Homeಮುಖಪುಟಉದ್ಯೋಗ ಕಳೆದುಕೊಳ್ಳುವ ಭೀತಿ: ಹೈದರಾಬಾದ್‌ನಲ್ಲಿ ಮಹಿಳಾ ಟೆಕ್ಕಿ ಆತ್ಮಹತ್ಯೆ

ಉದ್ಯೋಗ ಕಳೆದುಕೊಳ್ಳುವ ಭೀತಿ: ಹೈದರಾಬಾದ್‌ನಲ್ಲಿ ಮಹಿಳಾ ಟೆಕ್ಕಿ ಆತ್ಮಹತ್ಯೆ

- Advertisement -
- Advertisement -

ಇತ್ತೀಚೆಗೆ ಆರ್ಥಿಕ ನಷ್ಟ, ಉದ್ಯೋಗವಿಲ್ಲದೆ ಯುವಜನತೆ ಅಲೆದಾಡುತ್ತಿದ್ದಾರೆ. ಎಲ್ಲ ಕಡೆ ಉದ್ಯೋಗದಿಂದ ನೌಕರರನ್ನು ತೆಗೆದು ಹಾಕಲಾಗುತ್ತಿದೆ. ಉದ್ಯಮದಲ್ಲಿ ನಷ್ಟ ಉಂಟಾಗುತ್ತಿದೆ ಎಂದು ಸಬೂಬು ಹೇಳಿ ಉದ್ಯೋಗಿಗಳನ್ನು ಕಂಪನಿಯಿಂದ ತೆಗೆದು ಹಾಕಲಾಗುತ್ತಿದೆ. ನೌಕರಿಯನ್ನೇ ನಂಬಿ ಬದುಕುತ್ತಿರುವ ಉದ್ಯೋಗಿಗಳು ಪರದಾಡುವಂತಾಗಿದೆ. ಅದರಲ್ಲೂ ತೆಲಂಗಾಣದಲ್ಲಿ ಮಹಿಳಾ ಟೆಕ್ಕಿಯೊಬ್ಬರು ಸೂಸೈಡ್‌ ಮಾಡಿಕೊಂಡಿದ್ದಾರೆ.

ತೆಲಂಗಾಣ ರಾಜಧಾನಿ ಹೈದರಾಬಾದ್ ಮಹಾನಗರದಲ್ಲಿ ಮಹಿಳಾ ಟೆಕ್ಕಿಯೊಬ್ಬರು ಸೀಲಿಂಗ್ ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳಾ ಟೆಕ್ಕಿಯನ್ನು 24 ವರ್ಷದ ಹರಿಣಿ ಎಂದು ಗುರುತಿಸಲಾಗಿದೆ.

ಇದನ್ನೂ ಓದಿ: ಭಾರತ ಮತ್ತು ವಿಶ್ವಾಸ ಕಳೆದುಕೊಂಡ ಆರ್ಥಿಕತೆ : ಕೌಶಿಕ್ ಬಸು

ನಗರದ ರಾಯದುರ್ಗಂ ಪ್ರದೇಶದಲ್ಲಿ ಹಾಸ್ಟೆಲ್ ನ ಕೊಠಡಿಯಲ್ಲಿ ಹರಿಣಿ ನೇಣಿಗೆ ಶರಣಾಗಿದ್ದಾರೆ. ಕಳೆದ ಎರಡು ವರ್ಷಗಳಿಂದ ಸಾಫ್ಟ್‌ವೇರ್‌ ಕಂಪನಿಯಲ್ಲಿ ಹರಿಣಿ ಕೆಲಸ ಮಾಡುತ್ತಿದ್ದರು. ಮಾನಸಿಕ ಖಿನ್ನತೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಾಫ್ಟ್‌ವೇರ್‌ ಕಂಪನಿ ಉದ್ಯೋಗ ಕಡಿತ, ನೌಕರರನ್ನು ತೆಗೆದು ಹಾಕಲು ಮುಂದಾಗಿತ್ತು. ಹೀಗಾಗಿ ಕಂಪನಿಯ ಆಡಳಿತ ಮಂಡಳಿ ಕೆಲಸದಿಂದ ತೆಗೆಯುವವರ ಪಟ್ಟಿಯೊಂದನ್ನು ಸಿದ್ದಪಡಿಸಿತ್ತು. ಆ ಪಟ್ಟಿಯಲ್ಲಿ ಹರಿಣಿ ಹೆಸರಿತ್ತು ಎಂದು ತಿಳಿದು ಬಂದಿದೆ.

ಕೆಲಸದಿಂದ ಕೈಬಿಡುವವರ ಪಟ್ಟಿಯಲ್ಲಿ ಹರಿಣಿ ಹೆಸರಿದ್ದರಿಂದ ಈ ಬಗ್ಗೆ ತನ್ನ ಅಣ್ಣನ ಜತೆ ಚರ್ಚೆಯನ್ನೂ ಮಾಡಿದ್ದಳು. ಕೆಲಸ ಕಳೆದುಕೊಳ್ಳುವುದು ಗ್ಯಾರಂಟಿ ಎಂದು ತಿಳಿದ ನಂತರ ಆತಂಕಕ್ಕೆ ಒಳಗಾಗಿದ್ದ ಹರಿಣಿ ಮಾನಸಿಕ ಖಿನ್ನತೆಗೆ ಒಳಗಾಗಿದ್ದರು. ನಂತರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...