Homeಚಳವಳಿಟೋಲ್‌ಪ್ಲಾಝಾಗಳನ್ನು ಅನಿರ್ದಿಷ್ಟಾವಧಿಗೆ ವಶಕ್ಕೆ ಪಡೆದ ರೈತ ಹೋರಾಟಗಾರರು!

ಟೋಲ್‌ಪ್ಲಾಝಾಗಳನ್ನು ಅನಿರ್ದಿಷ್ಟಾವಧಿಗೆ ವಶಕ್ಕೆ ಪಡೆದ ರೈತ ಹೋರಾಟಗಾರರು!

ಡಿಸೆಂಬರ್‌ 25 ರಂದು ರೈತ ಸಂಘಗಳ ಸದಸ್ಯರು ಮೂರು ದಿನಗಳ ಮಟ್ಟಿಗೆ ಹರಿಯಾಣದಲ್ಲಿ ಹಲವಾರು ಟೋಲ್‌ಪ್ಲಾಝಾಗಳನ್ನು ವಶಪಡಿಸಿಕೊಂಡಿದ್ದರು.

- Advertisement -
- Advertisement -

ಡಿಸೆಂಬರ್ 25 ರಂದು ಹರಿಯಾಣದ ಹಲವಾರು ಟೋಲ್‌‌ಪ್ಲಾಝಾಗಳನ್ನು ಮೂರು ದಿನಗಳ ಮಟ್ಟಿಗೆ ವಶಕ್ಕೆ ಪಡೆದಿದ್ದ ರೈತರು ಇದೀಗ ತಮ್ಮ ನಿರ್ಧಾರವನ್ನು ಬದಲಿಸಿದ್ದಾರೆ. ತಮ್ಮ ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸಲು ತೀರ್ಮಾನಿಸಿರುವ ಹೋರಾಟಗಾರರು ಟೋಲ್‌ಪ್ಲಾಝಾಗಳನ್ನು ಅನಿರ್ದಿಷ್ಟಾವಧಿಯವರೆಗೆ ವಶದಲ್ಲೇ ಇರಿಸಿಕೊಳ್ಳುವುದಾಗಿ ಹೇಳಿದ್ದಾರೆ.

ಶನಿವಾರ ರಾತ್ರಿ ನಡೆದ ಸಭೆಯಲ್ಲಿ ರೈತ ನಾಯಕರು, ತಮ್ಮ ಬೇಡಿಕೆಗಳನ್ನು ಕೇಂದ್ರ ಸರಕಾರ ಈಡೇರಿಸುವವರೆಗೆ ಪ್ರಯಾಣಿಕರ ಮೇಲೆ ಟೋಲ್ ಕಂಪೆನಿಗಳು ಶುಲ್ಕ ವಿಧಿಸುವುದಕ್ಕೆ ನಾವು ಅವಕಾಶ ನೀಡುವುದಿಲ್ಲ ಎಂಬ ತೀರ್ಮಾನಕ್ಕೆ ಬಂದಿದ್ದಾರೆ.

ಇದನ್ನೂ ಓದಿ: ತೀವ್ರಗೊಂಡ ಹೋರಾಟ: ಟೋಲ್‌ ಪ್ಲಾಜಾಗಳನ್ನು ವಶಕ್ಕೆ ಪಡೆದ ರೈತರು

ಭಾರತೀಯ ಕಿಸಾನ್ ಒಕ್ಕೂಟದ ಅಧ್ಯಕ್ಷ ಗುರುನಮ್ ಸಿಂಗ್ ಚಾರುನಿ, ‘‘ನಾವು ರೈತರು ಸೇರಿದಂತೆ ರೈತ ಒಕ್ಕೂಟಗಳ ಪ್ರತಿನಿಧಿಗಳನ್ನು ಭೇಟಿಯಾಗಿ, ಪ್ರಯಾಣಿಕರ ಮೇಲೆ ಟೋಲ್ ಕಂಪೆನಿಗಳು ಶುಲ್ಕ ವಿಧಿಸುವುದಕ್ಕೆ ನಾವು ಅವಕಾಶ ನೀಡುವುದಿಲ್ಲ ಎಂಬ ತೀರ್ಮಾನಕ್ಕೆ ಬರಲಾಗಿದೆ. ದೆಹಲಿ ಗಡಿಯಲ್ಲಿ ಪ್ರತಿಭಟನೆ ಅಂತ್ಯಗೊಳ್ಳುವವರೆಗೆ ರಾಜ್ಯದ ಎಲ್ಲಾ ಟೋಲ್‌ ಪ್ಲಾಝಾಗಳಲ್ಲಿ ರೈತರು ಪ್ರತಿಭಟನೆ ಮುಂದುವರಿಸಲಿದ್ದಾರೆ’’ ಎಂದು ಹೇಳಿದ್ದಾರೆ.

ಡಿಸೆಂಬರ್‌ 25 ರಂದು ರೈತ ಸಂಘಗಳ ಸದಸ್ಯರು ಹರಿಯಾಣದಲ್ಲಿ ಹಲವಾರು ಟೋಲ್‌ಪ್ಲಾಝಾಗಳನ್ನು ವಶಪಡಿಸಿಕೊಂಡಿದ್ದರು. ದೆಹಲಿಯನ್ನು ಬೇರೆ ಬೇರೆ ಉತ್ತರದ ರಾಜ್ಯಗಳೊಂದಿಗೆ ಸಂಪರ್ಕಿಸುವ ರಾಷ್ಟ್ರೀಯ ಹೆದ್ದಾರಿ 44 ರಲ್ಲಿರುವ ಕಾರ್ನಾಲ್‌ನಲ್ಲಿರುವ ಬಸ್ತಾರಾ ಟೋಲ್ ಪ್ಲಾಜಾ, ಅಸ್ಸಂಧ್-ಕರ್ನಾಲ್ ಹೆದ್ದಾರಿಯಲ್ಲಿನ ಗುಲ್ಲರ್‌ಪುರ ಟೋಲ್ ಪ್ಲಾಜಾ ಮತ್ತು ಹಿಸಾರ್-ಚಂಡೀಗಡ ಹೆದ್ದಾರಿಯಲ್ಲಿರುವ ಕುರುಕ್ಷೇತ್ರದ ಥೋನಾ ಟೋಲ್ ಪ್ಲಾಜಾದಲ್ಲಿ ಹಾಕಿದ್ದ ಬ್ಯಾರಿಕೇಡ್‌ಗಳನ್ನು ರೈತರು ಬಲವಂತವಾಗಿ ಸರಿಸಿದ್ದರು.

ಇದನ್ನೂ ಓದಿ: ಮತ್ತೊಂದು ಮಾತುಕತೆಗೆ ಮುಂದಾದ ಕೇಂದ್ರ – ತಮ್ಮ ನಿಲುವು ಸ್ಪಷ್ಟಪಡಿಸಿದ ರೈತ ಮುಖಂಡರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Why the farmers not potting sim to Airtel ….why not BSNL….Is farmers are misleaded … Or a farmer protesting system forced the innocent farmers to believe Artel is government institution…. Looks very funny….

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...