Homeಚಳವಳಿಅಕ್ಷಯ್‌ ನಟನೆಯ ‘ಸೂರ್ಯವಂಶಿ’ ಪ್ರದರ್ಶನಕ್ಕೆ ತಟ್ಟಿದ ರೈತರ ಆಕ್ರೋಶ

ಅಕ್ಷಯ್‌ ನಟನೆಯ ‘ಸೂರ್ಯವಂಶಿ’ ಪ್ರದರ್ಶನಕ್ಕೆ ತಟ್ಟಿದ ರೈತರ ಆಕ್ರೋಶ

- Advertisement -
- Advertisement -

ಪಂಜಾಬ್‌ನಲ್ಲಿ ಅಕ್ಷಯ್ ಕುಮಾರ್ ಅಭಿನಯದ ಸೂರ್ಯವಂಶಿ ಚಿತ್ರದ ಪ್ರದರ್ಶನವನ್ನು ವಿರೋಧಿಸಿ ನಡೆಯುತ್ತಿರುವ ರೈತ ಸಂಘಟನೆಯ ಪ್ರತಿಭಟನೆ ಮುಂದುವರೆದಿದೆ.

ಸೂರ್ಯವಂಶಿ ಸಿನಿಮಾವನ್ನು ಚಿತ್ರಮಂದಿರಗಳಿಂದ ಹಿಂತೆಗೆದುಕೊಳ್ಳದಿದ್ದರೆ ಅಥವಾ ಪಂಜಾಬ್ ಸರ್ಕಾರವು ನಿಷೇಧಿಸದಿದ್ದರೆ ಪ್ರತಿಭಟನೆಯನ್ನು ತೀವ್ರಗೊಳಿಸಲಾಗುವುದು ಎಂದು ಭಾರತೀಯ ಕಿಸಾನ್ ಯೂನಿಯನ್ (ಕಡಿಯನ್) ರಾಷ್ಟ್ರೀಯ ವಕ್ತಾರ ರವನೀತ್ ಸಿಂಗ್ ಬ್ರಾರ್ ದಿ ಪ್ರಿಂಟ್‌ಗೆ ತಿಳಿಸಿದ್ದಾರೆ.

ಅಮೃತಸರದಲ್ಲಿ ಜನಿಸಿದ ಅಕ್ಷಯ್ ಕುಮಾರ್ ಅವರು ಈ ವರ್ಷದ ಆರಂಭದಲ್ಲಿ “ಪ್ರೊಪೊಗಾಂಡ ವಿರುದ್ಧ ಭಾರತ” ಅಭಿಯಾನದ ಪರವಾಗಿ ಟ್ವೀಟ್ ಮಾಡಿದ್ದರು. ರೈತ ಚಳವಳಿಯನ್ನು ಬೆಂಬಲಿಸಿದವರ ಮೇಲೆ ಇಲ್ಲ ಸಲ್ಲದ ಆರೋಪ ಹೊರಿಸಿ, ‘ಪ್ರೊಪಗಾಂಡ ವಿರುದ್ಧ ಭಾರತ’ ಎಂಬ ಅಭಿಯಾನವನ್ನು ಸರ್ಕಾರದ ಪರ ಇರುವ ಸೆಲೆಬ್ರಟಿಗಳು ನಡೆಸಿದ್ದರು.

ಫೆಬ್ರವರಿಯಲ್ಲಿ, ಪಾಪ್‌ಸ್ಟಾರ್ ರಿಹಾನ್ನಾ ಮತ್ತು ಪರಿಸರ ಹೋರಾಟಗಾರ್ತಿ ಗ್ರೆಟಾ ಥನ್‌ಬರ್ಗ್ ಸೇರಿದಂತೆ ಹಲವಾರು ಅಂತರರಾಷ್ಟ್ರೀಯ ಮಟ್ಟದ ಪ್ರಮುಖರು ಕೃಷಿ ಕಾನೂನುಗಳ ವಿರುದ್ಧದ ಪ್ರತಿಭಟನೆಯನ್ನು ಬೆಂಬಲಿಸಿ ಟ್ವೀಟ್ ಮಾಡಿದ್ದರು. ಇದನ್ನು ಬಾಲಿವುಡ್ ಮತ್ತು ಕ್ರೀಡಾ ಸೆಲೆಬ್ರಿಟಿಗಳು ‘ಪ್ರೊಪಗಾಂಡ’ ಎಂದು ಬಿಂಬಿಸಲು ಯತ್ನಿಸಿದ್ದರು.

“ಭಾರತದ ವಿರುದ್ಧ ಅಂತಾರಾಷ್ಟ್ರೀಯ ಬೆಂಬಲವನ್ನು ಕ್ರೋಢೀಕರಿಸಲು ಪಟ್ಟಭದ್ರ ಹಿತಾಸಕ್ತಿ ಗುಂಪುಗಳು ಯತ್ನಿಸಿವೆ” ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಬಿಂಬಿಸಲು ಯತ್ನಿಸಿತ್ತು. ಸಚಿವಾಲಯದ ಟ್ವೀಟ್‌ ಅನ್ನು ರೀಟ್ವೀಟ್‌ ಮಾಡಿ, ಅಕ್ಷಯ್‌ಕುಮಾರ್‌ ಸರ್ಕಾರದ ಪರ ವಾದಿಸಿದ್ದರು.

ಇದನ್ನೂ ಓದಿರಿ: ಕೇರಳ ದಲಿತ ವಿದ್ಯಾರ್ಥಿನಿ ಹೋರಾಟಕ್ಕೆ ಜಯ: ಜಾತಿ ತಾರತಮ್ಯವೆಸಗಿದ್ದ ಪ್ರಾಧ್ಯಾಪಕನ ವಜಾ

ನವೆಂಬರ್ 2020ರಲ್ಲಿ ಪಂಜಾಬ್‌ನಿಂದ ಹೊರಟು ದೆಹಲಿಯ ಗಡಿಯನ್ನು ತಲುಪಿದ ರೈತರ ಆಂದೋಲನವನ್ನು ಅಕ್ಷಯ್‌‌ಕುಮಾರ್ ಬೆಂಬಲಿಸದಿರುವ ಬಗ್ಗೆ ಅಸಮಾಧಾನ ವ್ಯಕ್ತವಾಯಿತು.

“ಈ ವಿಷಯದ ಬಗ್ಗೆ ನಾವು ಅಕ್ಷಯ್ ಕುಮಾರ್ ಅವರ ಮೌನವನ್ನು ಪ್ರಶ್ನಿಸಿದೆವು. ಅವರು ಮೋದಿ ಸರ್ಕಾರದ ಪರವಾಗಿ ಟ್ವೀಟ್ ಮಾಡಿರುವುದು ಆಶ್ಚರ್ಯ ಉಂಟು ಮಾಡಿತು. ಅಕ್ಷಯ್ ಕುಮಾರ್ ಅವರು ‘ಕೇಸರಿ’ಯಂತಹ ಹಲವು ಸಿನಿಮಾಗಳಲ್ಲಿ ಪಂಜಾಬಿ-ಸಿಖ್ ದೇಶಭಕ್ತರಾಗಿ, ಸಿಖ್ ಪೇಟ ಧರಿಸಿ ಅಭಿನಯಿಸಿದ್ದಾರೆ” ಎಂದಿರುವ ರವನೀತ್‌, “ಈ ಚಿತ್ರಗಳು ಸೂಪರ್ ಹಿಟ್ ಆಗಿದ್ದವು. ಪಂಜಾಬ್‌ನಲ್ಲಿ ಅವರು ಹೆಚ್ಚು ಜನಪ್ರಿಯರಾಗಿದ್ದರು. ಆದರೆ ಅಕ್ಷಯ್‌‌ಕುಮಾರ್‌ ನಮಗೆ ಪ್ರತಿಯಾಗಿ ನೀಡಬೇಕಾದದ್ದು ಇದೇನಾ?” ಎಂದು ಪ್ರಶ್ನಿಸಿದ್ದಾರೆ.

ಸೂರ್ಯವಂಶಿ ಸಿನಿಮಾದಲ್ಲಿ ರನ್ವೀರ್‌ ಸಿಂಗ್‌, ಅಜಯ್‌ ದೇವಗನ್‌, ಕತ್ರಿನಾ ಕೈಫ್‌‌ ಮೊದಲಾದವರು ಅಭಿನಯಿಸಿದ್ದಾರೆ. ನವೆಂಬರ್‌‌ 5ರಂದು ಸಿನಿಮಾ ಬಿಡುಗಡೆಯಾಗಿದೆ. ರೈತರ ಪ್ರತಿಭಟನೆಯ ಬಳಿಕ ಹಲವು ಕಡೆ ಸೂರ್ಯವಂಶಿ ಪ್ರದರ್ಶನವನ್ನು ರದ್ದುಗೊಳಿಸಲಾಗಿದೆ.

ನವೆಂಬರ್ 5ರಂದು, ಕಿಸಾನ್ ಆಂದೋಲನದ ಅಧಿಕೃತ ಫೇಸ್‌ಬುಕ್ ಪುಟವಾದ ಕಿಸಾನ್ ಏಕ್ತಾ ಮೋರ್ಚಾ ಕೂಡ ಅದರ ಪ್ರದರ್ಶನವನ್ನು ವಿರೋಧಿಸುವುದಾಗಿ ಹೇಳಿದೆ.

ಸೂರ್ಯವಂಶಿ ವಿರುದ್ಧ ಪ್ರತಿಭಟನೆ ಶನಿವಾರ ಆರಂಭವಾಗಿದೆ ಎಂದು ಬ್ರಾರ್ ತಿಳಿಸಿದ್ದಾರೆ. “ಈ ಚಿತ್ರವನ್ನು ಪ್ರದರ್ಶಿಸುತ್ತಿರುವ ಪಂಜಾಬ್‌ನ ಪ್ರತಿಯೊಂದು PVR (ಖಾಸಗಿ ಥಿಯೇಟರ್ ಸರಣಿ) ಹೊರಗೆ ನಾವು ಧರಣಿ ನಡೆಸಿದ್ದೇವೆ” ಎಂದು ಅವರು ಹೇಳಿದ್ದಾರೆ.

“ಬಿಕೆಯು ನೇತೃತ್ವದ ಪ್ರತಿಭಟನೆಯು ಸ್ವತಂತ್ರ/ವೈಯಕ್ತಿಕವಾದದ್ದು.  ಆದರೆ, ನಮ್ಮ ಸಭೆಯಲ್ಲಿ ಎಸ್‌ಕೆಎಂ ನಾಯಕರು ಈ ಬಗ್ಗೆ ಚರ್ಚಿಸಲಿದ್ದು, ನಂತರ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು” ಎಂದು ಕಿಸಾನ್‌ ಸಂಯುಕ್ತ ಮೋರ್ಚಾ ಸದಸ್ಯ, ಕ್ರಾಂತಿಕಾರಿ ಕಿಸಾನ್ ಯೂನಿಯನ್ ಪಂಜಾಬ್‌ನ ನಾಯಕರಾದ ಡಾ.ದರ್ಶನ್ ಪಾಲ್ ತಿಳಿಸಿದ್ದಾರೆ.

ಎರಡು ತಿಂಗಳ ಹಿಂದೆ ಪಟಿಯಾಲದ ಥಿಯೇಟರ್‌ನ ಹೊರಗೆ ಅಕ್ಷಯ್ ಕುಮಾರ್ ಅವರ ಬೆಲ್ ಬಾಟಮ್ ಪ್ರದರ್ಶನದ ವಿರುದ್ಧ ಪ್ರತಿಭಟನೆಗಳು ನಡೆದಿದ್ದವು.


ಇದನ್ನೂ ಓದಿರಿ: ಲಕ್ನೋದಲ್ಲಿ ಕಿಸಾನ್ ಮಹಾಪಂಚಾಯತ್: ಬಿಜೆಪಿ ವಿರುದ್ಧ ರೈತರ ಸಮರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...