ವಿಧಾನ ಪರಿಷತ್‌ನ ಪ್ರಶ್ನೋತ್ತರ ವೇಳೆಯಲ್ಲಿ ಪರಿಷತ್ ಸದಸ್ಯ ಎಸ್. ವಿ. ಸಂಕನೂರ ಅವರ ಚುಕ್ಕೆ ಗುರುತಿನ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಶಿಕ್ಷಣ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್. ಮಧು ಬಂಗಾರಪ್ಪ ಅವರು, 2025ರ ಫೆಬ್ರವರಿ ಅಂತ್ಯದೊಳಗೆ ಪ್ರೌಢಶಾಲಾ ಸಹ ಶಿಕ್ಷಕರಿಗೆ ಬಡ್ತಿ ಪೂರ್ಣಗೊಳಿಸಲಾಗುವುದು ಎಂದು ಸೋಮವಾರ ಭರವಸೆ ನೀಡಿದ್ದಾರೆ. 2025ರ ಫೆಬ್ರವರಿ
ಪ್ರೌಢಶಾಲಾ ಸಹ ಶಿಕ್ಷಕರು ಉಪನ್ಯಾಸಕರ ಹುದ್ದೆಗೆ ಪದೋನ್ನತಿ ನೀಡಬೇಕೆಂದು ಬಹುದಿನಗಳಿಂದ ಆಗ್ರಹಿಸುತ್ತಿದ್ದಾರೆ. ಆದರೆ ಸಂಬಂಧಪಟ್ಟ ಇಲಾಖೆ ಈ ಬಗ್ಗೆ ಗಮನಹರಿಸುತ್ತಿಲ್ಲ ಎಂದು ಸಂಕನೂರ ಆರೋಪಿಸಿದ್ದಾರೆ. ಇದಕ್ಕೆ ಸಚಿವ ಮಧು ಬಂಗಾರಪ್ಪ ಅವರು ಪ್ರತಿಕ್ರಿಯೆ ನೀಡಿದರು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ
“ಮೊದಲು ಶಾಲಾ ಶಿಕ್ಷಣ ಇಲಾಖೆಯಿಂದ ರಾಜ್ಯಮಟ್ಟದ ಪ್ರೌಢಶಾಲಾ ಸಹ ಶಿಕ್ಷಕರ ಒಂದೇ ಜೇಷ್ಠತಾ ಪಟ್ಟಿ ಸಿದ್ದಪಡಿಸಿ, ತಾತ್ಕಾಲಿಕ ಜೇಷ್ಠತಾ ಪಟ್ಟಿಯನ್ನು ಪ್ರಕಟಿಸಿ, ಸ್ವೀಕೃತವಾಗುವ ಆಕ್ಷೇಪಣೆಗಳನ್ನು ಪರಿಶೀಲಿಸಿ ಅಂತಿಮ ಜೇಷ್ಠತಾ ಪಟ್ಟಿಯನ್ನು ಪ್ರಕಟಿಸಲಾಗುವುದು. ಅದಾದ ಬಳಿಕ ಪ್ರೌಢಶಾಲಾ ಸಹ ಶಿಕ್ಷಕರಿಗೆ ಬಡ್ತಿ ನೀಡುವ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು” ಎಂದು ಸಚಿವರು ತಿಳಿಸಿದ್ದಾರೆ.
“ಈಗಾಗಲೇ 2013ನೇ ಸಾಲಿನವರೆಗೆ ಪದೋನ್ನತಿ ಪ್ರಕ್ರಿಯೆ ನಡೆಸಲಾಗಿದೆ. ಪದೋನ್ನತಿ ಪ್ರಕ್ರಿಯೆ ನಡೆಸುವ ಹಿನ್ನೆಲೆಯಲ್ಲಿ ರಾಜ್ಯಮಟ್ಟದಲ್ಲಿ ಒಂದೇ ಜೇಷ್ಠತಾ ಪಟ್ಟಿಯನ್ನು ತಯಾರಿಸುವ ಬಗ್ಗೆ ಮಾರ್ಗದರ್ಶನ ಕೋರಿ 2024ರ ಫೆಬ್ರವರಿ ಮಾಹೆ ಮತ್ತು ಮಾರ್ಚ್ ಮಾಹೆಯಲ್ಲಿ ಶಾಲಾ ಶಿಕ್ಷಣ ಇಲಾಖೆ (ಪ್ರಾಥಮಿಕ ಮತ್ತು ಪ್ರೌಢ)ಯ ಆಯುಕ್ತರು ಹಾಗೂ ಏಪ್ರಿಲ್ ಮಾಹೆಯಲ್ಲಿ ಶಾಲಾ ಶಿಕ್ಷಣ ಇಲಾಖೆಯ ( ಪದವಿ ಪೂರ್ವ) ನಿರ್ದೇಶಕರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ” ಎಂದು ವಿವರಿಸಿದ್ದಾರೆ. 2025ರ ಫೆಬ್ರವರಿ
“2024ರ ಅಕ್ಟೋಬರ್ 16ರಂದು ಈ ಪ್ರಸ್ತಾವನೆಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ನೀಡಿರುವ ಅಭಿಪ್ರಾಯದಂತೆ ಶಾಲಾ ಶಿಕ್ಷಣ ಇಲಾಖೆಯ ನಾಲ್ಕು ವಿಭಾಗಗಳಲ್ಲಿ ಸ್ನಾತಕೋತ್ತರ ಪದವಿ ಪಡೆದ ಅರ್ಹ ಸಹ ಶಿಕ್ಷಕರ ಜೇಷ್ಠತಾ ಪಟ್ಟಿಯನ್ನು ಪರಿಶೀಲಿಸಿ, ಸಾಮಾನ್ಯ ಜೇಷ್ಠತಾ ಪಟ್ಟಿಯನ್ನು ಅಂತಿಮಗೊಳಿಸಿ, ಅಂತಿಮ ರಾಜ್ಯಮಟ್ಟದ ಒಂದೇ ಜೇಷ್ಠತಾ ಪಟ್ಟಿಯನ್ನು ತಯಾರಿಸಲು, ಮೊದಲಾದ ಕೆಲಸಗಳನ್ನು ನಿಯಮ ಪ್ರಕಾರ ನಡೆಸಲು ಕ್ರಮಕೈಗೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಮಸೀದಿಗಳ ವಿರುದ್ಧ ನಡೆಸಲಾಗುತ್ತಿರುವ ದಾಳಿಯಲ್ಲಿ ಮಧ್ಯಪ್ರವೇಶ ಮಾಡಬೇಕಾಗಿದ್ದು ಸುಪ್ರೀಂಕೋಟ್ ಜವಾಬ್ದಾರಿ – ಸಿಪಿಐ(ಎಂ)


