Homeಚಳವಳಿಇಂಜಿನಿಯರಿಂಗ್‌ ವಿದ್ಯಾರ್ಥಿಗಳ ಶುಲ್ಕ ಹೆಚ್ಚಳ: ಎಐಡಿಎಸ್‌ಒ ಪ್ರತಿಭಟನೆ

ಇಂಜಿನಿಯರಿಂಗ್‌ ವಿದ್ಯಾರ್ಥಿಗಳ ಶುಲ್ಕ ಹೆಚ್ಚಳ: ಎಐಡಿಎಸ್‌ಒ ಪ್ರತಿಭಟನೆ

- Advertisement -
- Advertisement -

ಇಂಜಿನಿಯರಿಂಗ್ ಪ್ರವೇಶಾತಿ ಪಡೆಯಲು ವಿದ್ಯಾರ್ಥಿಗಳಿಗೆ ಸರ್ಕಾರಿ ಸೀಟುಗಳ ಮೇಲೆ ಏಕಾಏಕಿ 10 ಸಾವಿರ ರೂ.ವರೆಗೂ ಶುಲ್ಕ ಏರಿಕೆ ಮಾಡಿರುವುದನ್ನು ಈ ತಕ್ಷಣವೇ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಆಲ್‌ ಇಂಡಿಯಾ ಡೆಮಾಕ್ರಟಿಕ್‌ ಸ್ಟೂಡೆಂಟ್ ಆರ್ಗನೈಸೇಷನ್‌ (ಎಐಡಿಎಸ್‌ಒ) ಮೈಸೂರಿನಲ್ಲಿ ಪ್ರತಿಭಟನೆ ನಡೆಸಿತು.

ಶನಿವಾರ ಜಿಲ್ಲಾಧಿಕಾರಿ ಕಚೇರಿ ಬಳಿ ಸೇರಿದ ಸಂಘಟಕರು, “ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶುಲ್ಕ ರಚನೆ 21-22 (ದಿನಾಂಕ : 14-11-2021)ರ ಸುತ್ತೋಲೆ ಪ್ರಕಾರ, ಈ ವರ್ಷದ ಸರ್ಕಾರಿ ಕೋಟಾದಡಿ ಇಂಜಿನಿಯರಿಂಗ್ ಪ್ರವೇಶಾತಿ ಪಡೆಯುವ ವಿದ್ಯಾರ್ಥಿಗಳಿಗೆ 10 ಸಾವಿರದವರೆಗೂ ಶುಲ್ಕ ಏರಿಕೆ ಮಾಡಿರುವುದನ್ನು ರಾಜ್ಯದ ವಿದ್ಯಾರ್ಥಿಗಳನ್ನು ಅತ್ಯಂತ ಆತಂಕಕ್ಕೆ ತಳ್ಳಿದೆ. ಈಗಾಗಲೇ ದಾಖಲೆ ಪರಿಶೀಲನೆ ಪ್ರಕ್ರಿಯೆ ಮುಗಿದು, ಮೊದಲ ಸುತ್ತಿನ ಸೀಟು ಹಂಚಿಕೆ ಆಗಿದೆ. ಈಗ ಧಿಡೀರನೆ ಶುಲ್ಕ ಏರಿಕೆ ಮಾಡಿರುವುದು ವಿದ್ಯಾರ್ಥಿ ವಿರೋಧಿ ಮಾತ್ರವಲ್ಲ ಕಾನೂನು ಬಾಹಿರ ನಡೆಯಾಗುತ್ತದೆ” ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಈಗಾಗಲೇ ರಾಜ್ಯದ ಜನತೆ ಹಾಗೂ ವಿದ್ಯಾರ್ಥಿ ಸಮೂಹವು ಕೋವಿಡ್ ಸಾಂಕ್ರಾಮಿಕ ಹಾಗೂ ನಂತರದ ಲಾಕ್‌ಡೌನ್ ಸಮಯದಲ್ಲಿ ಅತ್ಯಂತ ಸಂಕಷ್ಟವನ್ನು ಎದುರಿಸಿದ್ದಾರೆ. ಸಂಸಾರವನ್ನು ತೂಗಿಸಲು ಹಲವರು ಉದ್ಯೋಗ ಅರಸಿದ್ದರೆ, ಹಲವರು ತಮ್ಮ ಪೋಷಕರು-ಸಂಬಂಧಿಕರನ್ನು ಕಳೆದುಕೊಂಡು ಈಗಲೂ ಆ ಆಘಾತದಿಂದ ಹೊರ ಬರಲು ಸಾಧ್ಯವಾಗಿಲ್ಲ. ಜನಸಾಮಾನ್ಯರ ಆದಾಯ ಕುಂಠಿತವಾಗಿದೆ. ಇದರೊಂದಿಗೆ, ಈ ಬಾರಿ ಅತ್ಯಂತ ಭೀಕರ ಮಳೆಯಿಂದಾಗಿ, ರಾಜ್ಯದಲ್ಲಿ ಕಾಫಿ ತೋಟಗಳು ಸೇರಿದಂತೆ ಹೊಲಗಳಲ್ಲಿ ಶೇ. 70 ರಷ್ಟು ಬೆಳೆ ನಷ್ಟ ಸಂಭವಿಸಿದೆ. ರಾಜ್ಯದಲ್ಲಿ ಬಹು ಸಂಖ್ಯೆಯಲ್ಲಿ ಇರುವ ರೈತ ಸಮುದಾಯದ ವಿದ್ಯಾರ್ಥಿಗಳಿಗೆ ಈ ಹಾನಿಯು ಅತ್ಯಂತ ಭೀಕರ ಪರಿಸ್ಥಿತಿಯನ್ನು ತಂದೊಡ್ಡಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಆರ್ಥಿಕ ಬಿಕ್ಕಟ್ಟಿನ ಜೊತೆಗೆ ಲಕ್ಷಾಂತರ ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದಲ್ಲಿ ಹಲವು ಏರುಪೇರುಗಳು ಸಂಭವಿಸಿವೆ. ಒಂದೆಡೆ, ಈ ಎಲ್ಲ ಸವಾಲುಗಳ ನಡುವೆ ಸಿಲುಕಿರುವ ದೊಡ್ಡ ಸಂಖ್ಯೆಯ ವಿದ್ಯಾರ್ಥಿಗಳು ಉನ್ನತ ಶಿಕ್ಷಣದ ಕನಸನ್ನು ಸಂಪೂರ್ಣ ಕೈಬಿಡುವಂತಾಗಿದೆ. ಹೀಗಿರುವಾಗ, ಏಕಾಏಕಿ ಶುಲ್ಕ ಏರಿಕೆಯ ನಿರ್ಧಾರವು ವಿದ್ಯಾರ್ಥಿಗಳ ಶೈಕ್ಷಣಿಕ ಭವಿಷ್ಯದ ಮೇಲೆ ಅತಿ ದೊಡ್ಡ ಪ್ರಹಾರ ಮಾಡಿದಂತೆ ಆಗುತ್ತದೆ ಎಂದು ಅಭಿಪ್ರಾಯಪಟ್ಟರು.


ಇದನ್ನೂ ಓದಿರಿ: ಜೇನುಕುರುಬ ಆದಿವಾಸಿ ಯುವಕನಿಗೆ ಅರಣ್ಯ ಸಿಬ್ಬಂದಿಯಿಂದ ಗುಂಡೇಟು: ಭುಗಿಲೆದ್ದ ಆಕ್ರೋಶ


ಈ ವರ್ಷ ಪದವಿ ಕೋರ್ಸಿಗೆ ಪ್ರತಿ ವರ್ಷಕ್ಕಿಂತ 50 ಸಾವಿರ ಹೆಚ್ಚಿಗೆ ವಿದ್ಯಾರ್ಥಿಗಳು ಸರ್ಕಾರಿ ಪದವಿ ಕಾಲೇಜುಗಳಲ್ಲಿ ದಾಖಲಾತಿ ಪಡೆದಿದ್ದಾರೆ. ಪಿಯುಸಿ ದಾಖಲಾತಿಯೂ ಗಣನೀಯವಾಗಿ ಏರಿಕೆ ಆಗಿದೆ. ಅಂದರೆ, ಈ ಪರಿಸ್ಥಿತಿಯು ಸರ್ಕಾರಿ ಶಿಕ್ಷಣ ಸಂಸ್ಥೆಗಳನ್ನು ಹೆಚ್ಚಿಗೆ ಮಾಡುವ ತಕ್ಷಣದ ಅವಶ್ಯಕತೆಯನ್ನು ಬಿಂಬಿಸುತ್ತದೆ. ಸರ್ಕಾರವು ಹೆಚ್ಚುವರಿ ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳನ್ನು ಸ್ಥಾಪನೆ ಮಾಡಬೇಕಿತ್ತು, ಹೆಚ್ಚುವರಿ ಬೋಧಕರನ್ನು ನೇಮಕಾತಿ ಮಾಡಬೇಕಿತ್ತು, ಹೆಚ್ಚುವರಿ ಮೂಲಸೌಕರ್ಯಗಳನ್ನು ಒದಗಿಸುವ ಯೋಚನೆ ನಡೆಸಬೇಕಿತ್ತು, ಹೆಚ್ಚುವರಿ ಗ್ರಂಥಾಲಯಗಳು- ಪ್ರಯೋಗಾಲಯಗಳನ್ನು ನಿರ್ಮಿಸಬೇಕಿತ್ತು ಎಂಬುದು ನಮ್ಮೆಲ್ಲರ ಅಪೇಕ್ಷೆ ಎಂದು ತಿಳಿಸಿದರು.

ಸರ್ಕಾರ ಶುಲ್ಕ ಏರಿಕೆಯ ನಿರ್ಧಾರವನ್ನು ವಾಪಸ್ ಪಡೆದು, ಮೊದಲು ಇದ್ದ ಶುಲ್ಕವನ್ನು ಮಾತ್ರ ಪಡೆಯಬೇಕು ಹಾಗೂ ಇತರೆ ವರ್ಷದ ವಿದ್ಯಾರ್ಥಿಗಳಿಗೆ ಕಾಲೇಜುಗಳಲ್ಲಿ ಅಭಿವೃದ್ಧಿ ಶುಲ್ಕದ ಹೆಸರಿನಲ್ಲಿ ಹೆಚ್ಚುವರಿ ಶುಲ್ಕ ಪಡೆಯುತ್ತಿರುವುದನ್ನು ಈ ಕೂಡಲೇ ನಿಲ್ಲಿಸಲು ಆದೇಶ ನೀಡಬೇಕು. ಇದರೊಂದಿಗೆ ಮೊದಲ ವರ್ಷದ ವಿದ್ಯಾರ್ಥಿಗಳಿಗೆ ಹತ್ತು ಘಂಟೆ ಅವಧಿಯಷ್ಟು ಪಾಠ ಮಾಡಬೇಕು ಎಂಬ ನಿರ್ಧಾರ, ಈಗಾಗಲೇ ಸಂಕಷ್ಟದಲ್ಲಿ ಇರುವ ವಿದ್ಯಾರ್ಥಿಗಳನ್ನು ಮತ್ತು ಉಪನ್ಯಾಸಕರನ್ನು ಮತ್ತಷ್ಟು ಒತ್ತಡಕ್ಕೆ ತಳ್ಳುತ್ತದೆ. ಹಾಗಾಗಿ, ಈ ಮನವಿಗೆ ರಾಜ್ಯ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಸಲ್ಲಿಸಲಾಯಿತು. ಎಐಡಿಎಸ್‌ಒ ಮೈಸೂರು ಜಿಲ್ಲಾ ಕಾರ್ಯದರ್ಶಿ ಚಂದ್ರಕಲಾ, ಉಪಾಧ್ಯಕ್ಷರಾದ ಆಸಿಯಾ ಬೇಗಂ, ಕಾರ್ಯಕಾರಿ ಸಮಿತಿಯ ಸದಸ್ಯರಾದ ಸ್ವಾತಿ, ನಿತಿನ್, ಚೆಲುವನ್ ಹಾಗೂ ಕಾರ್ಯದರ್ಶಿ ಮಂಡಳಿಯ ಸದಸ್ಯರಾದ ಅಮಿತ್, ಚುಕ್ಕಿ, ವಿದ್ಯಾರ್ಥಿಗಳಾದ ಹರ್ಷ, ಚಂದನಾ, ಹೇಮಲತಾ ಹಾಜರಿದ್ದರು.


ಇದನ್ನೂ ಓದಿರಿ: ಎನ್‌‌ಇಪಿ: ಅವೈಜ್ಞಾನಿವಾಗಿ ಪಠ್ಯಕ್ರಮ ದಿಢೀರ್ ಬದಲು, ಮಹಾರಾಜ ವಿದ್ಯಾರ್ಥಿಗಳಿಂದ ಭಾರೀ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...