Homeಕರ್ನಾಟಕಮಹಿಳಾ ಸೆಕ್ಯುರಿಟಿ ಗಾರ್ಡ್‌ಗೆ ಕೊಳಚೆ ನೀರು ಕುಡಿಯಲು ಒತ್ತಾಯಿಸಿ ಅಪಾರ್ಟ್‌ಮೆಂಟ್‌ ನಿವಾಸಿಯಿಂದ ಕಿರುಕುಳ: ದೂರು ದಾಖಲು

ಮಹಿಳಾ ಸೆಕ್ಯುರಿಟಿ ಗಾರ್ಡ್‌ಗೆ ಕೊಳಚೆ ನೀರು ಕುಡಿಯಲು ಒತ್ತಾಯಿಸಿ ಅಪಾರ್ಟ್‌ಮೆಂಟ್‌ ನಿವಾಸಿಯಿಂದ ಕಿರುಕುಳ: ದೂರು ದಾಖಲು

- Advertisement -
- Advertisement -

ಬೆಂಗಳೂರಿನ ಅಪಾರ್ಟ್‌ಮೆಂಟ್ ನಿವಾಸಿಯೊಬ್ಬರು ಮಹಿಳಾ ಸೆಕ್ಯುರಿಟಿ ಗಾರ್ಡ್‌ಗೆ ಈಜುಕೊಳದ ಕೊಳಚೆ ನೀರು ಕುಡಿಯುವಂತೆ ಒತ್ತಾಯಿಸಿ ಹಿಂಸೆ ನೀಡಿದ ಅಮಾನವೀಯ ಘಟನೆ ನಡೆದಿದೆ. ಈ ಘಟನೆಯಿಂದ ನೊಂದ ಮಹಿಳೆಯು ಕೆಲಸ ತೊರೆದಿದ್ದು, ಪೊಲೀಸರಿಗೆ ದೂರು ನೀಡಿದ್ದಾರೆ.

ಖಾಸಗಿ ಕನ್ಸಲ್ಟಂಟ್ ಕಂಪನಿ ಮೂಲಕ ಸೆಕ್ಯುರಿಟಿ ಗಾರ್ಡ್ ಕೆಲಸಕ್ಕೆ ಸೇರಿದ 25 ವರ್ಷದ ಮಹಿಳೆಯೊಬ್ಬರು ಜೂನ್ 14ರಂದು ಬೊಮ್ಮನಹಳ್ಳಿಯ ದೇವರಚಿಕ್ಕನಹಳ್ಳಿ ರಸ್ತೆಯಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಸೆಕ್ಯುರಿಟಿ ಗಾರ್ಡ್ ಕೆಲಸ ಮಾಡುತ್ತಿರುತ್ತಾರೆ. ಈ ವೇಳೆ, ಅಪಾರ್ಟ್‌ಮೆಂಟ್‌ ಈಜುಕೊಳದಲ್ಲಿ ಸ್ನಾನ ಮಾಡಲು ಬಂದ ಅಪಾರ್ಟ್‌ಮೆಂಟ್‌ನ ಆಕಾಶ್ ಎಂಬ ನಿವಾಸಿಯೊಬ್ಬರು ಈಜುಕೊಳದಲ್ಲಿರುವ ಗಲೀಜು ನೀರು ನೋಡಿ ಕುಪಿತಗೊಂಡು ಅದೇ ನೀರನ್ನು ಬಾಟಲಿಯಲ್ಲಿ ಹಿಡಿದು ಕುಡಿಸಿಲು ಒತ್ತಾಯಿಸಿದ ಎಂದು ಆರೋಪಿಸಲಾಗಿದೆ.

ಈ ವೇಳೆ, ಮಹಿಳೆ ತಾನು ಸೆಕ್ಯೂರಿಟಿ ಡ್ಯೂಟಿಯಲ್ಲಿರುವುದಾಗಿ ಹಾಗೂ ಈಜುಕೊಳದ ನಿರ್ವಹಣೆಗೂ ತನಗೂ ಸಂಬಂಧವಿಲ್ಲ ಎಂದು ತಿಳಿಸಿದರೂ ಕೂಡ ಮಹಿಳೆಯನ್ನು ಅಪಾರ್ಟ್‌ಮೆಂಟ್‌ ನಿವಾಸಿಯೊಬ್ಬ ಬಲವಂತವಾಗಿ ಹಿಡಿದುಕೊಂಡು ನೀರು ಕುಡಿಸಲು ಮುಂದಾದರು ಎಂದು ಆರೋಪಿಸಿದ್ದಾರೆ.

ಈ ಅವಮಾನ ತಾಳಲಾರದೆ ಮಹಿಳೆಯು ಕೆಲಸ ತೊರೆದಿದ್ದಾರೆ. ಆರೋಪಿ ಆಕಾಶ್ ಎಂಬುವವರ ವಿರುದ್ಧ ಬೊಮ್ಮನಹಳ್ಳಿ ಪೊಲೀಸ್ ಠಾಣೆಯಲ್ಲಿ ಸೋಮವಾರ ದೂರು ದಾಖಲಿಸಿದ್ದಾರೆ.

“ಜೂನ್ 14 ರಂದು ಬೆಳಗ್ಗೆ 11.30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ. ಈಜುಕೊಳದ ಗೇಟ್‌ ಅನ್ನು ಮುಚ್ಚಿ ಆ ಸ್ಥಳದಿಂದ ನಾನು ಹೊರಬರದಂತೆ ತಡೆದಿದ್ದಾರೆ. ವಿನಾಕಾರಣ ನನ್ನನ್ನು ಅವಮಾನಿಸಿದ್ದಾರೆ” ಎಂದು ಪೊಲೀಸ್ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸಂತ್ರಸ್ತೆ ಭದ್ರತಾ ಮೇಲ್ವಿಚಾರಕ ಅನಿಕೇಶ್ ಚಕ್ರವರ್ತಿ ಮತ್ತು ನಿರ್ವಹಣಾ ವ್ಯವಸ್ಥಾಪಕ ಮಲ್ಲಿಕಾರ್ಜುನ್ ಅವರಿಗೆ ದೂರು ನೀಡಿದ ನಂತರ ಈ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ಬೊಮ್ಮನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

“ತನಿಖಾಧಿಕಾರಿಯ ಮುಂದೆ ಹಾಜರಾಗುವಂತೆ ಆರೋಪಿಗೆ ನೋಟಿಸ್ ಕಳುಹಿಸಲಾಗಿದೆ. ನಿರ್ವಹಣಾ ವ್ಯವಸ್ಥಾಪಕರಿಗೆ ವಿಷಯ ತಿಳಿಸಲಾಗಿದೆ. ಅವರು ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳ ಗಮನಕ್ಕೆ ತರುವುದಾಗಿ ಭರವಸೆ ನೀಡಿದರು” ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಹೇಳಿದರು.

ಇದನ್ನೂ ಓದಿ; ಗಂಗಾವತಿ: ಹೆರಿಗೆ ಮಾಡುವುದಕ್ಕೆ ಲಂಚ, ಲೈಂಗಿಕ ಕಿರುಕುಳದ ಆರೋಪ; ಕನಿಷ್ಟ ತನಿಖೆಯಾದರೂ ಇಲ್ಲವೇಕೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...