Homeಚಳವಳಿಇನ್ನು 8 ತಿಂಗಳು ಈ ರೈತ ಹೋರಾಟ ನಡೆಯಲಿದೆ- ರಾಕೇಶ್ ಟಿಕಾಯತ್

ಇನ್ನು 8 ತಿಂಗಳು ಈ ರೈತ ಹೋರಾಟ ನಡೆಯಲಿದೆ- ರಾಕೇಶ್ ಟಿಕಾಯತ್

- Advertisement -
- Advertisement -

ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ವಿವಾದಿತ ಮೂರು ಕೃಷಿ ಕಾನೂನುಗಳ ವಿರುದ್ಧದ ಹೋರಾಟ ನಮ್ಮ ಹಕ್ಕು ಮತ್ತು ಭೂಮಿ ಉಳಿಸಿಕೊಳ್ಳುವುದಕ್ಕಾಗಿದೆ ಹಾಗಾಗಿ ಇನ್ನು 8 ತಿಂಗಳು ನಡೆಯಲಿದೆ ಎಂದು ಭಾರತೀಯ ಕಿಸಾನ್ ಯೂನಿಯನ್ (ಬಿಕೆಯು) ವಕ್ತಾರ ರಾಕೇಶ್ ಟಿಕಾಯತ್ ಹೇಳಿದ್ದಾರೆ.

ಪಂಜಾಬ್, ಹರಿಯಾಣ, ಉತ್ತರ ಪ್ರದೇಶದ ರೈತರು ಈಗ ಗೋಧಿ ಬೆಳೆಯನ್ನು ಕೊಯ್ಲು ಮಾಡುವಲ್ಲಿ ನಿರತರಾಗಿದ್ದಾರೆ. ಬೆಳೆ ಕೊಯ್ಲು ಮೇ 10ರ ವರೆಗೆ ನಡೆಯಬಹುದು ಎಂದು ಅಂದಾಜು ಮಾಡಲಾಗಿದೆ. ಹಾಗಾಗಿ ಮೇ 10 ರ ನಂತರ ಈ ಆಂದೋಲನವು ಇನ್ನು ತೀವ್ರಗೊಳ್ಳಲಿದೆ ಎಂದು ಟಿಕಾಯತ್ ತಿಳಿಸಿದ್ದಾರೆ.

ವಿವಾದಿತ ಕೃಷಿ ಕಾನೂನುಗಳನ್ನು ರದ್ದುಗೊಳಿಸುವಂತೆ ಕೋರಿ ರೈತರು ನಡೆಸುತ್ತಿರುವ ಹೋರಾಟ ನಾಲ್ಕು ತಿಂಗಳನ್ನೂ ದಾಟಿದೆ. ದೆಹಲಿಯ ಸುತ್ತ ಎಲ್ಲಾ ಗಡಿಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ರೈತ ಮಹಾಪಂಚಾಯತ್ ಮೂಲಕ ದೇಶದ ಇತರ ರಾಜ್ಯಗಳನ್ನು ತಲುಪುತ್ತಿದ್ದಾರೆ.

ಇದನ್ನೂ ಓದಿ: ಬೆಳಗಾವಿ ರೈತ ಮಹಾಪಂಚಾಯತ್: ಕಿತ್ತೂರು ರಾಣಿ ಚೆನ್ನಮ್ಮನ ಮಾದರಿಯಲ್ಲಿ ಹೋರಾಡೋಣ- ರಾಕೇಶ್ ಟಿಕಾಯತ್

ವಿವಾದಿತ ಮೂರು ಕೃಷಿ ಕಾನೂನುಗಳನ್ನು ಅಧ್ಯಯನ ಮಾಡಲು ಸುಪ್ರೀಂ ಕೋರ್ಟ್ ನೇಮಕ ಮಾಡಿದ್ದ ನಾಲ್ವರು ಸದಸ್ಯರ ಸ್ಥಾಯಿ ಸಮಿತಿಯು ಕಾನೂನುಗಳ ಬಗ್ಗೆ ತನ್ನ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದೆ. ಆದರೆ ಸಮಿತಿಯ ವರದಿಯನ್ನು ಗಣನೆಗೆ ತೆಗೆದುಕೊಳ್ಳುವುದಿಲ್ಲ ಎಂದು ರೈತ ಮುಖಂಡರು ಈಗಾಗಲೇ ತಿಳಿಸಿದ್ದು, ವಿವಾದಿತ ಕೃಷಿ ಕಾನೂನುಗಳನ್ನು ರದ್ದುಪಡಿಸುವವರೆಗೆ ಮತ್ತು ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಖಾತರಿಪಡಿಸುವ ಪ್ರತ್ಯೇಕ ಶಾಸನವನ್ನು ಜಾರಿಗೆ ತರುವವರೆಗೆ ಅವರು ತಮ್ಮ ಪ್ರತಿಭಟನೆಯನ್ನು ಮುಂದುವರಿಸುತ್ತೇವೆ ಎಂದಿದ್ದರು.

ಬುಧವಾರ (ಮಾರ್ಚ್ 31) ಬೆಳಗಾವಿಯಲ್ಲಿ ನಡೆದ ರೈತ ಮಹಾಪಂಚಾಯತ್‌ನಲ್ಲಿ ಮಾತನಾಡಿದ್ದ ರಾಕೇಶ್ ಟಿಕಾಯತ್ ಅಲ್ಲೂ ಕೂಡ ಮುಂದಿನ 8 ತಿಂಗಳು ಈ ಹೋರಾಟ ನಡೆಯಲಿದೆ ಸಿದ್ಧರಾಗಿರಿ ಎಂದು ಕರೆ ನೀಡಿದ್ದರು.

“ಭಾರತ ಸರ್ಕಾರ ಎಂಎಸ್‌ಪಿ ಕೊಡುವ ಕಾನೂನು ತರುವವರೆಗೂ, ಆ ಮೂರು ಕರಾಳ ಕಾನೂನುಗಳು ವಾಪಸ್ ಆಗುವವರೆಗೆ ಯಾವ ರೈತರು ಮನೆಗೆ ವಾಪಸ್ ಹೋಗುವುದಿಲ್ಲ. ದೆಹಲಿಯ ಗಡಿಗಳಲ್ಲಿ ಮನೆಗಳು, ರೋಟಿ ಮಾಡಲು ಮೆಷಿನ್‌ಗಳು, ವಿದ್ಯುತ್ ವ್ಯವಸ್ಥೆ ಎಲ್ಲಾ ಮಾಡಿಕೊಂಡಿದ್ದೇವೆ ಇನ್ನೂ 8 ತಿಂಗಳು ಈ ಹೋರಾಟ ಮುನ್ನಡೆಯಬೇಕಾಗಿದೆ” ಎಂದಿದ್ದರು.


ಇದನ್ನೂ ಓದಿ: ಪಂಜಾಬ್ ಬಿಜೆಪಿ ಶಾಸಕನ ಮೇಲೆ ಹಲ್ಲೆ ಪ್ರಕರಣ: ನಮ್ಮ ರೈತರು ಭಾಗಿಯಾಗಿಲ್ಲವೆಂದ ರಾಕೇಶ್ ಟಿಕಾಯತ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಹೆಚ್ಚುವರಿ ಹಣ ಬೇಕಾದರೆ ಸುಪ್ರೀಂಕೋರ್ಟ್‌ನಿಂದ ಮೊಕದ್ದಮೆ ಹಿಂಪಡೆಯಿರಿ: ಕೇರಳ ಸರಕಾರಕ್ಕೆ ಹೇಳಿದ ಕೇಂದ್ರ

0
ಕೇರಳದ ಪ್ರಸ್ತುತ ಅನಿಶ್ಚಿತ ಆರ್ಥಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಹೆಚ್ಚುವರಿಯಾಗಿ 11,731 ಕೋಟಿ ರೂ.ಗಳ ಸಾಲವನ್ನು ಪಡೆಯಲು ಕೇರಳಕ್ಕೆ ಅವಕಾಶ ನೀಡುವ ಬಗ್ಗೆ ಪರಿಗಣಿಸಲು ಸಿದ್ಧ ಎಂದು ಕೇಂದ್ರ ಸರ್ಕಾರ ಹೇಳಿದೆ. ಆದರೆ ರಾಜ್ಯ...