Homeಮುಖಪುಟಟ್ರಂಪ್ ಗೆಲುವಿನ ಬೆನ್ನಲ್ಲೇ ಬೈಡೆನ್ ಪೌರತ್ವ ನೀತಿ ರದ್ದು : ವಲಸಿಗರಿಗೆ ಆತಂಕ

ಟ್ರಂಪ್ ಗೆಲುವಿನ ಬೆನ್ನಲ್ಲೇ ಬೈಡೆನ್ ಪೌರತ್ವ ನೀತಿ ರದ್ದು : ವಲಸಿಗರಿಗೆ ಆತಂಕ

- Advertisement -
- Advertisement -

ಅಮೆರಿಕದ ಪ್ರಜೆಗಳನ್ನು ಮದುವೆಯಾಗಿರುವ ವಲಸಿಗರಿಗೆ ಪೌರತ್ವ ನೀಡುವ ಪ್ರಕ್ರಿಯೆಯನ್ನು ಸರಳಗೊಳಿಸಲು ಜೋ ಬೈಡೆನ್ ಆಡಳಿತ ಜಾರಿಗೊಳಿಸಿದ್ದ ನೀತಿಯೊಂದನ್ನು ಯುಎಸ್ ಫೆಡರಲ್ ನ್ಯಾಯಾಧೀಶರು ಗುರುವಾರ (ನ.8) ರದ್ದುಗೊಳಿಸಿದ್ದಾರೆ.

ಯುಎಸ್‌ನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಡೊನಾಲ್ಡ್ ಟ್ರಂಪ್ ಅಧಿಕಾರ ಸ್ವೀಕರಿಸುವ ಮುನ್ನವೇ, ನ್ಯಾಯಾಲಯ ಮಹತ್ವದ ಆದೇಶ ನೀಡಿದೆ. ಇದು ಟ್ರಂಪ್ ಆಡಳಿತದ ಪ್ರಥಮ ಹೆಜ್ಜೆ ಎಂದೇ ಪರಿಗಣಿಸಲಾಗಿದೆ. ಟ್ರಂಪ್ ಕೂಡ ಈ ನಿಟ್ಟಿನಲ್ಲಿ ನಿರ್ಧಾರ ಕೈಗೊಳ್ಳುವ ಒಲವು ಹೊಂದಿದ್ದರು ಎಂದು ವರದಿಗಳು ಹೇಳಿವೆ.

ಅಮೆರಿಕದ ಪ್ರಜೆಗಳನ್ನು ಮದುವೆಯಾಗಿರುವ ವಲಸಿಗರು ತಮ್ಮ ಬಳಿಕ ಸೂಕ್ತ ದಾಖಲೆಗಳು ಇಲ್ಲದಿದ್ದರೂ ದೇಶವನ್ನು ತೊರೆಯದೆ ‘ಗ್ರೀನ್ ಕಾರ್ಡ್‌’ಗೆ ಅರ್ಜಿ ಸಲ್ಲಿಸಲು ಬೈಡೆನ್ ಆಡಳಿತದ ನೀತಿ ಅವಕಾಶ ಮಾಡಿಕೊಟ್ಟಿತ್ತು. ವಲಸಿಗ ಕುಟುಂಬಗಳಿಗೆ ಸಹಾಯ ಮಾಡುವ ಉದ್ದೇಶದಿಂದ ಯುಎಸ್ ಅಧ್ಯಕ್ಷರು ಜಾರಿಗೊಳಿಸಿದ ಅತಿದೊಡ್ಡ ನೀತಿ ಇದು ಎಂದು ಬಣ್ಣಿಸಲಾಗಿತ್ತು.

ಈ ನೀತಿಯಿಂದ ಭಾರತೀಯರು ಸೇರಿದಂತೆ ಗಡಿಪಾರು ಆತಂಕ ಎದುರಿಸುತ್ತಿರುವ ಸುಮಾರು 5 ಲಕ್ಷ ವಲಸಿಗರು ನಿರಾಳರಾಗಿದ್ದರು. ಆದರೆ, ಈ ನೀತಿಗೆ ಆಕ್ಷೇಪ ವ್ಯಕ್ತಪಡಿಸಿದ ಅನೇಕ ಅರ್ಜಿಗಳು ಸಲ್ಲಿಕೆಯಾಗಿತ್ತು. ಅರ್ಜಿ ವಿಚಾರಣೆ ನಡೆಸಿದ್ದ ಫೆಡರಲ್ ನ್ಯಾಯಾಧೀಶ. ಕೆ. ಕ್ಯಾಂಪ್‌ಬೆಲ್ ಬಾರ್ಕರ್ ಅವರು ಕಳೆದ ಆಗಸ್ಟ್‌ ತಿಂಗಳಲ್ಲಿ ತಡೆ ನೀಡಿತ್ತು.

ಗುರುವಾರ ನೀತಿಯನ್ನು ರದ್ದುಗೊಳಿಸಿ ನ್ಯಾಯಾಧೀಶರು ಅಂತಿಮ ತೀರ್ಪು ಪ್ರಕಟಿಸಿದ್ದಾರೆ. ಈ ವಲಸೆ ನೀತಿ ಅನುಷ್ಠಾನಗೊಳಿಸುವ ಮೂಲಕ ಬೈಡೆನ್ ಆಡಳಿತ ತನ್ನ ಅಧಿಕಾರ ನೀತಿಯನ್ನು ಮೀರಿದೆ ಎಂದು ನ್ಯಾಯಾಲಯ ತೀರ್ಪಿನಲ್ಲಿ ಹೇಳಿದೆ.

ನ್ಯಾಯಾಲಯದ ಆದೇಶದಿಂದ ಇದೀಗ ಲಕ್ಷಾಂತರ ವಲಸಿಗ ಜನರಲ್ಲಿ ಆತಂಕ ಶುರುವಾಗಿದೆ. ಡೆಮಾಕ್ರಟಿಕ್ ಪಕ್ಷದ ಜೋ ಬೈಡೆನ್ ಆಡಳಿತ ಜಾರಿಗೊಳಿಸಿದ್ದ ವಲಸೆ ನೀತಿಗೆ ಟ್ರಂಪ್ ಪ್ರತಿನಿಧಿಸುವ ರಿಪಬ್ಲಿಕ್ ಪಕ್ಷ ವಿರೋಧ ವ್ಯಕ್ತಪಡಿಸಿತ್ತು. ಬೈಡೆನ್ ನೀತಿ ದೇಶದ ಆರ್ಥಿಕ ಹೊರೆಯನ್ನು ಹೆಚ್ಚಿಸುವುದಲ್ಲದೆ, ಇನ್ನಷ್ಟು ವಲಸಿಗರು ದೇಶಕ್ಕೆ ಬರಲು ಅನುವು ಮಾಡಿಕೊಡುತ್ತದೆ ಎಂದಿತ್ತು.

ಇದನ್ನೂ ಓದಿ : ಪಾಕಿಸ್ತಾನ | ರೈಲು ನಿಲ್ದಾಣದಲ್ಲಿ ಬಾಂಬ್ ಸ್ಫೋಟ : 20 ಸಾವು, 30 ಮಂದಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

KPSC ಅಕ್ರಮ: ಅಲೋಕ್ ಕುಮಾರ್ ನೇತೃತ್ವದಲ್ಲಿ SIT ತನಿಖೆಗೆ ಹೈಕೋರ್ಟ್ ಆದೇಶ

ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) ಇತ್ತೀಚೆಗೆ ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಬೃಹತ್ ಅಕ್ರಮಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಸೋಮವಾರ ಅತ್ಯಂತ ಮಹತ್ವದ ಆದೇಶ ಹೊರಡಿಸಿದೆ. ಈ ಬಹುಕೋಟಿ ನೇಮಕಾತಿ...

ಲಕ್ನೋದಲ್ಲಿ ಮುಸ್ಲಿಂ ವ್ಯಾಪಾರಿ ಮೇಲೆ ಹಲ್ಲೆ, ಮಾಂಸದ ಅಂಗಡಿಗಳ ವಿರುದ್ಧ ಪ್ರತಿಭಟನೆ: ತೀವ್ರಗೊಂಡ ಬಜರಂಗದಳದ ‘ಆಹಾರ ಭಯೋತ್ಪಾದನೆ’

ಲಕ್ನೋ: ಉತ್ತರ ಪ್ರದೇಶದ ಲಕ್ನೋದಲ್ಲಿ ಮಾಂಸ ಸಾಗಿಸುತ್ತಿದ್ದ ಬಿರಿಯಾನಿ ಅಂಗಡಿ ಮಾಲೀಕರೊಬ್ಬರ ಮೇಲೆ ಮೂವರು ಯುವಕರು ಹಲ್ಲೆ ನಡೆಸಿ, ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ಆರೋಪಿಸಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ....

ಟಿಎಂಸಿ ಹೆಸರು – ಚಿಹ್ನೆ ‘ಫ್ರೀಜ್‌’ ಪ್ರಶ್ನಿಸಿ ಮಮತಾ ಬ್ಯಾನರ್ಜಿ ಅರ್ಜಿ; ತುರ್ತು ವಿಚಾರಣೆಗೆ ಒಪ್ಪಿಗೆ ಸುಪ್ರೀಂ ಕೋರ್ಟ್‌

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಎರಡು ಬಣಗಳ ನಡುವಿನ ವಿವಾದದ ನಡುವೆ ಪಕ್ಷದ ಹೆಸರು ಮತ್ತು ಚಿಹ್ನೆಯನ್ನು ಫ್ರೀಜ್ ಮಾಡಿರುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ...

ಸೌಜನ್ಯ ಪ್ರಕರಣ: ಸುಪ್ರೀಂ ಆದೇಶದ ಪ್ರತಿ ಸಿಕ್ಕ ತಕ್ಷಣ SIT ರಚನೆ, ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಅವರ ಭೀಕರ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮರುತನಿಖೆಗೆ ಆದೇಶ ನೀಡಿರುವ ಹಿನ್ನೆಲೆಯಲ್ಲಿ, ನ್ಯಾಯಾಲಯದ ಅಧಿಕೃತ ಆದೇಶದ ಪ್ರತಿ ಕೈ ಸೇರಿದ ತಕ್ಷಣ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ...

ದೆಹಲಿ| ಸಾಮೂಹಿಕ ಮತಾಂತರ ಆರೋಪ; ಕ್ರಿಶ್ಚಿಯನ್ನರ ವಾರಾಂತ್ಯದ ಪ್ರಾರ್ಥನೆಗೆ ಅಡ್ಡಿಪಡಿಸಿದ ಹಿಂದುತ್ವ ಗುಂಪು

ದೆಹಲಿಯ ಜನಕಪುರಿಯಲ್ಲಿರುವ ಹಯಾತ್ ಸೆಂಟ್ರಿಕ್ ಹೋಟೆಲ್‌ನಲ್ಲಿ ನಡೆಯುತ್ತಿದ್ದ (ಸೆಪ್ಟೆಂಬರ್ 20 ರಂದು) ಕ್ರಿಶ್ಚಿಯನ್ನರ ಭಾನುವಾರದ ವಾಡಿಕೆಯ ಪ್ರಾರ್ಥನಾ ಸಭೆಗೆ ನುಗ್ಗಿದ ಹಿಂದುತ್ವ ಗುಂಪು ಪ್ರಾರ್ಥನೆಗೆ ಅಡ್ಡಪಿಡಿಸಿದೆ. ಹಿಂದೂಗಳ ಸಾಮೂಹಿಕ ಮತಾಂತರ ನಡೆಯುತ್ತಿದೆ...

ಕಸ್ತೂರಿ ರಂಗನ್ ವರದಿ ತಿರಸ್ಕಾರ, ಮಲೆನಾಡಿನ ಜನರ ಬದುಕಿಗೆ ಶಾಶ್ವತ ಪರಿಹಾರ : ಡಾ. ಜಿ. ಪರಮೇಶ್ವರ್

ಪಶ್ಚಿಮ ಘಟ್ಟದ ಜೀವ ವೈವಿಧ್ಯ ಮತ್ತು ಪರಿಸರ ಸಂರಕ್ಷಣೆಯ ಹೆಸರಿನಲ್ಲಿ ಕೇಂದ್ರ ಸರ್ಕಾರವು ಕಸ್ತೂರಿ ರಂಗನ್ ವರದಿಯ ಕರಡು ಅಧಿಸೂಚನೆಗಳನ್ನು ಪದೇ ಪದೇ ಹೊರಡಿಸುತ್ತಿರುವುದು ಮಲೆನಾಡಿನ ಜನರ ನೆಮ್ಮದಿ ಕೆಡಿಸಿದೆ. ರಾಜ್ಯ ಸರ್ಕಾರವು...

‘ಇದು ಸಂಸ್ಕೃತಿಯಲ್ಲ, ಪಿತೃಪ್ರಭುತ್ವ’: ಜಮುಯಿ ಅಪ್ರಾಪ್ತ ಬಾಲಕಿ ಮೇಲಿನ ಕಿರುಕುಳದ ವಿಡಿಯೋಗೆ ರಾಹುಲ್ ಗಾಂಧಿ ಆಕ್ರೋಶ 

ಪಾಟ್ನಾ: ಬಿಹಾರದ ಜಮುಯಿ ಜಿಲ್ಲೆಯಲ್ಲಿ 10ನೇ ತರಗತಿಯ ಅಪ್ರಾಪ್ತ ಬಾಲಕ ಮತ್ತು ಬಾಲಕಿಯನ್ನು ರಸ್ತೆಯಲ್ಲಿ ತಡೆದು ಪುರುಷರ ಗುಂಪೊಂದು ಕಿರುಕುಳ ನೀಡಿದೆ ಎಂದು ಆರೋಪಿಸಲಾದ ವೈರಲ್ ವಿಡಿಯೋ ಭಾರಿ ಆಕ್ರೋಶಕ್ಕೆ ಕಾರಣವಾಗಿದೆ. ಈ...

ನಕಲಿ ಔಷಧಗಳ ವಿತರಣೆ ಜಾಲದೊಂದಿಗೆ ನಂಟು; 16 ಫಾರ್ಮಸಿಗಳ ಪರವಾನಗಿ ರದ್ದು

ಬಿಡದಿಯ ಫಾರ್ಮ್‌ಹೌಸ್ (ತೋಟದ ಮನೆ) ಒಂದರಲ್ಲಿ ಪತ್ತೆಯಾದ ನಕಲಿ ಔಷಧಗಳ ವಿತರಣೆಯ ಜಾಲದೊಂದಿಗೆ ನಂಟು ಹೊಂದಿರುವ ಆರೋಪದ ಮೇಲೆ ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ (ಎಫ್‌ಡಿಎ) ಸಂಸ್ಥೆಯು 16 ಫಾರ್ಮಸಿಗಳ...

ಚಾಮರಾಜನಗರ: ಬಂಡಿ ಪೂಜೆ ಹಬ್ಬದಲ್ಲಿ ದಲಿತ ಮಕ್ಕಳಿಗೆ ಅಸ್ಪೃಶ್ಯತೆ ಆಚರಣೆ – ಊಟ ನೀಡದೆ ಅಪಮಾನಿಸಿದ ಆರೋಪ

ಸಮಾಜದಲ್ಲಿ ಜಾತಿಪದ್ದತಿ ಇಂದಿಗೂ ಜೀವಂತವಾಗಿದೆಯೇ ಎಂದು ಪ್ರಶ್ನಿಸುವವರಿಗೇನು ಕಡಿಮೆ ಇಲ್ಲ.ಆದರೆ ಜಾತಿ ಕಾರಣಕ್ಕೆ ಪುಟಾಣಿ ಮಕ್ಕಳಿಗೆ ಊಟವನ್ನು ನಿರಾಕರಿಸಿ ಅಸ್ಪೃಶ್ಯತೆ ಆಚರಣೆ ಮಾಡಿರುವುದು ನಾಗರಿಕ ಸಮಾಜ ನಿಜಕ್ಕೂ ತಲೆತಗ್ಗಿಸುವಂತೆ ಮಾಡಿದೆ. ಹೌದು ಚಾಮರಾಜನಗರ ಜಿಲ್ಲೆಯ...

ಥಾಣೆ ಗಣೇಶೋತ್ಸವ 2026: ತಿಟ್ವಾಲಾದಲ್ಲಿ ಗಣಪತಿ ವಿಸರ್ಜನೆ ವೇಳೆ 2 ಗುಂಪುಗಳ ಘರ್ಷಣೆ, ಬಿಜೆಪಿ ಮಾಜಿ ಉಪಮೇಯರ್ ಸೇರಿ 70-80 ಜನರ ವಿರುದ್ಧ ಪ್ರಕರಣ

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ತಿಟ್ವಾಲಾದಲ್ಲಿ ಗಣಪತಿ ವಿಸರ್ಜನೆ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ ಬಿಜೆಪಿಯ ಮಾಜಿ ಉಪಮೇಯರ್ ಹಾಗೂ ಹಾಲಿ ಕಾರ್ಪೊರೇಟರ್ ಉಪೇಕ್ಷಾ ಭೋಯಿರ್...