Homeಕರ್ನಾಟಕಫಾಝಿಲ್‌ ಕೊಲೆ ಪ್ರಕರಣ: ಮಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ- ಜಿಲ್ಲಾಧಿಕಾರಿ

ಫಾಝಿಲ್‌ ಕೊಲೆ ಪ್ರಕರಣ: ಮಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ- ಜಿಲ್ಲಾಧಿಕಾರಿ

ರಾಜ್ಯದಲ್ಲಾಗುತ್ತಿರುವ ಅಹಿತಕರ ಘಟನೆಗಳಿಗೆ ಸಂಬಂಧಿಸಿದಂತೆ ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.

- Advertisement -
- Advertisement -

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರ ಹತ್ಯೆಯಾಗಿ ಒಂದೇ ದಿನದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ತಲವಾರು ದಾಳಿ ಗುರುವಾರ ಸಂಜೆ ನಡೆದಿದೆ. ಜಿಲ್ಲೆಯ ಮಂಗಳೂರು ನಗರದ ಹೊರ ವಲಯದ ಸುರತ್ಕಲ್‌ಗೆ ಅಂಗಡಿಗೆಂದು ಬಂದಿದ್ದ ಯುವಕನ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಮಾಡಲಾಗಿದೆ.

ದಾಳಿಗೊಳಗಾದ ಯುವಕನನ್ನು ಸುರತ್ಕಲ್‌ನ ಮಂಗಳಪೇಟೆ ನಿವಾಸಿ ಫಾಝಿಲ್ ಎಂದು ಗುರುತಿಸಲಾಗಿದೆ. ಗಂಭೀರ ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆಗೆ ಸ್ಪಂದಿಸದೆ ಅವರು ಮೃತಪಟ್ಟಿದ್ದಾರೆ. ಘಟನೆಯ ಬಳಿಕ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅವರು ಮಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಜು.29ರಂದು ಸುರತ್ಕಲ್, ಬಟ್ಟೆ, ಮುಲ್ಕಿ ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.

ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜು.29ರಂದು ಬೆಳಿಗ್ಗೆ 10ರಿಂದ ರಾತ್ರಿ 11ರವರೆಗೆ ಮದ್ಯ ಮಾರಾಟ ನಿಷೇಧಿಸಲು ಪೊಲೀಸ್ ಕಮಿಷನರ್ ಸೂಚನೆ ನೀಡಿದ್ದಾರೆ.

ರಾಜ್ಯದಲ್ಲಾಗುತ್ತಿರುವ ಬೆಳವಣಿಗೆಗಳಿಗೆ ಸಿದ್ದರಾಮಯ್ಯ ಖಂಡನೆ

ರಾಜ್ಯದಲ್ಲಾಗುತ್ತಿರುವ ಅಹಿತಕರ ಘಟನೆಗಳಿಗೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ.

‘ಸುಳ್ಯದಲ್ಲಿ ಮಸೂದ್ ಮತ್ತು ಪ್ರವೀಣ್ ನೆಟ್ಟಾರ್ ಹತ್ಯೆ ನಡೆದಿರುವ ಬೆನ್ನಲ್ಲಿಯೇ ಸುರತ್ಕಲ್‌ನಲ್ಲಿ ಫಾಝೀಲ್ ಎಂಬ ಯುವಕನ ಕೊಲೆ ನಡೆದಿರುವುದು ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿರುವುದಕ್ಕೆ ಸಾಕ್ಷಿ ಎಂದು ಎಚ್ಚರಿಸಿದ್ದಾರೆ.

ದಕ್ಷಿಣ ಕನ್ನಡದ ಸರಣಿ ಹತ್ಯೆಗಳನ್ನು ಖಂಡಿಸದೆ, ದುಷ್ಕರ್ಮಿಗಳನ್ನು ಬಂಧಿಸಿ ಜೈಲಿಗೆ ಅಟ್ಟದೆ, ಅವರ ದುಷ್ಕೃತ್ಯವನ್ನು ಕ್ರಿಯೆಗೆ-ಪ್ರತಿಕ್ರಿಯೆ ಎಂಬ ಸಮರ್ಥನೆ ನೀಡಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೇ ಇದಕ್ಕೆ ಹೊಣೆಗಾರರು. ಅವರು ಜಿಲ್ಲೆಯಲ್ಲಿರುವಾಗಲೇ ನಡೆದಿರುವ ಹತ್ಯೆ ಅವರ ಮುಖಕ್ಕೆ ಮಂಗಳಾರತಿ ಮಾಡಿದಂತಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಅಸಮರ್ಥ ಗೃಹಸಚಿವರಿಗೆ ಪೊಲೀಸ್ ಇಲಾಖೆಯ ಮೇಲೆ ಯಾವುದೇ ನಿಯಂತ್ರಣ ಇಲ್ಲದಂತಾಗಿದೆ. ಇದರಿಂದಾಗಿ ದುಷ್ಕರ್ಮಿಗಳು ರಾಜಾರೋಷವಾಗಿ ಹತ್ಯಾಕಾಂಡವನ್ನು ಮುಂದುವರಿಸಿದ್ದಾರೆ. ಮುಖ್ಯಮಂತ್ರಿಗಳು ಗೃಹಸಚಿವ ಸ್ಥಾನದಿಂದ ಆರಗ ಜ್ಞಾನೇಂದ್ರ ಅವರನ್ನು ತಕ್ಷಣ ಕಿತ್ತುಹಾಕದೆ ಇದ್ದರೆ ರಾಜ್ಯದಲ್ಲಿ ಜನ ಮನೆಯಿಂದ ಹೊರಗೆ ಬರುವುದೂ ಕಷ್ಟವಾಗಬಹುದು ಎಂದು ತಿಳಿಸಿದ್ದಾರೆ.

ಕೊಲೆಗಡುಕರು ಯಾವುದೇ ಪಕ್ಷ, ಪಂಥ, ಜಾತಿ, ಧರ್ಮದವರಾಗಿದ್ದರೂ ಅವರನ್ನು ಪತ್ತೆ ಹಚ್ಚಿ ಜೈಲಿಗೆ ಅಟ್ಟಬೇಕಾಗಿರುವ ರಾಜ್ಯ ಸರ್ಕಾರ, ಹೆಣಗಳನ್ನು ಮುಂದಿಟ್ಟುಕೊಂಡು ರಾಜಕೀಯ ಲಾಭ-ನಷ್ಟದ ಲೆಕ್ಕಾಚಾರ ಹಾಕುತ್ತಿರುವುದು ಅತ್ಯಂತ ದುರದೃಷ್ಟಕರ ಎಂದು ವಿಷಾದಿಸಿದ್ದಾರೆ.

ಇದನ್ನೂ ಓದಿರಿ: ದಕ್ಷಿಣ ಕನ್ನಡದ ಸುರತ್ಕಲ್‌ನಲ್ಲಿ ಯುವಕನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಹತ್ಯೆ

ತಪ್ಪಿತಸ್ಥರು ಎಷ್ಟೇ ಪ್ರಭಾವಿಗಳಾಗಿದ್ದರೂ ಅವರನ್ನು ಹೆಡೆಮುರಿ ಕಟ್ಟಿ ಜೈಲಿಗೆ ಅಟ್ಟಬೇಕು. ಆದರೆ ರಾಜ್ಯ ಸರ್ಕಾರ ತನ್ನ ವೈಫಲ್ಯವನ್ನು ಮುಚ್ಚಿಹಾಕಲು ಮತ್ತು ಜನಾಕ್ರೋಶವನ್ನು ಶಾಂತಗೊಳಿಸಲು ತನಿಖೆಯ ನೆಪದಲ್ಲಿ ಆರೋಪಿಗಳ ಹೊರತಾಗಿ ಅಮಾಯಕರಿಗೆ ಕಿರುಕುಳ ನೀಡುವುದು ಸಲ್ಲದು ಎಂದಿದ್ದಾರೆ.

ಯು.ಟಿ.ಖಾದರ್‌ ಖಂಡನೆ

ಸುರತ್ಕಲ್ ಮಂಗಳಪೇಟೆ ನಿವಾಸಿ ಪಾಝಿಲ್ ಎಂಬ ಯುವಕನನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದು ಮಾಜಿ ಸಚಿವ, ಶಾಸಕ ಯು.ಟಿ.ಖಾದರ್ ತೀವ್ರ ಖಂಡನೆ ವ್ಯಕ್ತಪಡಿಸಿದ್ದಾರೆ. ಆರೋಪಿಗಳು ಯಾರೇ ಆಗಲಿ ಪತ್ತೆ ಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸರಣಿ ಕೊಲೆಗಳು ಸಂಭವಿಸುತ್ತಿದ್ದು, ಕೋಮು ಸೌಹಾರ್ದತೆ ಹಾಳಾಗುವ ಸೂಚನೆ ದಟ್ಟವಾಗಿದೆ. ಆದುದರಿಂದ ಇದನ್ನು ಸರಕಾರ ಹಾಗೂ ಗೃಹ ಇಲಾಖೆ ಗಂಭೀರವಾಗಿ ಪರಿಗಣಿಸಿ ಜಿಲ್ಲೆಯಲ್ಲಿ ಶಾಂತಿ ಸೌಹಾರ್ದತೆಯನ್ನು ಉಳಿಸಲು ತಕ್ಷಣ ಕಾರ್ಯ ಪ್ರವೃತ್ತರಾಗಿ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...