Homeಚಳವಳಿಸಚಿವನ ಪುತ್ರ ಹಾಗೂ ಆತನ ಗೂಂಡಾಗಳಿಂದ ರೈತರ ಹತ್ಯೆ: ಸಂಯುಕ್ತ ಕಿಸಾನ್‌ ಮೋರ್ಚಾ

ಸಚಿವನ ಪುತ್ರ ಹಾಗೂ ಆತನ ಗೂಂಡಾಗಳಿಂದ ರೈತರ ಹತ್ಯೆ: ಸಂಯುಕ್ತ ಕಿಸಾನ್‌ ಮೋರ್ಚಾ

ನಾಲ್ವರು ರೈತರ ಹತ್ಯೆಗೆ ಸಂಬಂಧಿಸಿದಂತೆ ಮೂರು ಪ್ರಮುಖ ಬೇಡಿಕೆಗಳನ್ನು ರೈತ ಸಮುದಾಯ ಸರ್ಕಾರದ ಮುಂದಿಟ್ಟಿದೆ.

- Advertisement -
- Advertisement -

“ಕೇಂದ್ರ ಸಚಿವ ಅಜಯ್‌ ಮಿಶ್ರಾ ಭೇಟಿಯನ್ನು ವಿರೋಧಿಸಿ ಉತ್ತರ ಪ್ರದೇಶದ ಲಿಖಿಮ್‌ಪುರ ಖೇರಿ ಜಿಲ್ಲೆಯಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ವಾಹನ ಹತ್ತಿಸಿ ನಾಲ್ವರು ರೈತರನ್ನು ಹತ್ಯೆ ಮಾಡಲಾಗಿದೆ. ಮಿಶ್ರಾ ಅವರ ಪುತ್ರ ಹಾಗೂ ಆತನ ಗೂಂಡಾಗಳು ಮೂವರು ರೈತರ ಮೇಲೆ ವಾಹನ ಹತ್ತಿಸಿದ್ದಾರೆ. ಒಬ್ಬರನ್ನು ಗುಂಡಿಕ್ಕಿ ಕೊಲ್ಲಲಾಗಿದೆ” ಎಂದು ಸಂಯುಕ್ತ ಕಿಸಾನ್‌ ಮೋರ್ಚಾ ಹೇಳಿದೆ.

ಭಾನುವಾರ ನಡೆದ ಘಟನೆಗೆ ಸಂಬಂಧಿಸಿದಂತೆ ವರ್ಚ್ಯೂವಲ್‌‌ ವೇದಿಕೆ ಮೂಲಕ ಪತ್ರಿಕಾಗೋಷ್ಠಿ ನಡೆಸಿರುವ ಸಂಯುಕ್ತ ಕಿಸಾನ್‌ ಮೋರ್ಚಾ, ಘಟನೆಗೆ ಸಂಬಂಧಿಸಿದಂತೆ ಪ್ರತ್ಯಕ್ಷದರ್ಶಿಗಳ ಹೇಳಿಕೆಗಳನ್ನು ಬಿಡುಗಡೆ ಮಾಡಿದೆ.

ಘಟನಾ ಸ್ಥಳದಲ್ಲಿದ್ದ ಸೀತಾಪುರದ ರಿಚಾ ಸಿಂಗ್‌‌ ಹೇಳಿಕೆ ನೀಡಿದ್ದು, “ಮಿಶ್ರಾ ಇಳಿಯಲಿರುವ ಹೆಲಿಪ್ಯಾಡ್‌ ಬಳಿ ರೈತರು ಸೇರಿದ್ದರು ಮತ್ತು ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದರು. ಸಚಿವರಿಗೆ ಕಪ್ಪು ಬಾವುಟಗಳನ್ನು ಪ್ರದರ್ಶಿಸಿದ್ದರು. ಮಿಶ್ರಾ ಬಂದಿಳಿದು ಕಾರ್ಯಕ್ರಮಕ್ಕೆ ತೆರಳಿದರು. ನಾವು ಅವರನ್ನು ಹಿಂಬಾಲಿಸಲಿಲ್ಲ. ನಮ್ಮ ಪ್ರತಿಭಟನೆಯನ್ನು ಹೆಲಿಪ್ಯಾಡ್‌ನಲ್ಲೇ ಮುಂದುವರಿಸಿದೆವು. ಕೆಲವರು ರೈತರ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಸಚಿವರು ಹೋದ ಬಳಿಕವೂ ನಮ್ಮ ಘೋಷಣೆಗಳನ್ನು ಕೂಗಿದೆವು. ನಂತರ ನಮ್ಮ ದಾರಿಯಲ್ಲಿ ನಾವು ನಡೆದೆವು” ಎಂದಿದ್ದಾರೆ.

ಇದನ್ನೂ ಓದಿರಿ: ಸಚಿವರ ಬೆಂಗಾವಲು ವಾಹನ ಹತ್ತಿಸಿ ನಾಲ್ವರು ರೈತರ ಹತ್ಯೆ; ನಂತರದ ಪ್ರತಿರೋಧದಲ್ಲಿ ನಾಲ್ವರ ಸಾವು

ಗುಂಡಿನ ದಾಳಿ ಹಾಗೂ ಹತ್ಯೆ ನಡೆದಾಗ ಸ್ಥಳದಲ್ಲಿದ್ದ ರಿಚಾ ಸಿಂಗ್ ಜೊತೆ ಇದ್ದ ಗುರುಮ್ನೀತ್‌‌ ಮಂಗತ್‌ ಅವರೂ ಹೇಳಿಕೆ ನೀಡಿದ್ದು, “ಸಚಿವರು ಹೋದ ಬಳಿಕ ರೈತರು ಚದುರಿದರು. ಆ ವೇಳೆಗೆ ಸಚಿವರ ಮಗ ಆಶೀಶ್‌ ಮಿಶ್ರಾ, ಆತನ ಸಹೋದರ ಹಾಗೂ ಕೆಲವು ಗೂಂಡಾಗಳು ಮೂರು ಕಾರುಗಳಲ್ಲಿ ಸುಮಾರು 3.15ರ ವೇಳೆಗೆ ಬಂದರು. ಅಡ್ಡಾದಿಡ್ಡಿಯಾಗಿ ವಾಹನ ಚಲಾಯಿಸಿದರು. ರೈತರ ಮೇಲೆ ನುಗ್ಗಿಸಿದರು. ಜೊತೆಗೆ ರೈತರ ಮೇಲೆ ಬಂದೂಕಿನ ಮಳೆಗರೆದರು. ಹತ್ತಿರದಲ್ಲಿದ್ದ ರೈತನಿಗೆ ಗುಂಡು ತಾಕಿ, ಆತ ಮೃತಪಟ್ಟ” ಎಂದು ಹೇಳಿದ್ದಾರೆ.

ಆಕ್ಟೋಬರ್‌ 4ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1 ಗಂಟೆಯವರೆಗೆ ರಾಷ್ಟ್ರದ್ಯಾಂತ ರೈತರು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸುವಂತೆ ಸಂಯುಕ್ತ ಕಿಸಾನ್‌ ಮೋರ್ಚಾ ಮನವಿ ಮಾಡಿದೆ. ರೈತರು ಮೂರು ಬೇಡಿಕೆಗಳನ್ನು ಮುಂದಿಡಲು ಕೋರಿದೆ.

ಅಜಯ್‌ ಮಿಶ್ರಾ ಅವರನ್ನು ಸಚಿವ ಸ್ಥಾನದಿಂದ ಕೆಳಗಿಳಿಸಬೇಕು, ಕೊಲೆ ಮಾಡಿದ ಕಾರಣ ಆಶೀಶ್‌ ಮಿಶ್ರಾ ಹಾಗೂ ಇತರರ ಮೇಲೆ ಐಪಿಸಿ ಸೆಕ್ಷನ್‌ 302 ಪ್ರಕರಣ ದಾಖಲಿಸಬೇಕು, ಸುಪ್ರೀಂಕೋರ್ಟ್‌ ನ್ಯಾಯಾಧೀಶರ ನೇತೃತ್ವದಲ್ಲಿ ಪ್ರಕರಣ ತನಿಖೆಯಾಗಬೇಕೇ ಹೊರತು, ಉತ್ತರ ಪ್ರದೇಶದ ಪೊಲೀಸರಿಗೆ ವಹಿಸಬಾರದು ಎಂದು ಕಿಸಾನ್‌ ಮೋರ್ಚಾ ಮೂರುಪ್ರಮುಖ ಬೇಡಿಕೆಗಳನ್ನು ಇಟ್ಟಿದೆ.

“ಅಜಯ್‌ ಮಿಶ್ರಾ ಹಾಗೂ ಹರಿಯಾಣ ಮುಖ್ಯಮಂತ್ರಿ ಮನೋಹರ ಲಾಲ್ ಖಟ್ಟರ್‌ ಥರದವರು ಪ್ರತಿಭಟನಾನಿರತ ರೈತರನ್ನು ಪ್ರಚೋದಿಸಲು ಯತ್ನಿಸುತ್ತಿದ್ದಾರೆ.  ಆದರೆ ನಾವು ಶಾಂತಿಯುತ ಹೋರಾಟ ಮುಂದುವರಿಸುತ್ತೇವೆ” ಎಂದು ರೈತ ನಾಯಕ ಡಾ.ದರ್ಶನ್‌ ಪಾಲ್‌ ಹೇಳಿದ್ದಾರೆ.

ಇದನ್ನೂ ಓದಿರಿ: ನಾಲ್ವರು ರೈತರ ಹತ್ಯೆ: ಕೇಂದ್ರ ಸಚಿವ ಮತ್ತು ಮಗನ ಮೇಲೆ ಕೊಲೆ ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...

ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ : 8 ಮಹಿಳಾ ಕಾರ್ಮಿಕರು ಸಾವು

ವೇಗವಾಗಿ ಬಂದ ಟ್ರಕ್ ಟೆಂಪೋಗೆ ಡಿಕ್ಕಿ ಹೊಡೆದ ಪರಿಣಾಮ ಎಂಟು ಮಹಿಳಾ ಕಾರ್ಮಿಕರು ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ಮಹಾರಾಷ್ಟ್ರದ ಜಲ್ನಾ ಜಿಲ್ಲೆಯ ನಾಗ್ಪುರ-ಮುಂಬೈ ಎಕ್ಸ್‌ಪ್ರೆಸ್‌ವೇಯಲ್ಲಿ ಬುಧವಾರ (ಏ.1) ಸಂಜೆ ನಡೆದಿದೆ. ಎಕ್ಸ್‌ಪ್ರೆಸ್‌ವೇಯ...

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...