HomeಅಂಕಣಗಳುKarnataka against SIRSIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

- Advertisement -
- Advertisement -

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ ‘ವಿಶೇಷ ಸಮಗ್ರ ಪರಿಷ್ಕರಣೆ’ (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ.

ಬೆಂಗಳೂರಿನ ಕುರುಬರಹಳ್ಳಿ ಸರ್ಕಾರಿ ಶಾಲೆಯ ಶಿಕ್ಷಕಿ ಶಮಂತ ಕುಮಾರಿ (44) ಅವರು ಗುರುವಾರ ತಡರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಇತ್ತೀಚೆಗಷ್ಟೇ ಬಿಎಲ್‌ಒ (BLO – ಬೂತ್ ಮಟ್ಟದ ಅಧಿಕಾರಿ) ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಶಮಂತ ಕುಮಾರಿ ಅವರ ಮೇಲೆ, ಎಸ್‌ಐಆರ್ ಪ್ರಕ್ರಿಯೆಯನ್ನು ತುರ್ತಾಗಿ ಮುಗಿಸುವಂತೆ ಮೇಲಾಧಿಕಾರಿಗಳು ನಿರಂತರವಾಗಿ ತೀವ್ರ ಒತ್ತಡ ಹೇರುತ್ತಿದ್ದರು. ಈ ಅಮಾನವೀಯ ಕಿರುಕುಳ ಹಾಗೂ ಕಾರ್ಯಭಾರದಿಂದಾಗಿ ಶಿಕ್ಷಕಿಗೆ ರಕ್ತದೊತ್ತಡ (BP) ಮತ್ತು ಸಕ್ಕರೆ ಕಾಯಿಲೆ (Sugar) ಏಕಾಏಕಿ ಹೆಚ್ಚಾಗಿ ತೀವ್ರ ಜ್ವರ ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.

“SIR ಕೆಲಸವನ್ನು ಬೇಗ ಬೇಗ ಮುಗಿಸಬೇಕು ಎಂದು ಅಧಿಕಾರಿಗಳು ನಿರಂತರವಾಗಿ ಟಾರ್ಗೆಟ್ ನೀಡಿ ಕಿರುಕುಳ ನೀಡುತ್ತಿದ್ದರು. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರೂ ಕೆಲಸದಿಂದ ಬಿಡುಗಡೆ ಮಾಡಲು ಒಪ್ಪಲಿಲ್ಲ. ಈ ಕೆಲಸದಿಂದ ತಮ್ಮನ್ನು ಮುಕ್ತಿಗೊಳಿಸುವಂತೆ ಅವರು ಅಧಿಕಾರಿಗಳಲ್ಲಿ ಅಂಗಲಾಚಿದ್ದರು. ಮೇಲಾಧಿಕಾರಿಗಳು ನೀಡಿದ ಈ ಮಾನಸಿಕ ಕಿರುಕುಳ ಮತ್ತು ತೀವ್ರ ಒತ್ತಡವೇ ಅವರ ಹೃದಯಾಘಾತಕ್ಕೆ ನೇರ ಕಾರಣ” ಎಂದು ಮೃತ ಶಿಕ್ಷಕಿಯ ಕುಟುಂಬಸ್ಥರು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...

ಉತ್ತರಾಖಂಡ : ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ SIR ನೋಟಿಸ್

ಉತ್ತರಾಖಂಡದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಉನ್ನತ ಸರ್ಕಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮನೆ ಬಾಗಿಲಿಗೆ ತಲುಪಿದೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ),...

SIR: ಗಣತಿ ನಮೂನೆ ವಾಪಸ್‌ಗೆ ನಾಳೆಯೇ ಅಂತಿಮ ಗಡುವು, 1.10 ಕೋಟಿ ಮತದಾರರ ಹೆಸರು ಡಿಲೀಟ್‌!

ರಾಜ್ಯಾದ್ಯಂತ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಮೊದಲ ಹಂತವಾದ ಗಣತಿ ನಮೂನೆಗಳನ್ನು ಭರ್ತಿ ಮಾಡಿ ವಾಪಸ್ ನೀಡಲು ನಾಳೆ (ಆಗಸ್ಟ್ 8) ಕೊನೆಯ ದಿನವಾಗಿದೆ. ಈ ನಡುವೆ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಅರ್ಧದಷ್ಟು ಮತದಾರರು ‘ಹೊರಕ್ಕೆ’: ರಾಜ್ಯದಲ್ಲಿ 1.11 ಕೋಟಿ ಜನರು ಮತದಾನದ ಹಕ್ಕು ಕಳೆದುಕೊಳ್ಳುವ ಭೀತಿ

ಕರ್ನಾಟಕದಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಕೈಗೊಂಡಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯು ರಾಜ್ಯದ ಕೋಟ್ಯಂತರ ನಾಗರಿಕರ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಭೀತಿಯನ್ನು ಹುಟ್ಟುಹಾಕಿದೆ. ಪ್ರಜಾಪ್ರಭುತ್ವ...

ಎರಡು ನ್ಯೂಸ್ ಚಾನೆಲ್‌ಗಳಿಗೆ ಉದಯನಿಧಿ ಲೀಗಲ್ ನೋಟಿಸ್ : ಸಾರ್ವಜನಿಕ ಕ್ಷಮೆಯಾಚನೆ, 100 ಕೋಟಿ ಪರಿಹಾರಕ್ಕೆ ಆಗ್ರಹ-ವರದಿ

ತಮಿಳುನಾಡಿನ ವಿರೋಧ ಪಕ್ಷದ ನಾಯಕ ಹಾಗೂ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ತಮ್ಮ ಇತ್ತೀಚಿನ ಹೇಳಿಕೆಯ ಪ್ರಸಾರಕ್ಕೆ ಸಂಬಂಧಿಸಿದಂತೆ ಮಾನನಷ್ಟ ಆರೋಪ ಮಾಡಿ ಎರಡು ರಾಷ್ಟ್ರೀಯ ಸುದ್ದಿ ವಾಹಿನಿಗಳಿಗೆ...

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ರಚನೆ: ಅಭಿಜೀತ್ ದೀಪ್ಕೆಗೆ ‘ರಾಷ್ಟ್ರೀಯ ಸಂಚಾಲಕ’

ದೇಶಾದ್ಯಂತ ವಿದ್ಯಾರ್ಥಿ ಮತ್ತು ಯುವಜನರ ಬೃಹತ್ ಹೋರಾಟದ ಮೂಲಕ ಗಮನಸೆಳೆದಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಅಧಿಕೃತವಾಗಿ ತನ್ನ ಮೊದಲ 14 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನು (National Working Committee) ಪ್ರಕಟಿಸಿದೆ....

ಕ್ಷೇತ್ರ ಪುನರ್ ವಿಂಗಡಣೆಗೆ ಡಿಎಂಕೆ ವಿರೋಧ: ‘ಮೃದು ಧೋರಣೆ’ ವದಂತಿಗೆ ಉದಯನಿಧಿ ಸ್ಟಾಲಿನ್ ಬ್ರೇಕ್

ಕ್ಷೇತ್ರ ಪುನರ್ ವಿಂಗಡಣೆ ಮಸೂದೆಯನ್ನು ಕೇಂದ್ರ ಸರ್ಕಾರ ಮರುಪರಿಚಯಿಸಲು ಮುಂದಾಗಿರುವುದು ತಮಿಳುನಾಡಿನಲ್ಲಿ ತೀವ್ರ ರಾಜಕೀಯ ಕಸರತ್ತಿಗೆ ಕಾರಣವಾಗಿದೆ. ಕ್ಷೇತ್ರ ಪುನರ್ ವಿಂಗಡಣೆ ವಿಷಯದಲ್ಲಿ ಡಿಎಂಕೆ (DMK) ತನ್ನ ಕಠಿಣ ನಿಲುವನ್ನು ಮೃದುಗೊಳಿಸಿದೆ ಎಂಬ...