Homeಮುಖಪುಟಮೆರವಣಿಗೆ ಆರಂಭಿಸಿದ ರೈತರು; ದೆಹಲಿ-ಹರಿಯಾಣ ಗಡಿಯಲ್ಲಿ ಕಂದಕ, ಮುಳ್ಳಿನ ಬೇಲಿ

ಮೆರವಣಿಗೆ ಆರಂಭಿಸಿದ ರೈತರು; ದೆಹಲಿ-ಹರಿಯಾಣ ಗಡಿಯಲ್ಲಿ ಕಂದಕ, ಮುಳ್ಳಿನ ಬೇಲಿ

- Advertisement -
- Advertisement -

ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ) ಸೇರಿದಂತೆ ವಿವಿಧ ಬೇಡಿಕೆಗಳನ್ನಿಟ್ಟುಕೊಂಡು ಇಂದು ಹಲವು ರಾಜ್ಯಗಳ ರೈತರು ‘ದೆಹಲಿ ಚಲೋ’ ಹಮ್ಮಿಕೊಂಡಿದ್ದು, ‘ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕಿಸಾನ್ ಮಜ್ದೂರ್ ಮೋರ್ಚಾ’ ಸೇರಿದಂತೆ ಹಲವು ಸಂಘಟನೆಗಳು ಹರಿಯಾಣ, ಪಂಜಾಬ್ ಮತ್ತು ಉತ್ತರ ಪ್ರದೇಶ ಗಡಿಗಳಿಂದ ಮೆರವಣಿಗೆ ಆರಂಭಿಸಿದ್ದಾರೆ. ಇದೇ ಸಂಘಟನೆಗಳ ನೇತೃತ್ವದಲ್ಲಿ 2020-21 ರಲ್ಲಿ ವರ್ಷವಿಡೀ ನಡೆದ ಆಂದೋಲನದ ನಂತರ ಕೇಂದ್ರ ಸರ್ಕಾರ ಮೂರು ಕೃಷಿ ಕಾನೂಗಳನ್ನು ಹಿಂದೆಗೆದುಕೊಂಡು, ಎಂಎಸ್‌ಪಿಯನ್ನು ಕಾನೂನುಬದ್ಧಗೊಳಿಸುವುದಾಗಿ ಭರವಸೆ ನೀಡಿತ್ತು.

250ಕ್ಕೂ ಹೆಚ್ಚು ರೈತ ಸಂಘಗಳ ಬೆಂಬಲ ಹೊಂದಿರುವ ಕಿಸಾನ್ ಮಜ್ದೂರ್ ಮೋರ್ಚಾ ಮತ್ತು 150 ರೈತ ಒಕ್ಕೂಟಗಳ ವೇದಿಕೆಯಾದ ಸಂಯುಕ್ತ ಕಿಸಾನ್ ಮೋರ್ಚಾ ಡಿಸೆಂಬರ್‌ನಲ್ಲಿ ಪ್ರತಿಭಟನೆಗೆ ಕರೆ ನೀಡಿವೆ. ಪಂಜಾಬ್‌ನಿಂದ ಪ್ರಾರಂಭಗೊಂಡ ಸಂಘಟಿತವಾದ ಪ್ರತಿಭಟನೆಯು ಸರ್ಕಾರ ಎರಡು ವರ್ಷಗಳ ಹಿಂದೆ ನೀಡಿದ್ದ ಭರವಸೆಗಳನ್ನು ನೆನಪಿಸುವ ಉದ್ದೇಶ ಹೊಂದಿದೆ.

ಮುಖ್ಯವಾಗಿ ಪಂಜಾಬ್‌ನ ರೈತರು, ಹರಿಯಾಣ ಮತ್ತು ಉತ್ತರ ಪ್ರದೇಶ ಸಹ ಸಂಘಟನೆಗಳು ತಮ್ಮ ‘ಚಲೋ ದೆಹಲಿ’ ಮೆರವಣಿಗೆಯನ್ನು ಪ್ರಾರಂಭಿಸಿವೆ. ಕೇಂದ್ರ ಸರ್ಕಾರದೊಂದಿಗಿನ ಅವರ ಸಭೆಯು ಅನಿರ್ದಿಷ್ಟವಾಗಿ ಉಳಿದಿದೆ. ಮೆರವಣಿಗೆಯ ಮುನ್ನಾದಿನದಂದು, ಪಂಜಾಬ್, ಹರಿಯಾಣ ಮತ್ತು ಉತ್ತರ ಪ್ರದೇಶದ ರೈತ ಮುಖಂಡರು ಎರಡನೇ ಸುತ್ತಿನ ಮಾತುಕತೆಗಾಗಿ ಕೇಂದ್ರ ಸಚಿವರಾದ ಪಿಯೂಷ್ ಗೋಯಲ್ ಮತ್ತು ಅರ್ಜುನ್ ಮುಂಡಾ ಅವರನ್ನು ಭೇಟಿ ಮಾಡಿದರು. ಸಭೆಯು ಐದು ಗಂಟೆಗಳ ಕಾಲ ನಡೆಯಿತು, ಕೇಂದ್ರದ ಕೊನೆಯ ಪ್ರಯತ್ನವೂ ವಿಫಲವಾಗಿದ್ದು, ರಾಷ್ಟ್ರ ರಾಜಧಾಣಿಗೆ ಅನ್ನದಾತರು ಬರದಂತೆ ದೆಹಲಿ ಗಡಿಯಲ್ಲಿ ಕಂದಕ ತೋಡಲಾಗಿದೆ. ಸಿಮೆಂಡ್ ಬ್ಲಾಕ್‌ಗಳಿಂದ ರಸ್ತೆಗಳನ್ನು ಬಂದ್ ಮಾಡಲಾಗಿದೆ.

ರೈತರಿಗೆ ಸಂಬಂಧಿಸಿದ ಬಹುತೇಕ ವಿಷಯಗಳ ಬಗ್ಗೆ ಒಮ್ಮತಕ್ಕೆ ಬರಲಾಗಿದೆ ಎಂದು ಸಭೆಯ ನಂತರ ಕೇಂದ್ರ ಕೃಷಿ ಸಚಿವ ಮುಂಡಾ ತಿಳಿಸಿದರು. ಆದಾಗ್ಯೂ, ಮಂಗಳವಾರದಂದು ಮೆರವಣಿಗೆ ನಡೆಸುವುದಾಗಿ ರೈತರು ಪ್ರತಿಪಾದಿಸಿದರು. ಇದರಿಂದಾಗಿ ದೆಹಲಿಯಾದ್ಯಂತ ಅನೇಕ ರಾಜ್ಯಗಳ ಗಡಿಗಳನ್ನು ಮುಚ್ಚಲಾಗಿದೆ.

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು (ಎಂಎಸ್‌ಪಿ) ಖಾತರಿಪಡಿಸುವ ಕಾನೂನು ಜಾರಿಗೊಳಿಸುವುದು ಸೇರಿದಂತೆ ತಮ್ಮ ಬೇಡಿಕೆಗಳನ್ನು ಅಂಗೀಕರಿಸುವಂತೆ ಕೇಂದ್ರವನ್ನು ಒತ್ತಾಯಿಸಲು ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಮತ್ತು ಕಿಸಾನ್ ಮಜ್ದೂರ್ ಮೋರ್ಚಾ ಮಂಗಳವಾರದ ಮೆರವಣಿಗೆಯನ್ನು ನಡೆಸಲಿದೆ.

ಎಂಎಸ್‌ಪಿಯ ಕಾನೂನು ಖಾತರಿ ರೈತರ ಪ್ರತಿಭಟನೆಗೆ ಪ್ರಮುಖ ಕಾರಣವಾಗಿದೆ. ಇದಲ್ಲದೇ, ಸ್ವಾಮಿನಾಥನ್ ಆಯೋಗದ ಶಿಫಾರಸುಗಳನ್ನು ಜಾರಿಗೆ ತರಲು ಹಾಗೂ ಕೃಷಿ ಸಾಲ ಮನ್ನಾಕ್ಕೆ ರೈತರು ಒತ್ತಾಯಿಸಿದ್ದಾರೆ.

ಹರ್ಯಾಣ, ಪಂಜಾಬ್ ಮತ್ತು ಉತ್ತರ ಪ್ರದೇಶದ ರೈತರು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಎಂಎಸ್‌ಪಿ ಕಾನೂನು ಖಾತರಿ ಘೋಷಣೆಗಾಗಿ ಬೃಹತ್ ಪ್ರತಿಭಟನೆಯನ್ನು ಪ್ರಾರಂಭಿಸುತ್ತಿದ್ದಾರೆ. ತಮ್ಮ ಬೇಡಿಕೆಗಳನ್ನು ಅಂಗೀಕರಿಸುವಂತೆ ಕೇಂದ್ರವನ್ನು ಒತ್ತಾಯಿಸಲು ಕಳೆದ ವಾರ ‘ದೆಹಲಿ ಚಲೋ’ ಮೆರವಣಿಗೆಯನ್ನು ಘೋಷಿಸಲಾಗಿತ್ತು.

ರೈತರು ಕಾನೂನುಬದ್ಧ ಎಂಎಸ್‌ಪಿ ಗ್ಯಾರಂಟಿ, ರೈತರು ಮತ್ತು ಕೃಷಿ ಕಾರ್ಮಿಕರಿಗೆ ಪಿಂಚಣಿ, ಕೃಷಿ ಸಾಲ ಮನ್ನಾ ಮತ್ತು ಲಖಿಂಪುರ ಖೇರಿ ಹಿಂಸಾಚಾರದ ಸಂತ್ರಸ್ತರಿಗೆ “ನ್ಯಾಯ” ಮುಂತಾದ ಅನೇಕ ಷರತ್ತುಗಳನ್ನು ಮುಂದಿಟ್ಟಿದ್ದಾರೆ.

ದೆಹಲಿಯ ಸಿಂಗ್, ಟಿಕ್ರಿ ಮತ್ತು ಗಾಜಿಪುರ ಗಡಿಯಲ್ಲಿ ಭದ್ರತೆಯನ್ನು ತೀವ್ರಗೊಳಿಸಲಾಗಿದ್ದು, ವಾಹನಗಳ ಸಂಚಾರವನ್ನು ನಿರ್ಬಂಧಿಸಲು ಮತ್ತು ರಾಷ್ಟ್ರ ರಾಜಧಾನಿಯಲ್ಲಿ ಅಡಚಣೆಗಳನ್ನು ತಡೆಗಟ್ಟಲು ಸಿಮೆಂಟ್ ಬ್ಯಾರಿಕೇಡಿಂಗ್, ಲೋಹದ ಮೊಳೆಗಳು ಮತ್ತು ತಡೆಗೋಡೆಗಳನ್ನು ಸ್ಥಾಪಿಸಲಾಗಿದೆ.

ಮಂಗಳವಾರ ರೈತರ ಪ್ರತಿಭಟನೆಗೆ ಮುನ್ನ ಅನಾಹುತಗಳನ್ನು ತಡೆಯಲು ದೆಹಲಿ ಪೊಲೀಸರು ಭಾನುವಾರ ಉತ್ತರ ಪ್ರದೇಶ ಮತ್ತು ಹರ್ಯಾಣ ಗಡಿಗಳಲ್ಲಿ ಕ್ರಿಮಿನಲ್ ಪ್ರೊಸೀಜರ್ ಕೋಡ್‌ನ ಸೆಕ್ಷನ್ 144 ಅನ್ನು ವಿಧಿಸಿದ್ದಾರೆ. ದೆಹಲಿಯ ಗಡಿಯಲ್ಲಿ 50,000 ಕ್ಕೂ ಹೆಚ್ಚು ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಫೆಬ್ರವರಿ 13 ಕ್ಕೆ ಅಂಬಾಲಾ, ಕುರುಕ್ಷೇತ್ರ, ಕೈತಾಲ್, ಜಿಂದ್, ಹಿಸಾರ್, ಫತೇಹಾಬಾದ್ ಮತ್ತು ಸಿರ್ಸಾ – ಏಳು ಜಿಲ್ಲೆಗಳಲ್ಲಿ ಇಂಟರ್ನೆಟ್ ಮತ್ತು ಬಲ್ಕ್‌ ಎಸ್‌ಎಂಎಸ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.

ಇದನ್ನೂ ಓದಿ; ರೈತರಿಂದ ಇಂದು ‘ದಿಲ್ಲಿ ಚಲೋ’: ಕೇಂದ್ರದ ಮನವೊಲಿಸುವ ತಂತ್ರ ವಿಫಲ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...