Homeಕರ್ನಾಟಕಭೂ ಸ್ವಾಧೀನ ವಿರೋಧಿ ಹೋರಾಟ: ಚನ್ನರಾಯಪಟ್ಟಣಕ್ಕೆ ಜಗಜಿತ್ ಸಿಂಗ್ ದಲ್ಲೆವಾಲ್ ಭೇಟಿ

ಭೂ ಸ್ವಾಧೀನ ವಿರೋಧಿ ಹೋರಾಟ: ಚನ್ನರಾಯಪಟ್ಟಣಕ್ಕೆ ಜಗಜಿತ್ ಸಿಂಗ್ ದಲ್ಲೆವಾಲ್ ಭೇಟಿ

- Advertisement -
- Advertisement -

ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣದ ಭೂ ಸ್ವಾಧೀನ ವಿರೋಧಿ ಹೋರಾಟದ ಸ್ಥಳಕ್ಕೆ ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಭಾನುವಾರ (ಜು.6) ಭೇಟಿ ನೀಡಿದರು. ಸ್ಥಳೀಯ ರೈತ ಮುಖಂಡರು ಮತ್ತು ಹೋರಾಟಗಾರರು ಅವರನ್ನು ಹೂಗುಚ್ಚಿ ನೀಡಿ ಸ್ವಾಗತಿಸಿದರು.

ದಲ್ಲೆವಾಲ್ ಭಾರತೀಯ ಕಿಸಾನ್ ಒಕ್ಕೂಟದ (ಏಕ್ತಾ ಸಿಧುಪುರ) ಅಧ್ಯಕ್ಷರು ಮತ್ತು 2022ರಲ್ಲಿ ಮೂಲ ಸಂಯುಕ್ತ ಕಿಸಾನ್ ಮೋರ್ಚಾದಿಂದ ಹೊರಬಂದ ನಂತರ ರಚಿಸಲಾದ ರೈತ ಸಂಘಟನೆಗಳ ಒಕ್ಕೂಟವಾದ ಸಂಯುಕ್ತ ಕಿಸಾನ್ ಮೋರ್ಚಾದ (ರಾಜಕೀಯೇತರ) ಪ್ರಮುಖ ವ್ಯಕ್ತಿಯಾಗಿದ್ದಾರೆ.

ರಾಷ್ಟ್ರ ಮಟ್ಟದಲ್ಲಿ ಹಲವು ರೈತ ಹೋರಾಟಗಳನ್ನು ಮುನ್ನಡೆಸಿರುವ ದಲ್ಲೆವಾಲ್ ಅವರು, ಕಳೆದ ನವೆಂಬರ್ 26, 2024ರಿಂದ ಮಾರ್ಚ್ 2025ರವರೆಗೆ ರೈತರ ಬೆಲೆಗೆ ಎಂಎಸ್‌ಪಿ ನೀಡಲು ಕಾನೂನು ಖಾತರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಉಪವಾಸ ಸತ್ಯಾಗ್ರಹ ನಡೆಸುವ ಮೂಲಕ ದೇಶದ ಗಮನ ಸೆಳೆದಿದ್ದರು.

ಚನ್ನರಾಯಪಟ್ಟಣದ 13 ಹಳ್ಳಿಗಳ ರೈತರ ಐತಿಹಾಸಿಕ ಹೋರಾಟ ಭಾನುವಾರಕ್ಕೆ 1,189 ದಿನಗಳನ್ನು ಪೂರೈಸಿದೆ. ಜುಲೈ 4ರಂದು ಫ್ರೀಡಂ ಪಾರ್ಕ್‌ನಲ್ಲಿ ನಡೆದ ‘ನಾಡ ಉಳಿಸಿ ಸಮಾವೇಶ’ದ ಬಳಿಕ ಕೆಐಎಡಿಬಿ ಸ್ವಾಧೀನಕ್ಕೆ ಮುಂದಾಗಿರುವ ಹಳ್ಳಿ ಹಳ್ಳಿಗಳಲ್ಲಿ ಹೋರಾಟ ತೀವ್ರಗೊಳಿಸಲು ರೈತರು, ಹೋರಾಟಗಾರರು ತೀರ್ಮಾನಿಸಿದ್ದಾರೆ.

ಫ್ರೀಡಂ ಪಾರ್ಕ್‌ನಲ್ಲಿ ಜೂನ್ 27ರಿಂದ ಆರಂಭಿಸಿದ ‘ಭೂಮಿ ಸತ್ಯಾಗ್ರಹ’ ಕೂಡ ಮುಂದುವರಿಯಲಿದೆ ಎಂದು ನಾಡ ಉಳಿಸಿ ಸಮಾವೇಶದಲ್ಲಿ ರೈತ ಸಂಘದ ನಾಯಕ ಬಡಗಲಪುರ ನಾಗೇಂದ್ರ ಘೋಷಣೆ ಮಾಡಿದ್ದಾರೆ.

ಜುಲೈ 4ರಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರ ಜೊತೆ ನಡೆದ ರೈತರು, ಹೋರಾಟಗಾರರ ಸಭೆ ಅಪೂರ್ಣಗೊಂಡಿದೆ. ಭೂ ಸ್ವಾಧೀನ ಸಂಪೂರ್ಣವಾಗಿ ಕೈ ಬಿಡಬೇಕು ಎಂದು ರೈತರು ಪಟ್ಟು ಹಿಡಿದಿದ್ದು, ಈ ಬಗ್ಗೆ ತಮ್ಮ ನಿಲುವು ತಿಳಿಸಲು ಸಿಎಂ 10 ದಿನಗಳ ಸಮಯ ಕೇಳಿದ್ದಾರೆ.

ಜುಲೈ 15ರಂದು ಮತ್ತೆ ಸಭೆ ನಡೆಯಲಿದೆ. ಅಂದು ಭೂ ಸ್ವಾಧೀನ ಕೈ ಬಿಡುವ ಅಂತಿಮ ತೀರ್ಮಾನ ಪ್ರಕಟಿಸಬೇಕು ಎಂದು ರೈತರು, ಹೋರಾಟಗಾರರು ಸಿಎಂಗೆ ಹೇಳಿ ಬಂದಿದ್ದಾರೆ. ಒಂದು ವೇಳೆ ಜುಲೈ 15ರ ಸಭೆಯಲ್ಲಿ ರೈತರ ವಿರುದ್ಧ ತೀರ್ಮಾನ ಬಂದರೆ, ಹೋರಾಟ ತೀವ್ರಗೊಳಿಸುತ್ತೇವೆಯೇ ಹೊರತು, ಯಾವುದೇ ಕಾರಣಕ್ಕೂ ಒಂದಿಂಚು ಭೂಮಿ ಬಿಟ್ಟು ಕೊಡುವುದಿಲ್ಲ ಎಂದು ರೈತರು ಎಚ್ಚರಿಕೆ ನೀಡಿದ್ದಾರೆ.

ದಲಿತ ಕುಟುಂಬದ ಮೇಲೆ ದೌರ್ಜನ್ಯ: ಮೂವರು ಪೊಲೀಸ್ ಅಧಿಕಾರಿಗಳ ವಿರುದ್ಧ ಕರ್ತವ್ಯ ಲೋಪ ಆರೋಪ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...