Homeಮುಖಪುಟ'ISRO ದ ಚಂದ್ರಯಾನ-3 ಚಂದ್ರನ ದಕ್ಷಿಣ ಧ್ರುವದಲ್ಲಿ ಲ್ಯಾಂಡ್ ಆಗಿಲ್ಲ': ಚೀನಾ ವಿಜ್ಞಾನಿ

‘ISRO ದ ಚಂದ್ರಯಾನ-3 ಚಂದ್ರನ ದಕ್ಷಿಣ ಧ್ರುವದಲ್ಲಿ ಲ್ಯಾಂಡ್ ಆಗಿಲ್ಲ’: ಚೀನಾ ವಿಜ್ಞಾನಿ

- Advertisement -
- Advertisement -

ಭಾರತ ಚಂದ್ರನ ಅಂಗಳದಲ್ಲಿ ಇಳಿದಿದೆ ಎಂದು ಇಸ್ರೋದ ಸಾಧನೆಯನ್ನು ಅತಿಯಾಗಿ ಬಿಂಬಿಸಲಾಗಿದೆ ಎಂದು ಚೀನಾದ ಚಂದ್ರನ ಪರಿಶೋಧನಾ ಯೋಜನೆಯ ಪಿತಾಮಹ ಎಂದು ಕರೆಯಲ್ಪಡುವ ಚೀನಾದ ವಿಜ್ಞಾನಿ ಓಯಾಂಗ್ ಜಿಯುವಾನ್ ಹೇಳಿದ್ದಾರೆ.

ಜುಲೈ 14 ರಂದು ಶ್ರೀಹರಿಕೋಟಾದಿಂದ ಚಂದ್ರಯಾನ-3 ತನ್ನ ಪ್ರಯಾಣವನ್ನು ಪ್ರಾರಂಭಿಸಿ, ಆಗಸ್ಟ್ 23 ರಂದು ಚಂದ್ರನ ಮೇಲ್ಮೈಯಲ್ಲಿ ಇಳಿಯಿತು. 69 ಡಿಗ್ರಿ ದಕ್ಷಿಣ ಅಕ್ಷಾಂಶದಲ್ಲಿರುವ ಲ್ಯಾಂಡಿಂಗ್ ಸೈಟ್ ದಕ್ಷಿಣ ಧ್ರುವದ ಬಳಿ ಇಲ್ಲ ಎಂದು ವಿಜ್ಞಾನಿ ಹೇಳಿರುವುದಾಗಿ ಚೀನೀ ಭಾಷೆಯ ಪತ್ರಿಕೆ ಸೈನ್ಸ್ ಟೈಮ್ಸ್‌ ವರದಿ ಮಾಡಿದೆ.

ಬ್ಲೂಮ್‌ಬರ್ಗ್‌ನಲ್ಲಿನ ವರದಿಯ ಪ್ರಕಾರ, ಭೂಮಿಯ ಮೇಲೆ 69 ಡಿಗ್ರಿ ದಕ್ಷಿಣವು ಅಂಟಾರ್ಕ್ಟಿಕ್ ವೃತ್ತದೊಳಗೆ ಇರುತ್ತದೆ, ಆದರೆ ಚಂದ್ರನ ಮೇಲ್ಮೈಯಲ್ಲಿರುವ ವೃತ್ತವು ಧ್ರುವಕ್ಕೆ ಹೆಚ್ಚು ಹತ್ತಿರದಲ್ಲಿದೆ ಎಂದು ಹೇಳಲಾಗಿದೆ.

ಚಂದ್ರನ ದಕ್ಷಿಣ ಧ್ರುವದಲ್ಲಿ ಚಂದ್ರಯಾನ -3ರ ಲ್ಯಾಂಡಿಂಗ್ ಸೈಟ್ ಇಲ್ಲ, ಚಂದ್ರನ ದಕ್ಷಿಣ ಧ್ರುವ ಪ್ರದೇಶದ ಸಮೀಪದಲ್ಲಿಲ್ಲ ಎಂದು ಜಿಯುವಾನ್ ಹೇಳಿದ್ದಾರೆ.

”ಚಂದ್ರಯಾನ-3 ಲ್ಯಾಂಡಿಂಗ್ ಚಂದ್ರನ ದಕ್ಷಿಣ ಧ್ರುವದಲ್ಲಿ ಇಳಿದಿದೆ ಎನ್ನುವುದು ‘ತಪ್ಪು’,  ಧ್ರುವ ಪ್ರದೇಶದಿಂದ 619 ಕಿಮೀ ದೂರದಲ್ಲಿದೆ” ಎಂದು ಅವರು ಹೇಳಿದರು.

ಚಂದ್ರಯಾನ-3ರ ಸಾಧನೆಗಳನ್ನು ಪ್ರಶ್ನಿಸಿದ್ದು, ಚೀನಾದ ವಿಜ್ಞಾನಿ ಜಿಯುವಾನ್ ಮೊದಲೇನಲ್ಲ.. ಈ ಹಿಂದೆ ಬೀಜಿಂಗ್ ಮೂಲದ ಬಾಹ್ಯಾಕಾಶ ತಜ್ಞ ಪಾಂಗ್ ಝಿಹಾವೊ ಅವರು ಗ್ಲೋಬಲ್ ಟೈಮ್ಸ್‌ಗೆ ಚೀನಾ ವಿವಿಧ ಕ್ಷೇತ್ರಗಳಲ್ಲಿ ಹೆಚ್ಚು ಮುಂದುವರಿದಿದೆ ಎಂದು ಹೇಳಿದ್ದರು.

2010ರಲ್ಲಿ ಚಾಂಗ್ಇ-2 ಅನ್ನು ಉಡಾವಣೆ ಮಾಡಿದ ನಂತರ ಚೀನಾವು ನೇರವಾಗಿ ಆರ್ಬಿಟರ್‌ಗಳು ಮತ್ತು ಲ್ಯಾಂಡರ್‌ಗಳನ್ನು ಭೂಮಿ-ಚಂದ್ರ ವರ್ಗಾವಣೆ ಕಕ್ಷೆಗೆ ಕಳುಹಿಸಬಹುದು. ಭಾರತ ತನ್ನ ಉಡಾವಣಾ ವಾಹನಗಳ ಸೀಮಿತ ಸಾಮರ್ಥ್ಯವನ್ನು ಪರಿಗಣಿಸಿ ಇದನ್ನು ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದರು.

ಚೀನಾ ಬಳಸುವ ಎಂಜಿನ್ ಕೂಡ ಬಹಳ ಮುಂದುವರಿದಿದೆ. ಅದರ ಲೂನಾರ್ ರೋವರ್ ತುಂಬಾ ದೊಡ್ಡದಾಗಿದೆ ಎಂದು ಪಾಂಗ್ ಹೇಳಿದ್ದರು.

ಇದನ್ನೂ ಓದಿ: ವೇತನ ಸಿಗದೆ ಇಡ್ಲಿ ಮಾರಾಟಕ್ಕಿಳಿದ ಚಂದ್ರಯಾನ-3ರ ಲಾಂಚ್‌ಪ್ಯಾಡ್ ನಿರ್ಮಿಸಲು ಸಹಕರಿಸಿದ್ದ ಇಂಜಿನಿಯರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಎನ್‌ಸಿಪಿ ನಾಯಕನ ಕೊಲೆ ಪ್ರಕರಣ : ಛತ್ತೀಸ್‌ಗಢ ಮಾಜಿ ಸಿಎಂ ಅಜಿತ್ ಜೋಗಿ ಮಗ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ

2003ರ ಕೊಲೆ ಪ್ರಕರಣದಲ್ಲಿ ಛತ್ತೀಸ್‌ಗಢ ಹೈಕೋರ್ಟ್ ಮಾಜಿ ಮುಖ್ಯಮಂತ್ರಿ ಅಜಿತ್ ಜೋಗಿ ಅವರ ಪುತ್ರ ಅಮಿತ್ ಜೋಗಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ದಿ ಹಿಂದೂ ಸೋಮವಾರ (ಏ.6) ವರದಿ ಮಾಡಿದೆ. ರಾಷ್ಟ್ರೀಯವಾದಿ ಕಾಂಗ್ರೆಸ್...

ಪ. ಬಂಗಾಳ | ಮತದಾರರ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಸೂಕ್ತ ಕಾರಣ ನೀಡದ ಚುನಾವಣಾ ಆಯೋಗ : ಕಾಂಗ್ರೆಸ್ ಅಭ್ಯರ್ಥಿ ಹೆಸರು ಮರು ಸೇರ್ಪಡೆ

ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲ್ಪಟ್ಟವರ ಅರ್ಜಿಗಳ ವಿಚಾರಣೆಗಾಗಿ ಕೋಲ್ಕತ್ತಾದಲ್ಲಿ ಸ್ಥಾಪಿಸಲಾದ ಮೇಲ್ಮನವಿ ನ್ಯಾಯಮಂಡಳಿಯು, ಮುಂಬರುವ ವಿಧಾನಸಭಾ ಚುನಾವಣೆಯ ಫರಕ್ಕಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊತಾಬ್ ಶೇಖ್ ಅವರ ಹೆಸರನ್ನು ಭಾನುವಾರ...

ತೂತುಕುಡಿ ಸಾತನ್‌ಕುಳಂ ತಂದೆ-ಮಗನ ಕಸ್ಟಡಿ ಸಾವು ಪ್ರಕರಣ : ಅಪರಾಧಿಗಳಾದ ಎಲ್ಲಾ 9 ಪೊಲೀಸರಿಗೆ ಮರಣದಂಡನೆ ವಿಧಿಸಿದ ನ್ಯಾಯಾಲಯ

ತಮಿಳುನಾಡಿನ ತೂತುಕುಡಿ ಜಿಲ್ಲೆಯ ಸಾತನ್‌ಕುಳಂ ಪೊಲೀಸ್ ಠಾಣೆಯಲ್ಲಿ ಕೋವಿಡ್-19 ಲಾಕ್‌ಡೌನ್ ಸಮಯದಲ್ಲಿ ಸಂಭವಿಸಿದ, ವ್ಯಾಪಾರಿ ಪಿ. ಜಯರಾಜ್ (58) ಮತ್ತು ಅವರ ಮಗ ಜೆ. ಬೆನಿಕ್ಸ್ (31) ಅವರ ಕಸ್ಟಡಿ ಸಾವು ಪ್ರಕರಣದ...

ದಾವಣಗೆರೆ ದಕ್ಷಿಣ ಉಪ-ಸಮರ: ಶಾಮನೂರು ಸಾಮ್ರಾಜ್ಯದಲ್ಲಿ ಅಹಿಂದ ಬಂಡಾಯ!

ತುಂಗಭದ್ರಾ ನದಿ ಪರ‍್ವಕ್ಕೆ ಎತ್ತರದ ಪ್ರದೇಶದಲ್ಲಿರುವ ದಾವಣಗೆರೆ ಮಧ್ಯ ಕರ್ನಾಟಕದ ಪ್ರಮುಖ ವಾಣಿಜ್ಯ ನಗರಿ. ಬೆಣ್ಣೆ ದೋಸೆಯ ಘಮಲಿನ ದಾವಣಗೆರೆಯ ರಾಜಕಾರಣ ಮಾತ್ರ ಮಿರ್ಚಿ-ಮಂಡಕ್ಕಿಯ ಖಡಕ್ ಖಾರಾ ಕುರುಕುಲಿನಂತೆ! ದಾವಣಗೆರೆ ಮತ್ತದರ ಸುತಮುತ್ತಲಿನ...

‘Dr. Nimo Yadav’, ‘Nehr Who’ ಎಕ್ಸ್‌ ಖಾತೆಗಳನ್ನು ತಕ್ಷಣ ಮರುಸ್ಥಾಪಿಸಲು ದೆಹಲಿ ಹೈಕೋರ್ಟ್ ಆದೇಶ

'Dr. Nimo Yadav' ಮತ್ತು 'Nehr Who' ಎಂಬ ಎರಡು ಪರೋಡಿ ಎಕ್ಸ್‌ ಖಾತೆಗಳನ್ನು ತಕ್ಷಣ ಮರು ಸ್ಥಾಪಿಸುವಂತೆ ದೆಹಲಿ ಹೈಕೋರ್ಟ್ ಸೋಮವಾರ (ಏ.6) ಎಕ್ಸ್ ಸಂಸ್ಥೆಗೆ (X Corp) ಆದೇಶಿಸಿದೆ. 'Dr....

ಬಂಗಾಳ| ಮತದಾರರ ಪಟ್ಟಿಯಿಂದ ಹೆಸರು ತೆಗೆದ ಬಳಿಕ ಸಾವಿಗೆ ಶರಣಾದ ಮುಸ್ಲಿಂ ವ್ಯಕ್ತಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ನಂತರ ಪಶ್ಚಿಮ ಬಂಗಾಳದಲ್ಲಿ ಮತದಾರರ ಪಟ್ಟಿಯಿಂದ ತನ್ನ ಹೆಸರನ್ನು ತೆಗೆದುಹಾಕಿದ್ದರಿಂದ ಮನನೊಂದ ಮುಸ್ಲಿಂ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತನನ್ನು ಬಿರ್ಭುಮ್...

‘ಯೋಜನೆಯು ಕೇರಳಕ್ಕೆ ಜೀವನಾಡಿಯಾಗಲಿದೆ’: ವಯನಾಡ್ ಸುರಂಗ ಮಾರ್ಗ ವಿರುದ್ದದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಕೇರಳದ ಕೋಝಿಕ್ಕೋಡ್-ವಯನಾಡ್ ಸುರಂಗ ಮಾರ್ಗ ನಿರ್ಮಾಣಕ್ಕೆ ನೀಡಲಾದ ಪರಿಸರ ಅನುಮತಿ (ಇಸಿ) ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ (ಏ.6) ವಜಾಗೊಳಿಸಿದೆ. ಸುರಂಗ ನಿರ್ಮಾಣದ ಸಮಯದಲ್ಲಿ ಪರಿಸರ ಅನುಮತಿಯ ಷರತ್ತುಗಳ ಉಲ್ಲಂಘನೆಯಾದರೆ, ಅರ್ಜಿದಾರರು...

651 ಕೋಟಿ ರೂ. ಮೌಲ್ಯದ ನಗದು, ಮದ್ಯ, ಮಾದಕ ವಸ್ತು ವಶಪಡಿಸಿಕೊಂಡ ಚುನಾವಣಾ ಆಯೋಗ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದಲ್ಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಅಧಿಕಾರಿಗಳು 651.51 ಕೋಟಿ ರೂ.ಗೂ ಹೆಚ್ಚು ಮೌಲ್ಯದ ನಗದು, ಮದ್ಯ, ಮಾದಕ ವಸ್ತುಗಳು ಮತ್ತು ಇತರ ಉಚಿತ ವಸ್ತುಗಳನ್ನು...

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ಬಾಲಕಿಯನ್ನು ಸರಪಳಿಯಿಂದ ಕಟ್ಟಿ ಥಳಿಸಿದ ಮಾಜಿ ಸೇನಾಧಿಕಾರಿ

ಪೇರಳೆ ಹಣ್ಣು ಕದ್ದಿದ್ದಾಳೆಂದು ಆರೋಪಿಸಿ ನಾಲ್ಕು ವರ್ಷದ ಬಾಲಕಿಯನ್ನು ನಿವೃತ್ತ ಸೇನಾಧಿಕಾರಿಯೊಬ್ಬರು ಸರಪಳಿಯಿಂದ ಕಟ್ಟಿಹಾಕಿ ಕ್ರೂರವಾಗಿ ಥಳಿಸಿರುವ ಆಘಾತಕಾರಿ ಘಟನೆ ಹಿಮಾಚಲ ಪ್ರದೇಶದ ಉನಾ ಜಿಲ್ಲೆಯ ಬೆಹಡಾಲ ಗ್ರಾಮದಲ್ಲಿ ನಡೆದಿದೆ. ಬಾಲಕಿಯು ನಿವೃತ್ತ ಸೇನಾಧಿಕಾರಿಯ ತೋಟದ...

ಆಂಧ್ರ ವಿಧಾನಸಭಾ ಸ್ಪೀಕರ್ ಅಯ್ಯಣ್ಣ ಪಾತ್ರುಡು ಅವರಿಂದ ದಲಿತ ವ್ಯಕ್ತಿಗೆ ಕಪಾಳಮೋಕ್ಷ: ವೈಎಸ್‌ಆರ್‌ಸಿಪಿ ವಾಗ್ದಾಳಿ

ಏಪ್ರಿಲ್ 3 ರ ಗುರುವಾರ ನರಸಿಪಟ್ಟಣದಲ್ಲಿ ದಲಿತ ವ್ಯಕ್ತಿಯೊಬ್ಬರಿಗೆ ಕಪಾಳಮೋಕ್ಷ ಮಾಡಿದ್ದಕ್ಕಾಗಿ ಆಂಧ್ರಪ್ರದೇಶ ವಿಧಾನಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಾಯಕ ಅಯ್ಯಣ್ಣ ಪಾತ್ರುಡು ಅವರ ವಿರುದ್ಧ ವೈಎಸ್‌ಆರ್ ಕಾಂಗ್ರೆಸ್...