Homeಕರ್ನಾಟಕಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

- Advertisement -
- Advertisement -

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ ಗ್ರಾಮದಲ್ಲಿ ಪರಿಸ್ಥಿತಿ ವಿಕೋಪಕ್ಕೆ ತಿರುಗಿದೆ. ಭಾರಿ ವಿರೋಧದ ನಡುವೆಯೂ ಜಂಟಿ ಅಳತೆ ಕಾರ್ಯಕ್ಕೆ (ಜೆಎಂಸಿ) ಆಗಮಿಸಿದ್ದ ಅಧಿಕಾರಿಗಳ ವಿರುದ್ಧ ಸ್ಥಳೀಯ ರೈತ ಮಹಿಳೆಯರು ಹಾಗೂ ಗ್ರಾಮಸ್ಥರು ಆಕ್ರೋಶದಿಂದ ಸಿಡಿದೆದ್ದಿದ್ದು, ಸರ್ವೆ ಮಾಡಲು ಬಂದಿದ್ದ ಅಧಿಕಾರಿಗಳಿಗೆ ಪೊರಕೆಯಿಂದ ಹೊಡೆದು ಆಕ್ರೋಶ ಹೊರಹಾಕಿದ್ದಾರೆ.

ಈ ವೇಳೆ ವಿಕೋಪಕ್ಕೆ ಹೋದ ಪರಿಸ್ಥಿತಿಯಲ್ಲಿ ಪ್ರತಿಭಟನಾಕಾರರು ಇಟ್ಟಿಗೆ ಮತ್ತು ಕಲ್ಲುಗಳಿಂದ ಎಸೆದು ಅಧಿಕಾರಿಗಳು ಬಂದಿದ್ದ ಎರಡು ಕಾರುಗಳನ್ನು ಜಖಂಗೊಳಿಸಿದ್ದಾರೆ. “ಯಾವುದೇ ಕಾರಣಕ್ಕೂ ನಮ್ಮ ಫಲವತ್ತಾದ ಭೂಮಿಯನ್ನು ಟೌನ್‌ಶಿಪ್‌ಗೆ ಬಿಟ್ಟುಕೊಡುವುದಿಲ್ಲ ಮತ್ತು ಇಲ್ಲಿ ಸರ್ವೆ ಕಾರ್ಯ ನಡೆಸಲು ಬಿಡುವುದಿಲ್ಲ” ಎಂದು ರೈತರು ಪಟ್ಟು ಹಿಡಿದರು. ಈ ಸಂದರ್ಭದಲ್ಲಿ ರೈತ ಮುಖಂಡರು ಮತ್ತು ಸ್ಥಳದಲ್ಲಿದ್ದ ಪೊಲೀಸರ ನಡುವೆ ತೀವ್ರ ಮಾತಿನ ಚಕಮಕಿ ನಡೆಯಿತು. ಘಟನೆಯಲ್ಲಿ ಹೈಡ್ರಾಮಾವೇ ಸೃಷ್ಟಿಯಾಗಿದ್ದು, ಪರಿಸ್ಥಿತಿ ಕೈಮೀರುತ್ತಿದ್ದಂತೆ ಪೊಲೀಸರು ಭದ್ರತೆ ಒದಗಿಸಿ ಅಧಿಕಾರಿಗಳನ್ನು ಸ್ಥಳದಿಂದ ಸುರಕ್ಷಿತವಾಗಿ ಕಳುಹಿಸಿಕೊಟ್ಟರು. ಮುನ್ನೆಚ್ಚರಿಕಾ ಕ್ರಮವಾಗಿ ಕೆಲವು ರೈತರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಪ್ರಸ್ತುತ ಮಂಡಲಹಳ್ಳಿ ಗ್ರಾಮದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಹೋರಾಟದ ಹಿನ್ನೆಲೆ ಮತ್ತು ಸಂಘರ್ಷ:

ಬಿಡದಿ ಪ್ರದೇಶದಲ್ಲಿ ಬೃಹತ್ ಉಪನಗರ ನಿರ್ಮಿಸುವ ಸರ್ಕಾರದ ಯೋಜನೆಗೆ ಸ್ಥಳೀಯ ರೈತರಿಂದ ಮೊದಲಿನಿಂದಲೂ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳುವುದನ್ನು ವಿರೋಧಿಸಿ ರೈತರು ಸಾಲು ಸಾಲು ಬೃಹತ್ ಪ್ರತಿಭಟನೆಗಳನ್ನು ನಡೆಸುತ್ತಾ ಬಂದಿದ್ದಾರೆ. ಈ ಯೋಜನೆಯು ಪ್ರದೇಶದಲ್ಲಿ ತೀವ್ರ ಪರ-ವಿರೋಧದ ಚರ್ಚೆಗೂ ಕಾರಣವಾಗಿದೆ.

ಇತ್ತೀಚೆಗಷ್ಟೇ ರಾಮನಗರ ತಾಲೂಕಿನ ಬೈರಮಂಗಲದಲ್ಲಿ ಟೌನ್‌ಶಿಪ್ ಯೋಜನೆ ಪರ ಮತ್ತು ವಿರೋಧ ಇರುವ ಎರಡೂ ಗುಂಪುಗಳ ನಡುವೆ ಭಾರಿ ಸಂಘರ್ಷ ನಡೆದಿತ್ತು. ಯೋಜನೆ ವಿರೋಧಿ ಪ್ರತಿಭಟನೆಗೆ ಆಗಮಿಸುತ್ತಿದ್ದ ರೈತರ ಬಸ್ ಮತ್ತು ಕಾರುಗಳನ್ನು ಯೋಜನೆ ಬೆಂಬಲಿಸುವ ರೈತರು ತಡೆದು ಆಕ್ರೋಶ ವ್ಯಕ್ತಪಡಿಸಿದ್ದರು. ಹೊರ ಜಿಲ್ಲೆಗಳಿಂದ ಜನರನ್ನು ಕರೆತರಲಾಗುತ್ತಿದೆ ಎಂದು ಆರೋಪಿಸಿ ಎರಡೂ ಬಿಸಿಲಿನಲ್ಲಿ ಮುಖಾಮುಖಿಯಾಗಿದ್ದವು. ಇದರಿಂದಾಗಿ ಬೈರಮಂಗಲದಲ್ಲಿ ಇಡೀ ದಿನ ಉದ್ವಿಗ್ನ ವಾತಾವರಣ ಉಂಟಾಗಿತ್ತು, ಬಳಿಕ ಪೊಲೀಸರು ಮಧ್ಯಪ್ರವೇಶಿಸಿ ಉಭಯ ಗುಂಪುಗಳನ್ನು ಸಮಾಧಾನಪಡಿಸಿದ್ದರು.

ಇದೀಗ ಮಂಡಲಹಳ್ಳಿಯಲ್ಲಿ ಅಧಿಕಾರಿಗಳ ಮೇಲೆ ನಡೆದ ದಾಳಿ ಮತ್ತು ಕಾರುಗಳ ಜಖಂ ಘಟನೆಯು ಈ ಹೋರಾಟಕ್ಕೆ ಮತ್ತಷ್ಟು ಆಕ್ರೋಶದ ರಂಗು ನೀಡಿದ್ದು, ರೈತರ ತೀವ್ರ ಪ್ರತಿರೋಧದ ನಡುವೆ ಸರ್ಕಾರಿ ಅಧಿಕಾರಿಗಳು ಸರ್ವೆ ಕಾರ್ಯ ಮುಂದುವರಿಸುವುದು ಸವಾಲಾಗಿ ಪರಿಣಮಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...