Homeಚಳವಳಿಚಂಡೀಗಢ | ಪ್ರತಿಭಟನಾ ನಿರತ ರೈತರೊಂದಿಗಿನ ಕೇಂದ್ರದ ಮಾತುಕತೆ ವಿಫಲ : ಫೆ.22ಕ್ಕೆ ಮತ್ತೊಂದು ಸಭೆ

ಚಂಡೀಗಢ | ಪ್ರತಿಭಟನಾ ನಿರತ ರೈತರೊಂದಿಗಿನ ಕೇಂದ್ರದ ಮಾತುಕತೆ ವಿಫಲ : ಫೆ.22ಕ್ಕೆ ಮತ್ತೊಂದು ಸಭೆ

- Advertisement -
- Advertisement -

ಕಳೆದ ವರ್ಷದ (2024) ಫೆಬ್ರವರಿಯಿಂದ ಪಂಜಾಬ್ ಮತ್ತು ಹರಿಯಾಣ ನಡುವಿನ ಖಾನೌರಿ ಮತ್ತು ಶಂಭು ಗಡಿ ಬಿಂದುಗಳಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರೊಂದಿಗೆ ಶುಕ್ರವಾರ (ಫೆ.14) ಕೇಂದ್ರ ಸರ್ಕಾರ ನಡೆಸಿದ ಸಂಧಾನ ಸಭೆ ವಿಫಲವಾಗಿದೆ.

ಕೇಂದ್ರ ಸರ್ಕಾರದ ಪ್ರತಿನಿಧಿಯಾಗಿ ಆಗಮಿಸಿದ್ದ ಸಚಿವ ಪ್ರಲ್ಹಾದ್ ಜೋಶಿ ರೈತ ನಾಯಕರ ಜೊತೆ ಸಭೆ ನಡೆಸಿದ್ದಾರೆ. ಆದರೆ, ರೈತರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ (ಎಂಎಸ್‌ಪಿ) ಕಾನೂನುಬದ್ಧ ಖಾತರಿ ಸೇರಿದಂತೆ ತಮ್ಮ ಬೇಡಿಕೆಗಳನ್ನು ಸಚಿವ ಮುಂದಿಟ್ಟಿದ್ದಾರೆ. ಇದರಿಂದ ಸಭೆಯಲ್ಲಿ ಯಾವುದೇ ಅಂತಿಮ ತೀರ್ಮಾನಕ್ಕೆ ಬರಲು ಸಾಧ್ಯವಾಗಿಲ್ಲ.

ಕೇಂದ್ರ ಸಚಿವರ ಸಭೆಯಲ್ಲಿ ಭಾಗವಹಿಸಿದ್ದ 28 ಸದಸ್ಯರ ರೈತ ನಾಯಕರ ನಿಯೋಗ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ), ಸಾಲ ಮನ್ನಾ, ಪ್ರತಿಭಟನಾ ನಿರತ ರೈತರ ಮೇಲಿನ ಪ್ರಕರಣಗಳನ್ನು ಹಿಂಪಡೆಯಬೇಕು, ರೈತರು ಮತ್ತು ಕಾರ್ಮಿಕರಿಗೆ ಪಿಂಚಣಿ ಮತ್ತು 2021ರ ಲಖಿಂಪುರ ಖೇರಿ ಹಿಂಸಾಚಾರದ ಬಲಿಪಶುಗಳಿಗೆ ನ್ಯಾಯ ಒದಗಿಸಿಕೊಡಬೇಕು ಎಂಬ ಬೇಡಿಕೆಗಳನ್ನು ಮುಂದಿಟ್ಟಿದೆ ಎಂದು ರೈತ ನಾಯಕ ಅಭಿಮನ್ಯು ಕೊಹರ್ ಹೇಳಿದ್ದಾರೆ.

ಕಳೆದ ವರ್ಷದ (2024) ನವೆಂಬರ್ 26ರಿಂದ ಆಮರಣಾಂತ ಉಪವಾಸ ನಡೆಸುತ್ತಿರುವ ಸಂಯುಕ್ತ ಕಿಸಾನ್ ಮೋರ್ಚಾದ (ರಾಜಕೀಯೇತರ) ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಕೂಡ ಸಭೆಯಲ್ಲಿ ಭಾಗವಹಿಸಿದ್ದರು. ಮೊಮ್ಮಗಳ ಮರಣದ ನಡುವೆಯೂ ಅವರು ಸಭೆಯಲ್ಲಿ ಉಪಸ್ಥಿತರಿದ್ದರು ಎಂದು ರೈತ ಮುಖಂಡರೊಬ್ಬರು ತಿಳಿಸಿದ್ದಾರೆ.

“ನಾವು ನಮ್ಮ ಬೇಡಿಕೆಗಳನ್ನು ಮುಂದಿಟ್ಟಿದ್ದೇವೆ. ಅದಕ್ಕೆ ಕೇಂದ್ರ ಸಚಿವರ ಬಳಿ ಸಮರ್ಪಕರ ಉತ್ತರ ಸಿಕ್ಕಿಲ್ಲ. ಸಾಧ್ಯವಾದಷ್ಟು ಬೇಗ ಈ ಸಮಸ್ಯೆಯನ್ನು ಪರಿಹರಿಸುವಂತೆ ನಾವು ಪ್ರಧಾನಿ ಮತ್ತು ಗೃಹ ಸಚಿವರನ್ನು ಒತ್ತಾಯಿಸುತ್ತೇವೆ” ಎಂದು ರೈತ ನಾಯಕ ಸರ್ವಾನ್ ಸಿಂಗ್ ಪಂಧೇರ್ ಸಭೆಯ ನಂತರ ಮಾಧ್ಯಮಗೋಷ್ಠಿಯಲ್ಲಿ ಹೇಳಿದ್ದಾರೆ.

ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಕುರಿತು ಕೃಷಿ ಸಚಿವರ ಸಮ್ಮುಖದಲ್ಲಿ ಚರ್ಚಿಸಬೇಕಷ್ಟೆ ಎಂದು ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾಗಿ ಪಂಧೇರ್ ತಿಳಿಸಿದ್ದಾರೆ.

ಸರ್ಕಾರವು ಶಂಭು ಗಡಿಯನ್ನು ತೆರೆಯಬೇಕೆಂದು ಪಂಧೇರ್ ಒತ್ತಾಯಿಸಿದ್ದು, ಇನ್ನೊಂದು ಬದಿಯಲ್ಲಿರುವ ಉದ್ಯಮಿಗಳು ಮತ್ತು ವ್ಯಾಪಾರಿಗಳು ತೊಂದರೆ ಅನುಭವಿಸುತ್ತಿದ್ದಾರೆ ಎಂದಿದ್ದಾರೆ.

“ದೇಶದ ವಿವಿಧ ಕಡೆಗಳಿಂದ ಹಲವಾರು ರೈತ ಮುಖಂಡರು ಇಲ್ಲಿಗೆ (ಚಂಡೀಗಢ) ಬಂದಿರುವುದರಿಂದ ನಾವು ದೆಹಲಿಗೆ ಹೋಗಲು ಬಯಸಿದ್ದೇವೆ. ಪ್ರಯಾಣದ ವಿಷಯದಲ್ಲೂ ದೆಹಲಿ ಹೋಗುವುದು ಸುಲಭ” ಎಂದು ಪಂಧೇರ್ ಹೇಳಿದ್ದಾರೆ.

ಈ ನಡುವೆ, ತಮ್ಮ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸುವಂತೆ ದಲ್ಲೇವಾಲ್ ಅವರಿಗೆ ಪ್ರಹ್ಲಾದ್ ಜೋಶಿ ಮನವಿ ಮಾಡಿದ್ದಾರೆ. ಆದರೆ ಕೇಂದ್ರ ಸರ್ಕಾರ ಎಂಎಸ್‌ಪಿಗೆ ಕಾನೂನುಬದ್ಧ ಖಾತರಿ ನೀಡುವವರೆಗೆ ಉಪವಾಸ ಮುಂದುವರಿಸುವುದಾಗಿ ದಲ್ಲೇವಾಲ್ ತಿಳಿಸಿದ್ದಾರೆ.

ರೈತರು ಮತ್ತು ಕೇಂದ್ರದ ನಡುವಿನ ಮುಂದಿನ ಸಭೆ ಫೆಬ್ರವರಿ 22ರಂದು ನಿಗದಿಯಾಗಿದ್ದು, ರೈತರು ದೆಹಲಿಯಲ್ಲಿ ಸಭೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ.

ಪ್ರಲ್ಹಾದ್ ಜೋಶಿ ಹೇಳಿದ್ದೇನು? 

ರೈತ ನಾಯಕರೊಂದಿಗಿನ ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಪ್ರಲ್ಹಾದ್ ಜೋಶಿ, ಚಂಡೀಗಢದಲ್ಲಿ ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ಜೊತೆ ಮಹತ್ವದ ಸಭೆ ನಡೆಸಿ, ರೈತ ಪ್ರತಿನಿಧಿಗಳೊಂದಿಗೆ ಚರ್ಚೆ ಮಾಡಿದೆವು.

ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ರೈತರ ಕಲ್ಯಾಣಕ್ಕಾಗಿ ನಾವು ತೆಗೆದುಕೊಂಡಿರುವ ಪ್ರಮುಖ ನಿರ್ಧಾರಗಳನ್ನು ಸಭೆಯಲ್ಲಿ ಎತ್ತಿ ತೋರಿಸಿದ್ದೇವೆ. ರೈತರೊಂದಿಗೆ ಮಾತುಕತೆಗೆ ಸರ್ಕಾರದ ಬದ್ಧತೆಯನ್ನು ಪುನರುಚ್ಚರಿಸಿದ್ದೇವೆ. ಮಾತುಕತೆಗಳು ಸಕಾರಾತ್ಮಕವಾಗಿ ಪ್ರಾರಂಭವಾಗಿರುವುದರಿಂದ ಜಗಜಿತ್ ಸಿಂಗ್ ದಲ್ಲೆವಾಲ್ ಅವರು ತಮ್ಮ ಉಪವಾಸ ಸತ್ಯಾಗ್ರಹವನ್ನು ಕೈಬಿಡುವಂತೆ ನಾನು ಮನವಿ ಮಾಡಿದ್ದೇನೆ.

ಮುಂದಿನ ನಿರ್ಣಾಯಕ ಸಭೆ ಫೆಬ್ರವರಿ 22ರಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್ ಅವರ
ನೇತೃತ್ವದಲ್ಲಿ ನಡೆಯಲಿದೆ. ರೈತರ ಕಳವಳಗಳನ್ನು ಪ್ರಾಮಾಣಿಕತೆ ಮತ್ತು ಅತ್ಯಂತ ದೃಢ ನಿಶ್ಚಯದಿಂದ ಪರಿಹರಿಸಲು ನಾವು ಬದ್ಧರಾಗಿದ್ದೇವೆ ಎಂದಿದ್ದಾರೆ.

ಭದ್ರತಾ ಪಡೆಗಳು ದೆಹಲಿಗೆ ಮೆರವಣಿಗೆ ನಡೆಸಲು ಅವಕಾಶ ನೀಡದಿರುವ ಹಿನ್ನೆಲೆ, ಕಳೆದ ವರ್ಷದ (2024) ಫೆಬ್ರವರಿ 13ರಿಂದ ರೈತರು ಎಸ್‌ಕೆಎಂ (ರಾಜಕೀಯೇತರ) ಮತ್ತು ಕೆಎಂಎಂ ಬ್ಯಾನರ್ ಅಡಿಯಲ್ಲಿ ಶಂಭು ಮತ್ತು ಖಾನೌರಿ ಗಡಿ ಬಿಂದುಗಳಲ್ಲಿ ಮೊಕ್ಕಾಂ ಹೂಡಿ ಪ್ರತಿಭಟಿಸುತ್ತಿದ್ದಾರೆ.

ಮುಖ್ಯ ಚುನಾವಣಾ ಆಯುಕ್ತರ ಆಯ್ಕೆಗೆ ಸಭೆ ಸೇರಲಿರುವ ಮೋದಿ, ರಾಹುಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ| ‘ಬಾಂಗ್ಲಾದೇಶಿ’ ಎಂದು ಆರೋಪಿಸಿ ಮುಸ್ಲಿಂ ಕಾರ್ಮಿಕನನ್ನು ಥಳಿಸಿದ ಗುಂಪು

ಬಾಂಗ್ಲಾದೇಶಿ ಎಂದು ಸುಳ್ಳು ಆರೋಪ ಹೊರಿಸಿ ಮುಸ್ಲಿಂ ಕಾರ್ಮಿಕನ ಮೇಲೆ ಗುಂಪೊಂದು ಹಲ್ಲೆ ನಡೆಸಿರುವ ಘಟನೆ ಬಿಹಾರದ ಮಧುಬನಿ ಜಿಲ್ಲೆಯಲ್ಲಿ ನಡೆದಿದೆ. ಬಲಿಪಶು ಖುರ್ಷಿದ್ ಆಲಂ, ಧಾರ್ಮಿಕ ಘೋಷಣೆಗಳನ್ನು ಪಠಿಸಲು ನಿರಾಕರಿಸಿದ ನಂತರ ಸುಮಾರು...

ರಾಜ್ಯ ಸರ್ಕಾರದ ಸಮೀಕ್ಷೆಯಲ್ಲಿ ಇವಿಎಂ ಮೇಲೆ ಜನ ವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದ ವರದಿ : ಅಲ್ಲಗಳೆದ ಸಚಿವ ಪ್ರಿಯಾಂಕ್ ಖರ್ಗೆ

ಹೆಚ್ಚಿನ ನಾಗರಿಕರು ಭಾರತದಲ್ಲಿ ಚುನಾವಣೆಗಳು ಮುಕ್ತ ಮತ್ತು ನ್ಯಾಯಯುತವಾಗಿ ನಡೆಯುತ್ತಿವೆ ಎಂದು ನಂಬುತ್ತಾರೆ ಹಾಗೂ ವಿದ್ಯುನ್ಮಾನ ಮತಯಂತ್ರಗಳ (ಇವಿಎಂ) ಮೇಲಿನ ನಂಬಿಕೆ ಹೆಚ್ಚಾಗಿದೆ ಎಂದು ಕರ್ನಾಟಕದ ಕಾಂಗ್ರೆಸ್ ಸರ್ಕಾರ ಪ್ರಕಟಿಸಿದ ರಾಜ್ಯವ್ಯಾಪಿ ಸಮೀಕ್ಷೆಯ...

ಉಡುಗೊರೆಯಾಗಿ ನೀಡಿದ್ದ ಮೊಬೈಲ್ ಫೋನ್‌ಗಳನ್ನು ಅಸ್ಸಾಂ ಸರ್ಕಾರಕ್ಕೆ ಹಿಂದಿರುಗಿಸಿದ ಪತ್ರಕರ್ತರು

ಅಸ್ಸಾಂ ಸರ್ಕಾರದಿಂದ ಹೊಸ ವರ್ಷದ ಉಡುಗೊರೆಯಾಗಿ ಪಡೆದ ಮೊಬೈಲ್ ಫೋನ್‌ಗಳನ್ನು ಕನಿಷ್ಠ ಇಬ್ಬರು ಪತ್ರಕರ್ತರು ಗುರುವಾರ ಹಿಂದಿರುಗಿಸಿದ್ದಾರೆ ಎಂದು 'ಸ್ಕ್ರೋಲ್' ವರದಿ ಮಾಡಿದೆ. ಅಸ್ಸಾಂನ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ನಿರ್ದೇಶನಾಲಯದಲ್ಲಿ ನೋಂದಾಯಿಸಲಾದ 2,200...

ಕೋಗಿಲು ಬಡಾವಣೆ ಮನೆಗಳ ತೆರವು : ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

ಬೆಂಗಳೂರಿನ ಕೋಗಿಲು ಬಡಾವಣೆಯ ವಾಸಿಂ ಹಾಗೂ ಫಕೀರ್ ಕಾಲೊನಿಗಳ ಸುಮಾರು ‌300 ಮನೆಗಳನ್ನು ನೆಲಸಮ ಮಾಡಿ, ಮೂರು ಸಾವಿರಕ್ಕೂ ಹೆಚ್ಚು ಜನರನ್ನು ಬೀದಿಗೆ ತಳ್ಳಿರುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್​ಗೆ ಸಾರ್ವಜನಿಕ...

ರ‍್ಯಾಗಿಂಗ್ ದೈಹಿಕ ಹಿಂಸೆ; ಎರಡು ತಿಂಗಳ ಬಳಿಕ 19 ವರ್ಷದ ವಿದ್ಯಾರ್ಥಿನಿ ಸಾವು

ಹಿಮಾಚಲ ಪ್ರದೇಶದ ಧರ್ಮಶಾಲಾದ ಸರ್ಕಾರಿ ಪದವಿ ಕಾಲೇಜಿನಲ್ಲಿ ನಡೆದ ಘಟನೆಯು ಇಡೀ ರಾಜ್ಯವನ್ನೇ ಆಘಾತಕ್ಕೆ ದೂಡಿದೆ. 19 ವರ್ಷದ ಬಾಲಕಿಯ ಸಾವಿನ ಗಂಭೀರ ಪ್ರಕರಣಗಳಲ್ಲಿ ಕಾಲೇಜಿನ ಅಧ್ಯಾಪಕರು ಮತ್ತು ಮೂವರು ವಿದ್ಯಾರ್ಥಿನಿಯರ ಹೆಸರಿದೆ....

ಮುಸ್ಲಿಂ ಲೀಗ್‌ ಚಂದ್ರಿಕಾದ ಸಂಪಾದಕೀಯ ಪ್ರಕಟಿಸಿದ ಜನ್ಮಭೂಮಿ ಪತ್ರಿಕೆ : ಮುಜುಗರಕ್ಕೊಳಗಾದ ಬಿಜೆಪಿಯ ಮುಖವಾಣಿ

ವರ್ಷದ ಆರಂಭದಲ್ಲಿ ಅಚ್ಚರಿ ಎಂಬಂತೆ, ಕೇರಳ ಬಿಜೆಪಿಯ ಮುಖವಾಣಿಯಾದ ಮಲಯಾಳಂ ದಿನಪತ್ರಿಕೆ 'ಜನ್ಮಭೂಮಿ', ಪ್ರತಿಸ್ಪರ್ಧಿ ಪತ್ರಿಕೆಯಾದ ಇಂಡಿಯನ್‌ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್‌) ಪಕ್ಷದ ಮುಖವಾಣಿ 'ಚಂದ್ರಿಕಾ'ದ ಸಂಪಾದಕೀಯ ಪ್ರಕಟಿಸಿ ಮುಜುಗರಕ್ಕೀಡಾಗಿದೆ. 'ಜನ್ಮಭೂಮಿ' ಪತ್ರಿಕೆಯ...

ಕೆಕೆಆರ್ ತಂಡಕ್ಕೆ ಬಾಂಗ್ಲಾ ಕ್ರಿಕೆಟಿಗ ಮುಸ್ತಾಫಿಜುರ್ ರೆಹಮಾನ್ ಖರೀದಿ; ಶಾರುಖ್ ಖಾನ್ ಅವರನ್ನು ‘ದೇಶದ್ರೋಹಿ’ ಎಂದ ರಾಮಭದ್ರಾಚಾರ್ಯ

ಇಂಡಿಯನ್ ಪ್ರೀಮಿಯರ್ ಲೀಗ್ 2026 ರ ಸೀಸನ್‌ಗಾಗಿ ಕೋಲ್ಕತ್ತಾ ನೈಟ್ ರೈಡರ್ಸ್ ಬಾಂಗ್ಲಾದೇಶದ ಕ್ರಿಕೆಟಿಗ ಮುಸ್ತಾಫಿಜುರ್ ರೆಹಮಾನ್ ಅವರನ್ನು ಖರೀದಿ ಮಾಡಿದ್ದಕ್ಕಾಗಿ ಬಾಲಿವುಡ್ ನಟ ಶಾರುಖ್ ಖಾನ್ ಅವರನ್ನು ಹಿಂದೂ ಆಧ್ಯಾತ್ಮಿಕ ನಾಯಕ...

“ನಾವೆಲ್ಲರೂ ನಿಮ್ಮ ಬಗ್ಗೆ ಯೋಚಿಸುತ್ತಿದ್ದೇವೆ”: ನ್ಯೂಯಾರ್ಕ್‌ನ ನೂತನ ಮೇಯರ್ ಝೊಹ್ರಾನ್ ಮಮ್ದಾನಿಯಿಂದ ಉಮರ್ ಖಾಲಿದ್‌ಗೆ ಪತ್ರ

ಜೈಲಿನಲ್ಲಿರುವ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಅವರಿಗೆ ನ್ಯೂಯಾರ್ಕ್‌ ನಗರದ ನೂತನ ಮೇಯರ್ ಝೊಹ್ರಾನ್ ಮಮ್ದಾನಿ ಅವರು ಕೈಬರಹದ ಪತ್ರವೊಂದನ್ನು ಬರೆದಿದ್ದಾರೆ ಎಂದು, ಖಾಲಿದ್ ಸ್ನೇಹಿತೆ ಬನೋಜ್ಯೋತ್ಸ್ನಾ...

ಮಧ್ಯಪ್ರದೇಶ| ಹಸು ಮೇಯಿಸುವ ವಿಚಾರಕ್ಕೆ ಜಗಳ; ದಲಿತ ಕುಟುಂಬದ ಮೇಲೆ ಗುಂಡು ಹಾರಿಸಿದ ಗುಂಪು

ದಲಿತ ಕುಟುಂಬವೊಂದರ ಹೊಲದಲ್ಲಿ ಪ್ರಬಲ ಜಾತಿ ಜನರ ಹಸುಗಳು ಮೇಯಿಸುವುದನ್ನು ವಿರೋಧಿಸದ್ದಕ್ಕೆ ದಲಿತ ಕುಟುಂಬದ ಮೇಲೆ ಗುಂಡು ಹಾರಿಸಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ದಾಳಿಕೋರರು ಮನಬಂದಂತೆ ಗುಂಡು ಹಾರಿಸಿ ನಂತರ ದಲಿತ...

ಬಳ್ಳಾರಿ | ರೆಡ್ಡಿ ಬಣಗಳ ನಡುವೆ ಘರ್ಷಣೆ : ಗುಂಡಿನ ದಾಳಿಗೆ ಕಾಂಗ್ರೆಸ್ ಕಾರ್ಯಕರ್ತ ಬಲಿ

ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮದ ಅಂಗವಾಗಿ ಗುರುವಾರ (ಜ.1) ರಾತ್ರಿ ಬ್ಯಾನರ್ ಕಟ್ಟುವ ವಿಚಾರಕ್ಕೆ ಸಂಬಂಧಿಸಿ ರೆಡ್ಡಿ ಬಣಗಳ ನಡುವೆ ಘರ್ಷಣೆ ಉಂಟಾಗಿದ್ದು, ಈ ವೇಳೆ ಕಾಂಗ್ರೆಸ್ ಕಾರ್ಯಕರ್ತನೋರ್ವ ಗುಂಡು ತಗುಲಿ ಮೃತಪಟ್ಟ...