Homeಚಳವಳಿರೈತರು ಮೋದಿ ಸರ್ಕಾರದ ಅಹಂಕಾರವನ್ನು ಮಟ್ಟಹಾಕುತ್ತಾರೆ: ಪ್ರತಿಭಟನಾ ನಿರತ ರೈತರು

ರೈತರು ಮೋದಿ ಸರ್ಕಾರದ ಅಹಂಕಾರವನ್ನು ಮಟ್ಟಹಾಕುತ್ತಾರೆ: ಪ್ರತಿಭಟನಾ ನಿರತ ರೈತರು

ರಾಮನ ಕಾಲದಲ್ಲಿ ರಾವಣನ ಅಹಂಕಾರವನ್ನು ಮಟ್ಟಹಾಕಲಾಯಿತು. 100 ಸಹೋದರರನ್ನು ಹೊಂದಿದ್ದ ದುರ್ಯೋಧನನ ಅಹಂಕಾರವನ್ನು ಪಾಂಡವರು ಮಟ್ಟಹಾಕಿದರು. ಅದೇ ರೀತಿ ಮೋದಿ ಸರ್ಕಾರದ ಅಹಂಕಾರವನ್ನು ರೈತರು ಮಟ್ಟಹಾಕುತ್ತಾರೆ

- Advertisement -
- Advertisement -

ಕೇಂದ್ರ ಸರ್ಕಾರದ ರೈತವಿರೋಧಿ ಮಸೂದೆಗಳನ್ನು ವಿರೋಧಿಸಿ ದೇಶದಾದ್ಯಂತ ರೈತರು ಪ್ರತಿಭಟನೆ ನಡೆಸುತ್ತಿದ್ದು, “ರಾಮ, ರಾವಣನ ಅಹಂಕಾರವನ್ನು ಮಟ್ಟಹಾಕಿದಂತೆ, ಮೋದಿ ಸರ್ಕಾರದ ಅಹಂಕಾರವನ್ನು ರೈತರು ಮಟ್ಟಹಾಕುತ್ತಾರೆ” ಎಂದು ರೈತರು ಸರ್ಕಾರದ ವಿರುದ್ಧ ತಮ್ಮ ಆಕ್ರೋಶವನ್ನು ಹೊರಹಾಕಿದರು.  ಹರಿಯಾಣದ ಅಂಬಲಾ ಬಳಿ ರೈಲ್ವೇ ಹಳಿ ಮತ್ತು ರಸ್ತೆಗೆ ಮುತ್ತಿಗೆ ಹಾಕಿರುವ ರೈತರು, ರಾಷ್ಟ್ರ ರಾಜಧಾನಿಯ ಗಡಿಯಲ್ಲಿ ಜಮಾಯಿಸಿ ಶುಕ್ರವಾರ ಪ್ರತಿಭಟಿಸಿದರು.

ಸದನಗಳಲ್ಲಿ ಅಂಗೀಕೃತವಾಗಿ ಈಗ ರಾಷ್ಟ್ರಪತಿಗಳ ಒಪ್ಪಿಗೆಗಾಗಿ ಕಾಯುತ್ತಿರುವ ವಿವಾದಾತ್ಮಕ ಕೃಷಿ ಮಸೂದೆಗಳನ್ನು ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸಿ, ಭಾರತದ ಕಿಸಾನ್ ಯೂನಿಯನ್ (ಬಿಕೆಯು)ನ ನೂರಾರು ರೈತರು ಆರ್ದ್ರತೆಯ ಉಷ್ಣಾಂಶವನ್ನೂ ಲೆಕ್ಕಿಸದೇ ದೆಹಲಿಯತ್ತ ಮೆರವಣಿಗೆ ನಡೆದರು.

ಇದನ್ನೂ ಓದಿ: ಸೆ.27 ರಂದು ಉಡುಪಿಯಲ್ಲಿ ‘ಪೂನಾ ಒಪ್ಪಂದ ದಿನ’ದ ನೆನಪಿನ ಕಾರ್ಯಕ್ರಮ

ವಿರೋಧ ಪಕ್ಷಗಳೂ ಸೇರಿದಂತೆ ಸುಮಾರು 30 ಕ್ಕೂ ಹೆಚ್ಚು ರೈತ ಸಂಘಟನೆಗಳ ಪ್ರತಿಭಟನಾಕಾರರನ್ನು ಪೊಲೀಸರು ನೋಯ್ಡಾ-ಮಯೂರ್ ವಿಹಾರ್ ಗಡಿಯಲ್ಲಿ ತಡೆದು ನಿಲ್ಲಿಸಿದರು.

ಸರ್ಕಾರಕ್ಕೆ ಆಗಬಹುದಾದ ತೊಂದರೆಯನ್ನು ಮನಗಂಡ ದೆಹಲಿ ಪೊಲೀಸರು, ರಾಜಧಾನಿಗೆ ಸಂಪರ್ಕಿಸುವ ರಸ್ತೆಯನ್ನು ಸೀಲ್ ಮಾಡಿದರು. ಹಾಗಾಗಿ ಪ್ರತಿಭಟನಾಕಾರರಿಗೆ ಪ್ರವೇಶ ಅಸಾಧ್ಯವಾಯಿತು. ಆದರೆ ರೈತರು ಮಾಧ್ಯಮಗಳ ಗಮನ ಸೆಳೆದು ತಮ್ಮ ಪ್ರತಿಭಟನೆಯನ್ನು ದಾಖಲಿಸಿದರು.

ಮಸೂದೆಗಳನ್ನು ಹಿಂತೆಗೆದುಕೊಳ್ಳುವುದರ ಜೊತೆಗೆ ಬೆಂಬಲ ಬೆಲೆಯನ್ನು ಕಾನೂನಿನಡಿಯಲ್ಲಿ ತರಬೇಕು ಎಂದು ಪ್ರತಿಭಟನಾ ನಿರತ ರೈತರು ಒತ್ತಾಯಿಸಿದರು. “ವಿರೋಧ ಪಕ್ಷಗಳು ರೈತರನ್ನು ದಾರಿ ತಪ್ಪಿಸಿವೆ” ಎಂಬ ಪ್ರಧಾನಿಯವರ ಹೇಳಿಕೆಯ ಬಗ್ಗೆ ಕೇಳಿದಾಗ ರೈತರ ಆಕ್ರೋಶ ಮತ್ತಷ್ಟು ಹೆಚ್ಚಾಯಿತು ಎಂದು ನ್ಯಾಷನಲ್ ಹೆರಾಲ್ಡ್ ವರದಿ ಮಾಡಿದೆ.

ಇದನ್ನೂ ಓದಿ: ಕೃಷಿ ಮಸೂದೆಗಳ ವಿರುದ್ಧ ದೇಶಾದ್ಯಂತ ”ಅನ್ನದಾತ’ರ ಪ್ರತಿಭಟನೆ

2014 ರಲ್ಲಿ ಮತ್ತು 2019 ರಲ್ಲಿ ಬಿಜೆಪಿಗೆ ಮತ ಹಾಕಿದ ಕೆಲವು ರೈತರು, ಮೋದಿ ಸರ್ಕಾರ ತಮಗೆ ಮೋಸ ಮಾಡಿದೆ ಎಂದು ದೂರಿದರು. “ಬಿಜೆಪಿ ಆಯ್ಕೆಯಾಗುವವರೆಗೂ ರೈತರ ಬಗ್ಗೆ ಮಾತನಾಡುತ್ತಿತ್ತು. ಆದರೆ ಈಗ ಅಧಿಕಾರಕ್ಕೆ ಬಂದ ನಂತರ ನಮ್ಮನ್ನು ಮರೆತಿದ್ದಾರೆ. ರೈತರು ಮತ ಚಲಾಯಿಸಿದ ಅದೇ ಮೋದಿ ನಮ್ಮ ವಿರುದ್ಧ ನಿಂತಿದ್ದಾರೆ” ಪ್ರತಿಭಟನಾಕಾರರನ್ನುದ್ದೇಶಿಸಿ ಸಹ ಪ್ರತಿಭಟನಾಕಾರರು ಭಾಷಣ ಮಾಡಿದರು.

“ಕೊರೊನಾ ಸಾಂಕ್ರಾಮಿಕ ಕಾಲದಲ್ಲೂ, ರೈತರು ಎಲ್ಲರಿಗೂ ಆಹಾರವನ್ನು ಒದಗಿಸಿದರು. ವಲಸೆ ಕಾರ್ಮಿಕರು ನಗರದಿಂದ ಪಲಾಯನ ಮಾಡುತ್ತಿರುವಾಗ, ರೈತರು ಅವರಿಗೆ ಆಹಾರವನ್ನು ಒದಗಿಸಿದರು. ಇಂದು ಮೋದಿ ಸರ್ಕಾರ ನಮ್ಮದೇ ಆಹಾರವನ್ನು ಕಸಿದುಕೊಳ್ಳಲು ಪ್ರಯತ್ನಿಸುತ್ತಿದೆ” ಎಂದು ಬಿಕೆಯು ಕಾರ್ಯಕರ್ತರೊಬ್ಬರು ಹೇಳಿದರು.

ಇದನ್ನೂ ಓದಿ: ಕೃಷಿ ಮಸೂದೆಗಳ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ: ರಾಜ್ಯಾದ್ಯಂತ ರಸ್ತೆ ತಡೆ ಪ್ರತಿಭಟನೆ

ಮತ್ತೊಬ್ಬ ರೈತ ಕಾರ್ಯಕರ್ತ ಮತ್ತು ಬಿಕೆಯು ಸದಸ್ಯರೊಬ್ಬರು, “ರಾಮನ ಕಾಲದಲ್ಲಿ ಭೂಮಿಯ ಮತ್ತು ಸ್ವರ್ಗದ ಮೇಲೆ ಅತ್ಯಂತ ಶಕ್ತಿಶಾಲಿ ರಾಜನಾಗಿದ್ದ ರಾವಣನ ಅಹಂಕಾರವನ್ನು ಮಟ್ಟಹಾಕಲಾಯಿತು. 100 ಸಹೋದರರನ್ನು ಹೊಂದಿದ್ದ ದುರ್ಯೋಧನನ ಅಹಂಕಾರವನ್ನು ಪಾಂಡವರು ಮಟ್ಟಹಾಕಿದರು. ಅದೇ ರೀತಿ ಮೋದಿ ಸರ್ಕಾರದ ಅಹಂಕಾರವನ್ನು ರೈತರು ಮಟ್ಟಹಾಕುತ್ತಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಸರ್ಕಾರವು ಮಸೂದೆಗಳನ್ನು ಹಿಂತೆಗೆದುಕೊಂಡರೆ, ನಾವು ನಮ್ಮ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳುತ್ತೇವೆ” ಎಂದು ಮತ್ತೊಬ್ಬ ಪ್ರತಿಭಟನಾಕಾರರು ಹೇಳಿದರು.

ಮಸೂದೆಗಳಿಗೆ ತೀವ್ರ ವಿರೋಧ ಮತ್ತು ತೀವ್ರ ಸ್ವರೂಪದ ಪ್ರತಿಭಟನೆಗಳು ನಡೆಸುತ್ತಿರುವ ಪಂಜಾಬ್‌ನಲ್ಲಿ ರೈಲು ಹಳಿಗಳ ಮೇಲೆ ಕುಳಿತು ರೈಲ್​ ರೋಕೋ ಚಳವಳಿ ನಡೆಸುತ್ತಿದ್ದಾರೆ. ಈ ಚಳುವಳಿಯನ್ನು ಸೆ.29ರವರೆಗೂ ಮುಂದುವರೆಸುತ್ತೇವೆ ಎಂದು ರೈತ ಸಂಘದ ಮುಖಂಡರು ತಿಳಿಸಿದ್ದಾರೆ. ಈಗಾಗಲೇ ಉತ್ತರ ರೈಲ್ವೇ ವಿಭಾಗ ಈ ಭಾಗದಲ್ಲಿ ಸಂಚರಿಸುವ ಕೆಲವು ರೈಲುಗಳನ್ನ ರದ್ದುಗೊಳಿಸಿದೆ. ಪಂಜಾಂಬ್​ ಸಿಎಂ ಅಮರೀಂದರ್​ ಸಿಂಗ್​ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಪ್ರತಿಭಟನಾಕಾರಲ್ಲಿ ಮನವಿ ಮಾಡಿದ್ದಾರೆ.


ಇದನ್ನೂ ಓದಿ: ಬೆಂಬಲ ಬೆಲೆ ಹಿಂದೆಯೂ ಇರಲಿಲ್ಲ, ಈಗಲೂ ಕೊಡಲು ಸಾಧ್ಯವಿಲ್ಲ: ಕೇಂದ್ರ ಕೃಷಿ ಸಚಿವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...