HomeUncategorizedರೈತ ಹೋರಾಟ: ಕಡು ಬೇಸಿಗೆ ಎದುರಿಸಲು ಸಿದ್ದರಾಗುತ್ತಿದ್ದಾರೆ ಅನ್ನದಾತರು!

ರೈತ ಹೋರಾಟ: ಕಡು ಬೇಸಿಗೆ ಎದುರಿಸಲು ಸಿದ್ದರಾಗುತ್ತಿದ್ದಾರೆ ಅನ್ನದಾತರು!

ಕುಡಿಯುವ ನೀರು, ದಿನನಿತ್ಯದ ಬಳಕೆಯ ನೀರಿನ ಬವಣೆ ತಪ್ಪಿಸಲು ಪ್ರತಿಭಟನಾ ಸ್ಥಳದಲ್ಲಿ ಈಗಾಗಲೇ ಬೋರ್‌ವೇಲ್ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

- Advertisement -
- Advertisement -

ಐತಿಹಾಸಿಕ ರೈತ ಹೋರಾಟಕ್ಕೆ 100 ದಿನಗಳು ತುಂಬಲು ಇನ್ನೆರಡು ದಿನ ಬಾಕಿ ಇದೆ. ಇಡೀ ಚಳಿಗಾಲವನ್ನು ಕಳೆದಿರುವ ರೈತರು ಈಗ ಬಿರು ಬೇಸಿಗೆಗೆ ಸಜ್ಜಾಗುತ್ತಿದ್ದಾರೆ. ತೀವ್ರ ಚಳಿ ಅನುಭವಿಸಿದ್ದ ಪ್ರತಿಭಟನಾಕಾರರು ಈಗ ತೀವ್ರ ಬಿಸಿಲಿನ ತಾಪಕ್ಕೆ ಸಿಲುಕುತ್ತಿದ್ದು, ತಮ್ಮ ಸುರಕ್ಷತೆಗಾಗಿ ಕುಡಿಯುವ ನೀರಿನ ವ್ಯವಸ್ಥೆ, ಪ್ರಿಡ್ಜ್, ಎಸಿ, ಫ್ಯಾನ್, ಕೂಲರ್‌ಗಳ ವ್ಯವಸ್ಥೆ ಮಾಡಿಕೊಳ್ಳುತ್ತಿದ್ದಾರೆ.

ವಿವಾದಿತ ಕೃಷಿ ಕಾನೂನುಗಳನ್ನು ರದ್ದು ಮಾಡುವವರೆಗೂ ದೆಹಲಿಯ ಗಡಿಗಳಿಂದ ತಮ್ಮ ಪ್ರತಿಭಟನೆಯನ್ನು ಹಿಂದಕ್ಕೆ ಪಡೆಯುವುದಿಲ್ಲ ಎಂದು ಈಗಾಗಲೇ ಹಲವಾರು ಬಾರಿ ರೈತ ಮುಖಂಡರು, ರೈತರು, ಪ್ರತಿಭಟನಾ ಬೆಂಬಲಿಗರು ಹೇಳಿದ್ದಾರೆ.

ಇದಕ್ಕೆ ಪೂರಕವಾಗಿ ಎಲ್ಲಾ ಗಡಿಗಳಲ್ಲಿ ಬೇಸಿಗೆಯ ಸಿದ್ಧತೆಯೂ ಸಾಗಿದೆ. ಕೂಲರ್‌ಗಳು, ಟ್ಯ್ರಾಲಿಯಲ್ಲಿ ಅಳವಡಿಸಲಾಗುವ ಫ್ಯಾನ್‌ಗಳು, ಟೇಬಲ್ ಫ್ಯಾನ್‌ಗಳು, ಎಸಿಗಳನ್ನು ಹಾಕಿಕೊಳ್ಳಲಾಗಿದೆ. ಕುಡಿಯುವ ನೀರು, ದಿನನಿತ್ಯದ ಬಳಕೆಯ ನೀರಿನ ಬವಣೆ ತಪ್ಪಿಸಲು ಪ್ರತಿಭಟನಾ ಸ್ಥಳದಲ್ಲಿ ಬೋರ್‌ವೇಲ್ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.

ಇದನ್ನೂ ಓದಿ: ರೈತರು ದೇಶದ್ರೋಹಿಗಳಲ್ಲ, ಕೆಂಪು ಕೋಟೆ ಘರ್ಷಣೆಗೆ ಕೇಂದ್ರದ ಪಿತೂರಿಯೇ ಕಾರಣ: ಕೇಜ್ರಿವಾಲ್

Image
PC: ANI

“ನಾವು ಎರಡು ಎಸಿಗಳನ್ನು ಈಗಾಗಲೇ ಅಳವಡಿಸಿದ್ದೇವೆ. ನಾವು ದೀರ್ಘಕಾಲದ ಪ್ರತಿಭಟನೆಗೆ ಸಿದ್ಧರಿದ್ದೇವೆ. ಮೊದಲು ನಮ್ಮ ದೇಹದ ಮೂಳೆಗಳು ತಣ್ಣಗಾಗುವ ಚಳಿಯನ್ನು ಧೈರ್ಯದಿಂದ ಗೆದ್ದಿದ್ದೇವೆ. ಈಗಲು ಅದೇ ಉತ್ಸಾಹದಿಂದ ತೀವ್ರ ಬಿಸಿಲನ್ನು ಎದುರಿಸಲು ಸಿದ್ಧರಿದ್ದೇವೆ” ಎಂದು ಪಂಜಾಬಿನ ಮೊಗಾ ಜಿಲ್ಲೆಯ ರೈತ ಕೆವಾಲ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: ಬಿಸಿಲಿಗೂ ಬಗ್ಗುವುದಿಲ್ಲ: ಹೋರಾಟನಿರತ ರೈತರ ಟ್ಯ್ರಾಲಿ, ಟೆಂಟ್‌ಗಳಿಗೆ ಬಂದ ಎಸಿ, ಕೂಲರ್‌ಗಳು!

ಇತ್ತ ಸಿಂಘು ಗಡಿ ಭಾಗದಲ್ಲೂ ರೈತರು ಬೇಸಿಗೆಯಲ್ಲಿ ಕುಳಿತುಕೊಳ್ಳಲು, ಮಲಗಲು ತಾತ್ಕಾಲಿಕ ವಸತಿಗಳನ್ನು ನಿರ್ಮಿಸಲು ಪ್ರಾರಂಭಿಸಿದ್ದಾರೆ. ಟೆಂಟ್‌ಗಳು ಮತ್ತು ಶೆಡ್‌ಗಳಲ್ಲಿ 5 ನಿಮಿಷವೂ ಕೂರಲು ಸಾಧ್ಯವಿಲ್ಲದಂತಹ ಬಿಸಿಲು ಪ್ರತಿಭಟನಾಕಾರರನ್ನು ಕಾಡುತ್ತಿದ್ದು, ತಾತ್ಕಾಲಿಕ ವ್ಯವಸ್ಥೆಗೆ ಮೊರೆಹೋಗುತ್ತಿದ್ದಾರೆ.

ರೈತರು ತಂಗಿರುವ ಟ್ಯ್ರಾಲಿಗಳಿಗೆ ಹೋಲಿಸಿದರೇ, ಈ ಚಪ್ಪರದ ವ್ಯವಸ್ಥೆ ಹೆಚ್ಚು ತಂಪಾಗಿರುತ್ತವೆ. ಅಲ್ಲದೆ, ಪಂಜಾಬ್, ಹರಿಯಾಣ ರಾಜ್ಯಗಳಲ್ಲಿ ಗೋಧಿ ಕೊಯ್ಲು ಆರಂಭವಾಗಲಿದ್ದು, ರೈತರು ಟ್ರಾಲಿಗಳನ್ನು ತಮ್ಮ ಊರುಗಳಿಗೆ ವಾಪಸ್ ಕಳುಹಿಸಬೇಕಾಗಬಹುದು ಎನ್ನಲಾಗಿದೆ.

ಇದರ ಜೊತೆಗೆ ಪ್ರತಿಭಟನಾ ಸ್ಥಳಗಳಲ್ಲಿ ಸೇವೆ ಸಲ್ಲಿಸುತ್ತಿರುವ ಹಲವಾರು ಸಂಘ ಸಂಸ್ಥೆಗಳು ಕೂಡ ಪ್ರತಿಭಟನಾ ನಿರತ ರೈತರಿಗೆ ಬೇಸಿಗೆಗೆ ಬೇಕಾದ ಮೂಲ ಸೌಕರ್ಯಗಳನ್ನು ಒದಗಿಸಿಕೊಡುವತ್ತ ಗಮನ ಹರಿಸಿವೆ. ಹಳ್ಳಿಗಳಲ್ಲಿ ತಮ್ಮ ಊರಿನ ಪ್ರತಿಭಟನಾ ನಿರತರಿಗೆ ಬೇಕಾಗುವ ವ್ಯವಸ್ಥೆ ಮಾಡಿಕೊಡಲು ಹಣವನ್ನು ಸಂಗ್ರಹಿಸಿ ನೀಡಲಾಗುತ್ತಿದೆ. ದೆಹಲಿಯಲ್ಲಿರುವ ರೈತರಿಗೆ ಬೇಕಾದ ಸೌಲಭ್ಯಗಳನ್ನು ಒದಗಿಸಿಕೊಡುವ ಬಗ್ಗೆ ಮಹಾಪಂಚಾಯತ್‌ಗಳಲ್ಲಿ ನಿರ್ಣಯಗಳನ್ನು ತೆಗೆದುಕೊಳ್ಳಲಾಗುತ್ತಿದೆ.


ಇದನ್ನೂ ಓದಿ: ಉದ್ಯೋಗ ಕೊಡದಿದ್ದರೆ ಮೋದಿಜಿಯನ್ನು ಮನೆಗೆ ಕಳಿಸುತ್ತೇವೆ: ನೋ ಜಾಬ್, ನೋ ವೋಟ್ ಟ್ವಿಟರ್ ಟ್ರೆಂಡಿಂಗ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...