HomeಅಂಕಣಗಳುSIRಪಶ್ಚಿಮ ಬಂಗಾಳ| ಎಸ್‌ಐಆರ್‌ನಲ್ಲಿ ತಂದೆಯ ಹೆಸರು ಡಿಲೀಟ್; ಮಗುವಿಗೆ ಜನನ ಪ್ರಮಾಣಪತ್ರ ನಿರಾಕರಣೆ!

ಪಶ್ಚಿಮ ಬಂಗಾಳ| ಎಸ್‌ಐಆರ್‌ನಲ್ಲಿ ತಂದೆಯ ಹೆಸರು ಡಿಲೀಟ್; ಮಗುವಿಗೆ ಜನನ ಪ್ರಮಾಣಪತ್ರ ನಿರಾಕರಣೆ!

- Advertisement -
- Advertisement -

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ವೇಳೆ ತಂದೆಯ ಹೆಸರು ಮತದಾರರ ಪಟ್ಟಿಯಿಂದ ಅಳಿಸಲ್ಪಟ್ಟಿರುವ ಕಾರಣಕ್ಕೆ ಸುಮಾರು ಮೂರು ತಿಂಗಳ ಹಸುಗೂಸಿಗೆ ಜನನ ಪ್ರಮಾಣಪತ್ರ ನೀಡಲು ಪಂಚಾಯತ್ ಅಧಿಕಾರಿಗಳು ನಿರಾಕರಿಸಿರುವ ಘಟನೆ ಬೆಳಕಿಗೆ ಬಂದಿದೆ.

‘ದಿ ಹಿಂದೂ’ ವರದಿಯ ಪ್ರಕಾರ, ಕೂಚ್‌ಬೆಹಾರ್ ಜಿಲ್ಲೆಯ ದಿನ್‌ಹಟಾ ಉಪವಿಭಾಗೀಯ ಆಸ್ಪತ್ರೆಯಲ್ಲಿ ಸೆಪ್ಟೆಂಬರ್ 9ರಂದು ಅಮೀನಾ ಖಾತೂನ್ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಮಗುವಿನ ಜನನದ ಬಳಿಕ ಖಾತೂನ್ ಮತ್ತು ಅವರ ಪತಿ ಅಬ್ದುಲ್ ಹಬೀಬ್ ಜನನ ಪ್ರಮಾಣಪತ್ರ ಪಡೆಯಲು ಆಸ್ಪತ್ರೆ ಹಾಗೂ ಪಂಚಾಯತ್ ಕಚೇರಿಯನ್ನು ಸಂಪರ್ಕಿಸಿದ್ದರು.

ಆದರೆ, ಜನನ ಪ್ರಮಾಣಪತ್ರ ಪಡೆಯಲು ಸ್ಥಳೀಯ ಶಾಸಕರು ಅಥವಾ ಪಂಚಾಯತ್ ಪ್ರಧಾನರಿಂದ ನಿವಾಸ ದೃಢೀಕರಣ ಪತ್ರ ಸಲ್ಲಿಸುವಂತೆ ದಂಪತಿಗೆ ಸೂಚಿಸಲಾಯಿತು.

ಈ ಹಿನ್ನೆಲೆಯಲ್ಲಿ ದಿನ್‌ಹಟಾ ಕ್ಷೇತ್ರದ ಶಾಸಕ ಅಜಯ್ ರಾಯ್ ಅವರನ್ನು ಭೇಟಿಯಾಗಿ ಅಗತ್ಯ ದೃಢೀಕರಣ ಪಡೆಯಲು ಹಬೀಬ್ ಪ್ರಯತ್ನಿಸಿದರು. ಆದರೆ, ಶಾಸಕರ ಕಚೇರಿ ಅವರ ಮನವಿಯನ್ನು ಸ್ವೀಕರಿಸಲು ನಿರಾಕರಿಸಿತು. ಎಸ್‌ಐಆರ್ ಪ್ರಕ್ರಿಯೆ ವೇಳೆ ಮತದಾರರ ಪಟ್ಟಿಯಿಂದ ಅವರ ಹೆಸರನ್ನು ತೆಗೆದುಹಾಕಲಾಗಿರುವುದರಿಂದ ಜನನ ಪ್ರಮಾಣಪತ್ರ ನೋಂದಣಿ ಮಾಡಲು ಸಾಧ್ಯವಿಲ್ಲ ಎಂದು ಕಚೇರಿಯ ಸಿಬ್ಬಂದಿ ತಿಳಿಸಿದ್ದಾರೆ.

ಶಾಸಕರ ಕಚೇರಿಯ ಅಧಿಕಾರಿಯೊಬ್ಬರು ದೂರವಾಣಿ ಕರೆ ಮಾಡಿ ತಮ್ಮನ್ನು ಬಾಂಗ್ಲಾದೇಶದ ಪ್ರಜೆ ಎಂದು ಕರೆದರು. ಅಲ್ಲದೆ, ಮೊದಲು ರಾಷ್ಟ್ರೀಯ ನಾಗರಿಕರ ನೋಂದಣಿ (ಎನ್‌ಸಿಆರ್) ಅಡಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಸೂಚಿಸಿದರು ಎಂದು ಹಬೀಬ್ ಆರೋಪಿಸಿದ್ದಾರೆ.

“ನಾನೇಕೆ ಅದನ್ನು ಮಾಡಬೇಕು? ನಾನು ಹುಟ್ಟಿನಿಂದಲೂ ಭಾರತದಲ್ಲೇ ವಾಸಿಸುತ್ತಿದ್ದೇನೆ. ಖತಮಾರಿ ಪ್ರದೇಶದಲ್ಲಿರುವ ನನ್ನ ಮನೆಯನ್ನು ನನ್ನ ಅಜ್ಜ ನಿರ್ಮಿಸಿದ್ದಾರೆ. ಎಲ್ಲ ದಾಖಲೆಗಳನ್ನು ತೋರಿಸಿದ್ದರೂ ಅವರು ಜನನ ಪ್ರಮಾಣಪತ್ರ ನೀಡಲು ನಿರಾಕರಿಸಿದ್ದಾರೆ” ಎಂದು ಹಬೀಬ್ ‘ದಿ ಹಿಂದೂ’ ಪತ್ರಿಕೆಗೆ ತಿಳಿಸಿದ್ದಾರೆ.

ನೆರೆಯ ಸಾಹೇಬ್‌ಗಂಜ್ ಗ್ರಾಮದ ಬ್ಲಾಕ್ ಅಭಿವೃದ್ಧಿ ಅಧಿಕಾರಿ (ಬಿಡಿಒ) ಅವರನ್ನೂ ಹಬೀಬ್ ಸಂಪರ್ಕಿಸಿದ್ದರು. ಆದರೆ, ಅದೇ ಕಾರಣಗಳನ್ನು ಮುಂದಿಟ್ಟು ಅವರ ಮನವಿಯನ್ನು ಸ್ವೀಕರಿಸಲು ಅಧಿಕಾರಿಗಳು ನಿರಾಕರಿಸಿದ್ದಾರೆ.

ಹಬೀಬ್ ಅವರ ಜೊತೆಗೆ ಅವರ ಸಹೋದರಿಯರ ಹೆಸರುಗಳನ್ನೂ ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿದೆ. ಚುನಾವಣಾ ಆಯೋಗ ನಡೆಸಿದ ವಿಚಾರಣೆಯ ಸಂದರ್ಭದಲ್ಲಿ, ಹಬೀಬ್ ಅವರ ತಂದೆಯೇ ತಮ್ಮ ತಂದೆ ಎಂದು ಇನ್ನೂ ಆರು ಮಂದಿ ಹೇಳಿಕೊಂಡಿರುವುದರಿಂದ ‘ತಾರ್ಕಿಕ ವ್ಯತ್ಯಾಸ’ ಕಂಡುಬಂದಿದೆ ಎಂದು ಆಯೋಗ ತಿಳಿಸಿತ್ತು.

ಆದರೆ, ಅವರ ಪೋಷಕರು ಮತ್ತು ಪತ್ನಿ ಖಾತೂನ್ ಅವರ ಹೆಸರುಗಳು ಮತದಾರರ ಪಟ್ಟಿಯಲ್ಲಿ ಮುಂದುವರಿದಿವೆ. ಮತದಾರರ ಪಟ್ಟಿಗೆ ತಮ್ಮ ಹೆಸರನ್ನು ಮರುಸೇರ್ಪಡೆಗೊಳಿಸುವಂತೆ ಸಲ್ಲಿಸಿರುವ ಮೇಲ್ಮನವಿಯ ಕುರಿತು ನ್ಯಾಯಮಂಡಳಿಯ ತೀರ್ಪಿಗಾಗಿ ಹಬೀಬ್ ಕಾಯುತ್ತಿದ್ದಾರೆ.

ಜನನ ಪ್ರಮಾಣಪತ್ರ ನಿರಾಕರಣೆಗೆ ಎಪಿಸಿಆರ್ ಖಂಡನೆ: ತಕ್ಷಣ ನೋಂದಣಿಗೆ ಆಗ್ರಹ

ಎಸ್‌ಐಆರ್‌ನಲ್ಲಿ ಹೆಸರುಗಳನ್ನು ತೆಗೆದುಹಾಕಿರುವುದನ್ನು ನೆಪವಾಗಿಟ್ಟುಕೊಂಡು ಹಸುಗೂಸಿನ ಜನನ ಪ್ರಮಾಣಪತ್ರ ನೋಂದಣಿಗೆ ಅಧಿಕಾರಿಗಳು ನಿರಾಕರಿಸಿರುವುದನ್ನು ನಾಗರಿಕ ಹಕ್ಕುಗಳ ರಕ್ಷಣಾ ಸಂಘಟನೆ (ಎಪಿಸಿಆರ್) ತೀವ್ರವಾಗಿ ಖಂಡಿಸಿದೆ.

“ಜನನ ನೋಂದಣಿ ಮಾಡುವುದು ಕಾನೂನುಬದ್ಧ ಕರ್ತವ್ಯವಾಗಿದೆ. ವಿಶ್ವಸಂಸ್ಥೆಯ ಮಕ್ಕಳ ಹಕ್ಕುಗಳ ಒಪ್ಪಂದದ 7ನೇ ವಿಧಿಯ ಪ್ರಕಾರ, ಪ್ರತಿಯೊಂದು ಮಗುವಿಗೂ ಜನನದ ತಕ್ಷಣವೇ ನೋಂದಣಿ ಮಾಡಿಸಿಕೊಳ್ಳುವ ಮತ್ತು ಕಾನೂನುಬದ್ಧ ಗುರುತನ್ನು ಪಡೆಯುವ ಹಕ್ಕಿದೆ” ಎಂದು ಸಂಘಟನೆ ಹೇಳಿಕೆಯಲ್ಲಿ ತಿಳಿಸಿದೆ.

ಮಗುವಿನ ಕಾನೂನುಬದ್ಧ ಗುರುತಿನ ಹಕ್ಕನ್ನು ಅದರ ಪೋಷಕರ ಮತದಾರರ ಪಟ್ಟಿಯಲ್ಲಿನ ಸ್ಥಾನಮಾನದೊಂದಿಗೆ ಜೋಡಿಸಬಾರದು ಎಂದು ಎಪಿಸಿಆರ್ ಹೇಳಿದೆ.

ಎಸ್‌ಐಆರ್‌ಗೆ ಸಂಬಂಧಿಸಿದ ಆಡಳಿತಾತ್ಮಕ ವಿವಾದವೊಂದನ್ನು ನವಜಾತ ಶಿಶುವಿನ ಮೂಲಭೂತ ಹಕ್ಕುಗಳಿಗೆ ಅಡ್ಡಿಯಾಗಿ ಬಳಸಲು ಸಾಧ್ಯವಿಲ್ಲ ಎಂದು ಸಂಘಟನೆ ಆಕ್ಷೇಪಿಸಿದೆ. ಮಗುವಿಗೆ ತಕ್ಷಣ ಜನನ ಪ್ರಮಾಣಪತ್ರ ಒದಗಿಸುವಂತೆ ಸರ್ಕಾರವನ್ನು ಎಪಿಸಿಆರ್ ಆಗ್ರಹಿಸಿದೆ.

ಎಸ್‌ಐಆರ್‌ನಲ್ಲಿ ಹೆಸರು ಅಳಿಸಿದ ಬಳಿಕ ಸರ್ಕಾರಿ ಸೌಲಭ್ಯಗಳಿಗೂ ಕತ್ತರಿ

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (ಎಸ್‌ಐಆರ್) ನಡೆಸಲಾಗಿತ್ತು. ಈ ಪ್ರಕ್ರಿಯೆಯಲ್ಲಿ ಮತದಾರರ ಪಟ್ಟಿಯಿಂದ ಸುಮಾರು 91 ಲಕ್ಷ ಹೆಸರುಗಳನ್ನು ತೆಗೆದುಹಾಕಲಾಗಿದ್ದು, ಇದರಿಂದ ಅಲ್ಪಸಂಖ್ಯಾತ ಸಮುದಾಯಗಳ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬಾಧಿತರಾಗಿದ್ದಾರೆ.

ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹಾಗೂ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆಯ ನಂತರ, ಎಸ್‌ಐಆರ್‌ನಲ್ಲಿ ಹೆಸರು ಕಳೆದುಕೊಂಡಿರುವ ನಿವಾಸಿಗಳು ಮತ್ತಷ್ಟು ಅಂಚಿಗೆ ತಳ್ಳಲ್ಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ.

ಕೂಚ್‌ಬೆಹಾರ್ ನಿವಾಸಿ ಉಮ್ಮೆ ಸಲ್ಮಾ ಅವರು ತಮ್ಮ ಹೆಸರು ಮತದಾರರ ಪಟ್ಟಿಯಿಂದ ತೆಗೆದುಹಾಕಿರುವುದನ್ನು ಪ್ರಶ್ನಿಸಿ ಜೂನ್ ತಿಂಗಳಲ್ಲಿ ಕಲ್ಕತ್ತಾ ಹೈಕೋರ್ಟ್ ಮೆಟ್ಟಿಲೇರಿದ್ದರು. ಮತದಾರರ ಪಟ್ಟಿಯಿಂದ ಹೆಸರು ಅಳಿಸಿರುವುದರ ವಿರುದ್ಧ ಮೇಲ್ಮನವಿ ಸಲ್ಲಿಸಿರುವುದಕ್ಕೆ ಪುರಾವೆ ನೀಡದಿದ್ದರೆ ಪಡಿತರ ವಿತರಣೆಯನ್ನು ಸ್ಥಗಿತಗೊಳಿಸುವ ಸಾಧ್ಯತೆಯಿದೆ ಎಂದು ಸ್ಥಳೀಯ ನ್ಯಾಯಬೆಲೆ ಅಂಗಡಿಯ ಮಾಲೀಕರು ಎಚ್ಚರಿಕೆ ನೀಡಿದ್ದ ಹಿನ್ನೆಲೆಯಲ್ಲಿ ಅವರು ನ್ಯಾಯಾಲಯದ ಮೊರೆ ಹೋಗಿದ್ದರು.

ಇದೇ ವೇಳೆ, ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲ್ಪಟ್ಟಿರುವ ನಾಗರಿಕರಿಗೆ ಮೂಲಭೂತ ಸರ್ಕಾರಿ ಸೌಲಭ್ಯಗಳು ಮತ್ತು ಕಲ್ಯಾಣ ಯೋಜನೆಗಳ ಪ್ರಯೋಜನಗಳನ್ನು ನಿರಾಕರಿಸಲಾಗುತ್ತಿರುವ ಕುರಿತು ಪ್ರತಿಪಕ್ಷಗಳೂ ಆತಂಕ ವ್ಯಕ್ತಪಡಿಸಿವೆ.

ಕೇಂದ್ರ ಸಚಿವ ರಾಜೀವ್ ರಂಜನ್ ಸಿಂಗ್ ಅವರು, ಇನ್ನು ಮುಂದೆ ಆರ್ಥಿಕ ನೆರವು ಮತ್ತು ಕಲ್ಯಾಣ ಯೋಜನೆಗಳ ಹಣ ಪಡೆಯಲು ಮತದಾರರ ಫೋಟೋ ಗುರುತಿನ ಚೀಟಿ (ಎಪಿಕ್) ಸಂಖ್ಯೆಯ ಜೊತೆಗೆ ಕಡ್ಡಾಯ ಬಯೋಮೆಟ್ರಿಕ್ ದೃಢೀಕರಣವೂ ಅಗತ್ಯ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಯ ಬೆನ್ನಲ್ಲೇ ಪ್ರತಿಪಕ್ಷಗಳು ಈ ಆತಂಕವನ್ನು ವ್ಯಕ್ತಪಡಿಸಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧದ ಪ್ರತಿಭಟನೆಯಲ್ಲಿ ಅಕ್ರಮ ಬಂಧನ ಆರೋಪ: ಕೇಂದ್ರ, ದೆಹಲಿ ಸರ್ಕಾರಕ್ಕೆ ಸುಪ್ರೀಂ 10 ದಿನಗಳ ಗಡುವು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರ ಪದಚ್ಯುತಿಗೆ ಆಗ್ರಹಿಸಿ ಕಳೆದ ಅಕ್ಟೋಬರ್‌ನಲ್ಲಿ ದೆಹಲಿಯಲ್ಲಿ ನಡೆದ ಪ್ರತಿಭಟನೆಗಳ ವೇಳೆ ಪ್ರತಿಭಟನಾಕಾರರನ್ನು ಅಕ್ರಮವಾಗಿ ಬಂಧಿಸಲಾಗಿದೆ ಎಂದು ಆರೋಪಿಸಿ ಸಲ್ಲಿಸಲಾದ ಅರ್ಜಿಗಳಿಗೆ ಸಮಗ್ರ...

ಮೋದಿ ಆಡಳಿತದಲ್ಲಿ ಭಾರತದ ಪ್ರಜಾಪ್ರಭುತ್ವ ಸಂಸ್ಥೆಗಳು ದುರ್ಬಲಗೊಂಡಿವೆ: ಹ್ಯೂಮನ್ ರೈಟ್ಸ್ ವಾಚ್

ಜಾಗತಿಕ ಮಟ್ಟದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ, ಪ್ರಜಾಪ್ರಭುತ್ವದ ಮೌಲ್ಯಗಳು ಮತ್ತು ನಾಗರಿಕ ಸ್ವಾತಂತ್ರ್ಯಗಳ ಕುರಿತು ದಶಕಗಳಿಂದ ಸ್ವತಂತ್ರವಾಗಿ ತನಿಖೆ ನಡೆಸಿ ವರದಿಗಳನ್ನು ಪ್ರಕಟಿಸುವ ಅಂತರರಾಷ್ಟ್ರೀಯ ಸ್ವಯಂಸೇವಾ ಸಂಸ್ಥೆ ಭಾರತದ ಪ್ರಸ್ತುತ ರಾಜಕೀಯ ಮತ್ತು...

6 ವರ್ಷಗಳ ಜೈಲುವಾಸದ ಬಳಿಕವೂ ಉಮರ್ ಖಾಲಿದ್‌ಗೆ ಮಧ್ಯಂತರ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್

2020ರ ದೆಹಲಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ಆರು ವರ್ಷಗಳಿಂದ ಜೈಲಿನಲ್ಲಿರುವ ಸಾಮಾಜಿಕ ಹೋರಾಟಗಾರ ಉಮರ್ ಖಾಲಿದ್ ಅವರಿಗೆ ತಕ್ಷಣ ಮಧ್ಯಂತರ ಜಾಮೀನು ನೀಡಲು ಸುಪ್ರೀಂ ಕೋರ್ಟ್ ಬುಧವಾರ (ನ.25) ನಿರಾಕರಿಸಿದೆ. ಉಮರ್...

ಕೋಳಿ ಸಾಕಾಣಿಕೆಗೆ ಕನಿಷ್ಠ ದರ ನಿಗದಿಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ರೈತರ ಪ್ರತಿಭಟನೆ

ಕೋಳಿ ಸಾಕಾಣಿಕೆ ಕೃಷಿಯಲ್ಲಿ ಲಾಭಾಂಶವಿಲ್ಲದೆ ತೀವ್ರ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರು, ಕನಿಷ್ಠ ಸಾಕಾಣಿಕೆ ದರವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವಂತೆ ಹಾಗೂ ವಿವಿಧ ಹಕ್ಕೊತ್ತಾಯಗಳನ್ನು ಈಡೇರಿಸುವಂತೆ ಒತ್ತಾಯಿಸಿ ಬೃಹತ್ "ವಿಧಾನ ಸೌಧ ಚಲೋ" ಪ್ರತಿಭಟನೆ...

ರಾಹುಲ್ ಗಾಂಧಿ ವಿರುದ್ಧ ಸಿಬಿಐ, ಇ.ಡಿ ತನಿಖೆಗೆ ಸೂಚಿಸಿದ್ದ ಅಲಹಾಬಾದ್ ಹೈಕೋರ್ಟ್ ಆದೇಶ ರದ್ದುಪಡಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಆರೋಪಗಳಿಗೆ ಸಂಬಂಧಿಸಿದಂತೆ ಸಿಬಿಐ (CBI) ಮತ್ತು ಜಾರಿ ನಿರ್ದೇಶನಾಲಯ (ED) ತನಿಖೆ ನಡೆಸುವಂತೆ ಅಲಹಾಬಾದ್ ಹೈಕೋರ್ಟ್...

ಯೋಗೇಶ್ ಗೌಡ ಕೊಲೆ ಪ್ರಕರಣ | ಶಾಸಕ ವಿನಯ್ ಕುಲಕರ್ಣಿ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್: ಎರಡು ವಾರಗಳಲ್ಲಿ ಶರಣಾಗಲು ಆದೇಶ

ನವದೆಹಲಿ: 2016ರ ಧಾರವಾಡದ ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಮತ್ತು ಇತರ ಎಂಟು ಮಂದಿ ಅಪರಾಧಿಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನು ಹಾಗೂ ಜೀವಾವಧಿ...

ಸರ್ಕಾರಿ ಶಾಲೆಗಳ ದತ್ತು ಪ್ರಕ್ರಿಯೆಗೆ ವಿರೋಧ, ನ.26ರಂದು ಅನಿರ್ದಿಷ್ಟಾವಧಿ ಸತ್ಯಾಗ್ರಹ

ರಾಜ್ಯ ಸರ್ಕಾರವು ಸರ್ಕಾರಿ ಕನ್ನಡ ಶಾಲೆಗಳನ್ನು ಖಾಸಗಿಯವರಿಗೆ ದತ್ತು (ಮೆಂಟರಿಂಗ್) ನೀಡಲು ಮುಂದಾಗಿರುವ ಕ್ರಮವನ್ನು ವಿರೋಧಿಸಿ ಮತ್ತು 2009ರ ಶಿಕ್ಷಣ ಹಕ್ಕು ಕಾಯ್ದೆಯನ್ನು (ಆರ್‌ಟಿಇ) ರಾಜ್ಯವ್ಯಾಪಿ ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕೆಂದು ಆಗ್ರಹಿಸಿ ನಾಳೆ (ನ.26)...

ಉಮರ್ ಖಾಲಿದ್ ಮಧ್ಯಂತರ ಜಾಮೀನು ಮನವಿಗೆ ಸುಪ್ರೀಂ ಕೋರ್ಟ್ ನಕಾರ: ದೆಹಲಿ ಪೊಲೀಸರಿಗೆ ನೋಟಿಸ್, ಮುಖ್ಯ ಅರ್ಜಿಗಳ ವಿಚಾರಣೆ ಬಾಕಿ

ನವದೆಹಲಿ: 2020ರ ಈಶಾನ್ಯ ದೆಹಲಿ ಗಲಭೆಯ ದೊಡ್ಡ ಸಂಚು ಪ್ರಕರಣದಲ್ಲಿ ಯುಎಪಿಎ (UAPA) ಕಾಯ್ದೆಯಡಿ ಬಂಧಿತರಾಗಿರುವ ಹೋರಾಟಗಾರರಾದ ಉಮರ್ ಖಾಲಿದ್ ಮತ್ತು ಶರ್ಜೀಲ್ ಇಮಾಮ್ ಅವರ ಜಾಮೀನು ಅರ್ಜಿಗಳ ವಿಚಾರಣೆಯನ್ನು ಸುಪ್ರೀಂ ಕೋರ್ಟ್...

ಕನ್ನಡ, ಕನ್ನಡಿಗ ಎಂದು ಘೋಷಣೆ ಕೂಗಿದಾಕ್ಷಣ ಸಮಸ್ಯೆಗಳು ಬಗೆಹರಿಯುವುದೇ?

ಮತ್ತೊಂದು ನವೆಂಬರ್, ಅದರ ಜತೆ ಜತೆಗೇ ರಾಜ್ಯೋತ್ಸವದ ಸಂಭ್ರಮ. ಪ್ರತಿ ವರ್ಷದಂತೆ ಈ ಬಾರಿಯೂ ಸಹ ರಾಜ್ಯದಾದ್ಯಂತ ಕನ್ನಡದ ಶ್ರೇಷ್ಠತೆಯ ಬಗ್ಗೆ ,ಪ್ರಾಚೀನತೆಯ ಬಗ್ಗೆ ಕರ್ನಾಟಕದ ವೈಭವದ ಬಗ್ಗೆ ಸಾಂಸ್ಕೃತಿಕ ಕಾರ್ಯಕ್ರಮಗಳು, ಸಂಭ್ರಮ,...

ಊರು ಯಾರದು? ಕೇರಿ ಯಾರದು?

ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಭಾರತದ ಸಂವಿಧಾನದ ವಿಧಿ 19 (1) ಭಾಗವು ಹೀಗಿದೆ: 19.ವಾಕ್ -ಸ್ವಾತಂತ್ರ್ಯ, ಮುಂತಾದವುಗಳ ಬಗ್ಗೆ ಕೆಲವು ಹಕ್ಕುಗಳ ಸಂರಕ್ಷಣೆ.- (1) ಸಮಸ್ತ ನಾಗರಿಕರೂ- (ಎ) ವಾಕ್ ಸ್ವಾತಂತ್ರ್ಯದ ಮತ್ತು...