Homeಚಳವಳಿಲಖಿಂಪುರ್ ಖೇರಿಯಲ್ಲಿ ಬೆಂಗಾವಲು ವಾಹನ ಹರಿಸಿ ರೈತರ ಹತ್ಯೆ- ಭುಗಿಲೆದ್ದ ಹಿಂಸಾಚಾರ

ಲಖಿಂಪುರ್ ಖೇರಿಯಲ್ಲಿ ಬೆಂಗಾವಲು ವಾಹನ ಹರಿಸಿ ರೈತರ ಹತ್ಯೆ- ಭುಗಿಲೆದ್ದ ಹಿಂಸಾಚಾರ

- Advertisement -
- Advertisement -

ಉತ್ತರ ಪ್ರದೇಶದ ಲಖಿಂಪುರ್ ಖೇರಿ ಜಿಲ್ಲೆಯಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಕೇಂದ್ರ ಸಚಿವರ ಬೆಂಗಾವಲು ವಾಹನ ಹರಿದು ಮೂವರು ಸಾವನ್ನಪ್ಪಿರುವ ಹಿನ್ನೆಲೆ ಹಿಂಸಾಚಾರ ಭುಗಿಲೆದ್ದಿದೆ. ಆಕ್ರೋಶಗೊಂಡ ರೈತರು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ.

ಘಟನೆಯಲ್ಲಿ ಮೂವರು ರೈತರು ಮೃತಪಟ್ಟಿದ್ದು, 8ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ರೈತರ ಸಾವು, ಸಂಘರ್ಷ ಮತ್ತು ವಾಹನಗಳು ನಾಶಗೊಂಡಿರುವ ಬಗ್ಗೆ ಇಲ್ಲಿಯವರೆಗೆ ಸರ್ಕಾರಿ ಅಧಿಕಾರಿಗಳು ಯಾರು ಹೇಳಿಕೆ ನೀಡಿಲ್ಲ. ಆದರೆ, ರಸ್ತೆ ಬದಿಯಲ್ಲಿ ಗಾಯಗಳೀಮದ ನರಳುತ್ತಿರುವ, ರಕ್ತಸಿಕ್ತವಾಗಿರುವ ಬಟ್ಟೆಗಳಲ್ಲಿರುವ ರೈತರ ವಿಡಿಯೋ, ಚಿತ್ರಗಳು ರೈತರ ಟ್ವಿಟರ್‌ ಖಾತೆಗಗಳಲ್ಲಿ ಹರಿದಾಡುತ್ತಿವೆ.

ಇದನ್ನೂ ಓದಿ: ಉತ್ತರ ಪ್ರದೇಶ: ಪ್ರತಿಭಟನಾ ನಿರತರ ಮೇಲೆ ಹರಿದ ಸಚಿವರ ಬೆಂಗಾವಲು ವಾಹನ: ಇಬ್ಬರು ರೈತರು ಸಾವು

ಸಂಯುಕ್ತ ಕಿಸಾನ್ ಮೋರ್ಚಾದ ನಾಯಕರಿಗೆ ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಅಜಯ್ ಮಿಶ್ರಾ ತೆನಿ ಬಹಿರಂಗ ಬೆದರಿಕೆ ಹಾಕಿದ್ದರ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದ ರೈತರು, ಉತ್ತರ ಪ್ರದೇಶದ ಲಖಿಂಪುರ್ ಖೇರಿಯ ಹೆಲಿಪ್ಯಾಡ್ ಅನ್ನು ಆಕ್ರಮಿಸಿಕೊಂಡಿದ್ದರು.

ಕಪ್ಪು ಬಾವುಟದೊಂದಿಗೆ ರಸ್ತೆಗಿಳಿದು ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಅಜಯ್ ಮಿಶ್ರಾ ತೆನಿ (ಬಹುತೇಕ ಅವರ ಮಗನ ವಾಹನ) ಬೆಂಗಾವಲು ಪಡೆ ಕಾರು ಹರಿಸಿದ್ದಾರೆ. ಘಟನೆಯಲ್ಲಿ ಮೂವರು ರೈತರು ಸಾವನ್ನಪ್ಪಿದ್ದಾರೆ. ಜೊತೆಗೆ ಪ್ರತಿಭಟನೆಯ ನೇತೃತ್ವ ವಹಿಸಿದ್ದ ಎಸ್‌ಕೆಎಂ ಮುಖಂಡ ತೇಜಿಂದರ್ ಸಿಂಗ್ ವಿರ್ಕ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ ಎಂದು ಸಂಯುಕ್ತ ಕಿಸಾನ್ ಮೋರ್ಚಾ ತಿಳಿಸಿದೆ.


ಇದನ್ನೂ ಓದಿ: ರೈತ ನಾಯಕರಿಗೆ ಬಹಿರಂಗ ಬೆದರಿಕೆ: ಹೆಲಿಪ್ಯಾಡ್ ಆಕ್ರಮಿಸಿಕೊಂಡ ರೈತರಿಂದ ಸರ್ಕಾರಕ್ಕೆ ಸವಾಲ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...