Homeಮುಖಪುಟರೈತಹೋರಾಟದ ಮೈಲಿಗಲ್ಲುಗಳು ಈ ಪಿಲ್ಲರ್‌ ನಂಬರ್‌ಗಳು: ರೈತರ ಹೊಸ ಪಿಲ್ಲರ್‌ ವಿಳಾಸಗಳ ಬಗ್ಗೆ ನಿಮಗೆ ಗೊತ್ತೆ?

ರೈತಹೋರಾಟದ ಮೈಲಿಗಲ್ಲುಗಳು ಈ ಪಿಲ್ಲರ್‌ ನಂಬರ್‌ಗಳು: ರೈತರ ಹೊಸ ಪಿಲ್ಲರ್‌ ವಿಳಾಸಗಳ ಬಗ್ಗೆ ನಿಮಗೆ ಗೊತ್ತೆ?

ರೈತ ಹೋರಾಟದ ಸುದ್ದಿ ಪತ್ರಿಕೆ ಟ್ರ್ಯಾಲಿ ಟೈಮ್ಸ್‌ ಇರುವುದು ಪಿಲ್ಲರ್‌ ನಂಬರ್‌ 783 ರಲ್ಲೆ...

- Advertisement -
- Advertisement -

1. ಪಿಲ್ಲರ್ ನಂ‌, 803, ದಿಲ್ಜಿತ್‌ ಸರ್‌ಪಂಚ್‌ ಸಿಂಗ್, ಟಿಕ್ರಿ ಬಾರ್ಡರ್‌, ದೆಹಲಿ

2. ಪಿಲ್ಲರ್‌ ನಂ. 780, ವಿರೇಂದರ್‌ ಸಿಂಗ್, ಟಿಕ್ರಿ ಬಾರ್ಡರ್‌, ದೆಹಲಿ.

ಈ ವಿಳಾಸಗಳು ದೆಹಲಿಯಲ್ಲಿ ಹಲವಾರು ವರ್ಷಗಳಿಂದ ವಾಸ ಮಾಡುತ್ತಿರುವ ಯಾರದ್ದೋ ಶಾಶ್ವತ ವಿಳಾಸಗಳಲ್ಲ. ಕೇಂದ್ರ ಸರ್ಕಾರ ನಮ್ಮ ಹೋರಾಟಕ್ಕೆ ಜಗ್ಗದೆ ಇದ್ದರೇ ಶಾಶ್ವತ ವಿಳಾಸಗಳಾಗಿ ಮಾರ್ಪಡುವ ಜಾಗಗಳಿವು ಎನ್ನುವ ದಿಟ್ಟ ಎಚ್ಚರಿಕೆ ನೀಡಿರುವ ರೈತ ಹೋರಾಟಗಾರರದ್ದು.

ಹೌದು, ಈಗಾಗಲೇ ರೈತ ಹೋರಾಟ ಶುರಾವಾಗಿ 45ನೇ ದಿನಕ್ಕೆ ಕಾಲಿಟ್ಟಿದೆ. ತಮ್ಮ ಮನೆ, ಊರು, ಜಿಲ್ಲೆಗಳನ್ನು ತೊರೆದು ಇಲ್ಲಿ ನೆಲೆಸಿರುವ ರೈತರು ಇಲ್ಲಿಯೇ ಹೊಸ ವಿಳಾಸಗಳನ್ನು ನೀಡುವುದನ್ನು ಆರಂಭಿಸಿದ್ದಾರೆ. ತಮ್ಮ ಹಳ್ಳಿಗಳಿಂದ ಪ್ರತಿಭಟನಾ ಸ್ಥಳಕ್ಕೆ ಬರುವ ಗ್ರಾಮದ ಜನರಿಗೆ, ಪ್ರತಿಭಟನೆ ಬೆಂಬಲಿಸಲು ಬರುವ ಜನರಿಗೆ ತಮ್ಮ ಇರುವಿಕೆಯನ್ನು ತಿಳಿಸಲು ಈ ಪಿಲ್ಲರ್‌ಗಳನ್ನು ವಿಳಾಸವಾಗಿ ನೀಡುತ್ತಾರೆ.

ಈ ಪಿಲ್ಲರ್‌ ನಂಬರ್‌ಗಳು ಯಾವುವು ಎಂದು ಅನುಮಾನ ಮೂಡುತ್ತಿದ್ದರೇ, ಇವು ದೆಹಲಿಯ ಟಿಕ್ರಿ ಬಾರ್ಡರ್‌ನಲ್ಲಿರುವ ಮೆಟ್ರೊ ಪಿಲ್ಲರ್‌ಗಳು. ಟಿಕ್ರಿ ಬಾರ್ಡರ್ ಮೆಟ್ರೋ ನಿಲ್ದಾಣದ 750ನೇ ಮೆಟ್ರೋ ಪಿಲ್ಲರ್‌ನಿಂದ ಶುರುವಾಗುವ ಪಿಲ್ಲರ್‌ ವಿಳಾಸಗಳು, ಮೂರು ಮೆಟ್ರೋ ಸ್ಟೇಷನ್‌ಗಳನ್ನು ಸೇರಿಸುವ 820ನೇ ಪಿಲ್ಲರ್‌ವರೆಗೂ ಮುಂದುವರೆಯುತ್ತದೆ.

ಪಿಲ್ಲರ್‌ಗಳ ಕೆಳಗೆ ಟ್ರ್ಯಾಲಿಯಲ್ಲಿ ಜೀವನ ನಡೆಸುತ್ತಿರುವವರು,‌ ಊಟ, ಚಹಾದ ಲಂಗರ್‌ಗಳನ್ನು ಹಾಕಿಕೊಂಡಿರುವವರು, ಮೆಡಿಕಲ್‌ ಕ್ಯಾಂಪ್‌ಗಳ ವಿಳಾಸ ದೊರೆಯುವುದು ಇದೇ ರೀತಿಯಲ್ಲಿ. ಇದಲ್ಲದೇ ರೈತ ಹೋರಾಟದ ಸುದ್ದಿ ಪತ್ರಿಕೆ ಟ್ರ್ಯಾಲಿ ಟೈಮ್ಸ್‌ ಇರುವುದು ಪಿಲ್ಲರ್‌ ನಂಬರ್‌ 783 ರಲ್ಲೆ. ಅವರು ನಮಗೆ ಬರ ಹೇಳಿದ್ದು ಪಿಲ್ಲರ್‌ ವಿಳಾಸ ನೀಡಿಯೇ.

ಇದು ಮೇಟ್ರೋ ಕೆಳಗಿನ ಪಿಲ್ಲರ್‌ಗಳ ಟ್ರ್ಯಾಲಿ ವಿಳಾಸಗಳ ಕಥೆಯಾದರೇ,  ಇನ್ನು ಬಹುದುರ್‌ಪುರ್ ಹೈವ್‌ ಕಡೆಯಲ್ಲಿ ಸುಮಾರು 10 ಕಿ.ಮೀ ಉದ್ದ ಟ್ರ್ಯಾಲಿಗಳನ್ನು ನಿಲ್ಲಿಸಿಕೊಂಡಿರುವ ರೈತ ಹೋರಾಟಗಾರರು ವಿಳಾಸ ನೀಡಲು ತಾವು ಕಂಡುಕೊಂಡಿರುವ ಮಾರ್ಗ ಮತ್ತಷ್ಟು ಕುತೂಹಲ ಹುಟ್ಟಿಸುತ್ತವೆ. ರೈತ ಹೋರಾಟಗಾರರು ಪಂಜಾಬ್‌ನಿಂದ ಬಂದಿದ್ದರೇ ಅವರಿಗೆ, ಅವರ ಜಿಲ್ಲೆ, ಗ್ರಾಮದ ಹೆಸರುಗಳಲ್ಲಿ ಬೋರ್ಡ್‌ಗಳನ್ನು ನೀಡಲಾಗಿದೆ. ತಾವು ತಂಗಿರುವ ಟ್ರ್ಯಾಲಿ ಪಕ್ಕದ ರಸ್ತೆಯ ಬದಿಯಲ್ಲಿ ಇದನ್ನು ನೆಡಲಾಗಿದೆ. ತಾವು ಯಾವ ಜಿಲ್ಲೆಯ, ಎಷ್ಟು ದೂರದ ಗ್ರಾಮದಿಂದ ಬಂದಿದ್ದೇವೆ ಎಂಬುದನ್ನು ನಾಮ ಫಲಕದಲ್ಲಿ ಬರೆದಿರುತ್ತಾರೆ. ಇದನ್ನೂ ಕೂಡ ವಿಳಾಸ ರೀತಿ ಬಳಸಲಾಗುತ್ತಿದೆ.

ಒಂದೊಂದು ಟ್ರ್ಯಾಲಿಗೂ ಟ್ರ್ಯಾಲಿ ಸಂಖ್ಯೆ ನೀಡಲಾಗಿದೆ. ಇದನ್ನೂ ಜಿಲ್ಲೆಗಳ ಆಧಾರದಲ್ಲಿ ನೀಡಲಾಗಿದ್ದು, ಅದರಲ್ಲಿಯೂ ಹಲವು ವಿಭಾಗಗಳನ್ನು ಮಾಡಿಕೊಳ್ಳಲಾಗಿದೆ. ಉದಾಹರಣೆಗೆ ಪ್ಲಾಟ್‌ ನಂಬರ್‌ 201 ಎಂದಿದ್ದರೇ, ಮತ್ತೊಂದು ಟ್ರ್ಯಾಲಿಗೆ 201ಎ ಎಂದು ನೀಡಲಾಗಿದೆ.

ರೈತ ಹೋರಾಟಕ್ಕೆ ಪಾಳಿಗಳ ರೀತಿಯಲ್ಲಿ ಪ್ರತಿಭಟನಾಕಾರರು ತಮ್ಮ ತಮ್ಮ ಗ್ರಾಮಗಳಿಂದ ಬರುತ್ತಿರುವುದರಿಂದ ಅವರಿಗೆ ತಾವಿರುವ ಸ್ಥಳ ಹೇಗೆ ಸುಲಭವಾಗಿ ದೊರೆಯಬಹುದು ಎಂಬುದನ್ನು ಗಮನದಲ್ಲಿ ಇರಿಸಿಕೊಂಡು ಇಂತಹ ವ್ಯವಸ್ಥೆ ಮಾಡಲಾಗಿದೆ.

ನಮ್ಮ ತಂಡ ಕೂಡ ಟಿಕ್ರಿ ಬಾರ್ಡರ್‌ನಲ್ಲಿ ಇಳಿದು ರೈತ ಹೋರಾಟಗಾರರ ಸಭೆಗೆ ಹೋಗಲು ಕರೆ ಮಾಡಿದಾಗ ಅವರಿಂದ ನಮಗೆ ಸಿಕ್ಕ ವಿಳಾಸವು ಇದೆ ರೀತಿಯದ್ದು. ಪಿಲ್ಲರ್‌ 805 ರ ಬಳಿ ಬನ್ನಿ ಅಲ್ಲಿ ನಾವು ನಿಮಗೆ ಸಿಗುತ್ತೇವೆ ಎಂದು ಭಾರತೀಯ ಕಿಸಾನ್‌ ಯೂನಿಯನ್‌ ಮುಖಂಡರಾದ ಸುರೀಂಧರ್‌ ಸಿಂಗ್‌ ಹೇಳಿದಾಗ ನಮಗೂ ಒಮ್ಮೆ ಅದ್ಯಾವ ಪಿಲ್ಲರ್‌ ಎಂಬ ಕುತೂಹಲ ಸಹಜವಾಗಿಯೇ ಮೂಡಿತ್ತು.

ಈಗಾಗಲೇ ರೈತ ಮುಖಂಡರು ಮತ್ತು ಕೇಂದ್ರ ಸರ್ಕಾರದ ನಡುವೆ ನಡೆದ 8ನೇ ಸುತ್ತಿನ ಮಾತುಕತೆ ಕೂಡ ಮುರಿದು ಬಿದ್ದಿದೆ. ಮುಂದಿನ ಮಾತುಕತೆಗಳನ್ನು ರೈತರು ಬಹಿಷ್ಕರಿಸುವ ಎಚ್ಚರಿಕೆಯನ್ನು ನೀಡುತ್ತಿದ್ದಾರೆ. ರೈತರ ದೃಢ ನಿರ್ಧಾರ ನೋಡಿದರೇ, ಈ ಪಿಲ್ಲರ್‌, ಬೋರ್ಡ್‌ ವಿಳಾಸಗಳು ಒಂದೆರಡು ವರ್ಷಗಳವರೆಗೆ ಶಾಶ್ವತ ವಿಳಾಸಗಳಾಗುವ ಮುನ್ಸುಚನೆಯೇ ಎಂಬ ಅನುಮಾನ ಕಾಡದೇ ಇರದು.

(ಈ ವರದಿ ‘ಮಾಸ್ ಮೀಡಿಯಾ ಫೌಂಡೇಷನ್’ ನಿಯೋಜಿಸಿರುವ ವಿಶೇಷ ದೆಹಲಿ ತಂಡದಿಂದ ಪಡೆದ ಮಾಹಿತಿ ಆಧರಿಸಿ, ಸಿದ್ಧಪಡಿಸಿದೆ)


ಇದನ್ನೂ ಓದಿ: ವಾಟ್ಸಾಪ್‌ಗೆ ಗುಡ್‌ಬೈ ಹೇಳಿ, ಸಿಗ್ನಲ್‌ಗೆ ಹೆಲೋ ಹೇಳಿ: ಏನಿದು ಸಿಗ್ನಲ್ ಆಪ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...