Homeಮುಖಪುಟರೈತರಿಗೆ ಪ್ರತಿಭಟಿಸುವ ಹಕ್ಕಿದೆ: ರೈತ ಹೋರಾಟ ಬೆಂಬಲಿಸಿದ ಅಮೆರಿಕ ರಾಜಕಾರಣಿಗಳು

ರೈತರಿಗೆ ಪ್ರತಿಭಟಿಸುವ ಹಕ್ಕಿದೆ: ರೈತ ಹೋರಾಟ ಬೆಂಬಲಿಸಿದ ಅಮೆರಿಕ ರಾಜಕಾರಣಿಗಳು

ಭಾರತದ ರೈತರಿಗೆ ಶಾಂತಿಯುತವಾಗಿ ಪ್ರತಿಭಟಿಸಲು ಅವಕಾಶ ನೀಡಬೇಕೆಂದೂ, ಅನ್ಯಾಯಯುತವಾಗಿರುವ ಕೃಷಿ ಕಾಯ್ದೆಗಳನ್ನು ರದ್ದುಪಡಿಸಬೇಕೆಂದೂ ನಾನು ಭಾರತ ಸರ್ಕಾರವನ್ನು ಒತ್ತಾಯಿಸುತ್ತೇನೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯ ಗಡಿಗಳಲ್ಲಿ ಕಳೆದ 79 ದಿನಗಳಿಂದ ಹೋರಾಟ ನಡೆಸುತ್ತಿರುವ ರೈತರಿಗೆ ಪ್ರಪಂಚದೆಲ್ಲೆಡೆಯಿಂದ ಬೆಂಬಲ ಮುಂದುವರೆದಿದೆ. ಕ್ಯಾಲಿಫೋರ್ನಿಯ ರಾಜ್ಯದ ಬೇಕರ್ಸ್‌ಫೀಲ್ಡ್ ನಗರದ ಮೇಯರ್ ಕೆರೆನ್ ಗೌ ಮತ್ತು ಮಿಚಿಗನ್‌ನ 13 ನೇ ಕಾಂಗ್ರೆಸ್ ಜಿಲ್ಲೆಯ ಯು.ಎಸ್. ಪ್ರತಿನಿಧಿ ರಶೀದಾ ಹರ್ಬಿ ತ್ಲೈಬ್ ಭಾರತದ ರೈತರಿಗೆ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ.

ರಶೀದಾ ಹರ್ಬಿ ತ್ಲೈಬ್ ಮಂಗಳವಾರ ರಾತ್ರಿ ಟ್ವೀಟ್ ಮಾಡಿ “ಭಾರತದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗಳು ಇದುವರೆಗಿನ ಅತ್ಯಂತ ವಿವಿಧ್ಯಮಯ ಪ್ರತಿಭಟನೆಗಳಾಗಿವೆ. ಕೃಷಿಯನ್ನು ಕಾರ್ಪೊರೇಟ್‌ ವಯಲಕ್ಕೆ ಹಸ್ತಾಂತರಿಸುವುದನ್ನು ವಿರೋಧಿಸಿ ಭಾರತದ ರೈತರಿಗೆ (ಅಮೆರಿಕದಂತೆಯೇ) ತಮ್ಮ ಸಾಮೂಹಿಕ ಧ್ವನಿಯನ್ನು ಬಳಸುವ ಎಲ್ಲ ಹಕ್ಕಿದೆ” ಎಂದು ತಿಳಿಸಿದ್ದಾರೆ.

ಸಿಎಎ, ಕಾಶ್ಮೀರ ಮತ್ತು ಕೃಷಿ ಕಾಯ್ದೆ ಬಿಕ್ಕಟ್ಟುಗಳ ಮೂಲಕ ನಾಗರಿಕರ ವಿರುದ್ಧ ಹೆಚ್ಚುತ್ತಿರುವ ರಾಜ್ಯ ಹಿಂಸಾಚಾರದ ಗೊಂದಲದ ಪ್ರವೃತ್ತಿಯನ್ನು ನಾವು ನೋಡಿದ್ದೇವೆ. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವವಾಗಿ, ಮೋದಿ ಸರ್ಕಾರ ಪ್ರತಿಭಟಿಸುವ ಹಕ್ಕನ್ನು ಗೌರವಿಸುವುದು ನಿರ್ಣಾಯಕ ಎಂದು ಅವರು ನ್ಯೂಯಾರ್ಕ್ ಟೈಮ್ಸ್‌ನ ಪತ್ರಿಕಾ ವರದಿಯೊಂದನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿದ್ದಾರೆ.

ಅಮೇರಿಕದ ಕ್ಯಾಲಿಫೋರ್ನಿಯ ರಾಜ್ಯದ ಬೇಕರ್ಸ್‌ಫೀಲ್ಡ್ ನಗರದ ಮೇಯರ್ ಕೆರೆನ್ ಗೌ ಕಿಸಾನ್ ಏಕತಾ ಜಿಂದಾಬಾದ್ ಹೆಸರಿನ ವಿಡಿಯೋವೊಂದನ್ನು ಮಾಡಿ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ ಎಂದು ಅಸೋಸಿಯೇಟ್ಸ್‌‌ ಟೈಮ್ಸ್‌ ವರದಿ ಮಾಡಿದೆ.

ಆ ವಿಡಿಯೋದಲ್ಲಿ “ಭಾರತದ ರೈತರೆ, ನಿಮಗೆ ಶುಭಾಶಯಗಳು. ನಾನು ಭಾರತದಲ್ಲಿ ಜನಿಸಿದವಳು. ಭಾರತದ ಪುತ್ರಿಯಾಗಿ ನನ್ನ ಮಾತೃದೇಶದ ರೈತರ ಸ್ಥಿತಿಗತಿ ಬಗ್ಗೆ ನನಗೆ ಬಹಳ ಕಳವಳವಾಗಿದೆ. ನಾನು ನಿಮ್ಮ ಬೆಂಬಲಕ್ಕೆ ಇದ್ದೇನೆ. ನಮ್ಮ ಬೇಕರ್ಸ್‌ಫೀಲ್ಡ್ ನಗರವೊಂದು ರೈತಾಪಿ ಸೀಮೆ. ರೈತರ ಮಹತ್ವ ಎಷ್ಟೆನ್ನುವುದು ನಮಗೆ ಚೆನ್ನಾಗಿ ಗೊತ್ತಿದೆ. ನೀವು ನಮ್ಮ ಅನ್ನದಾತರು. ನೀವು ಜಗತ್ತಿಗೇ ಊಟ ನೀಡುವವರು” ಎಂದು ಹೇಳಿದ್ದಾರೆ.

ಭಾರತದ ರೈತರಿಗೆ ಶಾಂತಿಯುತವಾಗಿ ಪ್ರತಿಭಟಿಸಲು ಅವಕಾಶ ನೀಡಬೇಕೆಂದೂ, ಅನ್ಯಾಯಯುತವಾಗಿರುವ ಕೃಷಿ ಕಾಯ್ದೆಗಳನ್ನು ರದ್ದುಪಡಿಸಬೇಕೆಂದೂ ನಾನು ಭಾರತ ಸರ್ಕಾರವನ್ನು ಒತ್ತಾಯಿಸುತ್ತೇನೆ. ಕಿಸಾನ್ ಏಕತಾ ಜಿಂದಾಬಾದ್ ಎಂದು ವಿಡಿಯೋದಲ್ಲಿ ಅವರು ತಿಳಿಸಿದ್ದಾರೆ.

ಅಮೆರಿಕ ಸಂಸತ್ತಿನ ಇಂಡಿಯಾ ಕಾಕಸ್‌ನ ಸಹ-ಅಧ್ಯಕ್ಷ, ಸಂಸದ ಬ್ರಾಡ್ ಶೆರ್ಮನ್ ಅವರು ಭಾರತೀಯ ರೈತರ ಪ್ರತಿಭಟನೆ ಕುರಿತಂತೆ ಚರ್ಚೆ ಮಾಡಲು ಒಂದು ಸಭೆ ಕರೆದಿದ್ದಾರೆ. ಪ್ರಜಾಪ್ರಭುತ್ವದ ಬೇರುಗಳನ್ನು ಕಾಪಾಡಿಕೊಳ್ಳಲಾಗಿದೆಯೇ? ಪ್ರತಿಭಟನಾಕಾರರಿಗೆ ಶಾಂತಿಯುತವಾಗಿ ಪ್ರತಿಭಟಿಸಲು ಅವಕಾಶ ನೀಡಲಾಗಿದೆಯೇ? ಪ್ರತಿಭಟನಾಕಾರರಿಗೆ ಇಂಟರ್ನೆಟ್ ಲಭ್ಯವಿದೆಯೇ ಮತ್ತು ಪ್ರತಿಭಟನಾಕಾರರು ಪತ್ರಕರ್ತರನ್ನು ಭೇಟಿ ಮಾಡಲು ಅವಕಾಶ ಕಲ್ಪಿಸಲಾಗಿದೆಯೇ ಎಂಬುದನ್ನು ಖಚಿತಪಡಿಸಬೇಕು” ಎಂದು ಬ್ರಾಡ್ ಶೆರ್ಮನ್ ಹೇಳಿದ್ದಾರೆ.

ಪಾಪ್ ತಾರೆ ರಿಹಾನ್ನ ನಾವು ವಿಷಯದ ಕುರಿತು ಮಾತನಾಡಬಾರದೇಕೆ ಎಂದು ರೈತರ ಹೋರಾಟವನ್ನು ಉಲ್ಲೇಖಿಸಿದ ನಂತರ ಈ ಚಳವಳಿಗೆ ವಿಶ್ವದಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗಿದೆ.


ಇದನ್ನೂ ಓದಿ : ಭಾರತೀಯ ರೈತರ ಪರ ಧ್ವನಿಯೆತ್ತಿದ ಅಮೆರಿಕ ಸಂಸದರ ಗುಂಪು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...