Homeಮುಖಪುಟಮುಖ್ಯಮಂತ್ರಿ ಯಡಿಯೂರಪ್ಪ ಮನೆಗೆ ಬಿಗಿ ಭದ್ರತೆ; ರೈತ ಹೋರಾಟಕ್ಕೆ ಬೆದರಿತೇ ಸರ್ಕಾರ?

ಮುಖ್ಯಮಂತ್ರಿ ಯಡಿಯೂರಪ್ಪ ಮನೆಗೆ ಬಿಗಿ ಭದ್ರತೆ; ರೈತ ಹೋರಾಟಕ್ಕೆ ಬೆದರಿತೇ ಸರ್ಕಾರ?

ಕುಮಾರಕೃಪ ರಸ್ತೆಯಲ್ಲಿರುವ ಮುಖ್ಯಮಂತ್ರಿ ನಿವಾಸಕ್ಕೆ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.

- Advertisement -
- Advertisement -

ದೆಹಲಿ ರೈತ ಹೋರಾಟವನ್ನು ಬೆಂಬಲಿಸಿ ರಾಜ್ಯದ ವಿವಿಧ ರೈತ ಸಂಘಟನೆಗಳು ಇಂದು ಕರ್ನಾಟಕದಲ್ಲೂ ಸಹ ಟ್ರ್ಯಾಕ್ಟರ್​ ರ‍್ಯಾಲಿಗೆ ಕರೆ ನೀಡಿವೆ. ಪರಿಣಾಮ ದೆಹಲಿಯಷ್ಟೇ ಬೆಂಗಳೂರಿನಲ್ಲೂ ರೈತ ಹೋರಾಟದ ಕಾವು ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಇನ್ನೂ ಗಣರಾಜ್ಯೋತ್ಸವ ದಿನವಾದ ಇಂದು ರೈತರು ರಾಜ್ಯ ರಾಜಧಾನಿಯಲ್ಲೂ ಟ್ರ್ಯಾಕ್ಟರ್​ ರ‍್ಯಾಲಿ ಆಯೋಜಿಸಿರುವ ಬೆನ್ನಿಗೆ ಮುಖ್ಯಮಂತ್ರಿ ಬಿ.ಎಸ್.​ ಯಡಿಯೂರಪ್ಪ ಅವರ ಮನೆಗೆ ಬಿಗಿ ಪೊಲೀಸ್​ ಭದ್ರತೆ ನೀಡಲಾಗಿದೆ.

ರೈತ ಮುಖಂಡರು ಬೆಂಗಳೂರಿನಲ್ಲಿ ಟ್ರ್ಯಾಕ್ಟರ್​ ರ‍್ಯಾಲಿ ಘೋಷಿಸುತ್ತಿದ್ದಂತೆ, ಬೆಂಗಳೂರಿಗೆ ಹೊಂದಿಕೊಂಡಿರುವ ತುಮಕೂರು, ಚಿಕ್ಕಬಳ್ಳಾಪುರ, ದೊಡ್ಡಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು ಕೊಡಗು ಸೇರಿದಂತೆ ಅನೇಕ ಕಡೆಗಳಿಂದ ರೈತರು ಈಗಾಗಲೇ ಟ್ರ್ಯಾಕ್ಟರ್​ ಸಮೇತ ಬೆಂಗಳೂರನ್ನು ಪ್ರವೇಶಿಸಲು ಮುಂದಾಗಿದ್ದಾರೆ. ಆದರೆ, ಅವರನ್ನು ನಗರದ ಗಡಿ ಭಾಗಗಗಳಲ್ಲೇ ತಡೆದು ನಿಲ್ಲಿಸಲಾಗಿದೆ.

ವಾಸ್ತವವಾಗಿ ಕೇಂದ್ರ ಕೃಷಿ ಕಾಯ್ದೆಗಳಿಗಿಂತ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿರುವ “ಕರ್ನಾಟಕ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ” ಮತ್ತು “ಎಪಿಎಂಸಿ ಕಾಯ್ದೆ” ವಿರುದ್ಧ ರಾಜ್ಯದ ರೈತರಿಗೆ ತೀವ್ರ ಆಕ್ರೋಶವಿದೆ. ಇದೇ ಕಾರಣಕ್ಕೆ ರೈತ ಎರಡು ತಿಂಗಳ ಹಿಂದೆಯೇ ಈ ಕಾಯ್ದೆಗಳನ್ನು ವಿರೋಧಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಗಿತ್ತು.

ಇನ್ನೂ ಇಂದು ಕೇಂದ್ರ ಕೃಷಿ ಕಾಯ್ದೆಯನ್ನು ವಿರೋಧಿಸಿ ರೈತರು ರಸ್ತೆಗಿಳಿಯುತ್ತಿರುವ ಪರಿಣಾಮ ರೈತರ ಹೋರಾಟ ಮತ್ತಷ್ಟು ಉಗ್ರವಾಗಿರಲಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.ಹೀಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಮನೆಗೂ ಮುತ್ತಿಗೆ ಹಾಕುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಹೀಗಾಗಿ ಕುಮಾರಕೃಪ ರಸ್ತೆಯಲ್ಲಿರುವ ಮುಖ್ಯಮಂತ್ರಿ ನಿವಾಸಕ್ಕೆ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ. 6 ರಿಂದ 8 ಬಿಎಂಟಿಸಿ ಬಸ್ಸುಗಳಲ್ಲಿ ಸುಮಾರು 500ಕ್ಕೂ ಹೆಚ್ಚು ಪೊಲೀಸರನ್ನು ಕರೆತಂದು ಬಿಎಸ್​ವೈ ಮನೆ ಸುತ್ತ ಬಂದೋಬಸ್ತ್​ಗೆ ನಿಲ್ಲಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸುವ ಸಲುವಾಗಿ ಭದ್ರತೆಯನ್ನು ಮತ್ತಷ್ಟು ಬಿಗಿಗೊಳಿಸಲಾಗಿದೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ರೈತರ ಟ್ರ್ಯಾಕ್ಟರ್ ರ್ಯಾಲಿಗೆ ಅನುಮತಿ ನೀಡಿದ ಬೆಂಗಳೂರು ಪೊಲೀಸರು: ಇಲ್ಲ ಎನ್ನುತ್ತಿರುವ ಸಿಎಂ ಯಡಿಯೂರಪ್ಪ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...