Homeಕರ್ನಾಟಕಸುರತ್ಕಲ್ ಫಾಝಿಲ್ ಕೊಲೆ ಪ್ರಕರಣ: ಮೂವರು ಪ್ರಮುಖ ಆರೋಪಿಗಳಿಗೆ ಜಾಮೀನು

ಸುರತ್ಕಲ್ ಫಾಝಿಲ್ ಕೊಲೆ ಪ್ರಕರಣ: ಮೂವರು ಪ್ರಮುಖ ಆರೋಪಿಗಳಿಗೆ ಜಾಮೀನು

- Advertisement -
- Advertisement -

ಸುರತ್ಕಲ್‌ ಮಂಗಳಪೇಟೆ ನಿವಾಸಿ ಮುಹಮ್ಮದ್ ಫಾಝಿಲ್ ಕೊಲೆ ಪ್ರಕರಣದ ಪ್ರಮುಖ ಮೂವರು ಆರೋಪಿಗಳಿಗೆ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ.

ಕವ್ವಳಮಡೂರು ಗ್ರಾಮ, ಬಂಟ್ವಾಳ ತಾಲೂಕು ನಿವಾಸಿ ಸುಹಾಸ್ ಶೆಟ್ಟಿ ಯಾನೆ ಸುಭಾಶ್, ಕಾಟಿಪಳ್ಳ 3ನೇ ಬ್ಲಾಕ್ ನಿವಾಸಿ ಅಭಿಫೇಕ್ ಯಾನೆ ಅಭಿ, ಕುಳಾಯಿ ನಿವಾಸಿ ಮೋಹನ್ ಸಿಂಗ್ ಯಾನೆ ನೇಪಾಲಿ ಮೋಹನ್ ಗೆ ಹೈಕೋರ್ಟ್ ಜಾಮೀನು ನೀಡಿದೆ. ಫಾಝಿಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸುರತ್ಕಲ್ ಪೊಲೀಸರು ಈ ಮೂವರನ್ನು A1, A2, ಮತ್ತು A3 ಆರೋಪಿಗಳೆಂದು ಹೆಸರಿಸಿ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಸಿದ್ದರು.

ಪ್ರಕರಣದಲ್ಲಿ ಜಾಮಿನು ಕೋರಿ ಆರೋಪಿಗಳ ಪರ ವಕೀಲರು ರಾಜ್ಯ ಉಚ್ಛ ನ್ಯಾಯಾಲಯದಲ್ಲಿ ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಈ ಮೂವರು ಆರೋಪಿಗಳಿಗೆ ತಲಾ ಒಂದು ಲಕ್ಷ ರೂ. ಬಾಂಡ್ ಮೇಲೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

ಪ್ರಕರಣದ ವಿಚಾರಣೆಗೆ ಕಡ್ಡಾಯವಾಗಿ ಹಾಜರಾಗಬೇಕು, ಸಾಕ್ಷಿಗಳಿಗೆ ನೇರವಾಗಿ ಅಥವಾ ಪರೋಕ್ಷವಾಗಿ ಬೆದರಿಕೆ ಹಾಕಬಾರದು,  ಭವಿಷ್ಯದಲ್ಲಿ ಇದೇ ರೀತಿಯ ಅಪರಾಧಗಳಲ್ಲಿ ಭಾಗಿಯಾಗಬಾರದು, ಮೊಕದ್ದಮೆ ವಿಲೇವಾರಿಯಾಗದೆ ನ್ಯಾಯಾಲಯದ ಅನುಮತಿಯಿಲ್ಲದೆ ಊರು ಬಿಟ್ಟು ಹೋಗುವಂತಿಲ್ಲ,  ಮೂವರು ಕೂಡ ಪ್ರತಿ ರವಿವಾರ ಸುರತ್ಕಲ್ ಪೊಲೀಸ್ ಠಾಣೆಗೆ ಹಾಜರಾಗಿ ಹಾಜರಾತಿ ಸಲ್ಲಿಸಬೇಕು ಎಂದು ಕೋರ್ಟ್‌ಆರೋಪಿಗಳಿಗೆ ಷರತ್ತು ವಿಧಿಸಿದೆ.

2022ರ ಜುಲೈ 28ರಂದು ರಾತ್ರಿ 8 ಗಂಟೆಯ ಸುಮಾರಿಗೆ ಸುರತ್ಕಲ್ ಪೇಟೆಯಲ್ಲಿ ತನ್ನ ಸ್ನೇಹಿತನ ಅಂಗಡಿಗೆ ತೆರಳಿದ್ದ ಮಂಗಳಪೇಟೆ ನಿವಾಸಿ ಮುಹಮ್ಮದ್ ಫಾಝಿಲ್‌ನನ್ನು  ದುಷ್ಕರ್ಮಿಗಳು ತಲವಾರುಗಳಿಂದ ಕೊಚ್ಚಿ ಕೊಲೆಗೈದು ಪರಾರಿಯಾಗಿದ್ದರು. ಈ ಕುರಿತು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿತ್ತು. ನೆಟ್ಟಾರು ಪ್ರವೀಣ್‌ ಹತ್ಯೆ ಪ್ರಕರಣದ ಎರಡು ದಿನಗಳ ನಡೆದ ಈ ಕೊಲೆ ಪ್ರಕರಣ ರಾಜ್ಯದಲ್ಲಿ ಭಾರೀ ಸದ್ದು ಮಾಡಿತ್ತು. ಕರಾವಳಿಯಲ್ಲಿ ನಡೆದ ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸುರತ್ಕಲ್ ಪೊಲೀಸರು ಸುಹಾಸ್ ಶೆಟ್ಟಿ, ಮೋಹನ್, ಗಿರಿಧರ್, ಅಭಿಷೇಕ್, ಶ್ರೀನಿವಾಸ್, ದೀಕ್ಷಿತ್ ಸೇರಿ 8 ಮಂದಿ ಆರೋಪಿಗಳನ್ನು ಬಂಧಿಸಿದ್ದರು. ಈ ಪೈಕಿ 5 ಮಂದಿ ಈಗಾಗಲೇ ಜಾಮೀನು ಪಡೆದುಕೊಂಡು ಹೊರಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ  ಬೆಳ್ಳಾರೆ ಸಮೀಪದ ಮಸೂದ್‌ ಹಾಗೂ ನೆಟ್ಟಾರಿನ ಪ್ರವೀಣ್‌ ಕೊಲೆ ಬೆನ್ನಲ್ಲಿ ಪ್ರಕ್ಷುಬ್ಧವಾಗಿದ್ದ ಕರಾವಳಿಯಲ್ಲಿ ಫಾಝಿಲ್‌ ಕೊಲೆ ನಡೆದಿತ್ತು. ಸುರತ್ಕಲ್‌ನಲ್ಲಿ ನಡೆದ ಫಾಝಿಲ್ ಕೊಲೆಯನ್ನು ಪ್ರವೀಣ್ ನೆಟ್ಟಾರು ಕೊಲೆಗೆ ಪ್ರತೀಕಾರ ಎಂದು ಬಜರಂಗದಳ ನಾಯಕ ಶರಣ್ ಪಂಪ್ ವೆಲ್ ಸಮರ್ಥಿಸಿಕೊಂಡಿದ್ದ, ಈ ಕುರಿತ ವೀಡಿಯೊ ಸಾಮಾಜಿಕ ತಾಣದಲ್ಲಿ ವೈರಲ್ ಆಗಿತ್ತು.

ಪ್ರವೀಣ್‌ ನೆಟ್ಟಾರು ಪ್ರಕರಣವನ್ನು NIA ತನಿಖೆಗೆ ವಹಿಸಿದ್ದ ಅಂದಿನ ಬಿಜೆಪಿ ಸರಕಾರ ಫಾಝಿಲ್ ಕೊಲೆಯನ್ನು NIAಗೆ ವಹಿಸಿಲ್ಲ ಮತ್ತು ಫಾಝಿಲ್ ಕೊಲೆಯಲ್ಲಿ ನೇರವಾಗಿ ಭಾಗಿಯಾದ ಆರೋಪಿಗಳನ್ನು ಮಾತ್ರ ಬಂಧಿಸಲಾಗಿದೆ. ಕೊಲೆಗೆ ಷಡ್ಯಂತ್ರ ರೂಪಿಸಿದ ಸೂತ್ರದಾರಿಗಳನ್ನು ಬಂಧಿಸಿಲ್ಲ ಎಂದು ಫಾಝಿಲ್‌ನ ತಂದೆ ಈ ಹಿಂದೆ ಅಸಮಾಧಾನ ವ್ಯಕ್ತಪಡಿಸಿದ್ದರು.

 

ಇದನ್ನು ಓದಿ: ಭೀಮಾ ಕೋರೆಗಾಂವ್ ಪ್ರಕರಣ: ಶೋಮಾ ಸೇನ್ ಇನ್ಮುಂದೆ ಕಸ್ಟಡಿಯಲ್ಲಿ ಇರಬೇಕಿಲ್ಲ ಎಂದ ಎನ್‌ಐಎ

 

 

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಗನ್ ತೋರಿಸಿ ಅತ್ಯಾಚಾರ: ಪ್ರಜ್ವಲ್ ರೇವಣ್ಣ ವಿರುದ್ಧ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯೆ ದೂರು

0
ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದದ ಮಹಿಳೆಯರ ಲೈಂಗಿಕ ದೌರ್ಜನ್ಯ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಈಗಾಗಲೇ ಹೆಚ್‌.ಡಿ ರೇವಣ್ಣ ಮತ್ತು ಪ್ರಜ್ವಲ್ ರೇವಣ್ಣ ವಿರುದ್ದ ಕೆಲ ಸಂತ್ರಸ್ತೆಯರು ದೂರು ನೀಡಿದ್ದು, ತನಿಖೆ...