Homeಚಳವಳಿವಿವಾದಿತ ಕೃಷಿ ಕಾನೂನುಗಳ ವಿರುದ್ಧ ನಿರ್ಣಯ ಅಂಗೀಕರಿಸಿದ ಪಂಜಾಬ್ ಸರ್ಕಾರ

ವಿವಾದಿತ ಕೃಷಿ ಕಾನೂನುಗಳ ವಿರುದ್ಧ ನಿರ್ಣಯ ಅಂಗೀಕರಿಸಿದ ಪಂಜಾಬ್ ಸರ್ಕಾರ

- Advertisement -
- Advertisement -

ಒಕ್ಕೂಟ ಸರ್ಕಾರದ ಮೂರು ವಿವಾದಾತ್ಮಕ ಕೃಷಿ ಕಾನೂನುಗಳ ವಿರುದ್ಧ ಪಂಜಾಬ್ ವಿಧಾನಸಭೆ ಗುರುವಾರ ನಿರ್ಣಯ ಅಂಗೀಕರಿಸಿದೆ. ಕೇಂದ್ರ ಸರ್ಕಾರ ಕಾನೂನುಬಾಹಿರವಾಗಿ ರಾಜ್ಯ ಸರ್ಕಾರದ ವಿಷಯಗಳಲ್ಲಿ ಪ್ರವೇಶಿಸಿದೆ ಎಂದು ಪಂಜಾಬ್ ಸರ್ಕಾರ ತಿಳಿಸಿದೆ.

ಕಳೆದ ವರ್ಷ ಅಕ್ಟೋಬರ್‌ನಲ್ಲಿಯೂ ಕೂಡ ಅಮರಿಂದರ್ ಸಿಂಗ್ ಪಂಜಾಬ್ ಮುಖ್ಯಮಂತ್ರಿಯಾಗಿದ್ದಾಗ ಕೇಂದ್ರದ ಮೂರು ಕೃಷಿ ಕಾನೂನುಗಳ ವಿರುದ್ಧ ವಿಧಾನ ಸಭೆ ನಿರ್ಣಯ ಅಂಗೀಕರಿಸಿತ್ತು. ಈಗ ಎರಡನೇ ಬಾರಿ  ಸಿಎಂ ಚರಣ್‌ಜಿತ್ ಸಿಂಗ್ ಚನ್ನಿ ನೇತೃತ್ವದಲ್ಲಿ ನಿರ್ಣಯ ಅಂಗೀಕರಿಸಲಾಗಿದೆ.

ಎರಡು ದಿನಗಳ ವಿಧಾನಸಭೆ ಅಧಿವೇಶನದ ಮುಕ್ತಾಯದ ದಿನದಂದು ರಾಜ್ಯ ಕೃಷಿ ಸಚಿವ ರಣದೀಪ್ ಸಿಂಗ್ ನಾಭಾ ಅವರು ನಿರ್ಣಯ ಮಂಡಿಸಿದರು. ಸದನದಲ್ಲಿ ಚರ್ಚೆಯ ನಂತರ ಇಬ್ಬರು ಬಿಜೆಪಿ ಶಾಸಕರ ಅನುಪಸ್ಥಿತಿಯಲ್ಲಿ ನಿರ್ಣಯವನ್ನು ಅಂಗೀಕರಿಸಲಾಗಿದೆ.

ಇದನ್ನೂ ಓದಿ: ದೆಹಲಿ ಹೋರಾಟಕ್ಕೆ 1 ವರ್ಷ: ನವೆಂಬರ್‌ 29 ರಂದು ಸಂಸತ್ತಿನ ಕಡೆಗೆ ರೈತರ ಮೆರವಣಿಗೆ

 

“ನವೆಂಬರ್ 11, 2021 ರಂದು ನಡೆದ ಈ ವಿಧಾನ ಸಭೆಯ ವಿಶೇಷ ಅಧಿವೇಶನದಲ್ಲಿ ಪಂಜಾಬ್ ಕೃಷಿ ಸಚಿವರು ಮಂಡಿಸಿದ ನಿರ್ಣಯ ಸದನದಲ್ಲಿ ಅಂಗೀಕರಿಸಲ್ಪಟ್ಟಿದೆ. ಕೇಂದ್ರ ಸರ್ಕಾರವು ಯಾವುದೇ ಅರ್ಹತೆ ಇಲ್ಲದೆ ರಾಜ್ಯಗಳ ಪಟ್ಟಿಯಲ್ಲಿನ ವಿಷಯದಲ್ಲಿ ಕಾನೂನುಬಾಹಿರವಾಗಿ ಜಾರಿಗೆ ತಂದ ಮೂರು ವಿವಾದಾತ್ಮಕ ಕಾನೂನುಗಳನ್ನು ಮತ್ತೊಮ್ಮೆ ತಿರಸ್ಕರಿಸುತ್ತದೆ” ಎಂದು ಹೇಳಿದೆ.
ಮೂರು ಕೃಷಿ ಕಾನೂನುಗಳನ್ನು “ಫೆಡರಲ್ ರಚನೆಯ ಮೇಲಿನ ದಾಳಿ” ಎಂದು ವಿವರಿಸಿರುವ ರಾಜ್ಯ ಕೃಷಿ ಸಚಿವ ರಣದೀಪ್ ಸಿಂಗ್ ನಾಭಾ, ಪಂಜಾಬ್ ಸರ್ಕಾರವು ಇವುಗಳನ್ನು ಜಾರಿಗೆ ತರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಈ ನಿರ್ಣಯದ ಪ್ರಕಾರ, ವಿಧಾನ ಸಭೆಯು “ರೈತ ಸ್ನೇಹಿ ನಿಯಂತ್ರಿತ ಎಪಿಎಂಸಿ ಮಂಡಿಗಳನ್ನು ವ್ಯವಸ್ಥಿತವಾಗಿ ಕಿತ್ತುಹಾಕುವ ಮತ್ತು ಕಾರ್ಪೋರೇಟ್ ಸ್ನೇಹಿ ಮಂಡಿಗಳನ್ನು ಸ್ಥಾಪಿಸುವ” ಗುರಿಯನ್ನು ಹೊಂದಿರುವ ಕೇಂದ್ರ ಸರ್ಕಾರದ ಪ್ರಯತ್ನಗಳನ್ನು ಬಲವಾಗಿ ಖಂಡಿಸುತ್ತದೆ” ಎಂದಿದೆ.

ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಎಎಪಿ ನೇತೃತ್ವದ ದೆಹಲಿ ಸರ್ಕಾರ, ಮತ್ತು ಶಿರೋಮಣಿ ಅಕಾಲಿ ದಳದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ವೇಳೆ ಅಕಾಲಿದಳದ ಶಾಸಕರು ಅವರ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ. ಜೊತೆಗೆ ಅಕಾಲಿ ದಳವು ಎನ್‌ಡಿಎ ಜೊತೆಗಿನ ತನ್ನ ಸಂಬಂಧವನ್ನು ಮುರಿದುಕೊಂಡಿದೆ. ಕೃಷಿ ಕಾನೂನುಗಳ ಜಾರಿ ವಿರೋಧಿಸಿ ಕೇಂದ್ರ ಸಚಿವ ಸಂಪುಟದಲ್ಲಿದ್ದ ಸಚಿವ ಸ್ಥಾನವನ್ನು ತೊರೆದಿದೆ ಎಂದು ಅಕಾಲಿದಳದ ಶಾಸಕ ಗುರ್‌ಪರ್ತಾಪ್ ಸಿಂಗ್ ವಡಾಲಾ ಹೇಳಿದ್ದಾರೆ.

ಎಎಪಿ ಶಾಸಕ ಹರ್ಪಾಲ್ ಸಿಂಗ್ ಚೀಮಾ ಅವರು ಕೃಷಿ ಕಾನೂನುಗಳ ವಿಚಾರದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರದ ಪಾತ್ರವನ್ನು ಪ್ರಶ್ನಿಸಿದ್ದಾರೆ.


ಇದನ್ನೂ ಓದಿ: ಲಖಿಂಪುರ್‌ ಖೇರಿ ಹತ್ಯಾಕಾಂಡ: ಆಶಿಶ್ ಮಿಶ್ರಾ, ಅಂಕಿತ್ ದಾಸ್‌ ಗನ್‌ಗಳಿಂದ ಗುಂಡು ಹಾರಿಸಲಾಗಿದೆ- ಪ್ರಯೋಗಾಲಯದ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...