Homeಮುಖಪುಟರೈತರು ಬಿರಿಯಾನಿ ತಿಂದು ಹಕ್ಕಿ ಜ್ವರ ಹರಡುತ್ತಿದ್ದಾರೆ: ನಾಲಿಗೆ ಹರಿಯಬಿಟ್ಟ ಬಿಜೆಪಿ ಶಾಸಕ

ರೈತರು ಬಿರಿಯಾನಿ ತಿಂದು ಹಕ್ಕಿ ಜ್ವರ ಹರಡುತ್ತಿದ್ದಾರೆ: ನಾಲಿಗೆ ಹರಿಯಬಿಟ್ಟ ಬಿಜೆಪಿ ಶಾಸಕ

ಹೋರಾಟ ಮಾಡುವ ಮೂಲಕ ದೇಶದಲ್ಲಿ ಪಿತೂರಿ ಮಾಡುತ್ತಿರುವವರು ಭಯೋತ್ಪಾದಕರು, ದರೋಡೆಕೋರರು, ಕಳ್ಳರು ಎಂದು ಬಿಜೆಪಿ ಶಾಸಕ ಆಧಾರ ರಹಿತ ಆರೋಪ ಮಾಡಿ ತೀವ್ರ ಟೀಕೆಗೊಳಗಾಗಿದ್ದಾರೆ.

- Advertisement -
- Advertisement -

‘ಒಂದು ಕಡೆ ತೊಟ್ಟಿಲು ತೂಗುತ್ತಾರೆ, ಮೊತ್ತೊಂದು ಕಡೆ ಮಗು ಚಿವುಟುತ್ತಾರೆ’ ಅನ್ನುವ ಕನ್ನಡ ಗಾದೆ ಈ ಬಿಜೆಪಿ ಪಕ್ಷಕ್ಕೆ ಸರಿಯಾಗಿ ಅನ್ವಯಿಸುತ್ತದೆ. ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆಯಬೇಕೆಂದು ಕಳೆದ 45 ದಿನಗಳಿಂದ ದೆಹಲಿಯ ಕೊರೆಯುವ ಚಳಿಯಲ್ಲಿ, ಮಳೆಯಲ್ಲಿ ರೈತರು ಹೋರಾಡುತ್ತಿದ್ದಾರೆ. ರೈತ ಮುಖಂಡರೊಂದಿಗೆ ಒಂದು ಕಡೆ ಮಾತುಕತೆ ನಡೆಸುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ, ಮತ್ತೊಂದು ಕಡೆ ರೈತರನ್ನು ಹೀಯಾಳಿಸುವ ಬುದ್ದಿ ಬಿಟ್ಟಿಲ್ಲ. ರಾಜಸ್ಥಾನದ ರಾಮ್‌ಗಂಜ್‌ ಮಂಡಿ ಕ್ಷೇತ್ರದ ಬಿಜೆಪಿ ಶಾಸಕ ಮದನ್ ದಿಲಾವರ್ “ಹೋರಾಟನಿರತ ರೈತರು ಬಿರಿಯಾನಿ ತಿನ್ನುವ ಮೂಲಕ ಇಡೀ ದೇಶಕ್ಕೆ ಹಕ್ಕಿ ಜ್ವರ ಹರಡುತ್ತಿದ್ದಾರೆ” ಎನ್ನುವ ಮೂಲಕ ತಮ್ಮ ನಾಲಿಗೆ ಹರಿಯಬಿಟ್ಟಿದ್ದಾರೆ.

ಈ ರೀತಿಯ ಹೋರಾಟ ಮಾಡುವ ಮೂಲಕ ದೇಶದಲ್ಲಿ ಪಿತೂರಿ ಮಾಡುತ್ತಿರುವ ಭಯೋತ್ಪಾದಕರು, ದರೋಡೆಕೋರರು, ಕಳ್ಳರು ಎಂದು ಬಿಜೆಪಿ ಶಾಸಕ ಆಧಾರ ರಹಿತ ಆರೋಪ ಮಾಡಿದ್ದಾರೆ. ಇವರ ಹೇಳಿಕೆಗೆ ಭಾರೀ ವಿರೋಧ ವ್ಯಕ್ತವಾಗಿದ್ದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಪ್ರತಿಭಟನಾ ನಿರತ ರೈತರು ದೇಶ ಅಥವಾ ದೇಶದ ರೈತರ ಬಗ್ಗೆ ಆಲೋಚನೆ ಮಾಡುತ್ತಿಲ್ಲ. ಪ್ರತಿಭಟನೆ ಅವರಿಗೆ ಕೇವಲ ಪಿಕ್ನಿಕ್ ಮಾತ್ರ. ಮುಂದಿನ ಕೆಲವು ದಿನಗಳಲ್ಲಿ ಸರ್ಕಾರವು ಮನವೊಲಿಸುವ ಮೂಲಕ ಅಥವಾ ಬಲವಂತದ ಮೂಲಕ ಅವರನ್ನು ಹಾಕದಿದ್ದರೆ, ದೇಶವು ಪಕ್ಷಿ ಜ್ವರ ಸಮಸ್ಯೆಯನ್ನು ಎದುರಿಸಲಿದೆ ಎಂದು ನಾನು ಭಾವಿಸುತ್ತೇನೆ” ಎಂದು ದಿಲಾವರ್ ಹೇಳಿದ್ದಾರೆ.

ಬಿಜೆಪಿ ಶಾಸಕರ ಹೇಳಿಕೆಯನ್ನು ಕಾಂಗ್ರೆಸ್ ತೀವ್ರವಾಗಿ ಖಂಡಿಸಿದೆ. ರಾಜಸ್ಥಾನ್ ಕಾಂಗ್ರೆಸ್ ಮುಖ್ಯಸ್ಥ ಗೋವಿಂದ್ ಸಿಂಗ್ ದೋಟಾಸ್ರಾ ಮಾತನಾಡಿ “ದೇಶಕ್ಕೆ ಅನ್ನ ನೀಡುವ ರೈತರು ಹಕ್ಕಿ ಜ್ವರ ಹಬ್ಬಿಸಲು ಹೇಗೆ ಕಾರಣರಾಗುತ್ತಾರೆ? ಬಿಜೆಪಿ ಶಾಸಕರ ಹೇಳಿಕೆ ರೈತರ ಕುರಿತು ಬಿಜೆಪಿ ಮನಸ್ಥಿತಿಯನ್ನು ತಿಳಿಸುತ್ತದೆ” ಎಂದು ಕಿಡಿಕಾರಿದ್ದಾರೆ.

ಈ ಮುಂಚೆಯು ಸಹ ಬಿಜೆಪಿ ಮುಖಂಡರು ಹೋರಾಟನಿರತ ರೈತರನ್ನು ಖಲಿಸ್ತಾನಿಗಳು, ಭಯೋತ್ಪಾದಕರು ಎಂದೆಲ್ಲಾ ಟೀಕಿಸಿದ್ದರು. ಒಂದು ಕಡೆ ಟೀಕಿಸುವುದು, ಮತ್ತೊಂದು ಕಡೆ ರೈತರೊಡನೆ ಮಾತುಕತೆ ನಡೆಸುವುದು, ಅವರು ಕೊಟ್ಟ ಊಟ ಮಾಡುವುದು ಇದು ಬಿಜೆಪಿಯ ಇಬ್ಬಂದಿತನವಲ್ಲವೇ ಎಂಬ ತೀವ್ರ ಟೀಕೆ ವ್ಯಕ್ತವಾಗಿತ್ತು.

ಬಿಜೆಪಿ, ಕೆಲ ಮಾಧ್ಯಮಗಳು, ಕಂಗನಾ ರಾಣಾವತ್‌ರವರ ಟೀಕೆಗಳನ್ನು ಎದುರಿಸಿಯೂ ರೈತರ ಹೋರಾಟ ಅಬಾಧಿತವಾಗಿ ಮುಂದುವರೆಯುತ್ತಿದೆ. ಮೊನ್ನೆ ತಾನೇ ಟ್ರ್ಯಾಕ್ಟರ್ ರ್ಯಾಲಿ ಮಾಡಿ ಸರ್ಕಾರಕ್ಕೆ ಎಚ್ಚರಿಕೆ ನೀಡಿರುವ ರೈತರು ಜನವರಿ 26ರ ಗಣರಾಜ್ಯೋತ್ಸವದಂದು ಪೂರ್ಣ ಪ್ರಮಾಣದ ಟ್ರ್ಯಾಕ್ಟರ್ ಪೆರೇಡ್ ಮಾಡಲು ಮುಂದಾಗಿದ್ದಾರೆ.


ಇದನ್ನೂ ಓದಿ; ರೈತ ಹೊಸ ಬೆಳೆಯನ್ನು ಬೆಳೆಯಬಲ್ಲ…. ಹೊಸ ನಗರವನ್ನು ಸೃಷ್ಟಿಸಬಲ್ಲ…!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...