Homeಮುಖಪುಟಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ರೈತರಿಗೆ ಲಾಭವಾಗಲಿದೆ: ಯಡಿಯೂರಪ್ಪ

ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ರೈತರಿಗೆ ಲಾಭವಾಗಲಿದೆ: ಯಡಿಯೂರಪ್ಪ

ರೈತರಿಗೆ ತಾವು ಬೆಳೆದ ಉತ್ಪಾದನೆಗೆ ಹೆಚ್ಚು ಬೆಲೆ ದೊರಕಬೇಕು ಎಂಬ ಏಕೈಕ ಕಾರಣಕ್ಕೆ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಮಾಡಲಾಗುತ್ತಿದೆ.

- Advertisement -
- Advertisement -

ಎಪಿಎಂಸಿ ಕಾಯ್ದೆ ತಿದ್ದುಪಡಿಯಿಂದ ರೈತರಿಗೆ ಯಾವುದೇ ತೊಂದರೆಯಾಗುವುದಿಲ್ಲ. ಇದರಿಂದ ಹೆಚ್ಚು ಲಾಭವಾಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಎಪಿಎಂಸಿ ಕಾಯ್ದೆ ಸಂಬಂಧ ಇಂದು ದೊಡ್ಡ ಮಟ್ಟದ ಚರ್ಚೆ ನಡೆಯುತ್ತಿದೆ. ಹಸಿರು ಶಾಲು ಹಾಕಿಕೊಂಡು ಪ್ರಮಾಣ ವಚನ ಸ್ವೀಕರಿಸಿದ್ದೇನೆ. ಕೃಷಿ ಬಜೆಟ್‌ ಮಂಡಿಸಿದ ನಾನು, ರೈತರಿಗೆ ಮೊಸ ಮಾಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ಕರೆದು ಎಪಿಎಂಸಿ ಕಾಯ್ದೆ ಕುರಿತು ಯಡಿಯೂರಪ್ಪ ಮಾಹಿತಿ ನೀಡಿದ್ದಾರೆ. “ಎಪಿಎಂಸಿ ಕಾಯ್ದೆ ತಿದ್ದುಪಡಿ ಕುರಿತು ತಪ್ಪು ಗ್ರಹಿಕೆ ಒಳ್ಳೆಯದಲ್ಲ. ರೈತರಿಗೆ ತಾವು ಬೆಳೆದ ಉತ್ಪಾದನೆಗೆ ಹೆಚ್ಚು ಬೆಲೆ ದೊರಕಬೇಕು ಎಂಬ ಏಕೈಕ ಕಾರಣಕ್ಕೆ ಎಪಿಎಂಸಿ ಕಾಯ್ದೆಗೆ ತಿದ್ದುಪಡಿ ಮಾಡಲಾಗುತ್ತಿದೆ” ಎಂದು ಹೇಳಿದ್ದಾರೆ.

“ತಿದ್ದುಪಡಿಯಿಂದ ರೈತರಿಗೆ ಅಥವಾ ಎಪಿಎಂಸಿ ಕಮಿಟಿಗಳಿಗೆ ಯಾವುದೇ ತೊಂದರೆಯಾಗುವುದಿಲ್ಲ. ಇದರಿಂದ ಖಾಸಗಿ ಕಂಪೆನಿಗಳಿಗೆ ಲಾಭವಾಗಲಿದೆ ಎಂಬ ವಿಚಾರದಲ್ಲಿ ಯಾವುದೇ ಹುರುಳಿಲ್ಲ.” ಎಂದು ಹೇಳಿದ್ದಾರೆ.

“ನಲವತ್ತು ವರ್ಷಗಳ ಹಿಂದೆಯೇ ನಾನು ಶಿಕಾರಿಪುರ ಎಪಿಎಂಸಿ ಎದುರು ರೈತರಿಗಾಗಿ ಸತ್ಯಾಗ್ರಹ ಹೋರಾಟ ನಡೆಸಿದವನು ನಾನು. ರೈತರ ಹೆಸರಲ್ಲಿ ಹಸಿರು ಶಾಲು ಹೊದ್ದು ಪ್ರಮಾಣ ವಚನ ಸ್ವೀಕರಿಸಿದ್ದೇನೆ. ಕೃಷಿಗಾಗಿ ಮೊದಲ ಬಜೆಟ್‌ ಮಂಡಿಸಿದ್ದೇನೆ ನಾನು ರೈತರಿಗೆ ಯಾವುದೇ ಕಾರಣಕ್ಕೂ ಅನ್ಯಾಯವಾಗಲು ಬಿಡುವುದಿಲ್ಲ.” ಎಂದು ಯಡಿಯೂರಪ್ಪ ಆಶ್ವಾಸನೆ ನೀಡಿದ್ದಾರೆ.

ರಾಜ್ಯದ ಕೃಷಿ ಉತ್ಪನ್ನಗಳ ಮಾರುಕಟ್ಟೆ ನಿಯಂತ್ರಣ ಮತ್ತು ಅಭಿವೃದ್ಧಿ ಕಾಯ್ದೆ 1966 ಮತ್ತು ನಿಯಮಗಳು 1968ರ ಕಲಂ 8, 66, 67 ಮತ್ತು 70 ರಂತೆ ಎಪಿಎಂಸಿಗಳ ಹೊರಗೆ ನಡೆಯುವ ಮಾರುಕಟ್ಟೆಯ ಮೇಲೆ ಎಪಿಎಂಸಿಗಳು ನಿಯಂತ್ರಣ ಹೊಂದಿವೆ.

ಈ ನಿಯಮಗಳ ಅನ್ವಯ ನಡೆಯದ ವರ್ತಕರ ಮೇಲೆ ಕಲಂ 114, 116, 117ರಡಿ ಕ್ರಿಮಿನಲ್ ಮೊಕದ್ದಮೆ ಹೂಡಲು ಅವಕಾಶವಿದೆ.

ಬ್ರಿಟೀಷರ ಕಾಲದಲ್ಲಿ ನಿರ್ಮಾಣವಾದ ಎಪಿಎಂಸಿ ಮಾರುಕಟ್ಟೆ ವ್ಯವಸ್ಥೆ ಇಂದು ಬೃಹದಾಕಾರವಾಗಿ ಬೆಳೆದಿದ್ದು, ಪ್ರಧಾನಿ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡಿರುವ ತೀರ್ಮಾನದಂತೆ ಎಪಿಎಂಸಿ ಕಾಯ್ದೆಯ ತಿದ್ದುಪಡಿ ನಿರ್ಧಾರಕ್ಕೆ ಬಂದಿತ್ತು.


ಓದಿ: ಇದು ಕಡೇ ಎಚ್ಚರಿಕೆ, ಇಲ್ಲವಾದರೆ ಹೋರಾಟ ಎದುರಿಸಿ: ಕುಮಾರಸ್ವಾಮಿ


ನಮ್ಮ ಯೂಟ್ಯೂಬ್ ಚಾನೆಲ್ Subscribe  ಮಾಡಿ


 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...