Homeಮುಖಪುಟಬ್ಯಾರಿಕೇಡ್‌ಗಳನ್ನು ತೆಗೆಯಿರಿ, ಬಂಧಿಸಿರುವ ರೈತರನ್ನು ಬಿಡುಗಡೆಗೊಳಿಸಿ: ಅಂತರರಾಷ್ಟ್ರೀಯ ನ್ಯಾಯಶಾಸ್ತ್ರಜ್ಞರ ಆಯೋಗ

ಬ್ಯಾರಿಕೇಡ್‌ಗಳನ್ನು ತೆಗೆಯಿರಿ, ಬಂಧಿಸಿರುವ ರೈತರನ್ನು ಬಿಡುಗಡೆಗೊಳಿಸಿ: ಅಂತರರಾಷ್ಟ್ರೀಯ ನ್ಯಾಯಶಾಸ್ತ್ರಜ್ಞರ ಆಯೋಗ

ರೈತರ ಶಾಂತಿಯುತ ಪ್ರತಿಭಟನೆಯ ಹಕ್ಕನ್ನು ರಕ್ಷಿಸುವ ಬದಲು ಅವರ ಮೇಲೆ ಸರ್ಕಾರ ದೌರ್ಜನ್ಯ ನಡೆಸುತ್ತಿದೆ ಎಂದು ಆಯೋಗವು ದೂರಿದೆ.

- Advertisement -
- Advertisement -

ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸುತ್ತಿರುವ ದೆಹಲಿ ಗಡಿಗಳಲ್ಲಿ ಪೊಲೀಸರು ಹಾಕಿರುವ ಬ್ಯಾರಿಕೇಡ್, ಮುಳ್ಳುತಂತಿಗಳು, ಕಾಂಕ್ರೀಟ್ ಗೋಡೆಗಳು, ಮುಳ್ಳು ಸರಳುಗಳನ್ನು ತೆಗೆದುಹಾಕಿ ಮತ್ತು ಗಣರಾಜ್ಯೋತ್ಸವದ ಟ್ರಾಕ್ಟರ್ ರ್ಯಾಲಿಯ ನಂತರ ನಡೆಯುತ್ತಿರುವ ರೈತರ ಅನಿಯಂತ್ರಿತ ಬಂಧನ ನಿಲ್ಲಿಸುವಂತೆ ಜಾಗತಿಕ ಮಾನವ ಹಕ್ಕುಗಳ ಸಂಘಟನೆಯಾದ ಅಂತರರಾಷ್ಟ್ರೀಯ ನ್ಯಾಯಶಾಸ್ತ್ರಜ್ಞರ ಆಯೋಗವು ಒತ್ತಾಯಿಸಿದೆ.

ರೈತರ ಶಾಂತಿಯುತ ಪ್ರತಿಭಟನೆಯ ಹಕ್ಕನ್ನು ರಕ್ಷಿಸುವ ಬದಲು ಅವರ ಮೇಲೆ ಸರ್ಕಾರ ದೌರ್ಜನ್ಯ ನಡೆಸುತ್ತಿದೆ ಎಂದು ಆಯೋಗವು ದೂರಿದ್ದು, ಇದು ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಆರೋಪಿಸಿದೆ.

ಎರಡು ತಿಂಗಳನಿಂದಲೂ ಶಾಂತಿಯುತ ಹೋರಾಟ ನಡೆಸುತ್ತಿರುವ ದೆಹಲಿಯ ಸಿಂಘು, ಟಿಕ್ರಿ ಮತ್ತು ಗಾಜಿಪುರ್ ಗಡಿಗಳಲ್ಲಿ ಪೊಲೀಸರು ಫೆಬ್ರವರಿ ಆರಂಭದಿಂದಲೆ ಬ್ಯಾರಿಕೇಡ್, ಮುಳ್ಳುತಂತಿಗಳು, ಕಾಂಕ್ರೀಟ್ ಗೋಡೆಗಳು, ಮುಳ್ಳು ಸರಳು‌ಗಳನ್ನು ನೆಟ್ಟಿದೆ. ಅಲ್ಲಿಗೆ ಬೇರೆ ಯಾವುದೇ ವಾಹನಗಳು ಮತ್ತು ಜನರು ಬರದಂತೆ ತಡೆಗಟ್ಟಲು ಹೀಗೆ ಮಾಡಿದ್ದಾಗಿ ದೆಹಲಿ ಪೊಲೀಸರು ಹೇಳಿಕೊಂಡಿದ್ದಾರೆ.

ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಅಂತರರಾಷ್ಟ್ರೀಯ ನ್ಯಾಯಶಾಸ್ತ್ರಜ್ಞರ ಆಯೋಗ, “ಇದು ಪ್ರತಿಭಟನಾ ಸ್ಥಳದಲ್ಲಿ ರೈತರು ಪರಸ್ಪರ ಭೇಟಿಯಾಗಲು ಅಡ್ಡಿಯಾಗಿದೆ. ಪ್ರತಿಭಟನೆಗೆ ಬೆಂಬಲ ಸೂಚಿಸದಂತೆ ತಡೆಯುವ ಉದ್ದೇಶದಿಂದ ಕೂಡಿದೆ. ಈ ಬ್ಯಾರಿಕೇಡ್‌ಗಳಿಂದ ರೈತರು ಮತ್ತು ಅವರ ಕುಟುಂಬಗಳು, ಮಹಿಳೆಯರು ಮಕ್ಕಳು ಸೇರಿದಂತೆ, ನೀರು ಮತ್ತು ನೈರ್ಮಲ್ಯ ಸೌಲಭ್ಯಗಳಿಗೆ ಪರದಾಡುವಂತಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದೆ.

ಪತ್ರಕರ್ತರ ಮೇಲಿನ ದೌರ್ಜನ್ಯ ಮತ್ತು ಕಾಣೆಯಾದ ಪ್ರತಿಭಟನಾಕಾರರ ಬಗ್ಗೆ ಅಂತರರಾಷ್ಟ್ರೀಯ ನ್ಯಾಯಶಾಸ್ತ್ರಜ್ಞರ ಆಯೋಗ ಕಳವಳ ವ್ಯಕ್ತಪಡಿಸಿದೆ. “ಸತ್ಯವನ್ನು ವರದಿ ಮಾಡಿದ್ದಕ್ಕಾಗಿ ಇಬ್ಬರು ಪತ್ರಕರ್ತರನ್ನು (ಮಂದೀಪ್ ಪುನಿಯಾ ಮತ್ತು ಧರ್ಮೇಂದರ್ ಸಿಂಗ್) ಬಂಧಿಸಿ, ಹಲ್ಲೆ ನಡೆಸಲಾಯಿತು. ಒಂಬತ್ತು ಹಿರಿಯ ಪತ್ರಕರ್ತರ ಮೇಲೆ ಭಾರತ ಸರ್ಕಾರವು ದೇಶದ್ರೋಹ ಆರೋಪ ಸೇರಿದಂತೆ ಕ್ರಿಮಿನಲ್ ಆರೋಪಗಳನ್ನು ಹೊರಿಸಲಾಗಿದೆ. ಜನವರಿ 26, 2021 ರಂದು ಸಂಭವಿಸಿದ ಹಿಂಸಾತ್ಮಕ ಘರ್ಷಣೆಗೆ ಪ್ರತಿಕ್ರಿಯೆಯಾಗಿ ರೈತರು ಮತ್ತು ಸಾಮಾನ್ಯ ಜನರನ್ನು ಸೇರಿದಂತೆ 125 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಪ್ರಸ್ತುತ 21 ರೈತರು ಕಾಣೆಯಾಗಿದ್ದಾರೆಂದು ವರದಿಯಾಗಿದೆ” ಎಂದು ಆಯೋಗವು ಹೇಳಿಕೆಯಲ್ಲಿ ತಿಳಿಸಿದೆ.

ಸಿಎಎ, ಎನ್‌ಆರ್‌ಸಿ ವಿರುದ್ಧದ ಆಂದೋಲನದ ಸಮಯದಲ್ಲಿನ ಸಾಮೂಹಿಕ ಬಂಧನಗಳನ್ನು ಪ್ರಸ್ತಾಪಿಸಿದ ಆಯೋಗವು ಒಂದೇ ಮಾದರಿಯಲ್ಲಿ ಭಾರತದಲ್ಲಿ ಶಾಂತಿಯುತ ಪ್ರತಿಭಟನೆಗಳನ್ನು ನಿಗ್ರಹಿಸಲಾಗುತ್ತಿದೆ ಎಂದು ಆರೋಪಿಸಿದೆ. ರೈತರ ಪ್ರತಿಭಟನೆಯ ಹಕ್ಕನ್ನು ಸುಪ್ರೀಂ ಕೋರ್ಟ್ ಸಹ ಎತ್ತಿಹಿಡಿದಿದೆ ಎಂದು ಅದು ಉಲ್ಲೇಖಿಸಿದೆ.

ಹಾಗಾಗಿ ಕೂಡಲೇ ಬ್ಯಾರಿಕೇಡ್‌ಗಳನ್ನು ತೆಗೆದುಹಾಕಬೇಕು ಮತ್ತು ಬಂಧಿಸಿರುವ ರೈತರನ್ನು ಬಿಡುಗಡೆ ಮಾಡಬೇಕು ಎಂದು ಆಯೋಗವು ಆಗ್ರಹಿಸಿದೆ.


ಇದನ್ನೂ ಓದಿ: ಆಂದೋಲನ್ ಜೀವಿಗಳಾಗಲು ಹೆಮ್ಮೆ ಪಡುತ್ತೇವೆ: ಮೋದಿಗೆ ತಿರುಗೇಟು ನೀಡಿದ ರೈತರು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೊಪ್ಪಳ: ಬಿಜೆಪಿ ಭದ್ರಕೋಟೆಯನ್ನು ಛಿದ್ರಗೊಳಿಸಲು ಕಾಂಗ್ರೆಸ್‌ಗೆ ಸುವರ್ಣಾವಕಾಶ!?

0
ಹಿಂದುತ್ವ ರಾಜಕಾರಣದ ವಿಚಾರದಲ್ಲಿ ಕೊಪ್ಪಳ ಲೋಕಸಭಾ ಕ್ಷೇತ್ರ ಕಳೆದ ಒಂದೂವರೆ ದಶಕದಿಂದ ಥೇಟ್ ಚಿಕ್ಕಮಗಳೂರು-ಶಿವಮೊಗ್ಗದ ತದ್ರೂಪಿ. ಸೋಲು-ಗೆಲುವಿನ ಲೆಕ್ಕಾಚಾರದಲ್ಲಿ ಹಿಂದುತ್ವದ ಅಜೆಂಡಾ ಇಲ್ಲಿ ನಿರ್ಣಾಯಕ. ಆದರೆ, 2014ರಲ್ಲಿ ಲೋಕಸಭಾ ಕಣಕ್ಕೆ ಸಂಗಣ್ಣ ಕರಡಿ...