Homeಕರ್ನಾಟಕಕೊರೋನಾ ಭೀತಿ: ಮುನ್ನೆಚ್ಚರಿಕೆ ವಹಿಸುವಂತೆ ಕಾರ್ಖಾನೆಗಳಿಗೆ ಸರ್ಕಾರ ನೊಟೀಸ್

ಕೊರೋನಾ ಭೀತಿ: ಮುನ್ನೆಚ್ಚರಿಕೆ ವಹಿಸುವಂತೆ ಕಾರ್ಖಾನೆಗಳಿಗೆ ಸರ್ಕಾರ ನೊಟೀಸ್

- Advertisement -
- Advertisement -

ನಗರದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇತ್ತೀಚೆಗೆ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಸೋಂಕಿಗೆ ಒಳಗಾಗಿದ್ದ ಟೆಕ್ಕಿಗೆ ಚಿಕಿತ್ಸೆ ನೀಡುವ ವೈದ್ಯರಲ್ಲೂ ಸಹ ಕೊರೋನಾ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಲ್ಲಾ ರೀತಿಯ ಕಾರ್ಖಾನೆಗಳಿಗೂ ಕಟ್ಟುನಿಟ್ಟಿನ ಆದೇಶ ರವಾನಿಸಿದೆ. ಸಾವಿರಾರು ಜನ ಒಟ್ಟಿಗೆ ಸೇರುವ ಕಾರ್ಖಾನೆ ಹಾಗೂ ಗಾರ್ಮೆಂಟ್ಸ್‌ಗಳಲ್ಲಿ ಸೂಕ್ತ ಕ್ರಮ ಜರುಗಿಸಬೇಕು ಎಂದು ಸೂಚಿಸಿದೆ.

ಸೋಂಕು ಹರಡುವುದನ್ನು ತಡೆಯುವ ಸಲುವಾಗಿ ರಾಜ್ಯಾ ಸರ್ಕಾರ ಈಗಾಗಲೇ ಮುನ್ನೆಚ್ಚರಿಕೆ ಕ್ರಮವಾಗಿ ಮಾಲ್ ಗಳು, ಸಿನಿಮಾ ಥಿಯೇಟರ್‌ಗಳು, ಸಭೆ-ಸಮಾರಂಭಗಳಿಗೆ ನಿಷೇಧ ಹೇರಲಾಗಿದೆ. ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಐಟಿ-ಬಿಟಿ ಸೇರಿದಂತೆ ಅನೇಕ ಖಾಸಗಿ ಕಂಪೆನಿಗಳು ತಮ್ಮ ನೌಕರರು ಮನೆಯಲ್ಲೇ ಕುಳಿತು ಕೆಲಸ ಮಾಡುವಂತೆ ಸೂಚಿಸಿದೆ. ಆದರೆ, ಕಾರ್ಖಾನೆ ಮತ್ತು ಗಾರ್ಮೆಂಟ್ಸ್‌ಗಳಿಗೆ ಈವರೆಗೆ ಯಾವುದೇ ಮುನ್ನೆಚ್ಚರಿಕೆ ಕ್ರಮವಹಿಸಿಲ್ಲ. ಹೀಗಾಗಿ ಕಾರ್ಖಾನೆಗಳಲ್ಲೂ ಸಹ ಸೂಕ್ತ ಕ್ರಮ ವಹಿಸಿ ಎಂದು ಕಾರ್ಮಿಕ ಇಲಾಖೆ ನೊಟೀಸ್ ನೀಡಿದೆ.

ಪೀಣ್ಯ, ಬೊಮ್ಮನಹಳ್ಳಿ, ಮತ್ತು ಬೆಂಗಳೂರಿನ ನಾಲ್ಕೂ ದಿಕ್ಕಿನಲ್ಲಿರುವ ದೊಡ್ಡದೊಡ್ಡ ಕಂಪನಿಗಳು, ಗಾರ್ಮೆಂಟ್ಸ್ ಮತ್ತು ಕಾರ್ಖಾನೆಗಳಿಗೆ ನೊಟೀಸ್‌ ನೀಡಲಾಗಿದ್ದು, ಕಾರ್ಖಾನೆಗಳು ಮತ್ತು ಗಾರ್ಮೆಂಟ್ಸ್ ಗಳಲ್ಲಿ ಶುಚಿತ್ವ ಕಾಪಾಡಿಕೊಳ್ಳಬೇಕು, ಪ್ರತಿಯೊಬ್ಬ ಕಾರ್ಮಿಕರಿಗೂ ಮಾಸ್ಕ್ ನೀಡಬೇಕು, ಕಡ್ಡಾಯವಾಗಿ ಎಲ್ಲಾ ಕಾರ್ಮಿಕರನ್ನೂ ಸ್ಕ್ರೀನಿಂಗ್‌ಗೆ ಒಳಪಡಿಸಬೇಕು ಎಂದು ನೊಟೀಸ್‌ನಲ್ಲಿ ಉಲ್ಲೇಖಿಸಲಾಗಿದೆ.

ಆದರೆ, ಕಾರ್ಖಾನೆ ಮಾಲಿಕರು ಇದುವರೆಗೂ ಕಾರ್ಮಿಕರ ಹಿತದೃಷ್ಟಿಯಿಂದ ಯಾವುದೇ ಸುರಕ್ಷತಾ ಕ್ರಮಗಳನ್ನು ಕೈಗೊಂಡಿಲ್ಲ ಎಂದು ಆರೋಪಿಸಲಾಗಿದೆ. ಹೀಗಾಗಿ ಕೊರೋನಾ ರಾಷ್ಟ್ರೀಯ ವಿಪತ್ತು ಎಂದು ಕೇಂದ್ರ ಸರ್ಕಾರ ಘೋಷಿಸಿರುವುದರಿಂದ ಸಂಬಳ/ವೇತನ ಸಹಿತ ರಜೆ ನೀಡಬೇಕು. ಚಿಕಿತ್ಸಾ ವೆಚ್ಚವನ್ನು ಸರ್ಕಾರ ಅಥವಾ ಕಾರ್ಖಾನೆ ಭರಿಸಬೇಕು ಎಂದು ಕಾರ್ಮಿಕರು ಆಗ್ರಹಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...