Homeಮುಖಪುಟದೆಹಲಿ ಬಂದ್ ಮಾಡುವುದಾಗಿ ರೈತರ ಎಚ್ಚರಿಕೆ: ತಡರಾತ್ರಿ BJP ಸಭೆ ನಡೆಸಿದ ಅಮಿತ್ ಶಾ

ದೆಹಲಿ ಬಂದ್ ಮಾಡುವುದಾಗಿ ರೈತರ ಎಚ್ಚರಿಕೆ: ತಡರಾತ್ರಿ BJP ಸಭೆ ನಡೆಸಿದ ಅಮಿತ್ ಶಾ

ಸೋನಿಪತ್, ರೋಹ್ಟಕ್, ಜೈಪುರ, ಗಾಜಿಯಾಬಾದ್-ಹಾಪುರ ಮತ್ತು ಮಥುರಗಳಲ್ಲಿ ರಸ್ತೆಯನ್ನು ಮುಚ್ಚುವ ಮೂಲಕ ದೆಹಲಿಯನ್ನು ಬಂದ್ ಮಾಡುತ್ತೇವೆ ಎಂದು ರೈತರು ಎಚ್ಚರಿಕೆ ನೀಡಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೊಳಿಸಿರುವ ವಿವಾದಾತ್ಮಕ ಕೃಷಿ ಕಾಯ್ದೆಗಳನ್ನು ವಿರೋಧಿಸಿ, ರೈತರ ಎಲ್ಲಾ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಘೋಷಿಸಲು ಆಗ್ರಹಿಸಿ ದೆಹಲಿಯಲ್ಲಿ ದೇಶದ ರೈತರು ನಡೆಸುತ್ತಿರುವ ಪ್ರತಿಭಟನೆ 6 ನೇ ದಿನಕ್ಕೆ ಕಾಲಿಟ್ಟಿದೆ. ದಿನೇ ದಿನೇ ಪ್ರತಿಭಟನೆ ಉಗ್ರ ರೂಪ ಪಡೆದುಕೊಳ್ಳುತ್ತಿದ್ದು ಕೇಂದ್ರದ ಮಾತುಕತೆ ಪ್ರಸ್ತಾಪವನ್ನು ರೈತರು ತಿರಸ್ಕರಿಸಿದ್ದಾರೆ. ಮೂರು ಕರಾಳ ಕಾಯ್ದೆಗಳನ್ನು ಹಿಂತೆಗೆದುಕೊಳ್ಳದಿದ್ದಲ್ಲಿ ದೆಹಲಿ ಪ್ರವೇಶಿಸುವ ಮೂರು ಮುಖ್ಯ ಸ್ಥಳಗಳನ್ನ ಬಂದ್ ಮಾಡಲು ನಿರ್ಧರಿಸಿದ್ದಾರೆ.

ಕೃಷಿಯನ್ನು ಕಾರ್ಪೊರೇಟ್ ಕುಳಗಳ ವಶವನ್ನಾಗಿ ಮಾಡುವ ಈ ರೈತ ವಿರೋಧಿ ಕಾಯ್ದೆಗಳನ್ನು ಸರ್ಕಾರ ವಾಪಸ್ ಪಡೆದುಕೊಳ್ಳುವವರೆಗೂ ಹೋರಾಟ ನಡೆಸುತ್ತೇವೆ. ನಮ್ಮ ಬಳಿ 3-4 ತಿಂಗಳಿಗಾಗುವಷ್ಟು ರೇಷನ್ ಇದೆ. ಹಾಗಾಗಿ ಪ್ರತಿಭಟನೆ ಅನಿರ್ದಿಷ್ಠಾವಧಿ ನಡೆಯಲಿದೆ. ಸರ್ಕಾರ ನಮ್ಮ ಪ್ರತಿಭಟನೆಯನ್ನು ನಿರ್ಲಕ್ಷಿಸಲು ಪ್ರಯತ್ನಿಸಿದರೆ ದೆಹಲಿ ಪ್ರವೇಶಿಸುವ 5 ಮುಖ್ಯ ಸ್ಥಳಗಳನ್ನು ಬಂದ್ ಮಾಡುವ ಮೂಲಕ ಬಿಸಿ ಮುಟ್ಟಿಸುತ್ತೇವೆ ಎಂದು ಭಾರತೀಯ ಕಿಸಾನ್ ಯೂನಿಯನ್‌ನ ಅಧ್ಯಕ್ಷ ಸುರ್ಜಿತ್ ಪೌಲ್ ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಬುರಾರಿ ಮೈದಾನದಲ್ಲಿ ಪ್ರತಿಭಟನೆ ನಡೆಸಿ ಎಂದು ಹೇಳುತ್ತಿದೆ. ಆದರೆ ಅದೊಂದು ಬಹಿರಂಗ ಬಂಧಿಖಾನೆ ಅಷ್ಟೇ. ನಾವು ಆ ಮೈದಾನ ಪ್ರವೇಶಿಸಿದರೆ ನಮ್ಮನ್ನು ಬಂಧಿಸಿ ಕಿರುಕುಳ ನೀಡಲು ಸರ್ಕಾರಕ್ಕೆ ಸಾಧ್ಯವಾಗುತ್ತದೆ. ಹಾಗಾಗಿ ನಾವು ಆ ಮೈದಾನಕ್ಕೆ ಹೋಗುವುದಿಲ್ಲ. ಬದಲಿಗೆ ರಾಮಲೀಲಾ ಮೈದಾನದಲ್ಲಿ ಪ್ರತಿಭಟನೆ ನಡೆಸಲು ಅವಕಾಶ ಕೊಡಲಿ. ಇಲ್ಲದಿದ್ದಲ್ಲಿ ಸೋನಿಪತ್, ರೋಹ್ಟಕ್, ಜೈಪುರ, ಗಾಜಿಯಾಬಾದ್-ಹಾಪುರ ಮತ್ತು ಮಥುರಗಳಲ್ಲಿ ರಸ್ತೆಯನ್ನು ಮುಚ್ಚುವ ಮೂಲಕ ದೆಹಲಿಯನ್ನು ಬಂದ್ ಮಾಡುತ್ತೇವೆ ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ನಮ್ಮನ್ನು ಬುರಾರಿ ಮೈದಾನಕ್ಕೆ ಕಳಿಸಿ ಅದನ್ನು ಜೈಲಾಗಿ ಪರಿವರ್ತನೆ ಮಾಡಲು ಪೊಲೀಸರು ಕುತಂತ್ರ ನಡೆಸಿದ್ದಾರೆ ಎಂಬುದು ನಮ್ಮ ಗಮನಕ್ಕೆ ಬಂದಿದೆ. ಆದರೆ ನಾವು ಅಲ್ಲಿಗೆ ಹೋಗುವುದಿಲ್ಲ. ಎಷ್ಟು ದಿನವಾದರೂ ಸರಿಯೇ ದೆಹಲಿಯ ಬೀದಿಗಳಲ್ಲಿ ಪ್ರತಿಭಟನೆ ನಡೆಸುತ್ತೇವೆ. ನಮ್ಮ ಕೇಂದ್ರ ಸಮಿತಿ ನಿರ್ಣಯ ತೆಗೆದುಕೊಳ್ಳುತ್ತದೆ. ನಮ್ಮ ಚಿತ್ತವೇನಿದ್ದರೂ ಈ ಜನವಿರೋಧಿ ಸರ್ಕಾರದ ವಿರುದ್ಧ ಹೋರಾಟ ಮಾತ್ರ ಎಂದು ರೈತರು ತಿಳಿಸಿದ್ದಾರೆ.

ರೈತರು ಮಾತುಕತೆ ಪ್ರಸ್ತಾಪ ತಿರಸ್ಕರಿಸಿದ ನಂತರ ಗೃಹ ಸಚಿವ ಅಮಿತ್ ಶಾ ತಡರಾತ್ರಿ ಹಿರಿಯ ಬಿಜೆಪಿ ಮುಖಂಡರ ಸಭೆ ನಡೆಸಿದ್ದಾರೆ. ಪಕ್ಷದ ಅಧ್ಯಕ್ಷ ಜೆ.ಪಿ ನಡ್ಡಾರವರ ಮನೆಯಲ್ಲಿ ನಡೆದ ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಕೃಷಿ ಮಂತ್ರಿ ನರೇಂದ್ರ ಸಿಂಗ್ ತೋಮರ್ ಭಾಗವಹಿಸಿದ್ದರು ಎನ್ನಲಾಗಿದೆ. ಸಭೆಯಲ್ಲಿ ಏನು ತೀರ್ಮಾನವಾಗಿದೆ ಎಂಬುದು ತಿಳಿದುಬಂದಿಲ್ಲ.

ನವೆಂಬರ್ 25 ರಂದು ರೈತರು ದೆಹಲಿ ಚಲೋ ನಡೆಸಲು ದೆಹಲಿ ಪ್ರವೇಶಿಸಲು ಮುಂದಾದಾಗ ಪೊಲೀಸರು ಅವರನ್ನು ತಡೆದರು. ಅಲ್ಲಿಂದ ಈ ಐದು ದಿನಗಳಲ್ಲಿ ನೂರಾರು ಬಾರಿ ರೈತರ ಮೇಲೆ ಲಾಠೀಚಾರ್ಜ್ ಮಾಡಲಾಗಿದೆ. ಜಲಫಿರಂಗಿ, ಅಶ್ರುವಾಯು ಸಿಡಿಸಲಾಗಿದೆ. ನೂರಾರು ಕಡೆ ರೈತರನ್ನು ತಡೆಯಲಾಗಿದೆ. ಮಾತ್ರವಲ್ಲದೇ ಇಡೀ ಬಿಜೆಪಿ ಮತ್ತು ಹಲವು ಮಾಧ್ಯಮಗಳು ಇದು ಕಾಂಗ್ರೆಸ್ ರೈತರ ಹೋರಾಟ, ಇವರೆಲ್ಲಾ ರೈತರಲ್ಲ ಎಂದು ಪ್ರಚಾರ ಮಾಡುವ ಮೂಲಕ ಅವಮಾನಿಸಲಾಗಿದೆ. ಆದರೆ ರೈತರು ಮಾತ್ರ ಎದೆಗುಂದಿಲ್ಲ. ಈ ಹೋರಾಟವನ್ನು ಜೀವನ್ಮರಣದ ಪ್ರಶ್ನೆಯನ್ನಾಗಿ ರೈತರು ಭಾವಿಸಿದ್ದಾರೆ. ಹಾಗಾಗಿ ಈ ಕಾಯ್ದೆಗಳನ್ನು ವಾಪಸ್ ಕಳಿಸಿಯೇ ಮನೆಗೆ ತೆರಳುವ ಶಪಥ ಮಾಡಿದ್ದಾರೆ.

ಮಹಿಳಾ ರೈತರು ಹೋರಾಟದಲ್ಲಿ ಬಹುಮುಖ್ಯ ಪಾತ್ರವಹಿಸಿದ್ದಾರೆ. ಟ್ರಾಕ್ಟರ್‌ಗಳಲ್ಲಿ ಮಲಗಿ, ರಸ್ತೆ ಬದಿಯೇ ಸ್ನಾನ ಮಾಡಿದರೂ ಸರಿಯೇ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದು ತೀರ್ಮಾನಿಸಿದ್ದಾರೆ. ಕೇಂದ್ರ ಸರ್ಕಾರ ಆರಂಭದಲ್ಲಿ ಈ ರೈತರ ಹೋರಾಟವನ್ನು ದಮನ ಮಾಡಲು ಯತ್ನಿಸಿತು. ಆದರೆ ಪಂಜಾಬ್, ಹರಿಯಾಣದ ರೈತರು ಸಾಕಷ್ಟು ಸಂಖ್ಯೆಯಲ್ಲಿ ದೆಹಲಿ ಪ್ರವೇಶಿಸಿ ಹೋರಾಟವನ್ನು ತೀವ್ರಗೊಳಿಸಿದರು. ಈಗ ಸರ್ಕಾರ ಡಿಸೆಂಬರ್ 03 ರಂದು ರೈತ ಮುಖಂಡರನ್ನು ಮಾತುಕತೆಗೆ ಕರೆದಿದೆ. ಆದರೆ ರೈತರು ದೆಹಲಿ ಬಿಟ್ಟು ಕದಲುವುದಿಲ್ಲ ಎಂದು ತೀರ್ಮಾನಿಸಿದ್ದಾರೆ. ಈ ಹೋರಾಟ ಮುಂದೆ ಯಾವ ಸ್ವರೂಪ ಪಡೆದುಕೊಳ್ಳುತ್ತದೆ ಕಾದು ನೋಡಬೇಕಿದೆ.


ಇದನ್ನೂ ಓದಿ: ನಾನುಗೌರಿ ವಿಶೇಷ | ದೆಹಲಿ ರೈತ ಹೋರಾಟದ ಸಾಕ್ಷಾತ್ ಅನುಭವ, ಕರ್ನಾಟಕದ ಪ್ರತಿನಿಧಿಯಿಂದ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...