Homeಮುಖಪುಟರೈತರಿಂದ ಕ್ರಾಂತಿ ದಿವಸ್ ಆಚರಣೆ; ಕೃಷಿ ಕಾನೂನಿನ ಪ್ರತಿ ಸುಡುವ ಮೂಲಕ ದೇಶಾದ್ಯಂತ ಪ್ರತಿಭಟನೆ

ರೈತರಿಂದ ಕ್ರಾಂತಿ ದಿವಸ್ ಆಚರಣೆ; ಕೃಷಿ ಕಾನೂನಿನ ಪ್ರತಿ ಸುಡುವ ಮೂಲಕ ದೇಶಾದ್ಯಂತ ಪ್ರತಿಭಟನೆ

ಭಾರತೀಯ ಕಿಸಾನ್‌ ಯೂನಿಯನ್‌ (BKU) ನಿನ್ನೆ 49 ಸ್ಥಳಗಳಲ್ಲಿ ಪ್ರತಿಭಟನೆ ನಡೆಸಿದೆ.

- Advertisement -
- Advertisement -

ಪಂಜಾಬ್ ಹರಿಯಾಣ ಸೇರಿದಂತೆ ದೇಶದ 250 ಸ್ಥಳಗಳಲ್ಲಿ ರೈತರು ಶನಿವಾರ ಕ್ರಾಂತಿದಿನವನ್ನು ಆಚರಿಸಿದ್ದಾರೆ.  ಸಂಯುಕ್ತ ಕಿಸಾನ್‌ ಮೋರ್ಚಾ (SKM) ರೈತ ಸಂಘಟನೆಯ ಅಡಿಯಲ್ಲಿ ದೇಶದ ವಿವಿಧ ಸ್ಥಳಗಳಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಹರಿಯಾಣ ಉಪ ಮುಖ್ಯಮಂತ್ರಿ ದುಶ್ಯಂತ್‌ ಸಿಂಗ್‌ ಚೌಟಾಲ ಮತ್ತು ಇತರ ಬಿಜೆಪಿ ನಾಯಕರ ಮನೆ ಮುಂದೆ ಸರ್ಕಾರದ ರೈತ ವಿರೋಧಿ ಕಾನೂನಿನ ಪ್ರತಿಯನ್ನು ಸುಡುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ.

ಕೇಂದ್ರ ಸರ್ಕಾರ ವಿವಾದಾತ್ಮಕ  ಕೃಷಿ ಸುಗ್ರೀವಾಜ್ಞೆಗಳನ್ನು ಹೊರಡಿಸಿ  ಜೂನ್‌ 5 ಕ್ಕೆ ಒಂದು ವರ್ಷ ತುಂಬಿದೆ. ರೈತ ಹೋರಾಟ ಮತ್ತು ರೈತ ವಿರೋಧಿ ಕಾನೂನಿಗೆ ಒಂದು ವರ್ಷ ಕಳೆದ ಸಂದರ್ಭದಲ್ಲಿ ರೈತರು ತಮ್ಮ ಪ್ರತಿಭಟನೆಗಳನ್ನು ಇನ್ನಷ್ಟು ತೀವ್ರಗೊಳಿಸಲು ಮುಂದಾಗಿದ್ದಾರೆ. ಮುಖ್ಯವಾಗಿ ಪಂಜಾಬ್‌ ಮತ್ತು ಹರಿಯಾಣದಲ್ಲಿ ರೈತರ ಪ್ರತಿಭಟನೆಗಳು ಮತ್ತೆ ತೀವ್ರ ಗೊಳ್ಳುವ ಲಕ್ಷಣಗಳು ಕಾಣಿಸುತ್ತಿವೆ. ಕಳೆದ ವರ್ಷ ಅಂದರೆ 2020 ರ ಜೂನ್‌ 6 ರಂದು ರೈತರ ಮೊದಲ ಪ್ರತಿಭಟನೆ ನಡೆದಿತ್ತು.

2020 ರ ಅಕ್ಟೋಬರ್‌ 1 ರಿಂದ ಪಂಜಾಬ್‌ನಲ್ಲಿ ರೈತರು ಪ್ರತಿಭಟನೆಯನ್ನು ಆರಂಭಿಸಿದ್ದರು. ನಂತರ ನವೆಂಬರ್‌ 26 ರಿಂದ ದೆಹಲಿಯ ಗಡಿಭಾಗಗಳಲ್ಲಿ ರೈತರ ಪ್ರತಿಭಟನೆ ತೀವ್ರಗೊಂಡಿತ್ತು.

ಭಾರತೀಯ ಕಿಸಾನ್‌ ಯೂನಿಯನ್‌ (BKU) ನಿನ್ನೆ 49 ಸ್ಥಳಗಳಲ್ಲಿ ಪ್ರತಿಭಟನೆ ನಡೆಸಿದೆ.

ಕಳೆದ ವರ್ಷ ಜೂನ್‌ 14 ರಿಂದ ಜೂನ್‌ 30 ರ ವರೆಗೆ ನಮ್ಮ ಸಾವಿರಾರು ರೈತರು ತಮ್ಮ ಮನೆಯ ಮಹಡಿಯ ಮೇಲೆ ಭಿತ್ತಿ ಪತ್ರ ಹಿಡಿದು ನಿಂತು ಪ್ರತಿಭಟನೆ ನಡೆಸಿದ್ದರು. ಆಗ ರಾಜ್ಯದಲ್ಲಿ ಕರ್ಪ್ಯೂ ಜಾರಿ ಮಾಡಲಾಗಿತ್ತು. ನಮ್ಮ ಬಹಿರಂಗ ಪ್ರತಿಭಟನೆಗೆ ಸರ್ಕಾರ ಅವಕಾಶ ಮಾಡಿಕೊಡಲಿಲ್ಲ ಎಂದು ಬಿಕೆಯು ರಾಷ್ಟ್ರೀಯ ಕಾರ್ಯದರ್ಶಿ ಸುಖದೇವ್‌ ಸಿಂಗ್‌ ಕೋಕ್ರಿ ಹಿಂದಿನ ವರ್ಷದ ಘಟನೆಯನ್ನು ನೆನೆಸಿಕೊಂಡಿದ್ದಾರೆ.

ಕಳೆದ ವರ್ಷ ಜುಲೈನಲ್ಲಿ ನಾವು ನಿಧಾನಕ್ಕೆ ಹಳ್ಳಿಗಳಲ್ಲಿ ಪ್ರತಿಭಟನೆಯನ್ನು ನಡೆಸಲು ಆರಂಭಿಸಿದೆವು. ನಿಧಾನಕ್ಕೆ ಅದು ಟ್ರಾಕ್ಟರ್‌ ಪರೇಡ್‌, ಜೈಲ್ ಭರೋ ಆಂದೋಲನ, ರೈಲ್‌ ರೋಖೋ ಅಭಿಯಾನವಾಗಿ ಬೆಳೆಯಿತು ಎಂದು ಸುಖದೇವ್‌ ಸಿಂಗ್‌ ಕೋಕ್ರಿ ಕಳೆದ ವರ್ಷದ ಪ್ರತಿಭಟನೆ ಹೇಗೆ ಆರಂಭವಾಯಿತು ಎಂದು ತಿಳಿಸಿದ್ದಾರೆ.

ಜೂನ್‌ 5 ಶನಿವಾರ ರೈತರು ಅನೇಕ ಬಿಜೆಪಿ ಎಂಪಿ, ಎಮ್‌ಎಲ್‌ಎಗಳ ಮನೆ ಮುಂದೆ ರೈತ ವಿರೋಧಿ ಕಾನೂನುಗಳನ್ನು ಸುಡುವ ಮೂಲಕ ಪಂಜಾಬ್‌ ಹರಿಯಾಣ ಮೂಲದ ಬಿಜೆಪಿ ನಾಯಕರುಗಳಿಗೆ ಕೊನೆಯ ಎಚ್ಚರಿಕೆಯನ್ನು ನೀಡಿದ್ದಾರೆ.

ಪಂಜಾಬ್‌ನ ಬಿಜೆಪಿ ನಾಯಕರ ಮನೆ ಮುಂದೆ ರೈತರ ಪ್ರತಿಭಟನೆ

2021 ರ ಮೇ 26 ಬುಧವಾರದಂದು ರೈತರು ದೇಶಾದ್ಯಂತ ಕರಾಳ ದಿನವನ್ನು ಆಚರಿಸಿದ್ದರು. ಗಾಝಿಪುರ್‌, ಸಿಂಘು, ಟಿಕ್ರಿ ಗಡಿಗಳಲ್ಲಿ ದೊಡ್ಡ ಸಂಖ್ಯೆಯಲ್ಲಿ ಸೇರಿ ಕಪ್ಪು ಬಾವುಟ ಪ್ರದರ್ಶಿಸಿದ್ದರು. ಪಂಜಾಬ್‌ ನ ರೈತರು ತಮ್ಮ ಮನೆಗಳ ಛಾವಣಿ ಮೇಲೆ ಕಪ್ಪು ಬಾವುಟ ಹಾರಿಸುವ ಮೂಲಕ ಲಾಕ್‌ಡೌನ್‌ ನಡುವೆಯೂ ಕೇಂದ್ರದ ರೈತವಿರೋಧಿ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸಿದ್ದರು.


ಇದನ್ನೂ ಓದಿ; ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ ರೈತರು: ತಪ್ಪೊಪ್ಪಿಕೊಂಡು ಕ್ಷಮೆಯಾಚಿಸಿದ ಜೆಜೆಪಿ ಶಾಸಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...