Homeಮುಖಪುಟಮೋದಿ ಸರ್ಕಾರದಿಂದ ಫ್ಯಾಸಿಸಂ ದಾಳಿ: ದೀಪಂಕರ್ ಭಟ್ಟಾಚಾರ್ಯ

ಮೋದಿ ಸರ್ಕಾರದಿಂದ ಫ್ಯಾಸಿಸಂ ದಾಳಿ: ದೀಪಂಕರ್ ಭಟ್ಟಾಚಾರ್ಯ

- Advertisement -
- Advertisement -

ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಬಿಜೆಪಿ ಸರ್ಕಾರ ದೇಶದ ಜನರ ಮೇಲೆ ಫ್ಯಾಸಿಸಂ ದಾಳಿ ನಡೆಸುತ್ತಿದೆ. ಇದಕ್ಕೆ ದೃತಿಗೆಡದೆ ಸಮರ್ಥವಾಗಿ ಪ್ರತಿರೋಧ ಒಡ್ಡುವ ಮೂಲಕ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಆಶಯಗಳನ್ನು ಉಳಿಸಲು ಸಾರ್ವಜನಿಕರು ಕಟಿಬದ್ಧರಾಗಬೇಕಿದೆ ಎಂದು ಸಿಪಿಐ (ಎಂಎಲ್) ಲಿಬರೇಶನ್ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದೀಪಂಕರ್ ಭಟ್ಟಾಚಾರ್ಯ ಹೇಳಿದರು.

ರಾಯಚೂರಿನ ಸಿಂಧನೂರು ನಗರದ ಟೌನ್‌ಹಾಲ್ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಿಪಿಐ(ಎಂಎಲ್) ಲಿಬರೇಶನ್ ಪಕ್ಷದ 2ನೇ ರಾಜ್ಯ ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಅವರು, ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ‘ಈ ದೇಶ ಹಿಂದೂ ರಾಷ್ಟ್ರ ಏನಾದರೂ ಆದರೆ ಅದಕ್ಕಿಂತ ದೊಡ್ಡ ದುರಂತ ಬೇರೊಂದಿಲ್ಲ’ ಎಂದು ಹೇಳಿದ್ದಾರೆ. ಆದರೆ, ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ವಿರುದ್ಧವಾಗಿ ಬಿಜೆಪಿ ಮತ್ತು ಆರ್‌ಎಸ್‌ಎಸ್ ದೇಶವನ್ನು ಹಿಂದೂ ರಾಷ್ಟ್ರ ಮಾಡಲು ಹೊರಟಿವೆ. ಸಮಾಜವನ್ನು ಒಂದುಗೂಡಿಸುವುದಕ್ಕಿಂತ ವಿಭಜಿಸುವ ಕೃತ್ಯ ಯಥೇಚ್ಛವಾಗಿ ನಡೆಯುತ್ತಿದೆ. ಎರಡು ನೂರು ವರ್ಷ ದೇಶವನ್ನು ಆಳಿದ ಬ್ರಿಟೀಷರನ್ನು ತ್ಯಾಗ, ಬಲಿದಾನಗಳ ಮೂಲಕ ಈ ದೇಶದ ಸ್ವಾತಂತಂತ್ರ್ಯ ಸೇನಾನಿಗಳು ತೊಲಗಿಸಿದ್ದಾರೆ. ಆದರೆ, ಇಂದು ದೇಶದ ಆಡಳಿತ ಚುಕ್ಕಾಣಿ ಹಿಡಿದವರು ಸಾಮ್ರಾಜ್ಯ ಶಾಹಿಗಳೊಂದಿಗೆ ಶಾಮೀಲಾಗುವ ಮೂಲಕ ದೇಶದ ಸಂಪತ್ತನ್ನು ಲೂಟಿ ಹೊಡೆಯುತ್ತಿದ್ದಾರೆ ಎಂದು ಆಪಾದಿಸಿದರು.

ಜಾಗತೀಕರಣ, ಉದಾರೀಕರಣ ಹಾಗೂ ಖಾಸಗೀಕರಣದಿಂದಾಗಿ ಸರ್ಕಾರದ ಕಾನೂನುಗಳು ವರ್ಷದಿಂದ ವರ್ಷಕ್ಕೆ ಕಠಿಣಗೊಳ್ಳುತ್ತಿವೆ. ಸಾರ್ವಜನಿಕ ಉದ್ದಿಮೆಗಳು ವರ್ಷದಿಂದ ವರ್ಷಕ್ಕೆ ಖಾಸಗಿಯವರ ಪಾಲಾಗುತ್ತಿವೆ. ಅಂಬಾನಿ, ಆದಾನಿಯಂತವರು ಸಾರ್ವಜನಿಕ ಉದ್ಯಮಗಳನ್ನು ತಮ್ಮ ಕಬ್ಜಾಕ್ಕೆ ತೆಗೆದುಕೊಳ್ಳುವ ಮೂಲಕ ಸಂಪತ್ತನ್ನು ದ್ವಿಗುಣಗೊಳಿಸಿಕೊಳ್ಳುತ್ತಿದ್ದಾರೆ. ಘನತೆಯುಕ್ತ ಬದುಕು ನಡೆಸಬೇಕಾದ ಕಾರ್ಮಿಕರನ್ನು ದೇಶದ ಆಡಳಿತಾರೂಢ ಸರ್ಕಾರ ಕಾರ್ಮಿಕ ಕಾನೂನುಗಳಿಗೆ ಮನಬಂದಂತೆ ತಿದ್ದುಪಡಿ ತರುವ ಮೂಲಕ ಗುಲಾಮಗಿರಿಗೆ ತಳ್ಳುತ್ತಿದೆ. ದುಡಿಯುವ ವರ್ಗದ ಜನರು ಇನ್ನಿಲ್ಲದ ಸಂಕಷ್ಟ ಎದುರಿಸುತ್ತಿದ್ದಾರೆ. ಕಾರ್ಪೋರೇಟ್ ಮತ್ತು ಕೋಮುವಾದಿಗಳನ್ನು ಪ್ರತಿರೋಧಿಸುವ ಸವಾಲು ನಮ್ಮೆಲ್ಲರ ಮುಂದಿದೆ. ಇದಕ್ಕೆ ದೀರ್ಘ ಸಂಘರ್ಷವೇ ಬೇಕಿದೆ. ದೇಶದಲ್ಲಿ ಎಲ್ಲ ಎಡ ಪಕ್ಷಗಳು ಒಗ್ಗಟ್ಟಾಗಿ ಪರ್ಯಾಯವನ್ನು ಹುಡುಕಬೇಕಿದೆ. ಇಲ್ಲದೇ ಹೋದರೆ ದೇಶದ ದುಡಿಯುವ ವರ್ಗ ಮತ್ತಷ್ಟು ತೊಂದರೆಗೀಡಲಾಗಲಿದೆ ಎಂದು ಹೇಳಿದರು.

ಸಿಪಿಐ(ಎಂಎಲ್) ಲಿಬರೇಶನ್ ರಾಜ್ಯ ಕಾರ್ಯದರ್ಶಿ ಕ್ಲಿಫ್ಟನ್ ಡಿ ರೊಜಾರಿಯೋ ಮಾತನಾಡಿ, ದೇಶದಲ್ಲಿ  ಇಂದು ಎಲ್ಲ ದುಡಿಯುವ ಜನರು ಕಡುಕಷ್ಟ ಕಾಲದಲ್ಲಿ ಬದುಕುತ್ತಿದ್ದಾರೆ. ಬಿಜೆಪಿ ಅಜೆಂಡಾ ಬಹುತ್ವ ಭಾರತವನ್ನು ಹಿಂದೂ ರಾಷ್ಟ್ರ ಮಾಡುವುದಾಗಿದೆ. ಹಿಂದೂರಾಷ್ಟ್ರ ಪರಿಕಲ್ಪನೆಯೇ ಪ್ರಜಾಪ್ರಭುತ್ವ ಮತ್ತು ಸಂವಿಧಾನಕ್ಕೆ ಬಂದೊದಗಿದ ಆಪತ್ತಾಗಿದೆ. ಒಂದು ವೇಳೆ ಹಿಂದೂ ರಾಷ್ಟ್ರ ಕಲ್ಪನೆ ಸಾಕಾರಗೊಂಡಿದ್ದಾದರೆ ಈ ದೇಶದಲ್ಲಿ ಪುನಃ ಜಾತಿ ಶ್ರೇಣಿಕೃತ ವ್ಯವಸ್ಥೆ ಬಂದು ತಳ ಸಮುದಾಯಗಳು ಇನ್ನಷ್ಟು ಸಂಕಷ್ಟ, ದಬ್ಬಾಳಿಕೆಯನ್ನು ಎದುರಿಸಲಿ. ಹಾಗಾಗಿ ಫ್ಯಾಸಿಸಂ ಸೋಲಿಸಲು ಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸಬೇಕು ಎಂದು ಕರೆ ನೀಡಿದರು.

ಸಿಪಿಐ(ಎಂ) ಪಕ್ಷದ ರಾಜ್ಯ ಕಾರ್ಯದರ್ಶಿ ಯು.ಬಸವರಾಜ ಮಾತನಾಡಿ, ಜನರಿಗೆ ಹುಸಿ ಭ್ರಮೆಯನ್ನು ತುಂಬುತ್ತಿರುವ ಸರ್ಕಾರಗಳಿಂದಾಗಿ ಇಂದು ಭಾರತ ಹಸಿವಿನ ಸೂಚ್ಯಂಕದಲ್ಲಿ 111ನೇ ಸ್ಥಾನಕ್ಕೆ ತಲುಪಿದೆ. ಅಂಬಾನಿ, ಆದಾನಿ ಸೇರಿದಂತೆ ದೇಶದ ನೂರಕ್ಕೂ ಹೆಚ್ಚು ಶ್ರೀಮಂತರ ಆಸ್ತಿ ವರ್ಷದಿಂದ ವರ್ಷಕ್ಕೆ ಭಾರೀ ಪ್ರಮಾಣದಲ್ಲಿ ಏರುತ್ತಿದ್ದರೆ, ಬಡವರ ತಲಾ ಆದಾಯ ತೀವ್ರ ಕುಸಿತ ಕಂಡಿದೆ. ಮೋದಿಯವರ ಸರ್ಕಾರ ಬಹುಜನರ ಮೇಲೆ ವಿಪರೀತ ತೆರಿಗೆಯನ್ನು ಹೇರಿ, ಶ್ರೀಮಂತರ ಸಾಲವನ್ನು ಮನ್ನಾ ಮಾಡುತ್ತಿದೆ. ಆರ್‌ಎಸ್‌ಎಸ್ ಮತ್ತು ಹಿಂದೂಪರ ಸಂಘಟನೆಗಳು ಕಾರ್ಪೋರೇಟ್ ಶಕ್ತಿಗಳೊಂದಿಗೆ ಶಾಮೀಲಾಗಿದ್ದಾರೆ. ಬಿಜೆಪಿ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ದಮನ ಮಾಡುತ್ತಿದೆ. ಜನಪರವಾಗಿ ಧ್ವನಿ ಎತ್ತಿದವರನ್ನು ಜೈಲಿಗೆ ಹಾಕುವ ಮೂಲಕ ದಬ್ಬಾಳಿಕೆ ನೀತಿ ಅನುಸರಿಸುತ್ತಿದೆ. ಹಾಗಾಗಿ ಎಡ ಚಳವಳಿಯನ್ನು ಇನ್ನಷ್ಟು ಗಟ್ಟಿಗೊಳಿಸುವ ಮೂಲಕ ಕೋಮುವಾದಿ ಶಕ್ತಿಗಳಿಗೆ ಸರಿಯಾದ ಪಾಠ ಕಲಿಸಬೇಕಿದೆ ಎಂದು ಹೇಳಿದರು.

ಐಪ್ವಾ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷೆ ರತಿರಾವ್ ಅವರು ಮಾತನಾಡಿ, ಕೋಮುವಾದ, ಕಾರ್ಪೋರೇಟ್‌ವಾದ ಮತ್ತು ಮನುವಾದ ಮಹಿಳಾ ಅನುಪಾತದ ಮೇಲೆ ವ್ಯಾಪಕ ಪರಿಣಾಮ ಬೀರುತ್ತಿದೆ. ಪುರುಷ ಪ್ರಧಾನ ವ್ಯವಸ್ಥೆ ಭ್ರೂಣ ಹತ್ಯೆಯಂತಹ ಪೈಶಾಚಿಕ ಕೃತ್ಯಗಳನ್ನು ಪೋಷಿಸುತ್ತಿದೆ. ಈ ದುರ್ದಾಳಿಯನ್ನು ಸಮರ್ಥವಾಗಿ ಪ್ರತಿರೋಧಿಸಬೇಕು ಎಂದು ಕರೆ ನೀಡಿದರು.

ಸಿಪಿಐ ಜಿಲ್ಲಾ ಕಾರ್ಯದರ್ಶಿ ಬಾಷುಮಿಯಾ ಅವರು ಮಾತನಾಡಿ, ಹುಸಿ ರಾಷ್ಟ್ರೀಯ ವಾದವನ್ನೇ ಆರ್‌ಎಸ್‌ಎಸ್ ಮತ್ತು ಹಿಂದೂಪರ ಸಂಘಟನೆಗಳು ಸಮಾಜದಲ್ಲಿ ಬಿತ್ತುವ ಮೂಲಕ ಸಮಾಜವನ್ನು ಒಡೆಯುತ್ತಿವೆ. ಇದಕ್ಕೆ ಕಮ್ಯುನಿಸ್ಟರು ಚಳವಳಿಗಳ ಮೂಲಕವೇ ಉತ್ತರ ಕೊಡಬೇಕಿದೆ ಎಂದರು.

ಬೃಹತ್ ರ‍್ಯಾಲಿ:  ನಗರದ ಎಪಿಎಂಸಿಯಿಂದ ಟೌನ್‌ಹಾಲ್‌ವರೆಗೆ ಬೃಹತ್ ರ‍್ಯಾಲಿ ನಡೆಯಿತು. ಭಗತ್ ಸಿಂಗ್ ಆಟೋ ಚಾಲಕರ ಸಂಘದ ಅಧ್ಯಕ್ಷ ಬಸವರಾಜ ಕೊಂಡೆ ಅವರ ನೇತೃತ್ವದಲ್ಲಿ ಹುತಾತ್ಮರ ಭಾವಚಿತ್ರಗಳೊಂದಿಗೆ 100ಕ್ಕೂ ಹೆಚ್ಚು ಆಟೋಗಳ ರ‍್ಯಾಲಿ ಗಮನ ಸೆಳೆಯಿತು. ರ‍್ಯಾಲಿಯಲ್ಲಿ ಅಪಾರ ಸಂಖ್ಯೆಯ ಕಾರ್ಯಕರ್ತರು, ಸಾರ್ವಜನಿಕರು, ವಿವಿಧ ಜಿಲ್ಲೆಗಳ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.

ಇದನ್ನೂ ಓದಿ : ಜೆಡಿಎಸ್‌ನಿಂದ ಸಿಎಂ ಇಬ್ರಾಹಿಂ, ಸಿ ಕೆ ನಾಣು ಉಚ್ಚಾಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...