Homeಕರ್ನಾಟಕಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ: ‘ಗ್ರಾಮ ಸಂಕಲ್ಪ ಸಮಾವೇಶ’ದಲ್ಲಿ ಒಗ್ಗಟ್ಟು ಪ್ರದರ್ಶಿಸಿದ 13 ಹಳ್ಳಿಗಳ ರೈತರು

ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ: ‘ಗ್ರಾಮ ಸಂಕಲ್ಪ ಸಮಾವೇಶ’ದಲ್ಲಿ ಒಗ್ಗಟ್ಟು ಪ್ರದರ್ಶಿಸಿದ 13 ಹಳ್ಳಿಗಳ ರೈತರು

- Advertisement -
- Advertisement -

ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯಲ್ಲಿ ನಡೆಯುತ್ತಿರುವ ಭೂಸ್ವಾಧೀನ ವಿರೋಧಿ ಹೋರಾಟ ಇಂದಿಗೆ 1197 ದಿನಗಳನ್ನು ತಲುಪಿದ್ದು, ಜುಲೈ 15 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಅಂತಿಮ ಸಭೆ ನಡೆಯಲಿದೆ.

ಭೂಸ್ವಾಧೀನ ವಿರೋಧಿ ಹೋರಾಟ ಅಂತಿಮ ಹಂತ ತಲುಪಿರುವ ಈ ಹೊತ್ತಿನಲ್ಲಿ ಭೂಮಿ ಕೊಡುವುದಾಗಿ ಕೆಲವರು ಗೊಂದಲ ಸೃಷ್ಟಿಸಿದ್ದು, ಚನ್ನರಾಯಪಟ್ಟಣದ ಧರಣಿ ಸ್ಥಳದಲ್ಲಿ ಇಂದು ನಡೆದ ‘ಗ್ರಾಮ ಸಂಕಲ್ಪಸಮಾವೇಶ’ದಲ್ಲಿ 13 ಹಳ್ಳಿಗಳ ರೈತರು ಭೂಮಿ ಕೊಡುವುದಿಲ್ಲ ಎಂಬ ತಮ್ಮ ನಿರ್ಧಾರವನ್ನು ಪುನರುಚ್ಛರಿಸಿ ಒಗ್ಗಟ್ಟು ಪ್ರದರ್ಶಿಸಿದರು.

“ಕಳೆದ ಹತ್ತು ದಿನಗಳಿಂದ ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿಯಿಂದ ಗ್ರಾಮ ಸಭೆಗಳನ್ನು ನಡೆಸಲಾಗಿದ್ದು, ಒಟ್ಟಾರೆ 13 ಹಳ್ಳಿಗಳ ಶೇ.73 ರಿಂದ ಶೇ.80 ರಷ್ಟು ರೈತರು ತಮ್ಮ ಭೂಮಿ ಕೊಡುವುದಿಲ್ಲ ಎಂದು ಸಹಿ ಮಾಡಿದ್ದಾರೆ. 706 ಜನ ಖಾತೆದಾರರು ಸ್ವಯಂಪ್ರೇರಿತರಾಗಿ ಕೆಐಎಡಿಬಿಗೆ ಅಥವಾ ಸರ್ಕಾರಕ್ಕೆ ನಮ್ಮ ಭೂಮಿ ಕೊಡುವುದಿಲ್ಲ ಎಂದು ದಾಖಲೆಗಳನ್ನು ನೀಡಿದ್ದಾರೆ. ನಾಳಿನ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ದಾಖಲೆಗಳನ್ನು ನೀಡಲಾಗುವುದು” ಎಂದು ಚೀಮಾಚನಹಳ್ಳಿ ಗ್ರಾಮದ ರೈತ ರಮೇಶ್‌ ತಿಳಿಸಿದರು.

ಚನ್ನರಾಯಪಟ್ಟಣ ಹೋಬಳಿಯ ಪಾಳ್ಯ ಗ್ರಾಮದ 43.14 ಎಕರೆ (ಶೇ.75), ಹರಳೂರು ಗ್ರಾಮದ 12.5 ಎಕರೆ (ಶೇ.100), ಪೋಲನಹಳ್ಳಿ ಗ್ರಾಮದ 218 ಎಕರೆ (ಶೇ.71), ನಲ್ಲೂರು ಗ್ರಾಮದ 73 ಎಕರೆ (ಶೇ.70), ಮಲ್ಲೇಪುರ ಗ್ರಾಮದ 38 ಎಕರೆ (ಶೇ.100), ನಲ್ಲಪ್ಪನಹಳ್ಳಿ ಗ್ರಾಮದ 81 ಎಕರೆ (ಶೇ.76), ಚೀಮಾಚನಹಳ್ಳಿ ಗ್ರಾಮದ 97 ಎಕರೆ (ಶೇ.65), ಮಟ್ಟಬಾರ್ಲು ಗ್ರಾಮದ 180 ಎಕರೆ (ಶೇ.100), ಮುದ್ದೇನಹಳ್ಳಿ ಗ್ರಾಮದ 68 ಎಕರೆ (ಶೇ.92), ಚನ್ನರಾಯಪಟ್ಟಣ ಗ್ರಾಮದ 160 ಎಕರೆ (ಶೇ.68), ಎಸ್‌. ತೆಲ್ಲಹಳ್ಳಿ ಗ್ರಾಮದ 77.7 ಎಕರೆ (ಶೇ.100), ಹ್ಯಾಡಾಳ ಗ್ರಾಮದ 85 ಎಕರೆ (ಶೇ.53), ಗೋಕರೆ ಬಚ್ಚೇನಹಳ್ಳಿ 139 ಎಕರೆ (ಶೇ.54) ಗಳ ಜಮೀನಿನ ಖಾತೆದಾರರು ಭೂಮಿ ಕೊಡುವುದಿಲ್ಲ ಎಂದು ಎದೆ ಮೇಲೆ ಕೈ ಇಟ್ಟು ಪ್ರತಿಜ್ಞೆ ಮಾಡಿದರು.

ದೇವನಹಳ್ಳಿ: “ರೈತರಿಗೆ ಭೂಮಿ ಕೇವಲ ಆಸ್ತಿಯಲ್ಲ, ಗುರುತು!” – ರೈತ ಹೋರಾಟಕ್ಕೆ ದೇಶದ 30 ಸಂಘಟನೆಗಳ ಬೆಂಬಲ ಘೋಷಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -