Homeಚಳವಳಿರೈತ ಹೋರಾಟ: ದೇಶಾದ್ಯಂತ ರೈತರಿಂದ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಮಹಾಪರಿನಿರ್ವಾಣ ದಿವಸ ಆಚರಣೆ

ರೈತ ಹೋರಾಟ: ದೇಶಾದ್ಯಂತ ರೈತರಿಂದ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಮಹಾಪರಿನಿರ್ವಾಣ ದಿವಸ ಆಚರಣೆ

ರೈತ ಚಳವಳಿಯನ್ನು ನಿರಂತರವಾಗಿ ಬೆಂಬಲಿಸುತ್ತಿರುವ ದೆಹಲಿಯ ಗಡಿಯ ಸಮೀಪದ ನಾಗರಿಕರಿಗೆ ಎಸ್‌ಕೆಎಂ ಧನ್ಯವಾದ ಅರ್ಪಿಸಿದೆ

- Advertisement -
- Advertisement -

ರೈತ ಸಂಘಟನೆ ಸಂಯುಕ್ತ ಕಿಸಾನ್ ಮೋರ್ಚಾದ ಕರೆಯ ಮೇರೆಗೆ ದೇಶಾದ್ಯಂತ ರೈತ ಸಂಘಟನೆಗಳು ಭಾರತದ ಸಂವಿಧಾನ ಶಿಲ್ಪಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿವಸವನ್ನು ಆಚರಿಸಿದ್ದಾರೆ. ದೆಹಲಿಯ ಹೋರಾಟದ ಗಡಿಗಳಲ್ಲಿ ಪ್ರತಿಭಟನಾ ನಿರತ ರೈತರು ಅಂಬೇಡ್ಕರ್‌ ಅವರ ಭಾವಚಿತ್ರಗಳನ್ನು ಹಿಡಿದು ಜಾಥಾ ನಡೆಸಿದ್ದಾರೆ.

“ಮಹಾ ಪರಿನಿರ್ವಾಣ ದಿವಸ ಆಚರಣೆ ಮಾಡಿ, ಭಾರತ ಸಂವಿಧಾನವನ್ನು ರಕ್ಷಿಸುವ ಪ್ರತಿಜ್ಞಾವಿಧಿಯನ್ನು ಸ್ವೀಕರಿಸಿದೆವು. ಬಾಬಾ ಸಾಹೇಬರ ನೇತೃತ್ವದಲ್ಲಿ ರಚಿತವಾದ ಭಾರತದ ಸಂವಿಧಾನವು ಪ್ರತಿಯೊಬ್ಬ ನಾಗರಿಕನಿಗೂ ಘನತೆಯಿಂದ ಬದುಕುವ ಹಕ್ಕನ್ನು ನೀಡಿದೆ, ಅದಕ್ಕಾಗಿಯೇ ಸಂಯುಕ್ತ ಕಿಸಾನ್ ಮೋರ್ಚಾ ಹೋರಾಡುತ್ತಿದೆ” ಎಂದು ಎಸ್‌ಕೆಎಂ ತನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಬಾಬಾಸಾಹೇಬರ ಪುಸ್ತಕಗಳ ಪ್ರಕಟಣೆಗೂ ಅವರ ಜೀವನದಷ್ಟೇ ಕಲ್ಲು ಮುಳ್ಳಿನ ಹಾದಿ!

26 ನವೆಂಬರ್ 2020 ರಿಂದ ರೈತ ಚಳವಳಿಯನ್ನು ನಿರಂತರವಾಗಿ ಬೆಂಬಲಿಸುತ್ತಿರುವ ದೆಹಲಿಯ ಗಡಿಯ ಸಮೀಪದ ನಾಗರಿಕರಿಗೆ ಎಸ್‌ಕೆಎಂ ಧನ್ಯವಾದ ಅರ್ಪಿಸಿದೆ. ಪ್ರತಿಭಟನಾ ಸ್ಥಳಗಳ ಬಳಿ ವಾಸಿಸುವ ನಾಗರಿಕರನ್ನು ರೈತರ ವಿರುದ್ಧ ಆಡಳಿತ ಪಕ್ಷ ಮತ್ತು ಮಾಧ್ಯಮಗಳು ನಿರಂತರವಾಗಿ ಪ್ರಚೋದಿಸುತ್ತಿದ್ದವು. ಆದರೆ, ಅವರು ನಮ್ಮ ಪರವಾಗಿಯೇ ಇದ್ದು, ರೈತ ಚಳವಳಿಗೆ ಸಹಾಯ ಮಾಡಿದ್ದಾರೆ. ಇದು ರೈತರಿಲ್ಲಿ ಶಾಶ್ವತವಾಗಿ ನೆನಪಿನಲ್ಲಿ ಉಳಿಯುತ್ತದೆ ಎಂದು ಎಸ್‌ಕೆಎಂ ತಿಳಿಸಿದೆ.

ಇನ್ನು, ವಿವಾದಿತ ಮೂರು ಕಾನೂನುಗಳನ್ನು ಹಿಂತೆಗೆದುಕೊಳ್ಳುವ ನಿರ್ಧಾರದ ನಂತರ ಮುಂಬರುವ ವಿಧಾನಸಭಾ ಚುನಾವಣೆಗಳಲ್ಲಿ ರೈತ ಚಳವಳಿ ಪ್ರಭಾವ ಬೀರುವುದಿಲ್ಲ ಎಂದು ಹಲವಾರು ಬಿಜೆಪಿ ನಾಯಕರು ಹೇಳಿಕೆಗಳನ್ನು ನೀಡಿದ್ದಾರೆ. ಇದು ಸಂಪೂರ್ಣವಾಗಿ ಆಧಾರರಹಿತವಾಗಿದೆ ಎಂದು ರೈತ ಸಂಘಟನೆ ತಿಳಿಸಿದೆ.

’ಎಂಎಸ್‌ಪಿಯ ಕಾನೂನು, ವಿದ್ಯುತ್ ತಿದ್ದುಪಡಿ ಮಸೂದೆ ಹಿಂಪಡೆಯುವಿಕೆ, ವಾಯುಮಾಲಿನ್ಯ ಮಸೂದೆಯಿಂದ ರೈತರಿಗೆ ದಂಡ ವಿಧಿಸುವ ಷರತ್ತನ್ನು ತೆಗೆದುಹಾಕುವುದು, ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವ ಅಜಯ್ ಮಿಶ್ರಾ ತೇನಿ ಅವರ ಬಂಧನ ಮತ್ತು ವಜಾ, ರೈತರ ಮೇಲೆ ಹೇರಲಾಗಿರುವ ನಕಲಿ ಪ್ರಕರಣಗಳನ್ನು ಹಿಂಪಡೆಯುವುದು. ಹುತಾತ್ಮ ರೈತರ ಕುಟುಂಬಗಳ ಪುನರ್ವಸತಿ ಮತ್ತು ಹುತಾತ್ಮರ ಸ್ಮಾರಕ ಇತ್ಯಾದಿ ಸಮಸ್ಯೆಗಳು ಬಗೆಹರಿಯದೆ ಉಳಿದಿವೆ. ಹೀಗಾಗಿ ಈ ಸಮಸ್ಯೆಗಳು ಮಿಷನ್ ಯುಪಿ ಮತ್ತು ಉತ್ತರಾಖಂಡದ ಮೇಲೆ ಪ್ರಭಾವ ಬೀರುತ್ತವೆ ಎಂದು ಎಸ್‌ಕೆಎಂ ತಿಳಿಸಿದೆ.


ಇದನ್ನೂ ಓದಿ: MSP ಕಾನೂನಿಗೆ ಆಗ್ರಹಿಸಿ ಸಿಂಘು ಗಡಿಯಲ್ಲಿ ರೈತರ ಉಪವಾಸ ಸತ್ಯಾಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...

ದೆಹಲಿ| ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ಒತ್ತುವರಿ ತೆರವು ಕಾರ್ಯಾಚರಣೆ ಆರಂಭಿಸಿದ ಎಂಸಿಡಿ

ದೆಹಲಿ ಹೈಕೋರ್ಟ್ ನಿರ್ದೇಶನದಂತೆ, ಮೊಘಲರ ಕಾಲದ ಐತಿಹಾಸಿಕ ಜಮಾ ಮಸೀದಿ ಸುತ್ತಮುತ್ತಲಿನ ಅಕ್ರಮ ನಿರ್ಮಾಣಗಳನ್ನು ಸಮೀಕ್ಷೆ ಮಾಡಿ, ಒತ್ತುವರಿಯನ್ನು ತೆರವುಗೊಳಿಸುವ ಬೃಹತ್ ಕಾರ್ಯಾಚರಣೆಯನ್ನು ದೆಹಲಿ ಮಹಾನಗರ ಪಾಲಿಕೆ (ಎಂಸಿಡಿ) ಸೋಮವಾರ (ಆ.31) ಪ್ರಾರಂಭಿಸಿದೆ...

ವೆನೆಜುವೆಲಾ ಮತ್ತೆ ಎದ್ದು ನಿಲ್ಲಲಿದೆ: ಬಂಧನದಲ್ಲಿರುವ ವೆನೆಜುವೆಲಾ ಮಾಜಿ ಅಧ್ಯಕ್ಷ ಮಡುರೊ ಮೊದಲ ಫೋಟೋ ಹಂಚಿಕೆ

ಜನವರಿಯಲ್ಲಿ ಅಮೆರಿಕ ಪಡೆಗಳಿಂದ ಬಂಧನಕ್ಕೊಳಗಾಗಿದ್ದ ವೆನೆಜುವೆಲಾದ ಮಾಜಿ ಅಧ್ಯಕ್ಷ ನಿಕೋಲಸ್ ಮಡುರೊ, ಅಮೆರಿಕದ ಬಂಧನ ಕೇಂದ್ರದಿಂದ ತಮ್ಮ ಎರಡು ಛಾಯಾಚಿತ್ರಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ. ಬಂಧನದ ಬಳಿಕ ಮಡುರೊ ಅವರ ಫೋಟೋಗಳು ಹೊರಬಂದಿರುವುದು...

‘ಮಹಿಳೆಯರು ಆಭರಣದಂತೆ ಮನೆಯಲ್ಲೇ ಇರಬೇಕು’ ಮುಸ್ಲಿಂ ಧರ್ಮಗುರು ವಿವಾದಾತ್ಮಕ ಹೇಳಿಕೆ

ಮಹಿಳೆಯರು ಮನೆಯಲ್ಲೇ ಇರಬೇಕು ಮತ್ತು ಸಾರ್ವಜನಿಕ ಕ್ಷೇತ್ರಕ್ಕೆ ಪ್ರವೇಶಿಸಬಾರದು ಎಂದು ಕೇರಳದ ಪ್ರಭಾವಿ ಮುಸ್ಲಿಂ ಧರ್ಮಗುರು ಶೇಖ್ ಅಬೂಬಕರ್ ಅಹ್ಮದ್ ನೀಡಿದ ಹೇಳಿಕೆ ಸಾಮಾಜಿಕ ಮಾಧ್ಯಮಗಳಲ್ಲಿ ಹಾಗೂ ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆ...

ಹಲ್ದ್ವಾನಿ ‘ಶುದ್ಧೀಕರಣ’ ವಿವಾದ : ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ರ್‍ಯಾಲಿ ನಡೆದ ಸ್ಥಳದಲ್ಲಿ ಬಿಜೆಪಿ ಬೆಂಬಲಿಗರು 'ಶುದ್ಧೀಕರಣ' ನಡೆಸಿದ ವಿವಾದ ಹೊಸ ರಾಜಕೀಯ ಮತ್ತು ಕಾನೂನು ತಿರುವು ಪಡೆದುಕೊಂಡಿದೆ. ಜಾತಿ ನಿಂದನೆಗೆ ಸಂಬಂಧಿಸಿದಂತೆ...

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...