Homeಕರೋನಾ ತಲ್ಲಣಒಕ್ಕೂಟ ಸರ್ಕಾರದಿಂದ ಲಸಿಕೆಯಲ್ಲೂ ಮೋಸ: ಟ್ವಿಟರ್ ಅಭಿಯಾನಕ್ಕೆ ಕರೆವೇ ಕರೆ

ಒಕ್ಕೂಟ ಸರ್ಕಾರದಿಂದ ಲಸಿಕೆಯಲ್ಲೂ ಮೋಸ: ಟ್ವಿಟರ್ ಅಭಿಯಾನಕ್ಕೆ ಕರೆವೇ ಕರೆ

- Advertisement -
- Advertisement -

ಆಕ್ಸಿಜನ್, ಜೀವರಕ್ಷಕ ಔಷಧಿಗಳ ಹಂಚಿಕೆಯಲ್ಲಿ ಒಕ್ಕೂಟ ಸರ್ಕಾರ ಕರ್ನಾಟಕಕ್ಕೆ ಅನ್ಯಾಯವೆಸಗಿತು. ಈಗ ಕೋವಿಡ್ ಲಸಿಕೆ ಹಂಚಿಕೆಯಲ್ಲೂ ತಾರತಮ್ಯ ಎಸಗುತ್ತಿದೆ. ಈ ಅನ್ಯಾಯಗಳನ್ನು ಖಂಡಿಸಿ ಭಾನುವಾರ ನಾಳೆ ಸಂಜೆ 5 ಗಂಟೆಗೆ ಕರ್ನಾಟಕ ರಕ್ಷಣಾ ವೇದಿಕೆ #ಲಸಿಕೆಯಲ್ಲೂಮೋಸ ಎಂಬ ಟ್ವಿಟರ್ ಅಭಿಯಾನ ನಡೆಸಲಿದೆ ಎಂದು ರಾಜ್ಯಾಧ್ಯಕ್ಷರಾದ ಟಿ.ಎ ನಾರಾಯಣಗೌಡ ತಿಳಿಸಿದ್ದಾರೆ.

ಕರ್ನಾಟಕಕ್ಕೆ ಪದೇ ಪದೇ ಅನ್ಯಾಯವಾಗುತ್ತಿದೆ. ರಾಜ್ಯ ಮತ್ತು ಕೇಂದ್ರದಲ್ಲಿ ಒಂದೇ ಪಕ್ಷದ ಸರ್ಕಾರ ಇದ್ದರೆ ಸ್ವರ್ಗ‌ ಧರೆಗಿಳಿಯಲಿದೆ ಎಂದು ಹೇಳಿದ್ದರು. ಆದರೆ ಈಗ ಆಗುತ್ತಿರುವುದೇ ಬೇರೆ. ಅನ್ಯಾಯಗಳ ಕುರಿತು ಪ್ರಶ್ನೆ ಮಾಡುವ ಶಕ್ತಿಯೂ ರಾಜ್ಯ ನಾಯಕರಿಗಿಲ್ಲ. ಕನ್ನಡಿಗರು ಈಗಾಗಲೇ ನೊಂದಿದ್ದಾರೆ, ನರಳುತ್ತಿದ್ದಾರೆ. ನಮ್ಮ‌ ತಾಳ್ಮೆಯ ಪರೀಕ್ಷೆ ಮಾಡಬೇಡಿ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಆಕ್ಸಿಜನ್ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಆದ ಅನ್ಯಾಯವನ್ನು ನಾವು ಕಣ್ಣಾರೆ ನೋಡಿದ್ದೇವೆ. ಜೀವಾನಿಲ ಸಿಗದೆ ನೂರಾರು ಮಂದಿ ರಾಜ್ಯದಲ್ಲಿ ಮೃತಪಟ್ಟರು. ಕೊನೆಗೆ ಹೈಕೋರ್ಟ್ ಮತ್ತು ಸುಪ್ರೀಂಕೋರ್ಟ್ ಗಳ ಮಧ್ಯಪ್ರವೇಶದಿಂದಾಗಿ ಒಂದಷ್ಟು ಆಕ್ಸಿಜನ್ ಲಭಿಸಿತು. ಒಕ್ಕೂಟ ಸರ್ಕಾರ ನ್ಯಾಯಾಲಯಗಳ ಆದೇಶವನ್ನೂ ಸರಿಯಾಗಿ ಪಾಲಿಸುತ್ತಿಲ್ಲ. ಆದರೂ ಇದನ್ನು ಕೇಳುವವರು ಇಲ್ಲದಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೋವಿಡ್ ರೋಗಿಗಳಿಗೆ ಬಳಸಲಾಗುವ ರೆಮ್ಡಿಸಿವಿರ್ ಹಂಚಿಕೆಯಲ್ಲೂ ಗುಜರಾತ್, ಉತ್ತರಪ್ರದೇಶ ಇತ್ಯಾದಿ ರಾಜ್ಯಗಳಿಗೆ ಸಿಂಹಪಾಲು ನೀಡಿ ಕರ್ನಾಟಕವನ್ನು ವಂಚಿಸಲಾಯಿತು. ಈಗ ಬ್ಲಾಕ್ ಫಂಗಸ್ ರೋಗಿಗಳಿಗೆ ನೀಡಲಾಗುವ ಆಂಫೋಟೆರಿಸಿನ್ ಬಿ ಔಷಧಿ ಹಂಚಿಕೆಯಲ್ಲೂ ಅನ್ಯಾಯ ನಡೆಯುತ್ತಿದೆ. ಹಲವಾರು ಜಿಲ್ಲೆಗಳಿಗೆ ಈ ಔಷಧಿ ಸಿಗದೆ ರೋಗಿಗಳು ಸಾಯುತ್ತಿದ್ದಾರೆ. ಇದಕ್ಕೆ‌ ಯಾರು ಹೊಣೆ ಎಂದು ಪ್ರಶ್ನಿಸಿದ್ದಾರೆ.

ಮೇ.25ರ ಅಂತ್ಯಕ್ಕೆ ಒಕ್ಕೂಟ ಸರ್ಕಾರ ಕರ್ನಾಟಕಕ್ಕೆ ಶೇ.6.7ರಷ್ಟು ಕೋವಿಡ್ ಲಸಿಕೆ ಹಂಚಿಕೆ ಮಾಡಿದೆ. ಅದೇ ಸಂದರ್ಭದಲ್ಲಿ ಗುಜರಾತ್ ಗೆ ಶೇ. 7.91ರಷ್ಟು, ಉತ್ತರ ಪ್ರದೇಶಕ್ಕೆ 8.29ರಷ್ಟು ಲಸಿಕೆ ನೀಡಿದೆ. ಈ ತಾರತಮ್ಯ ಯಾಕೆ? ವ್ಯಾಕ್ಸಿನ್ ಹಂಚಿಕೆಯಲ್ಲಿ ಈ ಮಲತಾಯಿ ಧೋರಣೆ ಯಾಕೆ? ಒಕ್ಕೂಟ ಸರ್ಕಾರಕ್ಕೆ ಎಲ್ಲರ ಜೀವವೂ ಮುಖ್ಯವಲ್ಲವೇ ಎಂದು ಕಿಡಿಕಾರಿದ್ದಾರೆ.

ಮೇ.1 ರ ನಂತರ ರಾಜ್ಯ ಸರ್ಕಾರಗಳಿಗೂ ನೇರವಾಗಿ ಲಸಿಕೆ ಕೊಂಡುಕೊಳ್ಳುವ ಅವಕಾಶವನ್ನು ಒಕ್ಕೂಟ ಸರ್ಕಾರ ನೀಡಿದ ನಂತರ ಒಟ್ಟು ಮೂರು ಕೋಟಿ ಲಸಿಕೆಗಳಿಗೆ ಬೇಡಿಕೆ ನೀಡಲಾಗಿದೆ, ಹಣವನ್ನೂ ತೆಗೆದಿರಿಸಲಾಗಿದೆ. ಆದರೆ ರಾಜ್ಯ ಸರ್ಕಾರದ ಕೈ ಸೇರಿರುವುದು ಕೇವಲ 14 ಲಕ್ಷ ಲಸಿಕೆ ಮಾತ್ರ.‌ ರಾಜ್ಯಕ್ಕೆ ಬರಬೇಕಾದ ಲಸಿಕೆಯನ್ನು ತಡೆಯುತ್ತಿರುವ ಕಾಣದ ಕೈಗಳು ಯಾವುವು ಎಂದು ಪ್ರಶ್ನಿಸಿದ್ದಾರೆ.

ಖಾಸಗಿ ಆಸ್ಪತ್ರೆಗಳಲ್ಲಿ ನೀಡಲಾಗುವ ಲಸಿಕೆಗಳಿಗೆ ಇದ್ದ 100 ರೂಪಾಯಿ ಸೇವಾಶುಲ್ಕವನ್ನು ರಾಜ್ಯ‌ ಸರ್ಕಾರ 300 ರುಪಾಯಿಗಳಿಗೆ ಹೆಚ್ಚಿಸಿದೆ. ಖಾಸಗಿ ಆಸ್ಪತ್ರೆಗಳ ಲಾಬಿಗೆ ರಾಜ್ಯ ಸರ್ಕಾರ ಮಣಿದಿರುವುದು ಸ್ಪಷ್ಟವಾಗಿದೆ. ಖಾಸಗಿ ಆಸ್ಪತ್ರೆಗಳು ಮನಸಿಗೆ ಬಂದ ದರಕ್ಕೆ ಲಸಿಕೆಯನ್ನು ನೀಡುತ್ತಿತ್ತು, ಲಸಿಕೆ ಹೆಸರಲ್ಲಿ ಹಗಲು ದರೋಡೆಯೇ ನಡೆಯುತ್ತಿದೆ ಎಂದು ಕಿಡಿಕಾರಿದ್ದಾರೆ.

ಕೋವಿಡ್ ಮೂರನೇ ಅಲೆ ಬರುವುದರೊಳಗೆ ರಾಜ್ಯದ ಎಲ್ಲ ನಾಗರಿಕರಿಗೂ ಲಸಿಕೆ ನೀಡಬೇಕಾಗಿರುವುದು ರಾಜ್ಯ ಮತ್ತು ಒಕ್ಕೂಟ‌ ಸರ್ಕಾರದ ಹೊಣೆಗಾರಿಕೆಯಾಗಿದೆ. ಪರಿಸ್ಥಿತಿ ಹೀಗೇ ಮುಂದುವರೆದರೆ ಮೂರನೇ ಅಲೆಯಲ್ಲೂ ಅಮಾಯಕ ಜನರು ಸಾವಿಗೀಡಾಗುವ ಸಂಭವವಿದೆ. ಜನರ ಸಿಟ್ಟು ರಟ್ಟೆಗೆ ಬರುವ ಮುನ್ನ‌ ಸರ್ಕಾರಗಳು ಎಚ್ಚೆತ್ತು ಎಲ್ಲರಿಗೂ ಲಸಿಕೆ ನೀಡಬೇಕು ಎಂದು ಟಿ.ಎ.ನಾರಾಯಣಗೌಡ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಜೈಲಿನೊಳಗಿಂದ ಹೋರಾಟಗಾರ ಉಮರ್‌ ಖಾಲಿದ್‌ ಬರೆದ ಹೃದಯಸ್ಪರ್ಶಿ ಪತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...