Homeಮುಖಪುಟ'ಫಾಸ್ಟ್ಯಾಗ್' ಕೇಂದ್ರ ಸರ್ಕಾರದ ಯೋಜಿತ ಹಗಲು ದರೋಡೆ- ಆಮ್ ಆದ್ಮಿ ಪಕ್ಷ ಆರೋಪ

‘ಫಾಸ್ಟ್ಯಾಗ್’ ಕೇಂದ್ರ ಸರ್ಕಾರದ ಯೋಜಿತ ಹಗಲು ದರೋಡೆ- ಆಮ್ ಆದ್ಮಿ ಪಕ್ಷ ಆರೋಪ

'ಟೋಲ್ ರಸ್ತೆ ಬಳಸಲು ಇಚ್ಚಿಸದವರಿಗೆ ಸರ್ವೀಸ್ ರಸ್ತೆಗಳನ್ನು ನಿರ್ಮಿಸಿಕೊಡುವ ಜವಾಬ್ದಾರಿ‌ ರಸ್ತೆ ನಿರ್ಮಾಣ ಕಂಪೆನಿಗಳ ಮೇಲಿದೆ. ಆದರೂ ಬಹುತೇಕ ಕಡೆ ಈ ನಿಯಮ ಪಾಲಿಸಿಲ್ಲ’

- Advertisement -
- Advertisement -

“ನಮ್ಮ ರೈತರ ಭೂಮಿ ಕಸಿದುಕೊಂಡು, ನಮ್ಮ ತೆರಿಗೆಯಿಂದ ನಿರ್ಮಾಣ ಮಾಡಿದ ರಸ್ತೆಗಳಿಗೆ ಈಗಾಗಲೇ ರಸ್ತೆ ತೆರಿಗೆ ಎಂದು ಕಟ್ಟುತ್ತಿದ್ದೇವೆ. ಆದರೂ ಟೋಲ್ ಫೀ ಏಕೆ ಕಟ್ಟಬೇಕು. ಹಗಲು ದರೋಡೆಯನ್ನು ಸರ್ಕಾರ ಡಿಜಿಟಲೀಕರಣ ಮಾಡಿದ್ದು, ಫಾಸ್ಟ್ಯಾಗ್ ಮೂಲಕ ಯೋಜಿತ ದರೋಡೆಗೆ ಇಳಿದಿದೆ” ಎಂದು ಆಮ್ ಆದ್ಮಿ ಪಕ್ಷದ ಬೆಂಗಳೂರು ಘಟಕದ ಉಪಾಧ್ಯಕ್ಷ ಸುರೇಶ್ ರಾಥೋಡ್ ಆರೋಪಿಸಿದ್ದಾರೆ.

ಗುರುವಾರ (ಫೆ.18) ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಸುರೇಶ್ ರಾಥೋಡ್, ಸಾರಿಗೆ ಇಲಾಖೆ ರಸ್ತೆ ಶುಲ್ಕ ವಸೂಲಿ ಮಾಡುತ್ತಿದೆ. ಆದರೂ‌ ಟೋಲ್ ಶುಲ್ಕವನ್ನು ಯಾಕೆ ಕಟ್ಟಬೇಕು ಎಂದು ಪ್ರಶ್ನಿಸಿದ್ದಾರೆ. ರಸ್ತೆ ನಿರ್ಮಾಣ ಕಂಪೆನಿಗಳ ಅಡಿಯಾಳಾಗಿರುವ ಕೇಂದ್ರ ಸರ್ಕಾರ 18 ವರ್ಷ ಇದ್ದ ಟೋಲ್ ಸಂಗ್ರಹ ಗುರಿಯನ್ನು 30 ವರ್ಷಕ್ಕೆ ಏರಿಸಿದೆ. ಇದೊಂದು ಉದಾಹರಣೆ ಸಾಕು ಸರ್ಕಾರದ ಹಗಲು ದರೋಡೆಗೆ ಎಂದರು.

“ದೇಶದಲ್ಲಿ ದಿನವೊಂದಕ್ಕೆ 105 ಕೋಟಿ‌ಯಷ್ಟು ಟೋಲ್ ವಸೂಲಿಯಾಗುತ್ತಿದೆ. ಇಷ್ಟು ವರ್ಷಗಳ ಕಾಲ ವಸೂಲಿ ಮಾಡಿದ ಹಣ ಎಲ್ಲಿ ಹೋಯಿತು. ಟೋಲ್ ರಸ್ತೆ ಬಳಸಲು ಇಚ್ಚಿಸದವರಿಗೆ ಸರ್ವೀಸ್ ರಸ್ತೆಗಳನ್ನು ನಿರ್ಮಿಸಿಕೊಡುವ ಜವಾಬ್ದಾರಿ‌ ರಸ್ತೆ ನಿರ್ಮಾಣ ಕಂಪೆನಿಗಳ ಮೇಲಿದೆ. ಆದರೂ ಬಹುತೇಕ ಕಡೆ ಈ ನಿಯಮ ಪಾಲಿಸಿಲ್ಲ” ಎಂದು ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಟೋಲ್ ಪ್ಲಾಜಾ ಮುತ್ತಿಗೆ, ದೇಶಾದ್ಯಂತ ರೈಲು ತಡೆ ಹೋರಾಟಕ್ಕೆ ಸಂಯುಕ್ತ ಕಿಸಾನ್ ಮೋರ್ಚಾ ಕರೆ

ನೆಲಮಂಗಲ-ತುಮಕೂರು ಹೆದ್ದಾರಿ ಅತ್ಯಂತ ಕಳಪೆಯಿಂದ ಗುಣಮಟ್ಟದಿಂದ ಕೂಡಿದ್ದು, ಹೆದ್ದಾರಿ ಎನ್ನುವ ಪದಕ್ಕೆ ಅವಮಾನ ಮಾಡಿದಂತಿದೆ. ಆದರೂ ಟೋಲ್ ಶುಲ್ಕವನ್ನು ಅಮಾನುಷವಾಗಿ ವಸೂಲಿ ಮಾಡಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ಬೆರಳೆಣಿಕೆಯಷ್ಟು ರಸ್ತೆಗಳು ಮಾತ್ರ ಟೋಲ್ ಮುಕ್ತವಾಗಿದ್ದು, ಎಲ್ಲಾ ಕಡೆಯೂ ಜನಸಾಮಾನ್ಯರ ಹಣ ದೋಚಲಾಗುತ್ತಿದೆ. ಅಲ್ಲದೆ ರಾಜ್ಯ ಹೆದ್ದಾರಿಗಳಲ್ಲೂ ಟೋಲ್ ಸಂಗ್ರಹಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮೊದಲ ಬಾರಿ ಅಧಿಕಾರ ಹಿಡಿದಾಗ ಮುನ್ನುಡಿ ಬರೆದಿದ್ದರು. ಎಲ್ಲಾ ರಾಜ್ಯ ಹೆದ್ದಾರಿಗಳಲ್ಲಿ ಸಂಚರಿಸಲು ಜನ ಹಣ ಕಟ್ಟಬೇಕಾದ ದಿನ ದೂರವಿಲ್ಲ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Image result for bengalore navayug toll gate fastag
PC: Deccan Herald

ರಾಜಕೀಯ ಚಟುವಟಿಕೆಗಳ ಉಸ್ತುವಾರಿ ಫಣಿರಾಜ್ ಎಸ್‌.ವಿ ಮಾತನಾಡಿ, ಕೂಡಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರ ಈ ಕುರಿತು ಸ್ಪಷ್ಟ ನಿರ್ಧಾರ ತೆಗೆದುಕೊಳ್ಳದಿದ್ದರೆ ಎಲ್ಲಾ ಟೋಲ್ ಪ್ಲಾಜಾಗಳ ಬಂದ್‌ ಚಳವಳಿ ಪ್ರಾರಂಭಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ವಿವಾದಿತ ಕೃಷಿ ಕಾನೂನುಗಳನ್ನು ವಿರೋಧಿಸಿ ನಡೆಯುತ್ತಿರುವ ರೈತ ಹೋರಾಟದಲ್ಲಿ ಈಗಾಗಲೇ ಪಂಜಾಬ್ ರಾಜ್ಯದಲ್ಲಿ ಅಕ್ಟೋಬರ್‌ 1 ರಿಂದ ಟೋಲ್‌ಪ್ಲಾಜಾಗಳನ್ನು ವಶಕ್ಕೆ ಪಡೆಯಲಾಗಿದೆ. ಫೆಬ್ರವರಿ 12ರಿಂದ ರಾಜಸ್ಥಾನದ ಟೋಲ್ ಪ್ಲಾಜಾಗಳನ್ನು ಜನರಿಗಾಗಿ ಫ್ರೀ ಮಾಡಲಾಗಿದೆ.


ಇದನ್ನೂ ಓದಿ: ರೈತ ಹೋರಾಟದ ಆಕ್ರೋಶ: ಪಂಜಾಬ್‌ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಧೂಳಿಪಟ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...