Homeಮುಖಪುಟಮಗಳ ಮೃತದೇಹವನ್ನು 10 ಕಿ.ಮೀ ಹೊತ್ತೊಯ್ದ ತಂದೆ: ಛತ್ತೀಸ್‌ಘಡದಲ್ಲೊಂದು ಅಮಾನವೀಯ ಘಟನೆ

ಮಗಳ ಮೃತದೇಹವನ್ನು 10 ಕಿ.ಮೀ ಹೊತ್ತೊಯ್ದ ತಂದೆ: ಛತ್ತೀಸ್‌ಘಡದಲ್ಲೊಂದು ಅಮಾನವೀಯ ಘಟನೆ

ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ನಂತರ ಆರೋಗ್ಯ ಸಚಿವ ಟಿ.ಎಸ್ ಸಿಂಗ್ ಡ್ಯೂ ತನಿಖೆಗೆ ಆದೇಶಿಸಿದ್ದಾರೆ

- Advertisement -
- Advertisement -

ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮೃತಪಟ್ಟ ತನ್ನ 7 ವರ್ಷದ ಮಗಳ ಮೃತದೇಹವನ್ನು ವ್ಯಕ್ತಿಯೊಬ್ಬ 10 ಕಿ.ಮೀ ನಷ್ಟು ಹೊತ್ತೊಯ್ದ ಅಮಾನವೀಯ ಘಟನೆ ಛತ್ತೀಸ್‌ಘಡದಲ್ಲಿ ಜರುಗಿದೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದ ನಂತರ ಆರೋಗ್ಯ ಸಚಿವ ಟಿ.ಎಸ್ ಸಿಂಗ್ ಡ್ಯೂ ತನಿಖೆಗೆ ಆದೇಶಿಸಿದ್ದಾರೆ ಎನ್‌ಡಿಟಿವಿ ವರದಿ ಮಾಡಿದೆ

ಛತ್ತೀಸ್‌ಘಡದ ಸುರ್ಗಜ ಜಿಲ್ಲೆಯ ಅಮದಳ ಗ್ರಾಮದ ಈಶ್ವರ್ ದಾಸ್ ಎಂಬುವವರು ಅನಾರೋಗ್ಯಕ್ಕೀಡಾಗಿದ್ದ ತನ್ನ ಮಗಳು ಸುರೇಖಾಳನ್ನು ಲಖನಪುರ್‌ನಲ್ಲಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಿದ್ದರು. ತೀವ್ರ ಜ್ವರದಿಂದ ಬಳಲುತ್ತಿದ್ದ ಬಾಲಕಿಗೆ ಚಿಕಿತ್ಸೆ ನೀಡಿದರೂ ಸಹ ಬದುಕುಳಿಯಲಿಲ್ಲ. ಆ ನಂತರ ಶವ ಸಾಗಿಸಲು ಆಂಬುಲೆನ್ಸ್ ಸಮಯಕ್ಕೆ ಸರಿಯಾಗಿ ಬಾರದ ಕಾರಣ ತನ್ನ ಮಗಳ ಮೃತದೇಹವನ್ನು ಹೆಗಲು ಮೇಲೆ ಹೊತ್ತುಕೊಂಡೇ ತಮ್ಮ ಸ್ವಗ್ರಾಮ ತಲುಪಿದ್ದಾರೆ ಎಂದು ವರದಿಯಾಗಿದೆ.

ಶುಕ್ರವಾರ ಬೆಳಿಗ್ಗೆ ಬಾಲಕಿಯನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲು ಮಾಡಲಾಗಿತ್ತು. ಹಲವು ದಿನಗಳಿಂದ ತೀವ್ರ ಜ್ವರದಿಂದ ಬಳಲುತ್ತಿದ್ದ ಮಗುವಿನ ಆಕ್ಸಿಜನ್ ಮಟ್ಟ 60ಕ್ಕೆ ಕುಸಿದಿತ್ತು. ಅಗತ್ಯ ಚಿಕಿತ್ಸೆ ನೀಡಲು ಆರಂಭಿಸಿತ್ತಾದರೂ ಆರೋಗ್ಯ ಸ್ಥಿತಿ ಬಿಗಡಾಯಿಸಿ ಮಗು ಶನಿವಾರ ಬೆಳಿಗ್ಗೆ 7.30ರ ಸಮಯದಲ್ಲಿ ಕೊನೆಯುಸಿರೆಳೆಯಿತು ಎಂದು ಗ್ರಾಮೀಣ ಆರೋಗ್ಯ ಸಹಾಯಕ ಅಧಿಕಾರಿ ಡಾ ವಿನೋದ್ ಭಾರ್ಗವ್ ಹೇಳಿದ್ದಾರೆ.

ಮಗುವಿನ ಕುಟುಂಬಕ್ಕೆ ಸ್ವಲ್ಪ ಸಮಯದಲ್ಲಿ ಶವ ಸಾಗಿಸುವ ವಾಹನ ಬರುತ್ತದೆ ಕಾಯಿರಿ ಎಂದು ಹೇಳಿದೆವು. 9.20ರ ಸಮಯಕ್ಕೆ ವಾಹನ ಬಂತು. ಆದರೆ ಅಷ್ಟರಲ್ಲಿ ಅವರು ಮೃತದೇಹ ತೆಗೆದುಕೊಂಡು ಹೊರಟು ಹೋಗಿದ್ದರು ಎಂದು ಅವರು ಹೇಳಿದ್ದಾರೆ.

ತಂದೆ ತನ್ನ ಮಗಳ ಮೃತದೇಹವನ್ನು ಹೆಗಲ ಮೆಲೆ ಹೊತ್ತುಕೊಂಡು ಹೋಗುವ ವಿಡಿಯೋ ಹರಿದಾಡಿದ ನಂತರ ಹಲವರು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಆರೋಗ್ಯ ವ್ಯವಸ್ಥೆ ಇಷ್ಟು ಹದಗೆಟ್ಟಿರಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದ್ದಾರೆ. ನಂತರ ಆರೋಗ್ಯ ಸಚಿವ ಟಿ.ಎಸ್ ಸಿಂಗ್ ಡ್ಯೂ ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ತನಿಖೆ ನಡೆಸುವಂತೆ ಆದೇಶಿಸಿದ್ದಾರೆ.

“ನಾನು ಆ ವಿಡಿಯೋ ನೋಡಿದೆ, ಬಹಳ ನೋವಾಯಿತು. ಈ ಕುರಿತು ಸಮಗ್ರ ತನಿಖೆ ನಡೆಸುವಂತೆ ಮತ್ತು ಸೂಕ್ರ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದೇನೆ. ಆ ಸಮಯದಲ್ಲಿ ಕರ್ತವ್ಯದಲ್ಲಿ ಇದ್ದವರು ಆದಷ್ಟು ಬೇಗ ಶವ ಸಾಗಿಸುವ ವಾಹನದ ವ್ಯವಸ್ಥೆ ಮಾಡಬೇಕಿತ್ತು. ಆದರೆ ಮಾಡದಿರುವುದು ದುರಾದೃಷ್ಟ. ಕರ್ತವ್ಯ ಲೋಪ ಎಸಗಿದವರನ್ನು ವಜಾಗೊಳಿಸಲಾಗುವುದು” ಎಂದು ಆರೋಗ್ಯ ಸಚಿವರು ತಿಳಿಸಿದ್ದಾರೆ.

ಇದು ಮೊದಲ ಘಟನೆಯಲ್ಲ. ಇಂತಹ ನೂರಾರು ಘಟನೆಗಳು ನಮ್ಮ ದೇಶದಲ್ಲಿ ಜರುಗಿವೆ. ಭಾರತದಲ್ಲಿ ಆರೋಗ್ಯ ವ್ಯವಸ್ಥೆ ಕಳಪೆ ಮಟ್ಟದಲ್ಲಿರುವುದನ್ನು ಇಂತಹ ಘಟನೆಗಳು ಪದೇ ಪದೇ ನಿರೂಪಿಸುತ್ತಿವೆ. ದೇಶದ ಎಲ್ಲರಿಗೂ ಉಚಿತ ಮತ್ತು ಗುಣಮಟ್ಟದ ಆರೋಗ್ಯ ಮತ್ತು ಶಿಕ್ಷಣ ಸೇವೆ ನೀಡಬೇಕಾದ ಸರ್ಕಾರಗಳು ತಮ್ಮ ಕರ್ತವ್ಯ ಪಾಲಿಸುತ್ತಿಲ್ಲ. ಸಮರ್ಪಕ ಮೇಲ್ವಿಚಾರಣೆ ಇಲ್ಲದ ಕಾರಣಕ್ಕೆ ಇರುವ ಸರ್ಕಾರಿ ಆಸ್ಪತ್ರೆಗಳು ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ. ಅದರಿಂದಾಗಿಯೇ ಇಂತಹ ಅನಾಹುತಗಳು ಸಂಭವಿಸುತ್ತಿವೆ. ಈಗಲಾದರೂ ಸರ್ಕಾರಗಳು ಎಚ್ಚೆತ್ತುಕೊಳ್ಳಬೇಕು ಮತ್ತು ಅದಕ್ಕಾಗಿ ಜನರು ಒತ್ತಾಯಿಸಬೇಕಾಗಿದೆ.


ಇದನ್ನೂ ಓದಿ: ಬಾಲಕನನ್ನು ಬೆತ್ತಲುಗೊಳಿಸಿ, ಬಣ್ಣ ಸುರಿದು ಚಿತ್ರಹಿಂಸೆ: ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...