Homeಮುಖಪುಟಹೋರಾಟ ತೀವ್ರಗೊಳಿಸಿದ ರೈತರು : ಇಂದು 'ದೆಹಲಿ ಚಲೋ' ಪುನರಾರಂಭ

ಹೋರಾಟ ತೀವ್ರಗೊಳಿಸಿದ ರೈತರು : ಇಂದು ‘ದೆಹಲಿ ಚಲೋ’ ಪುನರಾರಂಭ

- Advertisement -
- Advertisement -

ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ‘ದೆಹಲಿ ಚಲೋ’ ಹಮ್ಮಿಕೊಂಡಿರುವ ರೈತರು, ಇಂದು(ಮಾ.6) ತಮ್ಮ ಪಾದಯಾತ್ರೆಯನ್ನು ಪುನರಾರಂಭಿಸಲಿದ್ದಾರೆ. ಈ ಹಿನ್ನೆಲೆ ಪಂಜಾಬ್-ಹರಿಯಾಣ ಗಡಿಯಲ್ಲಿ ಪೊಲೀಸರು ಭದ್ರತೆ ಹೆಚ್ಚಿಸಿದ್ದಾರೆ.

‘ದೆಹಲಿ ಚಲೋ’ ಹೋರಾಟದ ನೇತೃತ್ವ ವಹಿಸಿರುವ ಎರಡು ಸಂಘಟನೆಗಳಾದ ಕಿಸಾನ್ ಮಜ್ದೂರ್ ಮೋರ್ಚಾ ಮತ್ತು ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ದೇಶದಾದ್ಯಂತ ರೈತರಿಗೆ ಇಂದು ರಾಷ್ಟ್ರ ರಾಜಧಾನಿ ದೆಹಲಿ ತಲುಪಲು ಮಾರ್ಚ್‌ 3ರಂದು ಮನವಿ ಮಾಡಿತ್ತು.

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಕಾನೂನು ಖಾತರಿ ನೀಡುವುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮುಂದಿನ ವಾರ ದೇಶದಾದ್ಯಂತ ನಾಲ್ಕು ಗಂಟೆಗಳ ಕಾಲ “ರೈಲು ತಡೆದು ಪ್ರತಿಭಟಿಸಲು” ರೈತ ಸಂಘಟನೆಗಳು ಕರೆ ನೀಡಿವೆ.

ಫೆ.13ರಂದು ದೆಹಲಿ ಚಲೋ ಪ್ರಾರಂಭಿಸಿರುವ ರೈತರನ್ನು ಪಂಜಾಬ್‌-ಹರಿಯಾಣ ರಾಜ್ಯಗಳ ನಡುವಿನ ಶಂಭು ಮತ್ತು ಖನೌರಿ ಗಡಿಯಲ್ಲಿ ಹರಿಯಾಣದ ಬಿಜೆಪಿ ಸರ್ಕಾರದ ಪೊಲೀಸರು ತಡೆದಿದ್ದಾರೆ. ಹರಿಯಾಣ ಪೊಲೀಸರು ರೈತರು ದೆಹಲಿ ಕಡೆ ತೆರಳಲು ಅವಕಾಶ ನೀಡುತ್ತಿಲ್ಲ.

ಹಾಗಾಗಿ, ಪಂಜಾಬ್ ಮತ್ತು ಹರಿಯಾಣದ ರೈತರು ಶಂಭು, ಖನೌರಿ ಗಡಿಗಳಲ್ಲಿ ಪ್ರತಿಭಟನೆ ಮುಂದುವರೆಸಿದರೆ, ಇತರ ರಾಜ್ಯಗಳ ರೈತರು ದೆಹಲಿ ತಲುಪುವಂತೆ ರೈತ ನಾಯಕರು ಕರೆ ನೀಡಿದ್ದಾರೆ.

ರೈತರಿಂದ ರೈಲು ತಡೆ :

ಹೋರಾಟ ತೀವ್ರಗೊಳಿಸಲು ಮುಂದಾಗಿರುವ ರೈತ ಮುಖಂಡರು, ಮಾರ್ಚ್‌ 1ರಂದು ಮಧ್ಯಾಹ್ನ 12 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ದೇಶದಾದ್ಯಂತ ರೈಲು ತಡೆದು ಪ್ರತಿಭಟನೆ ನಡೆಸಲು ರೈತರು ಮತ್ತು ಕಾರ್ಮಿಕರಿಗೆ ಸೂಚಿಸಿದ್ದಾರೆ.

ಈ ನಡುವೆ 2020-21ರ ರೈತರ ಆಂದೋಲನದ ನೇತೃತ್ವ ವಹಿಸಿದ್ದ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಮಾರ್ಚ್ 14 ರಂದು ದೆಹಲಿಯಲ್ಲಿ ‘ರೈತ ಮಹಾ ಪಂಚಾಯತ್’ ಘೋಷಿಸಿದೆ. ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಕೇಂದ್ರದ ಮೇಲೆ ಒತ್ತಡ ಹೇರಲು 400ಕ್ಕೂ ಹೆಚ್ಚು ರೈತರ ಸಂಘಟನೆಗಳು ‘ರೈತ ಮಹಾ ಪಂಚಾಯತ್‌’ನಲ್ಲಿ ಭಾಗವಹಿಸಲಿವೆ ಎಂದು ಎಸ್‌ಕೆಎಂ ತಿಳಿಸಿದೆ.

ಅಲರ್ಟ್‌ ಆದ ದೆಹಲಿ ಪೊಲೀಸರು :

ರೈತರ ಪ್ರತಿಭಟನೆಯನ್ನು ಗಮನದಲ್ಲಿಟ್ಟುಕೊಂಡು ಟಿಕ್ರಿ, ಸಿಂಘು ಮತ್ತು ಘಾಜಿಪುರ ಗಡಿಗಳಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸುವಂತೆ ದೆಹಲಿ ಪೊಲೀಸ್‌ ಮುಖ್ಯಸ್ಥರು ತಮ್ಮ ಸಿಬ್ಬಂದಿಗೆ ಸೂಚಿಸಿದ್ದಾರೆ. ರೈಲ್ವೆ ಮತ್ತು ಬಸ್‌ ನಿಲ್ದಾಣಗಳಲ್ಲಿ ಹೆಚ್ಚುವರಿ ಪೊಲೀಸ್ ಮತ್ತು ಅರೆಸೇನಾ ಪಡೆಗಳನ್ನು ಸಹ ನಿಯೋಜಿಸಲಾಗಿದೆ. ವಿವಿಧೆಡೆ ತಪಾಸಣೆ ತೀವ್ರಗೊಳಿಸಲಾಗಿದ್ದು, ರಾಜಧಾನಿಯಲ್ಲಿ ಸಂಚಾರ ದಟ್ಟಣೆ ಉಂಟಾಗಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ : ಬಾಲಕಿಯ ಅತ್ಯಾಚಾರ ಯತ್ನ, ತಾಯಿ ಮೇಲೆ ಹಲ್ಲೆ: ಪೊಲೀಸರ ವಿರುದ್ಧ ಪ್ರಕರಣ ದಾಖಲು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...