Homeಚಳವಳಿರೈತರಿಗೆ ಪ್ರತಿಭಟಿಸುವ ಹಕ್ಕಿದೆ, ಆದರೆ, ರಸ್ತೆಗಳನ್ನು ಅನಿರ್ದಿಷ್ಟವಾಗಿ ನಿರ್ಬಂಧಿಸಲು ಸಾಧ್ಯವಿಲ್ಲ- ಸುಪ್ರೀಂ

ರೈತರಿಗೆ ಪ್ರತಿಭಟಿಸುವ ಹಕ್ಕಿದೆ, ಆದರೆ, ರಸ್ತೆಗಳನ್ನು ಅನಿರ್ದಿಷ್ಟವಾಗಿ ನಿರ್ಬಂಧಿಸಲು ಸಾಧ್ಯವಿಲ್ಲ- ಸುಪ್ರೀಂ

- Advertisement -
- Advertisement -

ಒಕ್ಕೂಟ ಸರ್ಕಾರದ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತರು ದೆಹಲಿಯ ಹೆದ್ದಾರಿಗಳ‌ನ್ನು ತಡೆಹಿಡಿದಿರುವ ಕುರಿತು ಸುಪ್ರೀಂಕೋರ್ಟ್ ಮತ್ತೆ ಅಸಮಾಧಾನ ವ್ಯಕ್ತಪಡಿಸಿದೆ. ’ರೈತರಿಗೆ ಪ್ರತಿಭಟನೆ ಮಾಡುವ ಹಕ್ಕಿದೆ. ಆದರೆ, ರಸ್ತೆಗಳನ್ನು ಹೀಗೆ ಅನಿರ್ದಿಷ್ಟವಾಗಿ ನಿರ್ಬಂಧಿಸಲು ಸಾಧ್ಯವಿಲ್ಲ’ ಎಂದು ಸುಪ್ರೀಂ ಕೋರ್ಟ್ ಗುರುವಾರ ಹೇಳಿದೆ.

ಒಕ್ಕೂಟ ಸರ್ಕಾರದ ಮೂರು ಕೃಷಿ ಕಾಯ್ದೆಗಳನ್ನು ರದ್ದುಗೊಳಿಸಬೇಕು ಎಂದು ರೈತರು ಕಳೆದ ಒಂದು ವರ್ಷದಿಂದ ದೆಹಲಿ ಗಡಿಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಗಡಿಗಳಿಂದ ರೈತರ ಪ್ರತಿಭಟನೆಯನ್ನು ತೆರವುಗೊಳಿಸುವಂತೆ ಕೋರಿ ಹಲವರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.

ನೊಯ್ಡಾ ನಿವಾಸಿ ಮೋನಿಕಾ ಅಗರವಾಲ್ ಅವರು ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯವು ವಿಚಾರಣೆ ನಡೆಸುತ್ತಿದೆ. ಅರ್ಜಿಯಲ್ಲಿ, ಮೊದಲು ದಿಲ್ಲಿಯನ್ನು ತಲುಪಲು 20 ನಿಮಿಷಗಳಾಗುತ್ತಿತ್ತು. ಆದರೆ, ಈಗ ಎರಡು ಗಂಟೆಗಳಿಗಿಂತ ಹೆಚ್ಚು ಸಮಯ ತೆಗೆದುಕೊಳ್ಳುತ್ತಿದೆ ಎಂದಿದ್ದಾರೆ. ಜೊತೆಗೆ ಯುಪಿ ಗೇಟ್ ಬಳಿಯ ಪ್ರತಿಭಟನೆಗಳಿಂದಾಗಿ ಪ್ರದೇಶದ ಜನರು ಸಂಕಷ್ಟಗಳನ್ನು ಎದುರಿಸುತ್ತಿದ್ದಾರೆ ಎಂದಿದ್ದರು.

ವಿಚಾರಣೆ ನಡೆಸುತ್ತಿರುವ ನ್ಯಾಯಮೂರ್ತಿ ಸಂಜಯ್ ಕಿಶನ್ ಕೌಲ್ ಮತ್ತು ಎಂಎಂ ಸುಂದ್ರೇಶ್ ಅವರ ನ್ಯಾಯಪೀಠವು, ರೈತರಿಗೆ ಪ್ರತಿಭಟನೆ ಮಾಡುವ ಹಕ್ಕಿದೆ. ಆದರೆ, ರಸ್ತೆಗಳನ್ನು ಅನಿರ್ದಿಷ್ಟವಾಗಿ ನಿರ್ಬಂಧಿಸಲು ಸಾಧ್ಯವಿಲ್ಲ ಎಂದು ಹೇಳಿದೆ.

ಇದನ್ನೂ ಓದಿ: ಲಖಿಂಪುರ್‌ ಖೇರಿ ಹತ್ಯಾಕಾಂಡ: ಅ.26ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

ಅಲ್ಲದೆ, ಪ್ರತಿಭಟನೆಗೆ ತೆರವಿಗೆ ಸಲ್ಲಿಸಲಾಗಿರುವ ಅರ್ಜಿಯ ಬಗ್ಗೆ ಪ್ರತಿಕ್ರಿಯೆ ನೀಡುವಂತೆ ರೈತ ಸಂಘಟನೆಗಳಿಗೆ ಮೂರು ವಾರಗಳ ಸಮಯವನ್ನು ಕೋರ್ಟ್‌ ನೀಡಿದ್ದು, ಮುಂದಿನ ವಿಚಾರಣೆಯನ್ನು ಡಿಸೆಂಬರ್ 7 ರಂದು ಮುಂದೂಡಿದೆ.

“ಕಾಯ್ದೆಗಳ ಬಗ್ಗೆ ನ್ಯಾಯಾಲಯದಲ್ಲಿ ವಿಚಾರಣೆ ಬಾಕಿಯಿರುವಾಗಲೂ ರೈತರ ಪ್ರತಿಭಟಿಸುವ ಹಕ್ಕನ್ನು ನಾವು ವಿರೋಧಿಸುವುದಿಲ್ಲ. ಆದರೆ ರಸ್ತೆಗಳನ್ನು ಹೀಗೆ ಅನಿರ್ಧಿಷ್ಟಾವಧಿಗೆ ನಿರ್ಬಂಧಿಸಲು ಸಾಧ್ಯವಿಲ್ಲ. ನೀವು ಯಾವುದೇ ರೀತಿಯಲ್ಲಿ ಆಂದೋಲನ ಮಾಡುವ ಹಕ್ಕನ್ನು ಹೊಂದಿದ್ದೀರಿ. ಆದರೆ ರಸ್ತೆಗಳನ್ನು ಈ ರೀತಿ ನಿರ್ಬಂಧಿಸಬಾರದು. ಜನರಿಗೆ ರಸ್ತೆಗಳಲ್ಲಿ ಸಂಚರಿಸಲು ಹಕ್ಕಿದೆ. ಅದನ್ನು ನಿರ್ಬಂಧಿಸಲು ಸಾಧ್ಯವಿಲ್ಲ” ಎಂದು ನ್ಯಾಯಪೀಠವು ಹೇಳಿದೆ.

ಈ ಹಿಂದೆ ಸೆಪ್ಟಂಬರ್‌ 30 ರಂದು ಇದೇ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಾಪೀಠ, “ಸಮಸ್ಯೆಗಳ ಪರಿಹಾರವು ನ್ಯಾಯಾಂಗ ಸ್ವರೂಪ, ಆಂದೋಲನ ಅಥವಾ ಸಂಸತ್ತಿನ ಚರ್ಚೆಗಳ ಮೂಲಕ ಮಾಡಬಹುದು. ಆದರೆ, ಹೆದ್ದಾರಿಗಳನ್ನು ಹೇಗೆ ನಿರ್ಬಂಧಿಸಬಹುದು..? ಅದು ಶಾಶ್ವತವಾಗಿ ಹೇಗೆ ಸಾಧ್ಯ…? ಇದು ಯಾವಾಗ ಕೊನೆಗೊಳ್ಳುತ್ತದೆ..?” ಎಂದು ಪ್ರಶ್ನಿಸಿತ್ತು.


ಇದನ್ನೂ ಓದಿ: ರೈತ ಹೋರಾಟ: ಹೆದ್ದಾರಿಗಳನ್ನು ಶಾಶ್ವತವಾಗಿ ನಿರ್ಬಂಧಿಸಲು ಸಾಧ್ಯವಿಲ್ಲ ಎಂದ ಸುಪ್ರೀಂ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...