Homeಅಂತರಾಷ್ಟ್ರೀಯಪ್ರಖರ ಸ್ತ್ರೀವಾದಿ ಬೆಲ್‌ ಹುಕ್ಸ್‌‌ (69) ನಿಧನ

ಪ್ರಖರ ಸ್ತ್ರೀವಾದಿ ಬೆಲ್‌ ಹುಕ್ಸ್‌‌ (69) ನಿಧನ

- Advertisement -
- Advertisement -

ವಿಶ್ವದ ಜನಪ್ರಿಯ ಸ್ತ್ರೀವಾದಿ ಲೇಖಕಿ ಬೆಲ್ ಹುಕ್ಸ್‌ ಅವರು ಬುಧವಾರದಂದು ತನ್ನ 69 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ತಮ್ಮ ಬರಹಗಳಲ್ಲಿ ಲಿಂಗ, ಜನಾಂಗ ಮತ್ತು ವರ್ಗ ಚಿಂತನೆಗಳಲ್ಲಿ ಹೊಸ ಮಾರ್ಗಗಳನ್ನು ಹುಟ್ಟುಹಾಕಿದ್ದರು.

ಗ್ಲೋರಿಯಾ ಜೀನ್ ವಾಟ್ಕಿನ್ಸ್‌ನಲ್ಲಿ 1952 ರಲ್ಲಿ ಜನಿಸಿದ ಬೆಲ್‌‌ ಹುಕ್ಸ್ ಬುಧವಾರ ಮುಂಜಾನೆ ಅಮೆರಿಕಾದ ಕೆಂಟುಕಿಯ ತನ್ನ ಮನೆಯಲ್ಲಿ ನಿಧನರಾಗಿದ್ದಾರೆ. ಈ ಬಗ್ಗೆ ಅವರ ಸೋದರ ಸೊಸೆ ಎಬೊನಿ ಮೋಟ್ಲಿ ಟ್ವಿಟರ್‌ನಲ್ಲಿ ಬರೆದಿದ್ದಾರೆ.

ತನ್ನ ಮುತ್ತಜ್ಜಿ ಬೆಲ್ ಬ್ಲೇರ್ ಹುಕ್ಸ್ ಅವರ ಗೌರವಾರ್ಥವಾಗಿ ‘ಬೆಲ್ ಹುಕ್ಸ್‌‌’ ಎಂಬ ಕಾವ್ಯನಾಮಗಳನ್ನು ಬಳಸಿ ಬರೆಯುತ್ತಿದ್ದ ಅವರು 1978 ರಲ್ಲಿ “ಅಂಡ್ ದೇರ್ ವಿ ವೆಪ್ಟ್” ಕವನಗಳ ಮೊದಲ ಪುಸ್ತಕವನ್ನು ಪ್ರಕಟಿಸಿದ್ದರು.

ಇದನ್ನೂ ಓದಿ:ಬೆಲ್‌ಹುಕ್ಸ್- ಸ್ತ್ರೀವಾದ: ಅಂಚಿನಿಂದ ಕೇಂದ್ರದೆಡೆಗೆ; ಒಪ್ಪಿತ ಮಾದರಿಯನ್ನು ಪ್ರಶ್ನಿಸಿ ಹೊಸ ಸ್ತ್ರೀವಾದಕ್ಕೆ ಅಣಿಗೊಳಿಸುವ ಚಿಂತನೆ

ಅವರು 1981 ರಲ್ಲಿ “ಆಯ್‌ನ್ಟ್‌‌ ಐ ಎ ವುಮನ್? ಬ್ಲ್ಯಾಕ್ ವುಮೆನ್ ಆಂಡ್‌ ಫೆಮಿನಿಸಂ” ಪುಸ್ತಕಕ್ಕಾಗಿ ಭಾರಿ ಮೆಚ್ಚುಗೆಯನ್ನು ಪಡೆದರು. ಈ ಪುಸ್ತಕದಲ್ಲಿ ಅವರು ಕಪ್ಪು ಮಹಿಳೆಯರ ಮೇಲೆ ಲಿಂಗಭೇದಭಾವ ಮತ್ತು ವರ್ಣಭೇದ ನೀತಿಯ ಪ್ರಭಾವವನ್ನು ಪರಿಶೀಲಿಸಿದ್ದರು. ಜೊತೆಗೆ ಸ್ತ್ರೀವಾದದೊಳಗಿನ ವರ್ಣಭೇದ ನೀತಿಯ ಬಗ್ಗೆ ಚರ್ಚಿಸಿದ್ದರು.

ಅವರು ಕವನ, ಮಕ್ಕಳ ಕಾದಂಬರಿ, ಆತ್ಮಚರಿತ್ರೆ ಮತ್ತು ಸಾಹಿತ್ಯ ವಿಮರ್ಶೆ ಸೇರಿದಂತೆ ಸುಮಾರು 40 ಕೃತಿಗಳನ್ನು ಪ್ರಕಟಿಸಿದ್ದಾರೆ. ಸ್ತ್ರೀವಾದ, ವರ್ಣಭೇದ ನೀತಿ ಮತ್ತು ಇತರ ಸಾಮಾಜಿಕ ನ್ಯಾಯದ ಸಮಸ್ಯೆಗಳ ಬಗ್ಗೆ ಅವರು ತಮ್ಮ ಕೃತಿಗಳಲ್ಲಿ ಚರ್ಚಿಸಿದ್ದಾರೆ.

ವಿಶ್ವದ ಹಲವು ಪ್ರಸಿದ್ದ ಸಾಹಿತಿಗಳು ಅವರ ನಿಧನಕ್ಕೆ ಕಂಬನಿ ಮಿಡಿದಿದ್ದರೆ.

ಅವರ ‘ಫೆಮಿನಿಸಂ ಇಸ್ ಫಾರ್ ಎವೆರಿಬಡಿ: ಪ್ಯಾಶನೇಟ್ ಪಾಲಿಟಿಕ್ಸ್’ (2000) ಎಂಬ ಮಹತ್ವದ ಕೃತಿಯನ್ನು ಕನ್ನಡ ಸ್ತ್ರೀವಾದಿ ಲೇಖಕಿ ಎಚ್‌.ಎಸ್‌‌. ಶ್ರೀಮತಿ ಅವರು ‘ಎಲ್ಲರಿಗಾಗಿ ಸ್ತ್ರೀವಾದ’ ಎಂಬ ಹೆಸರಿನಲ್ಲಿ ಅನುವಾದಿಸಿದ್ದಾರೆ.

ಇದನ್ನೂ ಓದಿ: ದೌರ್ಜನ್ಯವನ್ನು ಕೊನೆಗಾಣಿಸಲು ಸ್ತ್ರೀವಾದೀ ಚಳುವಳಿ “ಸ್ತ್ರೀವಾದ: ಅಂಚಿನಿಂದ ಕೇಂದ್ರದೆಡೆಗೆ” ಪುಸ್ತಕದ ಅಧ್ಯಾಯವೊಂದರ ಆಯ್ದ ಭಾಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...