Homeಕರ್ನಾಟಕರೈತರ ಗಣರಾಜ್ಯೋತ್ಸವ: ತುಮಕೂರಿನಲ್ಲಿ ಟ್ರಾಕ್ಟರ್‌‌‌‌ ತಡೆದ ಪೊಲೀಸರು

ರೈತರ ಗಣರಾಜ್ಯೋತ್ಸವ: ತುಮಕೂರಿನಲ್ಲಿ ಟ್ರಾಕ್ಟರ್‌‌‌‌ ತಡೆದ ಪೊಲೀಸರು

ಸರ್ಕಾರ ಪೊಲೀಸರನ್ನು ಮುಂದಿಟ್ಟುಕೊಂಡು ಪ್ರತಿಭಟನೆಯನ್ನು ತಡೆಯಲು ಮುಂದಾದರೂ ಟ್ರಾಕ್ಟರ್‌‌‌‌ಗಳು ಬೆಂಗಳೂರಿಗೆ ತೆರಳಲಿವೆ ಎಂದು ರೈತರು ಎಚ್ಚರಿಸಿದ್ದಾರೆ.

- Advertisement -
- Advertisement -

ರೈತರ ಟ್ರ್ಯಾಕ್ಟರ್‌‌ ಪರೇಡ್‌ಗೆ ಅನುಮತಿ ನೀಡಿ ಪೊಲೀಸರ ಮೂಲಕ ಟ್ರಾಕ್ಟರ್‌‌‌‌‌ಗಳು ಬೆಂಗಳೂರು ಕಡೆಗೆ ಹೋಗದಂತೆ ನಿಯಂತ್ರಿಸಲು ಹೊರಟಿರುವ ರಾಜ್ಯ ಸರ್ಕಾರದ ದ್ವಂದ್ವ ನೀತಿಯ ಬಗ್ಗೆ ರೈತ ಸಂಘಟನೆಗಳಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಟ್ರಾಕ್ಟರ್‌‌‌‌ ಪರೇಡ್ ನಡೆಸಬಹುದು. ಅದಕ್ಕೆ ಪೊಲೀಸರ ಅನುಮತಿ ಅಗತ್ಯ ಎಂದು ಸರ್ಕಾರ ಹೇಳಿತ್ತು. ಈಗ ಪೊಲೀಸರನ್ನು ಛೂಬಿಟ್ಟು ಟ್ರಾಕ್ಟರ್‌‌‌‌ಗಳು ಬೆಂಗಳೂರಿಗೆ ತೆರಳದಂತೆ ಅಲ್ಲಲ್ಲಿ ತಡೆಯುವ ಕೆಲಸ ನಡೆಯುತ್ತಿದೆ. ಇದು ಪ್ರಜಾಪ್ರಭುತ್ವ ಮೌಲ್ಯಗಳಿಗೆ ವಿರುದ್ಧ ನಡೆಯಾಗಿದೆ ಎಂದು ರೈತ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ.

ತುಮಕೂರು ಜಿಲ್ಲೆಯ ವಿವಿಧ ತಾಲೂಕುಗಳಿಂದ ರೈತರು ಸ್ವಯಂ ಪ್ರೇರಿತರಾಗಿ ತಮ್ಮ ಟ್ರಾಕ್ಟರ್‌‌‌‌ಗಳನ್ನು ಬೆಂಗಳೂರಿಗೆ ತೆಗೆದುಕೊಂಡು ಹೊರಟಿದ್ದರು. ತಿಪಟೂರಿನಿಂದ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆಯ ಮುಖಂಡರು ಮತ್ತು ಕಾರ್ಯಕರ್ತರು ಟ್ರಾಕ್ಟರ್‌‌‌‌ಗಳಲ್ಲಿ ಬೆಂಗಳೂರಿಗೆ ತೆರಳುತ್ತಿದ್ದರು. ಮಾರ್ಗ ಮಧ್ಯೆ ಅಂದರೆ ಕೆ.ಬಿ. ಕ್ರಾಸ್‌ನಲ್ಲಿ ಪರೇಡ್ ಗೆ ತೆರಳುತ್ತಿದ್ದ ಟ್ರಾಕ್ಟರ್‌‌‌‌ಗಳನ್ನು ಪೊಲೀಸರು ತಡೆಹಿಡಿದು ರೈತರಿಗೆ ಅನಗತ್ಯ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಮಹಾರಾಷ್ಟ್ರದ 21 ಜಿಲ್ಲೆಯಿಂದ ಮುಂಬೈಗೆ ಭೋರ್ಗರೆದ ರೈತರ ದಂಡು

ಕೆ.ಬಿ. ಕ್ರಾಸ್‌ನಲ್ಲಿ ಹತ್ತುಕ್ಕೂ ಹೆಚ್ಚು ಟ್ರಾಕ್ಟರ್‌‌‌‌ಗಳನ್ನು ತಡೆಯುತ್ತಿದ್ದಂತೆ ರೈತ ಮುಖಂಡರು ಪೊಲೀಸರಿಗೆ ಮನವಿ ಮಾಡಿ ಶಾಂತಿಯುತ ಪರೇಡ್‌ಗೆ ತೆರಳುತ್ತಿದ್ದೇವೆ. ಯಾವುದೇ ಸಮಸ್ಯೆಯಾಗದಂತೆ ಬೆಂಗಳೂರಿಗೆ ತೆರಳುತ್ತೇವೆ. ಮುಂದೆ ಹೋಗಲು ಅವಕಾಶ ಕೊಡಿ ಎಂದು ಕೆ.ಬಿ.ಕ್ರಾಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್‌ಗೆ ಮನವಿ ಮಾಡಿದ್ದಾರೆ. ತಮ್ಮ ನಾಯಕರಿಗೂ ಫೋನ್ ಮಾಡಿ ವಿಷಯ ತಿಳಿಸಿದ್ದಾರೆ. ಮೊದಲು ಬಿಡುತ್ತೇವೆ ಎಂದು ಹೇಳಿದ ಸಬ್‌ಇನ್ಸ್‌ಪೆಕ್ಟರ್ ನಂತರ ಸರ್ಕಲ್ ಇನ್ಸ್‌ಪೆಕ್ಟರ್ ಬರಬೇಕು, ಅಲ್ಲಿಯವರೆಗೂ ಮುಂದೆ ಹೋಗುವಂತಿಲ್ಲ ಎಂದು ರೈತರ ಮೇಲೆ ದೌರ್ಜನ್ಯಕ್ಕೆ ಮುಂದಾದರು ಎಂದು ಹೇಳಲಾಗಿದೆ.

ರೈತರ ಮನವಿಗೂ ಸಬ್ ಇನ್ಸ್‌ಪೆಕ್ಟರ್ ಸ್ಪಂದಿಸದಿದ್ದಾಗ ರೈತರು ಪೊಲೀಸರೊಂದಿಗೆ ವಾಗ್ವಾದಕ್ಕೆ ಇಳಿದರು. ಪೊಲೀಸರು ದೌರ್ಜನ್ಯ ನಡೆಸುವುದನ್ನು ನಿಲ್ಲಿಸಬೇಕು. ಸರ್ಕಾರ ಪ್ರತಿಭಟನೆಯನ್ನು ಹತ್ತಿಕ್ಕಲು ಹೊರಟಿದೆ. ಇದು ಪ್ರಜಾಪ್ರಭುತ್ವಕ್ಕೆ ಮಸಿ ಬಳಿದಂತೆ ಆಗಿದೆ. ಸರ್ಕಾರಕ್ಕೆ ಧಿಕ್ಕಾರ. ಶಾಂತಿಯುತ ಪ್ರತಿಭಟನೆಗೂ ಪೊಲೀಸರು ಅನುಮತಿ ನೀಡುತ್ತಿಲ್ಲ. ಟ್ರಾಕ್ಟರ್‌‌‌‌ಗಳನ್ನು ತಡೆದು ರೈತರ ಹಕ್ಕುಗಳನ್ನು ಕಿತ್ತುಕೊಳ್ಳಲು ಹೊರಟಿದೆ. ಇದನ್ನು ಖಂಡಿಸುತ್ತೇವೆ ಎಂದು ಬೆಂಗಳೂರಿಗೆ ತೆರಳುತ್ತಿದ್ದ ಪೊಲೀಸರಿಂದ ತಡೆಗೆ ಒಳಗಾದ ರೈತ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: ಪೊಲೀಸರು ರೈತರ ಟ್ರ್ಯಾಕ್ಟರ್‌ಗಳನ್ನು ತಡೆದರೆ ರಾಜ್ಯಾದ್ಯಂತ ರಸ್ತೆ ಬಂದ್: ಬಡಗಲಪುರ ನಾಗೇಂದ್ರ ಎಚ್ಚರಿಕೆ

ರೈತ ಸಂಘದ ತುಮಕೂರು ಜಿಲ್ಲಾಧ್ಯಕ್ಷ ಆನಂದ್ ಪಟೇಲ್ ನಾನುಗೌರಿ.ಕಾಂ ಜೊತೆ ದೂರವಾಣಿಯಲ್ಲಿ ಮಾತನಾಡಿ, “ಸರ್ಕಾರ ಸರ್ವಾಧಿಕಾರದಿಂದ ವರ್ತಿಸುತ್ತಿದೆ. ರೈತರು ಶಾಂತಿಯುತವಾಗಿ ಯಾರಿಗೂ ತೊಂದರೆ ಕೊಡದಂತೆ ಬೆಂಗಳೂರಿಗೆ ತೆರಳುತ್ತಿದ್ದಾರೆ. ಅವರನ್ನು ಕೆ.ಬಿ.ಕ್ರಾಸ್‌ನಲ್ಲಿ ಪೊಲೀಸರು ತಡೆದಿರುವುದು ಖಂಡನೀಯ. ಸಬ್ ಇನ್ಸ್‌‌ಪೆಕ್ಟರ್‌‌ಗೆ ಮನವಿ ಮಾಡಿದರೂ ಕೇಳುತ್ತಿಲ್ಲ. ರಾಜ್ಯ ಸರ್ಕಾರ  ಪೊಲೀಸರ ಮೂಲಕ ಪ್ರತಿಭಟನೆಯನ್ನು ಹತ್ತಿಕ್ಕಲು ಹೊರಟಿದೆ. ಮೊದಲು ಪರೇಡ್‌ಗೆ ಅನುಮತಿ ನೀಡಿತು. ಈಗ ಪೊಲೀಸರ ಮೂಲಕ ಟ್ರ್ಯಾಕ್ಟರ್ ಪರೇಡ್ ನಡೆಯುವುದನ್ನು ತಡೆಯುತ್ತಿದೆ. ಇದು ಸರ್ಕಾರದ ದ್ವಂದ್ವ ನಿಲುವು. ಸರ್ಕಾರ ವಿವಾದಿತ ಕೃಷಿ ಕಾನೂನುಗಳನ್ನು ವಾಪಸ್ ಪಡೆಯಬೇಕು. ಅಲ್ಲಿಯವರೆಗೂ ಪ್ರತಿಭಟನೆ ನಿಲ್ಲಿಸುವುದಿಲ್ಲ” ಎಂದು ಎಚ್ಚರಿಕೆ ನೀಡಿದರು.

ತುಮಕೂರು ಜಿಲ್ಲೆಯಲ್ಲಿ ಬೆಂಗಳೂರಿಗೆ ತೆರಳುತ್ತಿದ್ದ ಟ್ರ್ಯಾಕ್ಟರ್‌ಗಳನ್ನು ಪೊಲೀಸರು ತಡೆದಿರುವ ಕ್ರಮಕ್ಕೆ ರೈತ ಸಂಘಟನೆಯ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದು ಈ ಸರ್ಕಾರ ರೈತರನ್ನು ಮುಗಿಸಲು ಹೊರಟಿದೆ. ಬಂಡವಾಳಶಾಹಿಗಳಿಗೆ ಮಣೆ ಹಾಕುತ್ತಿದೆ. ಬಡ ರೈತರನ್ನು ಕೃಷಿಯಿಂದ ವಿಮುಖಗೊಳ್ಳುವಂತೆ ಮಾಡಿ ಕಾರ್ಪೋರೇಟ್ ಕೃಷಿಗೆ ರತ್ನಗಂಬಳಿ ಹಾಸಲು ಹೊರಟಿದೆ. ಕೃಷಿ ಕಾಯ್ದೆಗಳು ಸಂಪೂರ್ಣ ಜಾರಿಯಾದರೆ ಇಡೀ ಜನತೆ ತೀವ್ರ ಸಂಕಷ್ಟಕ್ಕೆ ಗುರಿಯಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂ ಓದಿ: ಟ್ರಾಕ್ಟರ್‌ ರ್‍ಯಾಲಿ: ರೈತರು ತಮಗೆ ತಾವೇ ಅಳವಡಿಸಿಕೊಂಡ ಮಾರ್ಗಸೂಚಿಗಳು ಇಲ್ಲಿವೆ!

ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಜಿಲ್ಲಾಧ್ಯಕ್ಷ ಎ.ಗೋವಿಂದರಾಜು ಮಾತನಾಡಿ, “ಟ್ರಾಕ್ಟರ್‌‌‌‌ ತಡೆದಿರುವ ಕ್ರಮ ಖಂಡನೀಯ. ಸರ್ಕಾರಕ್ಕೆ ಗೌರವ ಇದ್ದರೆ ರೈತರನ್ನು ಗೌರವದಿಂದ ನಡೆಸಿಕೊಳ್ಳಬೇಕು.  ಟ್ರಾಕ್ಟರ್‌‌‌‌ ತಡೆಯುವುದರಿಂದ ಚಳವಳಿಯನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂಬುದನ್ನು ಸರ್ಕಾರ ಅರ್ಥ ಮಾಡಿ ಕೊಳ್ಳಬೇಕು. ರೈತರೊಂದಿಗೆ ಪೊಲೀಸರು ಸೌಜನ್ಯದಿಂದ ನಡೆದುಕೊಳ್ಳಬೇಕು. ಎಲ್ಲಿ ಜನರನ್ನು ತಡೆಯಲಾಗುವುದೊ ಅಲ್ಲೇ ಪ್ರತಿಭಟನೆ ತೀವ್ರಗೊಳ್ಳಲಿದೆ. ಅಹಿಂಸಾ ಮಾರ್ಗದಲ್ಲಿ ಪ್ರತಿಭಟನೆ ನಡೆಯುತ್ತಿದೆ. ನಾವು ಹಿಂಸೆಗೆ ಅವಕಾಶ ನೀಡುವುದಿಲ್ಲ. ಹಾಗಾಗಿ ಸರ್ಕಾರ ಮತ್ತು ಪೊಲೀಸರು ರೈತರನ್ನು ಗೌರವದಿಂದ ಕಾಣಬೇಕು ಮತ್ತು ಟ್ರಾಕ್ಟರ್‌‌‌‌ಗಳು ಬೆಂಗಳೂರಿಗೆ ತೆರಳಲು ಅನುವು ಮಾಡಿಕೊಡಬೇಕು” ಎಂದು ಆಗ್ರಹಿಸಿದರು.

“ಚಳವಳಿಯನ್ನು ಹತ್ತಿಕ್ಕಲು ಸರ್ಕಾರ ವಾಮಮಾರ್ಗ ಹಿಡಿಯುತ್ತಿದೆ. ಟ್ರಾಕ್ಟರ್‌‌‌‌ ಮಾಲಿಕರನ್ನು ಹೆದರಿಸುವ ಕೆಲಸ ಮಾಡುತ್ತಿದೆ. ಆರ್.ಟಿ.ಒ ಅಧಿಕಾರಿಗಳು ಟ್ರಾಕ್ಟರ್‌‌‌‌ಗಳ ದಾಖಲೆಗಳನ್ನು ಕೇಳುವ ಮೂಲಕ ಮಾಲಿಕರನ್ನು ಬೆದರಿಸುವ ಕೆಲಸ ಮಾಡುತ್ತಿದ್ದಾರೆ, ಇದು ಖಂಡನೀಯ. ಲಕ್ಷಾಂತರ ವಾಹನಗಳು ನಿತ್ಯವೂ ಯಾವುದೇ ದಾಖಲೆಗಳು ಇಲ್ಲದೆ ಸಂಚರಿಸುತ್ತಿವೆ. ಅವುಗಳ ದಾಖಲೆ ಕೇಳದ ಆರ್.ಟಿ.ಓ ಅಧಿಕಾರಿಗಳು ಈಗ ಟ್ರಾಕ್ಟರ್‌‌‌‌ ದಾಖಲೆ ಕೇಳುತ್ತಿರುವುದು ನಾಚಿಕೆಗೇಡಿನ ಸಂಗತಿ. ಚಳವಳಿಯನ್ನು ಹತ್ತಿಕ್ಕುವ ಹುನ್ನಾರ ನಿಲ್ಲಬೇಕು. ಸರ್ಕಾರ ಪೊಲೀಸರನ್ನು ಮುಂದಿಟ್ಟುಕೊಂಡು ಪ್ರತಿಭಟನೆಯನ್ನು ತಡೆಯಲು ಮುಂದಾದರೂ ಟ್ರಾಕ್ಟರ್‌‌‌‌ಗಳು ಬೆಂಗಳೂರಿಗೆ ತೆರಳಲಿವೆ” ಎಂದು ಎಚ್ಚರಿಸಿದ್ದಾರೆ.

ಇದನ್ನೂ ಓದಿ: ಗೆದ್ದ ಅನ್ನದಾತನ ಹಠ: ಟ್ರಾಕ್ಟರ್‌ ರ್‍ಯಾಲಿಗೆ ದೆಹಲಿ ಪೊಲೀಸರ ಅನುಮತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...