Homeಮುಖಪುಟಭತ್ತ ನಾಟಿಗೂ ಮುನ್ನವೇ ದೆಹಲಿ ಸೇರುತ್ತಿರುವ ರೈತರು: ಹೋರಾಟಕ್ಕೆ ಮತ್ತಷ್ಟು ಬಲ

ಭತ್ತ ನಾಟಿಗೂ ಮುನ್ನವೇ ದೆಹಲಿ ಸೇರುತ್ತಿರುವ ರೈತರು: ಹೋರಾಟಕ್ಕೆ ಮತ್ತಷ್ಟು ಬಲ

ಬುಧವಾರ ಮುಂಜಾನೆ ನೂರಾರು ರೈತರನ್ನು ಹೊತ್ತ ಸುಮಾರು 125ಕ್ಕೂ ಹೆಚ್ಚು ಟ್ರಕ್‌ಗಳು ಸಿಂಘು, ಟಿಕ್ರಿ ಗಡಿಗಳತ್ತ ಹೊರಟಿವೆ..

- Advertisement -
- Advertisement -

ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪಂಜಾಬ್‌ನ ಲೂಧಿಯಾನದ ಗ್ರಾಮಗಳಲ್ಲಿ ತಾವಿರುವಲ್ಲಿಯೇ ಮೇ 26 ರಂದು `ಕರಾಳ ದಿನ’ವನ್ನು ಆಚರಿಸಿದ್ದ ರೈತರು ಇದೀಗ ಗಡಿಗಳತ್ತ ಪಯಣ ಬೆಳೆಸಿದ್ದಾರೆ. ನಾಟಿ ಆರಂಭವಾಗುವ ಮೊದಲೇ ರೈತ ಹೋರಾಟವನ್ನು ಬಲಗೊಳಿಸಲು ಪಂಜಾಬ್‌ನ ವಿವಿಧ ಭಾಗಗಳಿಂದ ರೈತರು ದೆಹಲಿ ಗಡಿಗಳತ್ತ ಹೊರಟಿದ್ದಾರೆ ಎಂದು ರೈತ ಸಂಘಟನೆಗಳ ಮುಖಂಡರು ತಿಳಿಸಿದ್ದಾರೆ.

ಬುಧವಾರ ಮುಂಜಾನೆ ನೂರಾರು ರೈತರನ್ನು ಹೊತ್ತ ಸುಮಾರು 125ಕ್ಕೂ ಹೆಚ್ಚು ವಾಹನಗಳು ಮುಖ್ಯವಾಗಿ ಲೂಧಿಯಾನ ಜಿಲ್ಲಯ ಜಾಗ್ರಾನ್‌, ಸುಧಾಅರ್‌, ಸಿಧ್ವಾನ್‌ ಬೆಟ್, ರಾಯ್‌ಕೋಟ್‌ ಮತ್ತು ಹಂಬ್ರನ್‌ಗಳಿಂದ ಸಿಂಘು ಮತ್ತು ಟಿಕ್ರಿ ಹೋರಾಟದ ಗಡಿಗಳತ್ತ ಹೊರಟಿದ್ದಾರೆ

`ಭಾರತೀಯ ಕಿಸಾನ್‌ ಯೂನಿಯನ್‌ (ಡಕೊಂಡಾ) ಸಂಘಟನೆಯ ಬ್ಯಾನರ್‌ನೊಂದಿಗೆ ಸುಮಾರು 700 ರೈತರು ವಾಹನಗಳ ಮೂಲಕ ದೆಹಲಿ ಗಡಿಗಳಿಗೆ ತೆರಳಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಸಂಖ್ಯೆಯಲ್ಲಿ ಜನರು ಹೋರಾಟವನ್ನು ಸೇರಿಕೊಳ್ಳಲಿದ್ದಾರೆ. ಗ್ರಾಮಗಳಲ್ಲಿ ನಡೆಯುತ್ತಿರುವ ಹೋರಾಟವು ಜೂನ್‌ 10ರವರೆಗೆ ಮುಂದುವರೆಯಲಿದೆ. ನಂತರ ರೈತರು ಭತ್ತದ ನಾಟಿ ಮಾಡುವತ್ತ ಗಮನಹರಿಸಬೇಕಾಗಬಹುದು ಎಂದು ರೈತ ಹೋರಾಟವನ್ನು ಬೆಂಬಲಿಸುವ ಇಕ್ವಿಂಲಾಬಿ ಕೇಂದ್ರ ಪಂಜಾಬ್‌ನ ಪ್ರಧಾನ ಕಾರ್ಯದರ್ಶಿ ಕಮಲ್‌ಜಿತ್ ಖನ್ನಾ ತಿಳಿಸಿದರು.

ಬಿಕೆಯು ಡಕೊಂಡಾ ಜೊತೆಯಲ್ಲಿ ಕೀರ್ತಿ ಕಿಸಾನ್‌ ಯೂನಿಯನ್‌ ಹಾಗೂ ಬಿಕೆಯು (ಉಗ್ರಹಾನ್‌) ಸಂಘಟನೆಯ ಸದಸ್ಯರು ಹೋರಾಟದ ಗಡಿಗಳಿಗೆ ಹೋಗುತ್ತಿದ್ದಾರೆ ಎಂದು ಅವರು ತಿಳಿಸಿದರು.

ರೈತರೊಂದಿಗೆ ಬಿಕೆಯು ಡಕೊಂಡ ಸಂಘಟನೆಯ ಜಿಲ್ಲಾಧ್ಯಕ್ಷರಾದ ಮೊಹಿಂದರ್‌ ಸಿಂಗ್‌, ಜಿಲ್ಲಾ ಕಾರ್ಯದರ್ಶಿ ಇಂದರ್‌ಜಿತ್‌ ಸಿಂಗ್‌ ಹಾಗೂ ಮಾಧ್ಯಮ ಕಾರ್ಯದರ್ಶಸಿ ಗುರ್ಪ್ರೀತ್‌ ಸಿಂಗ್‌ ಅವರು ಹೋರಾಟದಲ್ಲಿ ಭಾಗವಹಿಸಲಿದ್ದು, ರೈತರು ಹತ್ತು ದಿನಗಳ ಕಾಲ ಗಡಿಗಳಲ್ಲಿ ನಡೆಯುತ್ತಿರುವ ಹೋರಾಟದಲ್ಲಿ ಭಾಗವಹಿಸಲಿದ್ದಾರೆ. ಇದರಲ್ಲಿ ರೈತ ಮಹಿಳೆಯರು ಸಹ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ ಎಂದಿದ್ದಾರೆ.

ಬಿಕೆಯು ಲಖೋವಾಲ್‌ ಪ್ರದೇಶದ ಪ್ರಧಾನ ಕಾರ್ಯದರ್ಶಿ ಹರೀಂದರ್‌ ಸಿಂಗ್‌ ಲಖೋವಾಲ್‌ ಅವರ ಪ್ರಕಾರ, `ರಾಜ್ಯದ ವಿವಿಧ ಜೆಲ್ಲಿಗಳ ಸುಮಾರು 80-100 ರೈತರು ಮತ್ತು ಕೃಷಿ ಕಾರ್ಮಿಕರು ಬುಧವಾರ ದೆಹಲಿ ಗಡಿಗಳಿಗೆ ಹೋಗುತ್ತಿದ್ದಾರೆ. ಮುಂದಿನ ಕೆಲವು ದಿನಗಳಲ್ಲಿ ನಮ್ಮ ಹೆಚ್ಚಿನ ಸದಸ್ಯರು ಗಡಿಗಳಲ್ಲಿರುವ ಪ್ರತಿಭಟನಾಕಾರರನ್ನು ಸೇರುವ ನಿರೀಕ್ಷೆಯಿದೆ’ ಎಂದರು.

ಲೂಧಿಯಾನದ ಕೋಕ್ರಾನ್‌ ತಕ್ರಾನ್‌ ಗ್ರಾಮದ ರೈತ ರವೀಂದರ್‌ ಸಿಂಗ್‌ ಪ್ರತಿಭಟನಾ ಸ್ಥಳಕ್ಕೆ ಹೋಗುತ್ತಿರುವುದರ ಬಗ್ಗೆ ಮಾತನಾಡಿ, ಕಡು ಬಿಸಿಲಿನ ನಡುವೆಯೂ ನಾವು ಹೋರಾಟದ ಗಡಿಗಳಲ್ಲಿ ಉಳಿದುಕೊಳ್ಳಲು ಅಗತ್ಯವಿರುವ ಸಿದ್ಧತೆಗಳನ್ನು ಮಾಡುತ್ತಿದ್ದೇವೆ ಎಂದು ಅವರು ತಿಳಿಸಿದರು.

ಭತ್ತದ ನಾಟಿ ನಂತರ ಇನ್ನು ಹೆಚ್ಚು ಸಂಖ್ಯೆಯಲ್ಲಿ ರೈತರು ಹೋರಾಟದಲ್ಲಿ ಭಾಗವಹಿಸುವುದಾಗಿ ಗ್ರಾಮಸ್ಥರು ತಿಳಿಸಿದ್ದಾರೆ. ಒಟ್ಟಿನಲ್ಲಿ 6 ತಿಂಗಳು ಪೂರೈಸಿರುವ ರೈತ ಹೋರಾಟ ತನ್ನ ಕಾವು ಕಳೆದುಕೊಂಡಿಲ್ಲ. ಬದಲಿಗೆ ಮತ್ತಷ್ಟು ಬಲಶಾಲಿಯಾಗುತ್ತಿದೆ. ಜೂನ್ 05 ರಂದು ಗಡಿಗಳಲ್ಲಿ ಸುಗ್ರಿವಾಜ್ಞೆಗಳಿಗೆ ಒಂದು ವರ್ಷ ತುಂಬುತ್ತಿರುವ ಸಂದರ್ಭದಲ್ಲಿ ಸಂಪೂರ್ಣ ಕ್ರಾಂತಿ ದಿವಸ್ ಆಚರಿಸಲು ಕರೆ ನೀಡಿದ್ದಾರೆ.

ಕೃಪೆ: ಅನ್ನದ ಋಣ


ಇದನ್ನೂ ಓದಿ: ಲಾಕ್‌ಡೌನ್‌ನಿಂದ ಆರ್ಥಿಕ ನಷ್ಟ ತಾಳಲಾರದೇ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...