Homeಕರ್ನಾಟಕಸೆ.13ಕ್ಕೆ ವಿಧಾನಸೌಧ ಮುತ್ತಿಗೆ, ಸೆ. 17ಕ್ಕೆ ಕರ್ನಾಟಕ ಬಂದ್: ಕೋಡಿಹಳ್ಳಿ ಚಂದ್ರಶೇಖರ್‌

ಸೆ.13ಕ್ಕೆ ವಿಧಾನಸೌಧ ಮುತ್ತಿಗೆ, ಸೆ. 17ಕ್ಕೆ ಕರ್ನಾಟಕ ಬಂದ್: ಕೋಡಿಹಳ್ಳಿ ಚಂದ್ರಶೇಖರ್‌

- Advertisement -
- Advertisement -

ಒಕ್ಕೂಟ ಸರ್ಕಾರದ ವಿವಾದಿತ ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವಂತೆ ಆಗ್ರಹಿಸಿ ಸೆಪ್ಟಂಬರ್‌ 13 (ಸೋಮವಾರ) ರಂದು ವಿಧಾನಸೌಧ ಮುತ್ತಿಗೆ ಹಮ್ಮಿಕೊಳ್ಳಲಾಗಿದೆ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌ ಪ್ರಕಟಿಸಿದ್ದಾರೆ.

ದೆಹಲಿ ರೈತ ಪ್ರತಿಭಟನೆಯ ನೇತೃತ್ವ ವಹಿಸಿರುವ ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆ ಸೆಪ್ಟಂಬರ್‌ 27ಕ್ಕೆ ಸಂಪೂರ್ಣ ಭಾರತ್ ಬಂದ್‌ಗೆ ಕರೆ ನೀಡಿದೆ. ಅದೇ ದಿನ ರಾಜ್ಯದಲ್ಲೂ ಕರ್ನಾಟಕ ಬಂದ್‌ ಮಾಡುತ್ತೇವೆ ಎಂದು ಚಂದ್ರಶೇಖರ್‌ ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್ ಕೃಷಿ ಕಾಯ್ದೆಯ ಬಗ್ಗೆ ಒಕ್ಕೂಟ ಸರ್ಕಾರ ಜಾರಿಗೆ ತಂದಿರುವ ಸುಗ್ರೀವಾಜ್ಞೆಯನ್ನು ತಡೆಹಿಡಿಯುವಂತೆ ನಿರ್ದೇಶನ ನೀಡಿದೆ. ರಾಜ್ಯ ಜಾರಿಗೊಳಿಸಿರುವ ಭೂ ಸುಧಾರಣಾ ಕಾಯ್ದೆ, ಕೃಷಿ ಮಾರುಕಟ್ಟೆ ಕಾಯ್ದೆ ಭೂಸ್ವಾಧೀನ ಕಾಯ್ದೆ ಕಾನೂನು ತಡೆಹಿಡಿಯಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಐತಿಹಾಸಿಕ ಕಿಸಾನ್ ಮಹಾಪಂಚಾಯತ್: ಬಿಜೆಪಿ ಸರ್ಕಾರಕ್ಕೆ ಸವಾಲು ಹಾಕಿದ ರೈತರು

ವಿವಾದಿತ ರೈತ ವಿರೋಧಿ ಕಾನೂನುಗಳನ್ನು ಕೂಡಲೇ ಹಿಂಪಡೆಯಬೇಕು. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದೇವೆ. ಅವರು ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಹೀಗಾಗಿ ಸೆ.13 (ಸೋಮವಾರ) ರಂದು ವಿಧಾನಸೌಧ ಮುತ್ತಿಗೆ ಹಮ್ಮಿಕೊಳ್ಳಲಾಗಿದೆ.

ಸೆ.13ರ ಬೆಳಗ್ಗೆ 10 ಗಂಟೆಗೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣದಿಂದ ಪ್ರತಿಭಟನಾ ಮೆರವಣಿಗೆ ನಡೆಯಲಿದೆ. ಪ್ರತಿಭಟನೆಯಲ್ಲಿ ರಾಜ್ಯದ ಹಲವು ಭಾಗಗಳ ರೈಥರು ಪಾಲ್ಗೊಳ್ಳಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಒಕ್ಕೂಟ ಸರ್ಕಾರದ ವಿವಾದಿತ ಮೂರು ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತ ಹೋರಾಟದ ನೇತೃತ್ವ ವಹಿಸಿರುವ ಸಂಯುಕ್ತ ಕಿಸಾನ್ ಮೋರ್ಚಾ ಸಂಘಟನೆ ಸೆಪ್ಟಂಬರ್‌ 27 ರಂದು ಸಂಪೂರ್ಣ ಭಾರತ್‌ ಬಂದ್‌ಗೆ ಕರೆ ನೀಡಿದೆ.

ಭಾರತ್ ಬಂದ್‌ಗೆ ಕಾಂಗ್ರೆಸ್ ಪಕ್ಷ ಸಂಪೂರ್ಣ ಬೆಂಬಲ ಕೊಟ್ಟಿದೆ. ಕಾಂಗ್ರೆಸ್ ಪಕ್ಷ ಮಾತ್ರವಲ್ಲದೆ ಸಿಪಿಐ(ಎಂ), ಸಿಪಿಐ, ಆರ್‌ಎಸ್‌ಪಿ ಸೇರಿದಂತೆ ಎಡ ಪಕ್ಷಗಳು ಭಾರತ್‌ ಬಂದ್‌ಗೆ ಬೆಂಬಲ ನೀಡಿವೆ.


ಇದನ್ನೂ ಓದಿ: ರೈತ ಹೋರಾಟ: ಸೆ.27ಕ್ಕೆ ಭಾರತ್‌ ಬಂದ್‌ಗೆ ಕರೆ ನೀಡಿದ ರೈತ ಸಂಘಟನೆಗಳು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...