Homeಕರ್ನಾಟಕಫಾಝಿಲ್‌ ಹತ್ಯೆ- ಆರು ಮಂದಿಯ ಬಂಧನ; ಪ್ರವೀಣ್‌ ಹತ್ಯೆ- ಮತ್ತಿಬ್ಬರು ಅರೆಸ್ಟ್‌

ಫಾಝಿಲ್‌ ಹತ್ಯೆ- ಆರು ಮಂದಿಯ ಬಂಧನ; ಪ್ರವೀಣ್‌ ಹತ್ಯೆ- ಮತ್ತಿಬ್ಬರು ಅರೆಸ್ಟ್‌

- Advertisement -
- Advertisement -

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವ ಸರಣಿ ಕೊಲೆಗಳ ಬೆನ್ನು ಹತ್ತಿರುವ ಪೊಲೀಸರು ಆರೋಪಿಗಳನ್ನು ಬಂಧಿಸಿ, ವಿಚಾರಣೆ ನಡೆಸುವಲ್ಲಿ ನಿರತರಾಗಿದ್ದಾರೆ.

ಸುರತ್ಕಲ್‌ನ ಮಂಗಳಪೇಟೆ ನಿವಾಸಿ ಮುಹಮ್ಮದ್ ಫಾಝಿಲ್ ಹತ್ಯೆಗೆ ಸಂಬಂಧಿಸಿದಂತೆ ಆರು ಮಂದಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಪಣಂಬೂರು ಎಸಿಪಿ ಅವರ ಕಚೇರಿಯಿಂದ ನ್ಯಾಯಾಲಯಕ್ಕೆ ಕರೆದೊಯ್ಯುತ್ತಿದ್ದ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ಪೊಲೀಸ್ ಕಮಿಷನರ್ ಎನ್.ಶಶಿಕುಮಾರ್, ಪ್ರಕರಣದ ಸಂಬಂಧ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಸುಹಾಸ್ ಶೆಟ್ಟಿ, ಮೋಹನ್, ಗಿರಿಧರ್, ಅಭಿಷೇಕ್, ಶ್ರೀನುವಾಸ್, ದೀಕ್ಷಿತ್ ಬಂಧಿತರು.

ವಿಚಾರಣೆಯ ವೇಳೆ ಆರೋಪಿಗಳು ಕೃತ್ಯ ಎಸಗಿರುವುದನ್ನು ಒಪ್ಪಿಕೊಂಡಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.

“ಘಟನೆಗೆ ಸಂಬಂಧಿಸಿದಂತೆ ದುಷ್ಕರ್ಮಿಗಳು ಹತ್ಯೆಗೆ ಬಳಸಿದ್ದ ಕಾರಿನ ನೋಂದಣಿ‌ ಸಂಖ್ಯೆ ಪತ್ತೆ ಹಚ್ಚಿ ಅದರ‌‌ ಮಾಲೀಕ ಅಜಿತ್ ಕ್ರಾಸ್ತ ಎಂಬಾತನನ್ನು ವಶಕ್ಕೆ ಪಡೆಯಲಾಗಿತ್ತು. ಬಳಿಕ ಆತನನ್ನು ವಿಚಾರಣೆಗೆ ಒಳಪಡಿಸಿದಾಗ ಆತ ಹೆಚ್ಚುವರಿ ಹಣ ಪಡೆದು ಕಾರನ್ನು ಬಾಡಿಗೆ ರೂಪದಲ್ಲಿ ನೀಡಿರುವುದಾಗಿ ಮಾಹಿತಿ ನೀಡಿದ್ದ. ಆತನ ಮಾಹಿತಿಯಂತೆ ಕಾರ್ಯ ಪ್ರವೃತ್ತರಾದ ಪೊಲೀಸ್‌ ತಂಡ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ” ಎಂದು ‘ವಾರ್ತಾ ಭಾರತಿ’ ವರದಿ ಮಾಡಿದೆ.

ಜುಲೈ 28 ರಂದು ಸಂಜೆ ಸುರತ್ಕಲ್ ನಲ್ಲಿ ಕಾರಿನಲ್ಲಿ ಬಂದ ದುಷ್ಕರ್ಮಿಗಳು ಫಾಝಿಲ್ ಹತ್ಯೆ ನಡೆಸಿದ್ದರು. ಕಾನೂನು ಸುವ್ಯವಸ್ಥೆ ವಿಭಾಗದ ಡಿಸಿಪಿ ಅಂಶುಕುಮಾರ್ ಹಾಗೂ ಅಪರಾಧ ವಿಭಾಗದ ಡಿಸಿಪಿ ದಿನೇಶ್ ಕುಮಾರ್ ಎಸಿಪಿ ಮಹೇಶ್ ಕುಮಾರ್ ಹಾಗೂ ಸಿಸಿಬಿ ಇನ್ ಸ್ಪೆಕ್ಟರ್ ಮಹೇಶ್ ಪ್ರಸಾದ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಯುತ್ತಿದೆ.

ಪ್ರವೀಣ್‌ ಪ್ರಕರಣದಲ್ಲಿ ಮತ್ತಿಬ್ಬರು ಸೆರೆ

ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಿರುವುದಾಗಿ ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನಾವಣೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿರಿ: ಸುರತ್ಕಲ್‌ ಫಾಝಿಲ್ ಹತ್ಯೆ: ಸುನ್ನಿ-ಶಿಯಾ ಕತೆ ಕಟ್ಟಿ ತನಿಖೆಯ ದಾರಿ ತಪ್ಪಿಸುತ್ತಿರುವ ಬಿಜೆಪಿ ಬೆಂಬಲಿಗರು

ಬೆಳ್ಳಾರೆ ಪಳ್ಳಿಮಜಲಿನ ಸದ್ದಾಂ (32) ಹಾಗು ಹಾರಿಸ್‌ (42) ಬಂಧಿತ ಆರೋಪಿಗಳು ಎಂದು ಅವರು ಮಾಹಿತಿ ನೀಡಿದ್ದಾರೆ.

ಪ್ರಕರಣಕ್ಕೆ ಸಂಬಂಧಪಟ್ಟಂತೆ  ಜು. 28ರಂದು ಸವಣೂರಿನ ಝಾಕಿರ್ ಮತ್ತು ಶಫೀಕ್ ಬೆಳ್ಳಾರೆ ಎಂಬವರನ್ನು ಬಂಧಿಸಲಾಗಿದೆ. ಇವರನ್ನು ಪೊಲೀಸ್ ಕಸ್ಟಡಿಗೆ ಪಡೆದು ಹೆಚ್ಚಿನ ತನಿಖೆ ನಡೆಸಲಾಗಿದ್ದು, ಇದರ ಆಧಾರದಲ್ಲಿ ಮತ್ತೆ ಇಬ್ಬರನ್ನು ಆ. 2ರಂದು ಬಂಧಿಸಲಾಗಿದೆ. ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ತನಿಖೆ ಮುಂದುವರಿಸಿದ್ದು, ಈ ಬಗ್ಗೆ ಮಾಹಿತಿ ಕಲೆ ಹಾಕಲಾಗುತ್ತಿದೆ ಎಂದು ದ.ಕ. ಜಿಲ್ಲಾ ಎಸ್ಪಿ ತಿಳಿಸಿದ್ದಾರೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಲೈಂಗಿಕ ದೌರ್ಜನ್ಯ ಪ್ರಕರಣ : ಶಾಸಕ ಹೆಚ್‌.ಡಿ ರೇವಣ್ಣ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಆರೋಪಕ್ಕೆ ಹೊಂದಿಕೊಂಡಿರುವ ಮಹಿಳೆಯೊಬ್ಬರ ಅಪಹರಣ ಪ್ರಕರಣದಲ್ಲಿ ನ್ಯಾಯಾಲಯ ನಿರೀಕ್ಷಣಾ ಜಾಮೀನು ನಿರಾಕರಿಸಿದ ಬೆನ್ನಲ್ಲೇ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ಪಡೆದಿದೆ. ಲೈಂಗಿಕ ದೌರ್ಜನ್ಯ ಪ್ರಕರಣದ...