Homeಮುಖಪುಟಬೇಡಿಕೆಗಳು ಈಡೇರುವವರೆಗೂ 'ದಿಲ್ಲಿ ಚಲೋ' ಮುಂದುವರಿಯಲಿದೆ: ಪುನರುಚ್ಚರಿಸಿದ ರೈತರು

ಬೇಡಿಕೆಗಳು ಈಡೇರುವವರೆಗೂ ‘ದಿಲ್ಲಿ ಚಲೋ’ ಮುಂದುವರಿಯಲಿದೆ: ಪುನರುಚ್ಚರಿಸಿದ ರೈತರು

- Advertisement -
- Advertisement -

ತಮ್ಮ ಬೇಡಿಕೆಗಳು ಈಡೇರುವವರೆಗೂ ‘ದಿಲ್ಲಿ ಚಲೋ’ ಪ್ರತಿಭಟನೆ ಮುಂದುವರಿಯಲಿದೆ ಎಂದು ಶನಿವಾರ ಪುನರುಚ್ಚರಿಸಿರುವ ರೈತರು, ಫೆಬ್ರವರಿ 21ರಂದು ಖಾನೌರಿ ಗಡಿಯಲ್ಲಿ ಹರಿಯಾಣ ಪೊಲೀಸರೊಂದಿಗಿನ ಘರ್ಷಣೆಯಲ್ಲಿ ಸಾವನ್ನಪ್ಪಿದ ಶುಭಕರನ್ ಸಿಂಗ್ ಅವರ ಕೊನೆಯ ಪ್ರಾರ್ಥನಾ ಸಭೆ ಮಾರ್ಚ್ 3ರಂದು ನಡೆಯಲಿದೆ. ಆ ಬಳಿಕ ಮುಂದಿನ ಹೋರಾಟದ ಕುರಿತು ನಿರ್ಧರಿಸಲಾಗುವುದು ಎಂದು ಹೇಳಿದ್ದಾರೆ.

ಪಂಜಾಬ್‌-ಹರಿಯಾಣ ನಡುವಿನ ಶಂಭು ಮತ್ತು ಖಾನೌರಿ ಗಡಿಯಲ್ಲಿ ನಡೆಸುತ್ತಿರುವ ಹೋರಾಟವನ್ನು ತೀವ್ರಗೊಳಿಸಲಾಗುವುದು. ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ರೈತರು ನಮ್ಮ ಜೊತೆ ಸೇರಿಕೊಳ್ಳಲಿದ್ದಾರೆ ಎಂದು ರೈತರು ತಿಳಿಸಿದ್ದಾರೆ.

“ಗಡಿಯಲ್ಲಿ ಹರಿಯಾಣ ಪೊಲೀಸರು ಯಾವುದೇ ದಬ್ಬಾಳಿಕೆ ನಡೆಸದಿದ್ದರೆ ನಾವು ಶಾಂತಿಯುತ ರೀತಿಯಲ್ಲಿ ದೆಹಲಿಗೆ ಮೆರವಣಿಗೆ ನಡೆಸುತ್ತೇವೆ. ಇಲ್ಲದಿದ್ದರೆ, ಪ್ರಸ್ತುತ ಗಡಿಗಳಲ್ಲಿ ನಡೆಸುತ್ತಿರುವ ಹೋರಾಟವನ್ನು ತೀವ್ರಗೊಳಿಸಲಾಗುವುದು. ಪಂಜಾಬ್‌ ಮಾತ್ರವಲ್ಲದೆ ಇತರ ರಾಜ್ಯಗಳಲ್ಲಿಯೂ ಹೆಚ್ಚಿನ ಸಂಖ್ಯೆಯಲ್ಲಿ ರೈತರನ್ನು ಒಗ್ಗೂಡಿಸುತ್ತೇವೆ” ಎಂದು ಕಿಸಾನ್ ಮಜ್ದೂರ್ ಮೋರ್ಚಾ (ಕೆಎಂಎಂ) ಸದಸ್ಯ ರಮಣದೀಪ್ ಸಿಂಗ್ ಮಾನ್ ಹೇಳಿರುವುದಾಗಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

“ಶಂಭು ಮತ್ತು ಖಾನೌರಿಯಲ್ಲಿ ನಮ್ಮ ಒಕ್ಕೂಟಗಳು ಹೋರಾಟ ಮುಂದುವರೆಸಿದೆ. ನಾವು ಹೆಚ್ಚಿನ ಟಾರ್ಪಾಲಿನ್ ಶೀಟ್‌ಗಳು ಮತ್ತು ತಾತ್ಕಾಲಿಕ ಟೆಂಟ್‌ಗಳನ್ನು ಹಾಕಿದ್ದೇವೆ. ಭಾನುವಾರ ಮಧ್ಯಾಹ್ನ ಶುಭಕರನ್ ಅವರ ಪ್ರಾರ್ಥನಾ ಸಭೆಯ ನಂತರ ಮುಂದಿನ ಹೋರಾಟದ ರೂಪುರೇಷೆ ಸಿದ್ದಪಡಿಸಲಾಗುವುದು. ಪಂಜಾಬ್‌ನ ಪ್ರತಿಯೊಬ್ಬ ವ್ಯಕ್ತಿಯೂ ಶುಭಕರನ್ ಅವರ ಊರು ಬಟಿಂಡಾ ಜಿಲ್ಲೆಯ ಬಲ್ಲೋಹ್‌ನಲ್ಲಿ ಕೊನೆಯ ಪ್ರಾರ್ಥನಾ ಸಭೆಗೆ ಸೇರುವಂತೆ ನಾನು ಮನವಿ ಮಾಡುತ್ತೇನೆ” ಎಂದು ಕೆಎಂಎಂ ಸಂಯೋಜಕ ಸರ್ವಾನ್ ಸಿಂಗ್ ಪಂಧೇರ್ ಹೇಳಿದ್ದಾರೆ.

ಎಸ್‌ಕೆಎಂ (ರಾಜಕೀಯೇತರ) ಮತ್ತು ಕೆಎಂಎಂ ನೇತೃತ್ವದಲ್ಲಿ ಭಾನುವಾರ ಪ್ರಾರ್ಥನಾ ಸಭೆ ನಡೆಯಲಿದೆ. ಪಂಜಾಬ್, ಹರಿಯಾಣ, ರಾಜಸ್ಥಾನ ಮತ್ತು ಉತ್ತರ ಪ್ರದೇಶದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಶುಭಕರನ್ ಅವರ ಪಾರ್ಥಿವ ಶರೀರವನ್ನು ಅಂತಿಮ ವಿಧಿವಿಧಾನಗಳಿಗಾಗಿ ಗುರುವಾರ ಅವರ ಸ್ವಗ್ರಾಮ ಬಲ್ಲೋಗೆ ಕೊಂಡೊಯ್ಯಲಾಗಿದೆ.

“ಮುಂದಿನ ದಿನಗಳಲ್ಲಿ ಮಧ್ಯಪ್ರದೇಶ, ಕರ್ನಾಟಕ, ತಮಿಳುನಾಡು, ರಾಜಸ್ಥಾನ ಮುಂತಾದ ರಾಜ್ಯಗಳ ಪ್ರತಿಭಟನಾಕಾರರು ದೆಹಲಿಯತ್ತ ಮೆರವಣಿಗೆ ನಡೆಸಲಿದ್ದಾರೆ. ಅವರನ್ನು ಎಲ್ಲಿ ತಡೆದು ನಿಲ್ಲಿಸಲಾಗುತ್ತದೋ, ಅಲ್ಲಿಯೇ ಕುಳಿತುಕೊಂಡು ಪ್ರತಿಭಟನೆ ನಡೆಸಲಿದ್ದಾರೆ” ಎಂದು ರಮಣದೀಪ್ ಸಿಂಗ್ ಮಾನ್ ಹೇಳಿದ್ದಾರೆ.

ಬಿಕೆಯು (ಕ್ರಾಂತಿಕಾರಿ) ಪ್ರಧಾನ ಕಾರ್ಯದರ್ಶಿ ಬಲದೇವ್ ಸಿಂಗ್ ಝಿರಾ ಅವರು, “ನಮ್ಮ ದಿಲ್ಲಿ ಚಲೋ ಕರೆ ಮುಂದುವರೆಯಲಿದೆ. ಆದರೆ, ಭದ್ರತಾ ಪಡೆಗಳ ಕೈಯಲ್ಲಿ ಇನ್ನು ಮುಂದೆ ಯಾವುದೇ ಶುಭಕರನ್‌ಗಳು ಸಾಯುವುದನ್ನು ನಾವು ಬಯಸುವುದಿಲ್ಲ. ಅವರು ನಮಗೆ ಶಾಂತಿಯುತವಾಗಿ ದೆಹಲಿಗೆ ತೆರಳಲು ಅವಕಾಶ ನೀಡಿದರೆ, ನಾವು ದೆಹಲಿಗೆ ಮೆರವಣಿಗೆ ಮಾಡುತ್ತೇವೆ. ಇಲ್ಲದಿದ್ದರೆ ಗಡಿಯಲ್ಲಿ ನಮ್ಮ ಧರಣಿ ತೀವ್ರಗೊಳಿಸುತ್ತೇವೆ” ಎಂದಿದ್ದಾರೆ.

“ಶಾಂತಿಯುತ ಪ್ರತಿಭಟನೆ ನಡೆಸುತ್ತಿರುವ ರೈತರ ವಿರುದ್ಧ ದಬ್ಬಾಳಿಕೆಯ ವಿಧಾನಗಳನ್ನು ಬಳಸುತ್ತಿರುವ ಕೇಂದ್ರ ಮತ್ತು ಹರಿಯಾಣ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಬಿಕೆಯು-ಏಕ್ತಾ (ಆಜಾದ್) ಅಧ್ಯಕ್ಷ ಜಸ್ವಿಂದರ್ ಸಿಂಗ್ ಲೊಂಗೊವಾಲ್, “ಇದು ಕೇವಲ ಅಶ್ರುವಾಯು ಅಥವಾ ಲಘು ಲಾಠಿ ಚಾರ್ಜ್ ಅನ್ನು ಬಳಸುವ ಪ್ರಶ್ನೆಯಲ್ಲ. ಪೊಲೀಸರು ವಿಷಕಾರಿ ಅನಿಲಗಳನ್ನು ಬಳಸಿರುವುದನ್ನು ನಾವು ನೋಡಿದ್ದೇವೆ. ನಾವು ಶುಭಕರನ್ ಅನ್ನು ಹೇಗೆ ಕಳೆದುಕೊಂಡೆವು ಎಂಬುದು ಎಲ್ಲರಿಗೂ ಗೊತ್ತಿದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ : ಪ್ರತಿಭಟನಾ ನಿರತ ರೈತರ ಪಾಸ್‌ಪೋರ್ಟ್‌ ರದ್ದತಿಗೆ ಮುಂದಾದ ಹರಿಯಾಣ ಸರ್ಕಾರ; ಕಾನೂನು ಏನು ಹೇಳುತ್ತದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...