Homeಮುಖಪುಟಕೊರೊನಾ ಭಯ: ಕರ್ನೂಲ್‌ನಲ್ಲಿ ವಿಷ ಸೇವಿಸಿ ಸಾವನ್ನಪ್ಪಿದ ಒಂದೆ ಕುಟುಂಬದ ನಾಲ್ವರು

ಕೊರೊನಾ ಭಯ: ಕರ್ನೂಲ್‌ನಲ್ಲಿ ವಿಷ ಸೇವಿಸಿ ಸಾವನ್ನಪ್ಪಿದ ಒಂದೆ ಕುಟುಂಬದ ನಾಲ್ವರು

- Advertisement -
- Advertisement -

ಕೊರೊನಾ ಸಾಂಕ್ರಾಮಿಕ ರೋಗ ಇಡೀ ವಿಶ್ವವನ್ನೇ ತಲ್ಲಣಗೊಳಿಸಿದೆ. ಎಲ್ಲ ಆದೇಶಗಳು ವೈರಸ್‌ ವಿರುದ್ಧ ಹೋರಾಡುತ್ತಿವೆ. ಕೊರೊನಾ ಸೋಂಕಿನಿಂದ ಸಾವನ್ನಪ್ಪುವವರ ಸಂಖ್ಯೆಗಿಂತ ಆರೋಗ್ಯ ವ್ಯವಸ್ಥೆ ಸರಿಯಿಲ್ಲದೇ ಸಾವನ್ನಪ್ಪುವವರ ಸಂಖ್ಯೆ ದೊಡ್ಡದಿದೆ. ಆಕ್ಸಿಜನ್, ಬೆಡ್ ಕೊರತೆಯಿಂದ ಸಾವನ್ನಪ್ಪಿದವರೇ ಹೆಚ್ಚು. ಇದರ ನಡುವೆಯೇ ಕೊರೊನಾಗೆ ಹೆದರಿ ವಿಷ ಸೇವಿಸಿ ಪ್ರಾಣ ಕಳೆದುಕೊಂಡಿರುವ ಹೃದಯ ವಿದ್ರಾವಕ ಘಟನೆ ವರದಿಯಾಗಿದೆ.

ಕೊರೊನಾ ಸೋಂಕಿಗೆ ಒಳಗಾಗಬಹುದೆಂಬ ಭಯದಿಂದ, ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ವಡ್ಡೇಗೇರಿ ಪ್ರದೇಶದಲ್ಲಿ ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ವರದಿಯಾಗಿದೆ.

ಮೃತರನ್ನು ಪ್ರತಾಪ್ (42), ಅವರ ಪತ್ನಿ ಹೇಮಲತಾ (36), ಮಗ ಜಯಂತ್ (17) ಮತ್ತು ಮಗಳು ರಿಶಿತಾ (14) ಎಂದು ಗುರುತಿಸಲಾಗಿದೆ. ಕುಟುಂಬದ ಮುಖ್ಯಸ್ಥ ಪ್ರತಾಪ್ ಟಿವಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದರು. ಅವರ ಮಗ ಜಯಂತ್ ಪ್ರೌಢ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಮಗಳು ರಿಶಿತಾ ಏಳನೇ ತರಗತಿಯ ವಿದ್ಯಾರ್ಥಿನಿಯಾಗಿದ್ದರು ಎಂದು ಮಾಹಿತಿ ದೊರೆತಿದೆ.

ಇದನ್ನೂ ಓದಿ: ಮೈಸೂರಿನಲ್ಲಿ ಡೆಲ್ಟಾ ಪ್ಲಸ್​ ರೂಪಾಂತರಿ ಪತ್ತೆ: ಸಚಿವ ಸುಧಾಕರ್ ಮಾಹಿತಿ

ಬುಧವಾರ (ಜೂನ್ 23) ಬೆಳಿಗ್ಗೆಯಿಂದಲೇ ಮನೆಯಿಂದ ಯಾರೂ ಹೊರಬರದಿದ್ದಾಗ, ಅಕ್ಕ-ಪಕ್ಕದವರು ಮನೆಯ ಬಳಿ ಹೋಗಿ ಬಾಗಿಲು ತಟ್ಟಿದ್ದಾರೆ. ಆದರೆ, ಯಾವುದೇ ಪ್ರತಿಕ್ರಿಯೆ ಬರದ ಹಿನ್ನೆಲೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಪೊಲೀಸರು ಬಾಗಿಲು ಮುರಿದು ಮನೆಯೊಳಗೆ ಬಂದಾಗ, ಈ ನಾಲ್ವರೂ ನೆಲದ ಮೇಲೆ ನಿರ್ಜೀವವಾಗಿ ಮಲಗಿರುವುದನ್ನು ನೋಡಿದ್ದಾರೆ. ಜೊತೆಗೆ ಮನೆಯಲ್ಲಿ ಆತ್ಮಹತ್ಯೆ ಪತ್ರವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಡೆತ್ ನೋಟ್‌ನಲ್ಲಿ ಕೊರೊನಾ ಕಾರಣದಿಂದಾಗಿ ತಮ್ಮ ಸ್ನೇಹಿತರು ಮತ್ತು ಸಂಬಂಧಿಕರ ಸಾವುಗಳ ಬಗ್ಗೆ ಕೇಳಿ ಕೇಳಿ ಒತ್ತಡಕ್ಕೆ ಒಳಗಾಗಿದ್ದೇವೆ. ನಮಗೂ ಕೊರೊನಾ ಸೋಂಕು ಬರಬಹುದು ಎಂಬ ಭಯವಾಗುತ್ತಿದ್ದೆ ಎಂಬ ಅತಂಕವಿದೆ ಎಂದು ಬರೆಯಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಘಟನೆ ಕುರಿತು ಪ್ರಕರಣ ದಾಖಲಾಗಿದ್ದು, ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.


ಇದನ್ನೂ ಓದಿ: ಕೊರೊನಾ ಲಸಿಕೆಯಿಂದ ‘ಬಂಜೆತನ’ ಉಂಟಾಗುವುದಿಲ್ಲ: ಒಕ್ಕೂಟ ಸರ್ಕಾರ ಸ್ಪಷ್ಟನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಚಾಮರಾಜನಗರ: ರೈತ ಮುಖಂಡರ ಮೇಲೆ ಬಿಜೆಪಿಗರಿಂದ ಹಲ್ಲೆ

0
ರೈತ ಮುಖಂಡರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿ ಬೆದರಿಕೆ ಹಾಕಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಬಿಜೆಪಿ ಗುಂಡಾಗಳು ಅವಾಚ್ಯವಾಗಿ ನಿಂದಿಸಿ ತಳ್ಳಾಟ ನಡೆಸಿದ್ದಾರೆ, ರೈತರ ಸ್ವಾಭಿಮಾನವಾದ ಹಸಿರು ಟವಲನ್ನು ಕಿತ್ತು ಅವಮಾನಿಸಿದ್ದಾರೆ...