ತು ಶವಪರೀಕ್ಷೆಯ ಬಗ್ಗೆ ಯಾವುದೇ ಪತ್ರಕರ್ತರಿಗೆ ಯಾವುದೇ ಹೇಳಿಕೆ ನೀಡಿಲ್ಲ ಎಂದು ಹೇಳಿದ್ದಾರೆ.

ಇದಕ್ಕೆ ಪ್ರತಿಕ್ರಿಯೆಯಾಗಿ ವರದರಾಜನ್ ಅವರು, ಮೂವರು ವೈದ್ಯರ ಅಧಿಕೃತ ಘೋಷಣೆಯನ್ನು ಸೇರಿಸಿ ದಿ ವೈರ್ ವರದಿಯನ್ನು ಅಪ್ಡೇಟ್ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿಗೆ ಟ್ವೀಟ್ ಮಾಡಿದ್ದಾರೆ.

ಇದಕ್ಕೆ ಜಿಲ್ಲಾಧಿಕಾರಿ, “ನಿಮ್ಮ ಸ್ಟೋರಿ ಇಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಮಸ್ಯೆಯನ್ನು ಉಂಟುಮಾಡಬಹುದು ಎಂದು ನೀವು ಅರ್ಥಮಾಡಿಕೊಂಡಿದ್ದೀರಿ ಎಂದು ಭಾವಿಸುತ್ತೇವೆ. ಇದು ಈಗಾಗಲೇ ಇಲ್ಲಿ ಉದ್ವಿಗ್ನ ಪರಿಸ್ಥಿತಿಗೆ ಕಾರಣವಾಗಿದೆ. ಯಾರು ಜವಾಬ್ದಾರಿ?’ ಎಫ್‌ಐಆರ್ ದಾಖಲಾದ ಗಂಟೆಗಳ ನಂತರ ವರದರಾಜ್‌ನ್ ಅವರಿಗೆ ಟ್ವೀಟ್ ಮಾಡಿದ್ದಾರೆ.

ಭಾನುವಾರ ಬೆಳಿಗ್ಗೆ ಎಫ್‌ಐಆರ್‌ಗೆ ಟ್ವಿಟರ್‌ನಲ್ಲಿ ಪ್ರತಿಕ್ರಿಯಿಸಿದ ವರದರಾಜನ್ ಇದನ್ನು “ದುರುದ್ದೇಶಪೂರಿತ ಕಾನೂನು ಕ್ರಮ” ಎಂದು ಕರೆದಿದ್ದಾರೆ. “ಈ ದುರುದ್ದೇಶಪೂರಿತ ಕಾನೂನು ಕ್ರಮಕ್ಕಾಗಿ ಐಪಿಸಿಯ ಯಾವ ನಿಬಂಧನೆ ಅವಕಾಶ ಮಾಡಿಕೊಡುತ್ತದೆ? ಟ್ರ‍್ಯಾಕ್ಟರ್ ಪೆರೇಡ್‌ನಲ್ಲಿ ಮೃತಪಟ್ಟ ರೈತನ ಅಜ್ಜ ದಾಖಲೆಯಲ್ಲಿ ಏನು ಹೇಳಿದ್ದಾರೆಂಬುದನ್ನು ಟ್ವೀಟ್ ಮಾಡಿದ್ದಕ್ಕಾಗಿ ಯುಪಿ ಪೊಲೀಸರು ಈ ಕ್ರಮ ಕೈಗೊಳ್ಳುತ್ತಿದ್ದಾರೆ. ನನ್ನ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ! ” ಎಂದು ಅವರು ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಟಿಕಾಯತ್ ಮನವಿಗೆ ಭಾರೀ ಬೆಂಬಲ: ರೈತರೊಟ್ಟಿಗೆ ಹರಿದುಬರುತ್ತಿರುವ ಸಾವಿರಾರು ಯುವಜನರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...