Homeಚಳವಳಿರೈತರ ಪ್ರತಿಭಟನೆಗೆ ಹರಿದು ಬಂತು ವಿದೇಶಿ ರಾಜಕೀಯ ನಾಯಕರ ಬೆಂಬಲ

ರೈತರ ಪ್ರತಿಭಟನೆಗೆ ಹರಿದು ಬಂತು ವಿದೇಶಿ ರಾಜಕೀಯ ನಾಯಕರ ಬೆಂಬಲ

ಶಾಂತಿಯುತ ಪ್ರತಿಭಟನಾಕಾರರ ವಿರುದ್ಧದ ಈ ರೀತಿಯ ದಬ್ಬಾಳಿಕೆಯ ವರ್ತನೆ ಸ್ವೀಕಾರಾರ್ಹವಲ್ಲ. ಇದು ಭಾರತದ ಖ್ಯಾತಿಗೆ ಕಳಂಕ ತರುತ್ತದೆ.

- Advertisement -
- Advertisement -

ನರೇಂದ್ರ ಮೋದಿ ಸರ್ಕಾರದ ವಿವಾದಾತ್ಮಕ ಹೊಸ ಕೃಷಿ ಕಾನೂನುಗಳ ವಿರುದ್ಧ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಭಾರತವಷ್ಟೇ ಅಲ್ಲದೆ ವಿದೇಶಗಳ ಹಲವು ರಾಜಕೀಯ ನಾಯಕರು ಕೂಡ ಬೆಂಬಲ ವ್ಯಕ್ತಪಡಿಸಿದ್ದಾರೆ.

ಯುನೈಟೆಡ್ ಕಿಂಗ್‌ಡಮ್, ಕೆನಡಾ ಮತ್ತು ಅಮೆರಿಕಾದ ಹಲವಾರು ರಾಜಕೀಯ ಮುಖಂಡರು ರೈತರೊಂದಿಗೆ ನಾವಿದ್ದೇವೆ ಎಂದು ಬೆಂಬಲ ವ್ಯಕ್ತಪಡಿಸಿದ್ದಾರೆ. ಜೊತೆಗೆ ಪ್ರತಿಭಟನೆಗಳನ್ನು ಮೋದಿ ಸರ್ಕಾರ ನಿರ್ವಹಿಸುತ್ತಿರುವ ರೀತಿಯನ್ನು ಟೀಕಿಸಿದ್ದಾರೆ.

ಕೆನಡಾದ ಪ್ರಧಾನಿ ಜಸ್ಟಿನ್ ಟ್ರೂಡ್ “ಶಾಂತಿಯುತ ಪ್ರತಿಭಟನೆಗಳನ್ನು ಕೆನಡಾ ಬೆಂಬಲಿಸುತ್ತದೆ. ಆದರೆ ಭಾರತದ ಪರಿಸ್ಥಿತಿ ತೀವ್ರ ಕಳವಳಕಾರಿಯಾಗಿದೆ. ಸಂವಾದದ ಮೂಲಕ ಸಮಸ್ಯೆಗಳನ್ನು ಬಗೆಹರಿಸಬೇಕು. ಸಾಧ್ಯವಿರುವ ಎಲ್ಲಾ ಮಾರ್ಗಗಳ ಮೂಲಕ ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನಿಸುತ್ತೇನೆ” ಎಂದಿದ್ದಾರೆ.

ಯುನೈಟೆಡ್ ಕಿಂಗ್‌ಡಮ್‌ನ ಲೇಬರ್‌ ಪಾರ್ಟಿ ಸಂಸದ ತನ್ಮನ್‌ಜೀತ್ ಸಿಂಗ್ ಧೇಸಿ ತಮ್ಮ ಟ್ವಿಟರ್‌ ಖಾತೆಯಲ್ಲಿ ದೆಹಲಿ ಚಲೋ ಪ್ರತಿಭಟನೆಯ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಜೊತೆಗೆ ’ಖಾಸಗೀಕರಣದ ವಿರುದ್ಧ ಶಾಂತಿಯುತವಾಗಿ ಪ್ರತಿಭಟಿಸುತ್ತಿರುವ ಪಂಜಾಬ್ ಮತ್ತು ಭಾರತದ ಇತರ ಭಾಗಗಳ ರೈತರೊಂದಿಗೆ ನಾನು, ನಮ್ಮ ಕುಟುಂಬ ಮತ್ತು ಸ್ನೇಹಿತರು ನಿಲ್ಲುತ್ತೇವೆ’ ಎಂದಿದ್ದಾರೆ.

ಇದನ್ನೂ ಓದಿ: ಕೊರೆವ ಚಳಿಯಲ್ಲಿ ದೇಶದ ಅನ್ನದಾತರು: ದೇವ್ ದೀಪಾವಳಿ ಸಂಭ್ರಮದಲ್ಲಿ ಪ್ರಧಾನಿ ಮೋದಿ!

 

ಮತ್ತೊಬ್ಬ ಲೇಬರ್‌ ಪಾರ್ಟಿ ಸಂಸದ ಜಾನ್ ಮೆಕ್‌ಡೊನೆಲ್ ಅವರು “ನಾನು ಸಂಸದ ತನ್ಮನ್‌ಜೀತ್ ಸಿಂಗ್ ಧೇಸಿ ಅವರ ಮಾತುಗಳನ್ನು ಒಪ್ಪುತ್ತೇನೆ. ಶಾಂತಿಯುತ ಪ್ರತಿಭಟನಾಕಾರರ ವಿರುದ್ಧದ ಈ ರೀತಿಯ ದಬ್ಬಾಳಿಕೆಯ ವರ್ತನೆ ಸ್ವೀಕಾರಾರ್ಹವಲ್ಲ. ಇದು ಭಾರತದ ಖ್ಯಾತಿಗೆ ಕಳಂಕ ತರುತ್ತದೆ” ಎಂದು ಟ್ವೀಟ್‌ನಲ್ಲಿ ಬರೆದಿದ್ದಾರೆ.

ಕೆನಡಾದ ಜಗ್ಮೀತ್ ಸಿಂಗ್ ನೇತೃತ್ವದ ನ್ಯೂ ಡೆಮಾಕ್ರಟಿಕ್ ಪಕ್ಷದಿಂದ ರೈತರಿಗೆ ಬೆಂಬಲ ವ್ಯಕ್ತವಾಗಿದೆ.

“ಶಾಂತಿಯುತವಾಗಿ ಪ್ರತಿಭಟಿಸುತ್ತಿರುವ ರೈತರ ವಿರುದ್ಧ ಭಾರತೀಯ ಸರ್ಕಾರ ನಡೆಸುತ್ತಿರುವ ಹಿಂಸಾಚಾರವು ಭೀಕರವಾಗಿದೆ. ನಾನು ಪಂಜಾಬ್ ಮತ್ತು ಭಾರತದಾದ್ಯಂತದ ಪ್ರತಿಭಟನಾ ನಿರತ ರೈತರಿಗೆ ಬೆಂಬಲ ಸೂಚಿಸುತ್ತೇನೆ. ಹಿಂಸಾಚಾರಕ್ಕಿಂತ ಶಾಂತಿಯುತ ಸಂವಾದದಲ್ಲಿ ತೊಡಗಿಸಿಕೊಳ್ಳಲು ನಾನು ಭಾರತೀಯ ಸರ್ಕಾರವನ್ನು ಒತ್ತಾಯಿಸುತ್ತೇನೆ” ಎಂದಿದ್ದಾರೆ.

ಇದನ್ನೂ ಓದಿ: ರೈತರ ಪರವಾಗಿ ನಿಲ್ಲುವುದನ್ನೇ ರಾಜಕಾರಣವೆನ್ನುವುದಾದರೆ, ಹೌದು ನಾವು ತಪ್ಪಿತಸ್ಥರೇ..!

ಒಂಟಾರಿಯೊ ಪ್ರಾಂತೀಯ ಸಂಸತ್ತಿನಲ್ಲಿ ಬ್ರಾಂಪ್ಟನ್ ಪೂರ್ವವನ್ನು ಪ್ರತಿನಿಧಿಸುವ ಗುರ್‌ರತನ್ ಸಿಂಗ್ ಅವರು ಸದನದಲ್ಲಿ ಭಾರತದ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿ ಮಾತನಾಡಿದ್ದಾರೆ.

“ಭಾರತದಲ್ಲಿ ರೈತರು ಸರ್ಕಾರದಿಂದ ಆಕ್ರಮಣಕ್ಕೊಳಗಾಗಿದ್ದಾರೆ. ಅದಕ್ಕಾಗಿಯೇ ಭಾರತ ಸರ್ಕಾರವು ಈ ಅನ್ಯಾಯದ ಕಾನೂನುಗಳ ವಿರುದ್ಧ ರೈತರೊಂದಿಗೆ ನಿಲ್ಲುವಂತೆ ನಾನು ಈ ಸದನವನ್ನು ಕೇಳುತ್ತಿದ್ದೇನೆ” ಎಂದಿದ್ದಾರೆ.

ಸರಣಿ ಟ್ವೀಟ್‌ಗಳನ್ನು ಮಾಡಿರುವ ಸಂಸದ ಗುರ್‌ರತನ್ ಸಿಂಗ್, ರೈತರ ಮೇಲೆ ಪೊಲಿಸರು ನಡೆಸಿದ ದೌರ್ಜನ್ಯದ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಜೊತೆಗೆ  “ಈ ಚಿತ್ರಗಳು ಭಯಾನಕವಾಗಿವೆ. ನಾನು ರೈತರ ಕುಟುಂಬದಿಂದ ಬಂದವನು. ತಮ್ಮ ಜೀವನೋಪಾಯಕ್ಕೆ ಧಕ್ಕೆ ತರುವ ಕಾನೂನುಗಳನ್ನು ವಿರೋಧಿಸುವ ರೈತರ ನೋವು ಮತ್ತು ಹೋರಾಟವನ್ನು ನಾನು ಅನುಭವಿಸುತ್ತೇನೆ. ಶಾಂತಿಯುತ ಪ್ರತಿಭಟನಾಕಾರರ ಮೇಲೆ ಸರ್ಕಾರ ದಾಳಿ ನಡೆಸುತ್ತಿದೆ. ನಾನು ರೈತರ ಜೊತೆ ಇದ್ದೇನೆ ಎಂದು ಟ್ವೀಟ್‌ಗಳಲ್ಲಿ ಬರೆದಿದ್ದಾರೆ.

ಇದನ್ನೂ ಓದಿ: ’ರೈತರು ದೇಶದ ಜೀವನಾಡಿ, ರೈತರೊಂದಿಗೆ ಇಡೀ ದೇಶ ನಿಲ್ಲಬೇಕು’- ಪಿಣರಾಯಿ ವಿಜಯನ್

ಅಮೆರಿಕಾದಲ್ಲಿ ಇಲ್ಲಿಯವರೆಗೆ ಪ್ರತಿಭಟನೆಗೆ ಬಹಿರಂಗವಾಗಿ ತಮ್ಮ ಪ್ರತಿಕ್ರಿಯೆಯನ್ನು ಹೇಳಿದವರು ಕಡಿಮೆಯೇ. ಆದರೆ, ವಕೀಲರು ಮತ್ತು ರಿಪಬ್ಲಿಕನ್ ಪಕ್ಷದ ಅಧಿಕಾರಿ ಹರ್ಮೀತ್ ಕೆ ಧಿಲ್ಲಾನ್ ಮಾತ್ರ ತಮ್ಮ ಅಭಿಪ್ರಾಯವನ್ನು ಟ್ವೀಟ್ ಮೂಲಕ ಹೊರಹಾಕಿದ್ದಾರೆ.

“ಪಂಜಾಬ್ ಮೂಲದ ರೈತರ ವಂಶಸ್ಥರಾಗಿ, ಪಂಜಾಬಿ ರೈತರು ತಮ್ಮ ಹೊಲಗಳು, ಜೀವನ ವಿಧಾನ ಮತ್ತು ಸಂಸ್ಕೃತಿಯನ್ನು ನಾಶಪಡಿಸುವ ಭಾರತೀಯ ಸರ್ಕಾರದ ದೊಡ್ಡ-ಕಾರ್ಪೊರೇಷನ್ ಪರ ಕೃಷಿ ಮಸೂದೆಯನ್ನು ಪ್ರತಿಭಟಿಸಿದ್ದಕ್ಕಾಗಿ ಹಲ್ಲೆಗೊಳಗಾಗಿದ್ದನ್ನು ನೋಡಲು ನನಗೆ ನೋವಾಗುತ್ತಿದೆ. ಪ್ರಧಾನಿ ಮೋದಿಯವರೇ ರೈತರ ಸಮಸ್ಯೆಗಳನ್ನು ಆಲಿಸಿ, ಅವರನ್ನು ಭೇಟಿ ಮಾಡಿ, ಮತ್ತು ರಾಜಿ ಮಾಡಿ” ಎಂದು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ದೆಹಲಿ ಚಲೋ: ಹೋರಾಟದಲ್ಲಿ ತಮ್ಮದೆ ಛಾಪು ಮೂಡಿಸಿದ ರೈತ ಮಹಿಳೆಯರು!

ಜಗ್ಮೀತ್ ಸಿಂಗ್ ಮತ್ತು ತನ್ಮನ್‌ಜೀತ್ ಸಿಂಗ್ ಧೇಸಿ ಅವರಂತಹ ನಾಯಕರು ಈ ಹಿಂದೆಯೂ ಮೋದಿ ಸರ್ಕಾರವನ್ನು, ಕಾಶ್ಮೀರ ಮತ್ತು ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯದ ಬಗ್ಗೆ ಹಲವು ಬಾರಿ ಟೀಕಿಸಿದ್ದಾರೆ.

ಪ್ರತಿಭಟನಾ ನಿರತ ರೈತರಿಗೆ ಬೆಂಬಲ ಮತ್ತು ಪ್ರತಿಭಟನೆಯನ್ನು ಮೋದಿ ಸರ್ಕಾರ ನಿಭಾಯಿಸುತ್ತಿರುವ ಕುರಿತ ಟೀಕೆಗಳು ಕೇವಲ ಪಂಜಾಬ್ ಮೂಲದ ರಾಜಕಾರಣಿಗಳಾದ ಧೇಸಿ, ಗಿಲ್, ಜಗ್ಮೀತ್ ಸಿಂಗ್, ಗುರಾರತನ್ ಸಿಂಗ್ ಮತ್ತು ಸಾರಾ ಸಿಂಗ್ ಅವರಿಂದ ಮಾತ್ರ ಬಂದಿಲ್ಲ. ಜ್ಯಾಕ್, ಹ್ಯಾರಿಸ್, ಜಾನ್ ಮೆಕ್‌ಡೊನೆಲ್, ಕೆವಿನ್ ಯಾರ್ಡ್ ಮತ್ತು ಆಂಡ್ರಿಯಾ ಹೊರ್ವಾತ್ ಕೂಡ ತಮ್ಮ ಪ್ರತಿರೋಧ ನೀಡಿದ್ದಾರೆ.

ಭಾರತದ ರೈತರ ಪ್ರತಿಭಟನೆ ಬಗ್ಗೆ ಮಾತನಾಡಿರುವ ಬಹುತೇಕ ಎಲ್ಲಾ ರಾಜಕೀಯ ನಾಯಕರು ಆಯಾ ದೇಶಗಳೊಳಗಿನ ವಿರೋಧ ಪಕ್ಷಗಳ ನಾಯಕರು. ಇದು ಮೋದಿ ಸರ್ಕಾರದ ಮೇಲೆ ಅಂತರರಾಷ್ಟ್ರೀಯ ಒತ್ತಡಕ್ಕೆ ಕಾರಣವಾಗುವ ಸಂಭವವಿದೆ ಎನ್ನಲಾಗುತ್ತಿದೆ.


ಇದನ್ನೂ ಓದಿ: ದೆಹಲಿಯಲ್ಲಿ ರೈತರ ಗುಡುಗು: ಇಂದಿನ ಹೋರಾಟದ ಚಿತ್ರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...