Homeಮುಖಪುಟ'24 ಗಂಟೆಗಳಲ್ಲಿ ಬೇಡಿಕೆ ಈಡೇರಿಸದಿದ್ದರೆ ಆಮರಣಾಂತ ಉಪವಾಸ ಸತ್ಯಾಗ್ರಹ..'; ಪಶ್ಚಿಮ ಬಂಗಾಳ ಸರ್ಕಾರಕ್ಕೆ ಕಿರಿಯ ವೈದ್ಯರಿಂದ...

’24 ಗಂಟೆಗಳಲ್ಲಿ ಬೇಡಿಕೆ ಈಡೇರಿಸದಿದ್ದರೆ ಆಮರಣಾಂತ ಉಪವಾಸ ಸತ್ಯಾಗ್ರಹ..’; ಪಶ್ಚಿಮ ಬಂಗಾಳ ಸರ್ಕಾರಕ್ಕೆ ಕಿರಿಯ ವೈದ್ಯರಿಂದ ಗಡುವು

- Advertisement -
- Advertisement -

ಪಶ್ಚಿಮ ಬಂಗಾಳದ ಜೂನಿಯರ್ ಡಾಕ್ಟರ್ಸ್ ಫೋರಮ್ (ಡಬ್ಲ್ಯುಬಿಜೆಡಿಎಫ್), ಆರ್.ಜಿ ಕರ್ ಕಿರಿಯ ವೈದ್ಯೆಯ ಘೋರ ಅತ್ಯಾಚಾರ ಮತ್ತು ಹತ್ಯೆಯ ವಿರುದ್ಧ ಚಳುವಳಿಯನ್ನು ತೀವ್ರಗೊಳಿಸಿದೆ. ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯು ಶುಕ್ರವಾರ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯಕೀಯ ಸೇವೆಗಾಗಿ ಬರುವ ಸಾಮಾನ್ಯ ಜನರ ಹಿತಾಸಕ್ತಿಗಳನ್ನು ಪರಿಗಣಿಸಿ ಮುಷ್ಕರ ಹಿಂತೆಗೆದುಕೊಳ್ಳುವ ನಿರ್ಧಾರವನ್ನು ಪ್ರಕಟಿಸಿತು.

ಆದರೆ, ಪಶ್ಚಿಮ ಬಂಗಾಳ ಸರ್ಕಾರದ ವ್ಯಾಪ್ತಿಯಲ್ಲಿರುವ ತಮ್ಮ ಬೇಡಿಕೆಗಳನ್ನು 24 ಗಂಟೆಗಳಲ್ಲಿ ಈಡೇರಿಸದಿದ್ದಲ್ಲಿ ಕಿರಿಯ ವೈದ್ಯರು ಆಮರಣಾಂತ ಉಪವಾಸ ಸತ್ಯಾಗ್ರಹ ಆರಂಭಿಸುವುದಾಗಿ ಡಬ್ಲ್ಯುಬಿಜೆಡಿಎಫ್ ಪ್ರತಿನಿಧಿ ದೇಬಾಶಿಶ್ ಹಲ್ದರ್ ಹೇಳಿದ್ದಾರೆ.

ವೈದ್ಯರ 10 ಬೇಡಿಕೆಗಳಲ್ಲಿ ಮೊದಲನೆಯದು, ಬಲಿಪಶುವಿನ ಅತ್ಯಾಚಾರ ಮತ್ತು ಕೊಲೆಗೆ ನ್ಯಾಯವನ್ನು ಖಚಿತಪಡಿಸಿಕೊಳ್ಳಲು ಸುದೀರ್ಘವಾದ ನ್ಯಾಯಾಂಗ ಪ್ರಕ್ರಿಯೆಗೆ ಸಂಬಂಧಿಸಿದೆ. ಆದರೆ ಈ ಬೇಡಿಕೆಯು ಕೇಂದ್ರೀಯ ತನಿಖಾ ದಳ (ಸಿಬಿಐ) ಮತ್ತು ಸುಪ್ರೀಂ ಕೋರ್ಟ್‌ನ ಮೇಲೆ ಅವಲಂಬಿತವಾಗಿರುತ್ತದೆ. ಉಳಿದ ಒಂಬತ್ತು ಬೇಡಿಕೆಗಳ ಭವಿಷ್ಯವು ಅವುಗಳನ್ನು ಈಡೇರಿಸುವ ಬಗ್ಗೆ ರಾಜ್ಯ ಸರ್ಕಾರ ಎಷ್ಟು ಗಂಭೀರವಾಗಿದೆ ಎಂಬುದರ ಮೇಲೆ ಅವಲಂಬಿತವಾಗಿದೆ ಎಂದು ಡಬ್ಲ್ಯುಬಿಜೆಡಿಎಫ್ ಪ್ರತಿನಿಧಿ ಹೇಳಿದರು.

ಇನ್ನುಳಿದ ಒಂಬತ್ತು ಬೇಡಿಕೆಗಳನ್ನು ಮುಂದಿನ 24 ಗಂಟೆಯೊಳಗೆ ರಾಜ್ಯ ಸರ್ಕಾರ ಈಡೇರಿಸುವಂತೆ ಆಗ್ರಹಿಸಿದ್ದು, ವಿಫಲವಾದಲ್ಲಿ ಆಮರಣ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದರು.

ರಾಜ್ಯ ಆರೋಗ್ಯ ಕಾರ್ಯದರ್ಶಿಯನ್ನು ತಕ್ಷಣದಿಂದಲೇ ವಜಾಗೊಳಿಸುವುದು, ಕೇಂದ್ರೀಕೃತ ರೆಫರಲ್ ವ್ಯವಸ್ಥೆ ಮತ್ತು ಡಿಜಿಟಲ್ ಬೆಡ್ ಖಾಲಿ ಮಾನಿಟರ್ ಅಳವಡಿಕೆ, ಪ್ರತಿ ಕಾಲೇಜು ಆಧರಿಸಿ ಕಾರ್ಯಪಡೆಗಳು, ಕಿರಿಯ ವೈದ್ಯರ ಚುನಾಯಿತ ಪ್ರಾತಿನಿಧ್ಯ, ಆಸ್ಪತ್ರೆಗಳಲ್ಲಿ ಪೊಲೀಸ್ ರಕ್ಷಣೆ ಹೆಚ್ಚಿಸುವುದು, ಖಾಲಿ ಇರುವ ವೈದ್ಯರ ಹುದ್ದೆಗಳನ್ನು ಭರ್ತಿ ಮಾಡುವುದು ಇತರ ಬೇಡಿಕೆಗಳು ಸೇರಿವೆ. ಶುಶ್ರೂಷಾ ಸಿಬ್ಬಂದಿ ಮತ್ತು ಆರೋಗ್ಯ ಕಾರ್ಯಕರ್ತರಿಗೆ ಬೆದರಿಕೆ ಹಾಕಿದವರನ್ನು ತನಿಖೆ ಮಾಡಲು ಮತ್ತು ಅವರನ್ನು ಶಿಕ್ಷಿಸಲು ಪ್ರತಿ ವೈದ್ಯಕೀಯ ಕಾಲೇಜಿನಲ್ಲಿ ವಿಚಾರಣಾ ಸಮಿತಿಗಳನ್ನು ಸ್ಥಾಪಿಸಬೇಕು.

ರಾಜ್ಯ ಮಟ್ಟದಲ್ಲಿ ತನಿಖಾ ಸಮಿತಿಯನ್ನು ರಚಿಸಬೇಕು, ಪ್ರತಿ ವೈದ್ಯಕೀಯ ಕಾಲೇಜಿನಲ್ಲಿ ವಿದ್ಯಾರ್ಥಿ ಮಂಡಳಿಗಳಿಗೆ ತಕ್ಷಣದ ಚುನಾವಣೆಗಳು ನಡೆಸಬೇಕು. ಪಶ್ಚಿಮ ಬಂಗಾಳ ವೈದ್ಯಕೀಯ ಮಂಡಳಿ ಮತ್ತು ಪಶ್ಚಿಮ ಬಂಗಾಳದ ಆರೋಗ್ಯ ನೇಮಕಾತಿ ಮಂಡಳಿಯಲ್ಲಿ ಭ್ರಷ್ಟಾಚಾರ ಮತ್ತು ಕಾನೂನುಬಾಹಿರತೆಯ ಬಗ್ಗೆ ತಕ್ಷಣದ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ; ಒಳ ಮೀಸಲಾತಿ ತೀರ್ಪು ಮರುಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...