Homeಚಳವಳಿಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡದಂತೆ ಯುಪಿ ರೈತರಿಗೆ ಎಸ್‌ಕೆಎಂ ಮನವಿ

ಚುನಾವಣೆಯಲ್ಲಿ ಬಿಜೆಪಿಗೆ ಮತ ನೀಡದಂತೆ ಯುಪಿ ರೈತರಿಗೆ ಎಸ್‌ಕೆಎಂ ಮನವಿ

- Advertisement -
- Advertisement -

ತಮ್ಮ ಬೇಡಿಕೆಗಳನ್ನು ಈಡೇರಿಸದೆ ರೈತರಿಗೆ ದ್ರೋಹ ಬಗೆದಿರುವ ಬಿಜೆಪಿಗೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುವಂತೆ ಉತ್ತರ ಪ್ರದೇಶದ ರೈತರಿಗೆ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಮನವಿ ಮಾಡಿದೆ ಎಂದು ಸ್ವರಾಜ್ ಇಂಡಿಯಾ ಅಧ್ಯಕ್ಷ ಯೋಗೇಂದ್ರ ಯಾದವ್ ಗುರುವಾರ ಹೇಳಿದ್ದಾರೆ.

ಎಸ್‌ಕೆಎಂ ನೀಡಿರುವ #NoVoteToBJP ಕರೆಗೆ ಐವತ್ತೇಳು ರೈತ ಸಂಘಟನೆಗಳು ಬೆಂಬಲ ನೀಡಿವೆ ಎಂದು ಯೋಗೇಂದ್ರ ಯಾದವ್ ತಿಳಿಸಿದ್ದಾರೆ. ಆದರೆ, ಚುನಾವಣೆಯಲ್ಲಿ ಬೇರೆ ಯಾವುದೇ ಪಕ್ಷ ಮತ ಕೇಳುವುದಕ್ಕೂ ಸಂಯುಕ್ತ ಕಿಸಾನ್ ಮೋರ್ಚಾಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ರೈತ ಸಂಘಟನೆಗಳ ಒಕ್ಕೂಟ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಒಕ್ಕೂಟ ಸರ್ಕಾರದ ವಿವಾದಿತ ಕೃಷಿ ಕಾನೂನುಗಳ ವಿರುದ್ಧ ನಡೆದ ರೈತ ಹೋರಾಟದ ನೇತೃತ್ವ ವಹಿಸಿತ್ತು. ಒಮದು ವರ್ಷಗಳ ಸುದೀರ್ಘ ಹೋರಾಟದ ನಂತರ ಮೋದಿ ನೇತೃತ್ವದ ಸರ್ಕಾರ ಕಾನೂನುಗಳನ್ನು ಹಿಂತೆಗೆದುಕೊಂಡಿತ್ತು.

ಇದನ್ನೂ ಓದಿ: ಯುಪಿ ಚುನಾವಣೆ: ಯಾವ ಪಕ್ಷಕ್ಕೂ ಇಲ್ಲ ರೈತರ ಮತ, ನೋಟಾದತ್ತ ಎಲ್ಲರ ಚಿತ್ತ

ಆದರೆ, ರೈತರ ಮತ್ತಷ್ಟು ಬೇಡಿಕೆಗಳನ್ನು ಈಡೇರಿಸದೆ ಭರವಸೆ ನಿಡಿ ಸುಮ್ಮನಾಗಿದೆ. ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಸಮಿತಿಯನ್ನು ಸ್ಥಾಪಿಸುವುದು ಮತ್ತು ರೈತರ ಮೇಲಿನ ಪ್ರಕರಣಗಳನ್ನು ಹಿಂಪಡೆಯುವುದು ಸೇರಿದಂತೆ ಉಳಿದ ಬೇಡಿಕೆಗಳು ಈಡೇರಿಲ್ಲ ಎಂದು ಆರೋಪಿಸಿರುವ ಎಸ್‌ಕೆಎಂ ಸದಸ್ಯರು ಚುನಾವಣೆಯಲ್ಲಿ ಸರ್ಕಾರಕ್ಕೆ ತಕ್ಕ ಪಾಠ ಕಲಿಸಲು ರೈತರಿಗೆ ಮನವಿ ಮಾಡಿದ್ದಾರೆ.

“ರೈತರಿಗೆ ದ್ರೋಹ ಎಸಗಿರುವ ಬಿಜೆಪಿಯನ್ನು ಮುಂಬರುವ ಚುನಾವಣೆಯಲ್ಲಿ ಶಿಕ್ಷಿಸುವಂತೆ ಎಸ್‌ಕೆಎಂ ಯುಪಿಯಲ್ಲಿ ರೈತರಿಗೆ ಮನವಿ ಮಾಡಿದೆ. ಸರ್ಕಾರ ತನ್ನ ಭರವಸೆಗಳನ್ನು ಈಡೇರಿಸಿಲ್ಲ. ಎಂಎಸ್‌ಪಿಗಾಗಿ ಯಾವುದೇ ಸಮಿತಿಯನ್ನು ರಚಿಸಿಲ್ಲ ಮತ್ತು ರೈತರ ಮೇಲಿನ ಪ್ರಕರಣಗಳನ್ನು ಹಿಂಪಡೆದಿಲ್ಲ” ಎಂದು ಯೋಗೇಂದ್ರ ಯಾದವ್ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದ್ದಾರೆ.

“ನಾವು ಮುಂಬರುವ ದಿನಗಳಲ್ಲಿ ಮೀರತ್, ಕಾನ್ಪುರ, ಸಿದ್ಧಾರ್ಥನಗರ, ಗೋರಖ್‌ಪುರ ಮತ್ತು ಲಕ್ನೋ ಸೇರಿದಂತೆ ಒಂಬತ್ತು ಸ್ಥಳಗಳಲ್ಲಿ ಪತ್ರಿಕಾಗೋಷ್ಠಿಗಳನ್ನು ಆಯೋಜಿಸುತ್ತೇವೆ. ಬಿಜೆಪಿಗೆ ಮತ ಹಾಕದಂತೆ ನಮ್ಮ ಮನವಿಯನ್ನು ಹೊಂದಿರುವ ಕರಪತ್ರಗಳನ್ನು ಉತ್ತರ ಪ್ರದೇಶದಾದ್ಯಂತ ವಿತರಿಸಲಾಗುವುದು. ಸಂಯುಕ್ತ ಕಿಸಾನ್ ಮೋರ್ಚಾ ರಾಜಕೀಯ ರಹಿತವಾಗಿ ಉಳಿಯುತ್ತದೆ” ಎಂದು ಹೇಳಿದ್ದಾರೆ.


ಇದನ್ನೂ ಓದಿ: ಬಿಜೆಪಿ ಈ ಹಿಂದೆ ರೈತರ ಬೆಂಬಲ ದುರುಪಯೋಗ ಮಾಡಿಕೊಂಡಿದೆ, ಈ ಬಾರಿ ರೈತರು ಬುದ್ದಿ ಕಲಿಸುತ್ತಾರೆ: ನರೇಶ್ ಟಿಕಾಯತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...